ಶುಕ್ರವಾರ, ಮಾರ್ಚ್ 20, 2020

ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ, ಮಾರ್ಚ್ 20 (ಕರ್ನಾಟಕ ವಾರ್ತೆ): ಯಾದಗಿರಿ ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಶೇ.24.10, ಶೇ.7.25ರ ನಗರಸಭೆಯ ಅನುದಾನದಲ್ಲಿ ಐಎಎಸ್, ಕೆಎಎಸ್, ಎಫ್‍ಡಿಎ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ 20, ಪರಿಶಿಷ್ಟ ಪಂಗಡ 20, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ 20 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದು, ಮಾರ್ಚ್ 30ರೊಳಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಯು ಯಾದಗಿರಿ ನಗರ ವ್ಯಾಪ್ತಿಯ ನಿವಾಸಿಯಾಗಿದ್ದು, ಬಡತನ ರೇಖೆಗಿಂತ ಕೆಳಗಿರಬೇಕು. ಕನಿಷ್ಠ 22ರಿಂದ 35 ವರ್ಷದವರು ಇರಬೇಕು. ವಿದ್ಯಾರ್ಹತೆಯು ಯಾವುದೇ ಪದವಿ, ತತ್ಸಮಾನ ಪದವಿ ಕಡ್ಡಾಯವಾಗಿ ಪಾಸಾಗಿರಬೇಕು. ಹತ್ತನೇ ತರಗತಿ ಹಾಗೂ ಪದವಿಯ ಅಂತಿಮ ವರ್ಷದ ಝರಾಕ್ಸ್ ಅಂಕಪಟ್ಟಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ನಗರಸಭೆಯ ಪೌರಾಯುಕ್ತರಾದ ರಮೇಶ ಸುಣಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...