ಆಶನಾಳ: ಬಾಲ್ಯ ವಿವಾಹ ತಡೆ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದ ಮೇರೆಗೆ ಮಕ್ಕಳ ಸಹಾಯವಾಣಿ ಸಿಬ್ಬಂದಿಯೊಂದಿಗೆ ಯಾದಗಿರಿ ತಾಲ್ಲೂಕಿನ ಆಶನಾಳ ಗ್ರಾಮದಲ್ಲಿ 19 ವರ್ಷದ ಬಾಲಕನ ವಿವಾಹವನ್ನು ಸೋಮವಾರ ತಡೆಗಟ್ಟಲಾಯಿತು.ಬಾಲಕನ ಪೋಷಕರಿಗೆ ತಿಳುವಳಿಕೆ ನೀಡಿ 21 ವರ್ಷದವರೆಗೆ ವಿವಾಹ ಮಾಡಬಾರದೆಂದು ಮತ್ತು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತಾಗಿ ವಿವರಿಸಲಾಯಿತು. ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕಿ ಕವಿತಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ವೆಂಕಟೇಶಕುಮಾರ ರಾಠೋಡ, ಸಾಬಯ್ಯ ನಾಯಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ರೇಣುಕಾ, ಪೊಲೀಸ್ ಇಲಾಖೆ ಸಿಬ್ಬಂದಿ ಮಂಜುಳಾ ಅವರು ಉಪಸ್ಥಿತರಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರ್ಕನಳ್ಳಿ: ಬಾಲ್ಯ ವಿವಾಹ ತಡೆ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದ ಮೇರೆಗೆ ಮಕ್ಕಳ ಸಹಾಯವಾಣಿ ಸಿಬ್ಬಂದಿಯೊಂದಿಗೆ ಯಾದಗಿರಿ ತಾಲ್ಲೂಕಿನ ವರ್ಕನಳ್ಳಿ ಗ್ರಾಮದಲ್ಲಿ 16 ವರ್ಷದ ಬಾಲಕಿಯ ವಿವಾಹವನ್ನು ಸೋಮವಾರ ತಡೆಗಟ್ಟಲಾಯಿತು.ಬಾಲಕಿಯ ಪೋಷಕರಿಗೆ ತಿಳುವಳಿಕೆ ಹೇಳಿ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತಾಗಿ ವಿವರಿಸಲಾಯಿತು. ಮಗುವನ್ನು ಪುನರ್ವಸತಿಗಾಗಿ ಮತ್ತು ಮುಂದಿನ ಕ್ರಮಕ್ಕಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ.ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರಾಧಾ ಜಿ.ಮಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ವೆಂಕಟೇಶಕುಮಾರ ರಾಠೋಡ, ಸಾಬಯ್ಯ ನಾಯಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ಮಲ್ಲಪ್ಪ ಮಾನೇಗಾರ, ಎ.ಎಸ್.ಐ ಶಂಕರ್ ಅವರು ಉಪಸ್ಥಿತರಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ