ಕೊರೊನಾ ತೀವ್ರ ನಿಗಾ ಘಟಕಕ್ಕೆ ಸಚಿವರ ಭೇಟಿ
ಯಾದಗಿರಿ, ಮಾರ್ಚ್ 07 (ಕರ್ನಾಟಕ ವಾರ್ತೆ): ನಗರದ ಜಿಲ್ಲಾಸ್ಪತ್ರೆಯಲ್ಲಿ ತೆರೆದಿರುವ ಕೊರೊನಾ ವೈರಸ್ ತೀವ್ರ ನಿಗಾ ಘಟಕಕ್ಕೆ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಶನಿವಾರ ಭೇಟಿ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಣಾ ಘಟಕದ ವತಿಯಿಂದ ಸಿದ್ಧಪಡಿಸಿರುವ ನೋವೆಲ್ ಕೊರೊನಾ ವೈರಸ್ ಕುರಿತು ಜನಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಸಚಿವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಜನ ಔಷಧಿ ಕೇಂದ್ರಕ್ಕೆ ಭೇಟಿ: ಜಿಲ್ಲಾಸ್ಪತ್ರೆ ಆವರಣದಲ್ಲಿನ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಔಷಧಿಗಳ ಸಂಗ್ರಹ ಮತ್ತು ಮಾರಾಟದ ರಿಜಿಸ್ಟರ್‍ಗಳನ್ನು ಪರಿಶೀಲಿಸಿದರು. ರಿಜಿಸ್ಟರ್ ಮತ್ತು ಬಿಲ್‍ಬುಕ್‍ಗಳನ್ನು ಸರಿಯಾಗಿ ನಿರ್ವಹಿಸಬೇಕು. ನಿಗದಿತ ಬೆಲೆಗೆ ಔಷಧಗಳನ್ನು ಮಾರಾಟ ಮಾಡುವಂತೆ ಕೇಂದ್ರವನ್ನು ನಡೆಸುತ್ತಿರುವ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್‍ಐಎಲ್)ನ ಅಧಿಕಾರಿಗಳಿಗೆ ಅವರು ಸೂಚಿಸಿದರು.
ರಾಜ್ಯದಲ್ಲಿ ಕರೊನಾ ವೈರಸ್ ಇಲ್ಲವೇ ಇಲ್ಲ ಅದರಲ್ಲೂ ಯಾದಗಿರಿ ಜಿಲ್ಲೆಯ ಬಿಸಿಲಿಗೆ ಕರೊನಾ ವೈರಸ್ ಸೋಂಕು ಹರಡುವ ಭೀತಿ ಇಲ್ಲ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಬೇರೆ ದೇಶ ಹಾಗೂ ರಾಜ್ಯಗಳಿಂದ ಬರುವ ವ್ಯಕ್ತಿಗಳನ್ನ ಸಂಪೂರ್ಣ ಚೆಕ್ ಮಾಡಿ ಬಿಡಲಾಗುತ್ತಿದೆ ಯಾರೂ ಭಯಪಡುವ ಅವಶ್ಯತೆಯಿಲ್ಲ ಎಂದರು.
ಇದೇ ವೇಳೆ ಮಾತನಾಡಿದ ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು, ಬಡವರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಜನ ಔಷದ ಕೇಂದ್ರ ತೆರೆಯಲಾಗಿದೆ. ಹೊರಗಡೆ 3 ಸಾವಿರ ರೂಪಾಯಿಗೆ ಸಿಗುವ ಔಷದಿವು ಜನ ಔಷಧ ಕೇಂದ್ರದಲ್ಲಿ ಅರ್ಧ ಬೆಲೆಗೆ ಸಿಗುತ್ತೆ. ಎಲ್ಲರೂ ಇದರ ಸುಪಯೋಗ ಪಡೆದುಕೊಳ್ಳಬೇಕು ಕರೆ ನೀಡಿದರು.
ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲನಗೌಡ ಎಸ್.ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಾರಾಯಣಪ್ಪ ಅವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ