ಸೋಮವಾರ, ಮಾರ್ಚ್ 16, 2020

ಮಾಸ್ಕ್, ಸ್ಯಾನಿಟೈಸರ್ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಕಾನೂನು ಕ್ರಮ

ಯಾದಗಿರಿ, ಮಾರ್ಚ್ 16 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಕೊರೋನಾ ವೈರಸ್ ನಿಯಂತ್ರಣಕ್ಕೆ ಉಪಯೋಗಿಸುವ ಮಾಸ್ಕ್ ಹಾಗೂ ಸ್ಯಾನಿಟೈಸರ್‍ಗಳನ್ನು 30ನೇ ಜೂನ್ 2020ರವರೆಗೆ ಅವಶ್ಯಕ ವಸ್ತುಗಳ ಕಾಯ್ದೆ-1955ರಡಿ ವ್ಯಾಪ್ತಿಗೆ ತಂದು ಸದರಿ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೆಡಿಕಲ್ ಸ್ಟೋರ್ ಹಾಗೂ ಜನರಲ್ ಸ್ಟೋರ್‍ಗಳ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದೆ. ಆದ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಮೆಡಿಕಲ್ ಸ್ಟೋರ್ ಹಾಗೂ ಜನರಲ್ ಸ್ಟೋರ್‍ಗಳಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್‍ಗಳನ್ನು ಎಂಆರ್‍ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದಲ್ಲಿ ವ್ಯಾಪಾರಿಗಳ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955, 2020 ಮತ್ತು ಪೊಟ್ಟಣ ಸಾಮಗ್ರಿಗಳ ಕಾಯ್ದೆ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಆಹಾರ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಈ ಬಗ್ಗೆ ತನಿಖೆ ನಡೆಸಿ, ಸಾರ್ವಜನಿಕರಿಗೆ ಎಂಆರ್‍ಪಿ ದರದಲ್ಲಿ ಸದರಿ ಸಾಧನಗಳು ಲಭ್ಯವಾಗುವಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...