ಗುರುವಾರ, ಮಾರ್ಚ್ 26, 2020

ಅಗತ್ಯವಸ್ತುಗಳ ದಾನ ಮಾಡಲು ಸಂಪರ್ಕಿ
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆಯಾದ ಪ್ರಯುಕ್ತ ಸಾರ್ವಜನಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳಾದ ಆಹಾರ ಧಾನ್ಯಗಳು, ಔಷಧೋಪಕರಣಗಳು ಮತ್ತು ಇನ್ನಿತರ ಅಗತ್ಯ ವಸ್ತುಗಳನ್ನು ನೀಡಲು ಇಚ್ಛಿಸುವ ಸರ್ಕಾರೇತರ ಸಂಸ್ಥೆಗಳು (ಎನ್‍ಜಿಓ), ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತದಿಂದ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. ಸದ್ಯ ಭಾರತ ಸರ್ಕಾರದ ಹಾಗೂ ಕರ್ನಾಟಕ ಸರ್ಕಾರದ ನಿರ್ದೇಶನಗಳನ್ವಯ ಏಪ್ರಿಲ್ 15ರ ವರೆಗೆ ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆಯಾಗಿರುವ ಪ್ರಯುಕ್ತ, ಈ ಅವಧಿಯಲ್ಲಿ ಸಾರ್ವಜನಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳ ಹಾಗೂ ಮೂಲ ಸೌಲಭ್ಯಗಳ ಅತೀ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ನೀಡಲು ಇಚ್ಛಿಸುವವರು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಶರಣಪ್ಪ ಪಾಟೀಲ್ ಮೊ:9902193325 ಮತ್ತು ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ್‍ಸಿಂಗ್ ಅವರ ಮೊ:9448911558, 7892055353 ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕನಿಷ್ಠ 1 ಮೀಟರ್ ಅಂತರ ಕಾಯ್ದುಕೊಳ್ಳಲು ಮನವಿ
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಸಮಸ್ತ ನಾಗರಿಕರು ತಪ್ಪದೇ ಪಾಲನೆ ಮಾಡಿ ಸಹಕರಿಸಲು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಿರಾಣಿ ಅಂಗಡಿ, ಔಷಧಿ, ಹಾಲಿನ ಅಂಗಡಿ, ದಿನಸಿ ಅಂಗಡಿ, ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಬ್ಯಾಂಕ್‍ಗಳಲ್ಲಿ ಕನಿಷ್ಠ 1 ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೆಮ್ಮು, ನೆಗಡಿ, ಜ್ವರ ಇನ್ನಿತರ ರೋಗಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿ ಪರೀಕ್ಷೆ ಮಾಡಿಕೊಳ್ಳಬೇಕು. ಅಥವಾ ಉಚಿತ ಆರೋಗ್ಯ ಸಹಾಯವಾಣಿ 104 ಅಥವಾ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...