ಶನಿವಾರ, ಮಾರ್ಚ್ 7, 2020

ಜನ ಔಷಧಿ ಕೇಂದ್ರದ ಸದುಪಯೋಗಕ್ಕೆ ಮನವಿ
ಯಾದಗಿರಿ, ಮಾರ್ಚ್ 07 (ಕರ್ನಾಟಕ ವಾರ್ತೆ): ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳು ಸ್ಥಳೀಯವಾಗಿ ದೊರೆಯುವ ಉದ್ದೇಶದಿಂದ ಸರ್ಕಾರ ಜನ ಔಷಧಿ ಕೇಂದ್ರಗಳನ್ನು ತೆರೆದಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಮನವಿ ಮಾಡಿದರು.
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಶನಿವಾರ ಜನ ಔಷಧಿ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಪೋಷಣ್ ಅಭಿಯಾನ ಕುರಿತಂತೆ ರಾಷ್ಟ್ರವನ್ನು ಉದ್ದೇಶಿಸಿ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ದೂರದರ್ಶನದಲ್ಲಿ ಮಾತನಾಡುವ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಜನ ಔಷಧಿ ಕೇಂದ್ರದಲ್ಲಿ ಎಲ್ಲಾ ತರಹದ ಗುಣಮಟ್ಟದ ಔಷಧಿಗಳು ಕಡಿಮೆ ಬೆಲೆಯಲ್ಲಿ ದೊರೆಯುತ್ತವೆ. 10 ರೂಪಾಯಿಗೆ ದೊರೆಯುವ ಔಷಧಿಗಳು ಕೇವಲ 1.50 ಪೈಸೆಯಿಂದ 2 ರೂಪಾಯಿಯವರೆಗೆ ದೊರೆಯುತ್ತವೆ. ಈ ಔಷಧಿ ಮಳಿಗೆ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಮತ್ತು ಹೊರಗಡೆಯಿಂದ ಬರುವಂತಹ ರೋಗಿಗಳಿಗೆ ಉಪಯುಕ್ತವಾಗಲಿದೆ ಎಂದು ಅವರು ಹೇಳಿದರು.
ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲನಗೌಡ ಎಸ್.ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಾರಾಯಣಪ್ಪ ಅವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...