ಇಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ
ಯಾದಗಿರಿ, ಮಾರ್ಚ್ ೨೧ (ಕರ್ನಾಟಕ ವಾರ್ತೆ): ದೇಶಾದ್ಯಂತ ಮಾರ್ಚ್ ೨೨ರಂದು ಭಾನುವಾರ ಬೆಳಿಗ್ಗೆ ೭ ಗಂಟೆಯಿAದ ರಾತ್ರಿ ೯ ಗಂಟೆಯವರೆಗೆ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಎಲ್ಲಾ ಸಾರ್ವಜನಿಕರು “ಜನತಾ ಕರ್ಫ್ಯೂ”ವನ್ನು ಸ್ವ-ಇಚ್ಛೆಯಿಂದ ವಿಧಿಸಿಕೊಂಡು ಮನೆಯಲ್ಲೇ ಇರುವುದರಿಂದ ಪಡಿತರ ಚೀಟಿದಾರರು ನ್ಯಾಯ ಬೆಲೆ ಅಂಗಡಿಗಳಿಗೆ ಪಡಿತರ ಪಡೆಯಲು ಆಗಮಿಸುವ ಸಾಧ್ಯತೆ ಕಡಿಮೆ ಇರುತ್ತದೆ. ಆದ ಕಾರಣ ಮಾರ್ಚ್ ೨೨ರಂದು ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಿಗೆ ರಜೆ ನೀಡಲಾಗಿದೆ. ಈ ದಿನದ ವಿತರಣೆಯನ್ನು ಮಾರ್ಚ್ ೨೪ರ ಮಂಗಳವಾರ ನಿರ್ವಹಿಸುವಂತೆ ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂದರ್ಶನ ಮುಂದೂಡಿಕೆ
ಯಾದಗಿರಿ, ಮಾರ್ಚ್ ೨೧ (ಕರ್ನಾಟಕ ವಾರ್ತೆ): ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಮತ್ತು ಜಿಲ್ಲಾ ಲೆಕ್ಕ ಪತ್ರ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ ೨೪ರಂದು ನಿಗದಿಪಡಿಸಲಾಗಿದ್ದ ಸಂದರ್ಶನದ ದಿನಾಂಕವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ನಂತರ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಲಾಪೂರ ಮೈಲಾರಲಿಂಗೇಶ್ವರ ದರ್ಶನ ರದ್ದು
ಯಾದಗಿರಿ, ಮಾರ್ಚ್ ೨೧ (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರ ಆದೇಶದಂತೆ ಯಾದಗಿರಿ ತಾಲ್ಲೂಕಿನ ಮೈಲಾಪೂರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಮತ್ತು ದೇವರ ದರ್ಶನ ಹಾಗೂ ಇತರೆ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ಸಾರ್ವಜನಿಕರು/ಭಕ್ತಾಧಿಗಳ ಹಿತದೃಷ್ಟಿಯಿಂದ ಮಾರ್ಚ್ ೨೦ರಿಂದ ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಾದಗಿರಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರು ಸುತ್ತೋಲೆ ಮೂಲಕ ರಾಜ್ಯದಲ್ಲಿ ಕೋವಿಡ್-೧೯ (ಕೊರೊನಾ ವೈರಸ್) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಕ್ತಾಧಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಧಾರ್ಮಿಕ ದತ್ತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳು, ಸಂಸ್ಥೆಗಳಲ್ಲಿ ದಿನನಿತ್ಯ ಶಾಸ್ತç ಸಂಪ್ರದಾಯದAತೆ ನಡೆಯುವ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಮತ್ತು ಪೂಜಾ ಕೈಂಕರ್ಯಗಳನ್ನು ದೇವಾಲಯದ ಒಳಾಂಗಣ ಮತ್ತು ಹೊರಾಂಗಣ ಆಗಮಿಕರು/ ತಂತ್ರಿಗಳು/ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿ ವರ್ಗದವರು ನಡೆಸುವ ಷರತ್ತಿಗೊಳಪಟ್ಟು ಉಳಿದಂತೆ ದೇವಾಲಯಗಳಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಮತ್ತು ದೇವರ ದರ್ಶನ ಹಾಗೂ ಇತರೆ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಿರುತ್ತಾರೆ. ಕಾರಣ ಸಾರ್ವಜನಿಕರು, ಭಕ್ತಾಧಿಗಳು ಸಹಕರಿಸುವಂತೆ ಅವರು ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ