ಬುಧವಾರ, ಮಾರ್ಚ್ 11, 2020

ಇಂದು ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಯಾದಗಿರಿ, ಮಾರ್ಚ್ 11 (ಕರ್ನಾಟಕ ವಾರ್ತೆ): ಯಾದಗಿರಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ಜನಸಂಪರ್ಕ ಸಭೆ ನಡೆಸಿ ಅರ್ಜಿ ಅಹವಾಲು ಸ್ವೀಕಾರ ಮಾಡಲಿದ್ದು, ನಿಗದಿಪಡಿಸಿದ ದಿನಾಂಕಗಳಂದು ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿಯಾಗಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಪೊಲೀಸ್ ಇನ್‍ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್ (ಮೊ:94808 06313), ಪೊಲೀಸ್ ಇನ್‍ಸ್ಪೆಕ್ಟರ್ ಗುರುಪಾದ ಎಸ್.ಬಿರಾದಾರ (ಮೊ:94808 06314) ಅವರು ಅಹವಾಲು ಸ್ವೀಕರಿಸುವರು. ಮಾರ್ಚ್ 12ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ನಾಡ ಕಚೇರಿಯಲ್ಲಿ ಹಾಗೂ ಮಾರ್ಚ್ 13ರಂದು ವಡಗೇರಾ ತಹಸೀಲ್ ಕಾರ್ಯಾಲಯದಲ್ಲಿ ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂದು ಕಾರ್ಮಿಕ ಸಮ್ಮಾನ ದಿನಾಚರಣೆ
ಯಾದಗಿರಿ, ಮಾರ್ಚ್ 11 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ಸಮ್ಮಾನ ದಿನಾಚರಣೆ ಅಂಗವಾಗಿ ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿ ಮತ್ತು ವಿಶೇಷ ಪುರಸ್ಕಾರ ಸಮಾರಂಭವನ್ನು ಮಾರ್ಚ್ 12ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು. ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಸಾಮಾನ್ಯ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರಸ್ವತಿ ಸುಭಾಶ್ಚಂದ್ರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಉಚಿತ ಸಾಮೂಹಿಕ ವಿವಾಹ: ನೋಂದಣಿಗೆ ಸೂಚನೆ
ಯಾದಗಿರಿ, ಮಾರ್ಚ್ 11 (ಕರ್ನಾಟಕ ವಾರ್ತೆ): ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಸುತ್ತೋಲೆಯಂತೆ ಸುರಪುರ ತಾಲ್ಲೂಕಿನ ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನ ಮತ್ತು ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಶ್ರೀ ಬಲಭೀಮೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 26ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದ್ದು, ಆಸಕ್ತ ವಧು-ವರರ ಹೆಸರು ನೋಂದಾಯಿಸಲು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಸರು ನೋಂದಾಯಿಸಿಕೊಳ್ಳಲು ಮಾರ್ಚ್ 27 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸುರಪುರ ತಹಶೀಲ್ದಾರ್ ಕಚೇರಿ ದೂ:08443-257044, 257043, 256043 ಮತ್ತು ದೇವಸ್ಥಾನದ ವ್ಯವಸ್ಥಾಪಕರ ದೂ:6362788408, 9945685048 ಸಂಪರ್ಕಿಸಬಹುದು. ಭೀಮರಾಯನಗುಡಿಯ ಶ್ರೀ ಬಲಭೀಮೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಶಹಾಪುರ ತಹಶೀಲ್ದಾರ್ ಕಚೇರಿ ದೂ:08479-243321 ಸಂಪರ್ಕಿಸಬಹುದು ಎಂದು ಅವರು ಕೋರಿದ್ದಾರೆ.
ಶೌಚಾಲಯ ನಿರ್ಮಿಸಿಕೊಳ್ಳಲು ಮನವಿ
ಯಾದಗಿರಿ, ಮಾರ್ಚ್ 11 (ಕರ್ನಾಟಕ ವಾರ್ತೆ): ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಯಾದಗಿರಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ ಪ್ರತಿ ಕುಟುಂಬವು ವೈಯಕ್ತಿಕ ಗೃಹ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಬಯಲು ಬಹಿರ್ದೆಸೆಯನ್ನು ಸಂಪೂರ್ಣವಾಗಿ ತೊಡೆದು ಹಾಕುವ ದೃಷ್ಟಿಯಿಂದ ಈವರೆಗೂ ಶೌಚಾಲಯ ನಿರ್ಮಿಸಿಕೊಳ್ಳದೇ ಇರುವ ಕುಟುಂಬಗಳು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ, ಶೌಚಾಲಯಗಳನ್ನು ನಿರ್ಮಿಸಿಕೊಳ್ಳಬೇಕು. ವೈಯಕ್ತಿಕ ಗೃಹ ಶೌಚಾಲಯದ ನಿರ್ಮಾಣಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 15 ಸಾವಿರ ರೂ.ಗಳನ್ನು ಪ್ರೋತ್ಸಾಹಧನವಾಗಿ ಮತ್ತು ಸಾಮಾನ್ಯ ವರ್ಗದವರಿಗೆ 12 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 11 (ಕರ್ನಾಟಕ ವಾರ್ತೆ): 2019-20ನೇ ಸಾಲಿನ ಸಮನ್ವಯ ಶಿಕ್ಷಣದ 3 ತಾಲ್ಲೂಕಿನಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢ ಬಿಐಇಆರ್‍ಟಿ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಆಹ್ವಾನಿಸಲಾಗಿದೆ.
ಪ್ರಾಥಮಿಕ ಬಿಐಇಆರ್‍ಟಿ ಹುದ್ದೆಗೆ ಎಂಸಿಟಿಟಿ ಆಗಿರಬೇಕು ಮತ್ತು ಪ್ರೌಢ ಬಿಐಇಆರ್‍ಟಿ ಹುದ್ದೆಗೆ ವಿಶೇಷ ಬಿ.ಇಡಿ ವಿದ್ಯಾರ್ಹತೆ ಹೊಂದಿ ಆರ್‍ಸಿಐ ನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 17ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸುವಂತೆ ಸಮಗ್ರ ಶಿಕ್ಷಣ ಅಭಿಯಾನದ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...