ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಮಟ್ಟದಲ್ಲಿ ಕ್ರಮ
ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸುಧಾರಿಸಲು ಫೋನ್ ಇನ್ ಕಾರ್ಯಕ್ರ-ಋಷಿಕೇಷ್ ಭಗವಾನ್ ಸೋನವಣೆ
ಯಾದಗಿರಿ, ಮಾರ್ಚ್ 20 (ಕರ್ನಾಟಕ ವಾರ್ತೆ): ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರ ಅಹವಾಲುಗಳ ಅನುಸಾರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ವ್ಯಾಪ್ತಿಯ ಪೆÇಲೀಸ್ ಠಾಣೆಯ ಪಿಎಸ್‍ಐ ರವರಿಗೆ ಸೂಚನೆ ನೀಡಲಾಗುವುದು. ಅಲ್ಲದೇ, ಜಿಲ್ಲಾ ಮಟ್ಟದಲ್ಲಿ ಖುದ್ದಾಗಿ ಕ್ರಮ ಜರುಗಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಷ್ ಭಗವಾನ್ ಸೋನವಣೆ ಅವರು ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಹಮ್ಮಿಕೊಂಡಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರು ಮಾತನಾಡಿದರು.
ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 5 ಕರೆಗಳು ಬಂದಿದ್ದು, ಈ ಪೈಕಿ 2 ಕರೆಗಳು ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದ್ದವು. ಶಹಾಪೂರ ನಗರದ ಬಸವೇಶ್ವರ ವೃತ್ತದಲ್ಲಿ ಸಂಚಾರ ಸುವ್ಯವಸ್ಥೆ ತೊಂದರೆಯಾಗುತ್ತಿರುವ ಬಗ್ಗೆ ಹಾಗೂ ಯಾದಗಿರಿ ನಗರದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಮನವಿ ಮಾಡಿದರು. ಈ ಬಗ್ಗೆ ಸೂಕ್ತ ಕ್ರಮ ಕೈಕೊಳ್ಳಲು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಸೂಚಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭರವಸೆ ನೀಡಿದರು. ಯಾದಗಿರಿ ಗ್ರಾಮೀಣ ಠಾಣೆ ಹಾಗೂ ಸೈದಾಪೂರ ಠಾಣೆ ವ್ಯಾಪ್ತಿಯ ಶಾಲೆಗಳಲ್ಲಿ ರಾತ್ರಿ ವೇಳೆಯಲ್ಲಿ ಮದ್ಯಪಾನ ಮಾಡಿ ಶಾಲೆಯ ಆವರಣದಲ್ಲಿ ಮದ್ಯದ ಬಾಟಲಿಗಳನ್ನು ಎಸೆದು ಹೋಗುತ್ತಿದ್ದಾರೆ ಎಂಬುದಾಗಿ ದೂರು ಸಲ್ಲಿಸಿದ 2 ಕರೆಗಳ ಬಗ್ಗೆ ಸಂಬಂಧಪಟ್ಟ ಪಿಎಸ್‍ಐ ಹಾಗೂ ಸಿಪಿಐ ಅವರುಗಳು ರಾತ್ರಿ ಗಸ್ತು ಕರ್ತವ್ಯದ ವೇಳೆಯಲ್ಲಿ ಅಥವಾ ಬೀಟ್ ಸಿಬ್ಬಂದಿಯವರನ್ನು ಕಳುಹಿಸಿ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.
ಸುರಪೂರ ಪಟ್ಟಣದಲ್ಲಿ ಲೌಡ್‍ಸ್ಪೀಕರ್ ಹಾಕಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಸ್ಪೀಕರ್ ಹಚ್ಚುತ್ತಿರುವ ಕುರಿತು ಸಲ್ಲಿಸಿದ ದೂರಿನ ಅನುಸಾರ ಪರಿಶೀಲಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸುರಪೂರ ಠಾಣೆ ಪೊಲೀಸ್ ಇನ್‍ಸ್ಪೆಕ್ಟರ್ ಅವರಿಗೆ ಸೂಚನೆ ನೀಡುವುದಾಗಿ ಹೇಳಿದರು.
ಡಿವೈಎಸ್‍ಪಿ ಯು.ಶರಣಪ್ಪ, ಸಿಪಿಐ ಶರಣಗೌಡ ನ್ಯಾಮಣ್ಣವರ್, ನಿಸ್ತಂತು ಘಟಕದ ಪೊಲೀಸ್ ಇನ್‍ಸ್ಪೆಕ್ಟರ್ ಬಸಪ್ಪ, ಟ್ರಾಫಿಕ್ ಪಿಎಸ್‍ಐ ಪ್ರದೀಪ್ ಬೀಸೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ