ಸೋಮವಾರ, ಮಾರ್ಚ್ 23, 2020

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನಲ್ಲಿ ಆಯೋಜಿಸಲಾಗುತ್ತಿರುವ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಯಾದಗಿರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದ್ರಂಪಳ್ಳಿಯ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2020ರ ಮೇ 2ರಿಂದ 2021ರ ಫೆಬ್ರುವರಿ 28ರವರೆಗೆ ತರಬೇತಿ ಇರುತ್ತದೆ. ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ವೆಬ್‍ಸೈಟ್www.horticulture.kar.nic.in ನಿಂದ ಮಾರ್ಚ್ 30ರಿಂದ ಏಪ್ರಿಲ್ 24ರ ಸಂಜೆ 5 ಗಂಟೆಯವರೆಗೆ ಡೌನ್‍ಲೋಡ್ ಮಾಡಿಕೊಂಡು ಅಥವಾ ಯಾದಗಿರಿ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ರಾಜ್ಯವಲಯ) ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರ (ಜಿ.ಪಂ) ಕಚೇರಿಗೆ ಏಪ್ರಿಲ್ 24ರೊಳಗೆ ಸಲ್ಲಿಸಬೇಕು. ತೋಟಗಾರಿಕೆ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:8618344266, 9008637618 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
                      ಟ್ಯಾಂಕರ್ ನೀರು ಪೂರೈಕೆಗೆ ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): 2020ನೇ ಸಾಲಿನ ಬೇಸಿಗೆ ಕಾಲದಲ್ಲಿ ಯಾದಗಿರಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಗ್ರಾಮ, ಜನವಸತಿ ಪ್ರದೇಶಗಳಲ್ಲಿ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೂಚಿಸುವ ಗ್ರಾಮ, ಜನವಸತಿ ಪ್ರದೇಶಗಳಿಗೆ ಮೊಬೈಲ್ ಆ್ಯಪ್ ಆಧಾರಿತ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ಪೊರೈಸುವ ಅರ್ಹ ಸರಬರಾಜುದಾರರಿಂದ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ.2020ನೇ ಸಾಲಿನ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವವರೆಗೆ ಸರಬರಾಜು ಮಾಡಲು ಪೂರ್ವ ಸಿದ್ಧತೆಗಾಗಿ ಹಾಗೂ ಮುಂಜಾಗ್ರತೆಗಾಗಿ ನೀರಿನ ಟ್ಯಾಂಕರ್‍ಗಳನ್ನು ಕಾಯ್ದಿರಿಸಲು ಕೆ.ಟಿ.ಪಿ.ಪಿ ಕಾಯ್ದೆ ಪ್ರಕಾರ ಅರ್ಹ ಸರಬರಾಜುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 26ರ ಸಾಯಂಕಾಲ 5.30 ಗಂಟೆಯವರೆಗೆ ಟೆಂಡರ್ ಅರ್ಜಿ ಪಡೆಯಬಹುದು. ಮಾರ್ಚ್ 30ರಂದು ಸಂಜೆ 4 ಗಂಟೆಯವರೆಗೆ ಭರ್ತಿ ಮಾಡಿದ ಟೆಂಡರ್‍ಗಳನ್ನು ಸಲ್ಲಿಸಬಹುದು. ಮಾರ್ಚ್ 31ರ ಸಾಯಂಕಾಲ 4 ಗಂಟೆಗೆ ಸೀಲ್ಡ್ ಟೆಂಡರ್‍ಗಳನ್ನು ತೆರೆಯಲಾಗುವುದು. 3000, 4000, 5000 ಲೀಟರ್ ಸಾಮಥ್ರ್ಯದ ಟ್ರಿಪ್ ಆಧಾರಿತ ಟ್ಯಾಂಕರ್ ಮೂಲಕ ಕುಡಿಯಲು ಯೋಗ್ಯವಾದ ನೀರನ್ನು ಬೇಸಿಗೆ ಅವಧಿಯಲ್ಲಿ ಅಥವಾ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವವರೆಗೆ ಸರಬರಾಜು ಮಾಡಬೇಕು ಎಂದು ಯಾದಗಿರಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...