ಶನಿವಾರ, ಮಾರ್ಚ್ 7, 2020

ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
ಯಾದಗಿರಿ, ಮಾರ್ಚ್ 07 (ಕರ್ನಾಟಕ ವಾರ್ತೆ): ನಗರದ ಅಮರ ಲೇ ಔಟ್‍ನಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಮೊದಲನೇ ಮಹಡಿ ಮತ್ತು ಡಿಜಿಟಲ್ ಗ್ರಂಥಾಲಯ ಹಾಗೂ ಪುಸ್ತಕ ಪ್ರದರ್ಶನವನ್ನು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸಿದರು.

ಯಾದಗಿರಿ ವಿದ್ಯಾರ್ಥಿಗಳು ಓದುವುದರಲ್ಲಿ ಹೆಚ್ಚಿನ ಕಾಲ ಕಳೆಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಅಭ್ಯರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ವರದಾನವಾಗಿದೆ. ಈ ಗ್ರಂಥಾಲಯದಲ್ಲಿ 1ಲಕ್ಷಕ್ಕೈ ಹೆಚ್ಚು ಪುಸ್ತಕಳಿದ್ದು, ಅದರಲ್ಲೂ ಮಹಾನ್ ವ್ಯಕ್ತಿಗಳಾದ ಡಾ. ಬಿ.ಆರ್ ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಸಂಗೊಳ್ಳಿ ರಾಯಣ್ಣ,  ಸೇರಿದಂತೆ ಅನೇಕ ಮಹಾನೀಯರ ಪುಸ್ತಕಳಿವೆ. ಇವುಗಳನ್ನು ಓದಿ ನೀವು ಕೂಡ ಮಹಾನ್ ವ್ಯಕ್ತಿಗಳಾಗಬೇಕು ಎಂದು ಅವರು ಕರೆ ನೀಡಿದರು.
ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸಿದ್ದರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಎಂ.ಎಸ್.ರೆಬಿನಾಳ ಅವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...