ಬುಧವಾರ, ಮಾರ್ಚ್ 18, 2020

ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2019 ರಿಂದ ಡಿಸೆಂಬರ್ 2019ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು 2019 ಬಹುಮಾನವನ್ನು ನೀಡಲಾಗುವುದು. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಆಹ್ವಾನಿಸಲಾಗಿದ್ದು, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ  ರಚನೆಯ ಕಲಾವಿದರ ಹೆಸರು, ಚಿತ್ರಕಲಾವಿದರ ಪೂರ್ಣ ವಿಳಾಸ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಏಪ್ರಿಲ್ 4 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಜೆಸಿ ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಬಹದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್: www.kannadapustakapradhikara.com  ದೂರವಾಣಿ ಸಂಖ್ಯೆ-080-22484516/22107704ಗೆ ಸಂಪರ್ಕಿಸಬಹುದಾಗಿದೆ.

ಇಂದಿನಿಂದ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಸ್ಥಗಿತ
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ (ಕೋವಿಡ್-19)ನ್ನು ಸರ್ಕಾರವು ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮಾರ್ಚ್ 21ರವರೆಗೆ ಯಾದಗಿರಿ ಮುಖ್ಯ ಮಾರುಕಟ್ಟೆ, ಗುರುಮಿಠಕಲ್ ಉಪ-ಮಾರುಕಟ್ಟೆ ಮತ್ತು ಸೈದಾಪೂರು ಉಪ-ಮಾರುಕಟ್ಟೆ ಪ್ರಾಂಗಣಗಳಲ್ಲಿ ಯಾವುದೇ ವ್ಯಾಪಾರ ವಹಿವಾಟು ನಡೆಯುವುದಿಲ್ಲ. 
  ಗುರುಮಿಠಕಲ್ ಉಪ-ಮಾರುಕಟ್ಟೆಯಲ್ಲಿ ಜರುಗುವ ಜಾನುವಾರು ಸಂತೆ ಮತ್ತು ಯಾದಗಿರಿ ಮುಖ್ಯ-ಮಾರುಕಟ್ಟೆಯಲ್ಲಿ ಜರುಗುವ ಜಾನುವಾರು ಸಂತೆಗಳನ್ನು ರದ್ದುಪಡಿಸಲಾಗಿದೆ. ಆದ್ದರಿಂದ ಸಾರ್ವಜನಿಕರು, ಪೇಟೆ ಕಾರ್ಯಕರ್ತರು ಮತ್ತು ರೈತ ಭಾಂದವರು ಸಹಕರಿಸಬೇಕೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 ಮಾ.20ರಂದು ಜೋಳ, ಕುರಿ ಸಂತೆ ಬಂದ್
ಯಾದಗಿರಿ, ಮಾರ್ಚ್ 17 (ಕರ್ನಾಟಕ ವಾರ್ತೆ): ಜಿಲ್ಲೆಯ ಶಹಾಪುರ ತಾಲೂಕಿನ ಸುತ್ತಮುತ್ತಲಿನ ಸಮಸ್ತ ರೈತ ಭಾಂಧವರು, ವ್ಯಾಪರಸ್ಥರು ಹಾಗೂ ಸಾರ್ವಜನಿಕರು ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 20ರಂದು ನಡೆಯುವ  ಜೋಳದ ಸಂತೆ, ಜಾನುವಾರು ಹಾಗೂ ಕುರಿ ಸಂತೆಯನ್ನು ಬಂದ್ ಮಾಡುವ ಬಗ್ಗೆ ಶಹಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೊಂಕು ಹರಡದಂತೆ ಸಾರ್ವಜನಿಕ ಆರೊಗ್ಯ ಕಾಪಾಡುವ ಹಿತದೃಷ್ಠಿಯಿಂಧ ಸುರಕ್ಷತೆಗಾಗಿ   ಅನಾಹತಗಳನ್ನು ತಡೆಗಟ್ಟಲು ಒಂದು ವಾರದ ಮಟ್ಟಿಗೆ ಹೆಚ್ಚು ಜನರು ಸೇರದಂತಹ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುªವುದು ಎಂದರು.
ಜೋಳದ ಸಂತೆ, ಜಾನುವಾರು ಹಾಗೂ ಕುರಿ ಸಂತೆಯನ್ನು  ರದ್ದುಗೋಳಿಸಲಾಗಿದ್ದು, ರೈತರು, ವ್ಯಾಪರಸ್ಥರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...