ಮಂಗಳವಾರ, ಮಾರ್ಚ್ 3, 2020

ಜಿಲ್ಲಾ ವಿಪತ್ತು ನಿರ್ವಹಣಾ ಸಭೆ 
‘ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡಿ’  
-ಜಿಲ್ಲಾಧಿಕಾರಿಗಳು ಎಂ.ಕೂರ್ಮಾರಾವ್  
ಯಾದಗಿರಿ, ಮಾರ್ಚ್ ೦೩ (ಕರ್ನಾಟಕ ವಾರ್ತೆ):  ಜಿಲ್ಲೆಯಲ್ಲಿ ಬೇಸಿಗೆ ಬಿಸಿಗಾಳಿಯ ತಾಪಮಾನ ಆರಂಭವಾಗಲಿದ್ದು, ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳ ಎಂ ಕೂರ್ಮಾ ರಾವ್ ಅವರು ಹೇಳಿದರು
 ಯಾದಗಿರಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುಬಹುದು ಹೀಗಾಗಿ ಜಿಲ್ಲೆಯ ನಗರ/ಗ್ರಾಮ/ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ  ಇರುವ ಪ್ರದೇಶಗಳಲ್ಲಿ ನೀರಿನ ಕೂರತೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ನೆರೆ ರಾಜ್ಯ ತೆಲಂಗಾಣದಲ್ಲಿ ಕರೊನಾ ವೈರಸ್ ಪತ್ತೆಯಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಈ ವೈರಸ್ ಸೊಂಕದAತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಯಾದಗಿರಿ ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ರಣ ಬಿಸಿಲು ಉಂಟಾಗಬಹುದು ಹೀಗಾಗಿ ನಾಲ್ಕು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಬಿಸಿಲಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಯಾವುದೇ ರೀತಿ ರೋಗ ರುಜನಿಗಳು ಹರಡದಂತೆ ಡಂಗೂರ ಮೂಲಕ ಜನರಿಗೆ ತಿಳಿಸಬೇಕು ಎಂದರು. ಇನ್ನು ನಗರಸಭೆಯ ಕಸ ತುಂಬುವ ವಾಹನಗಳÀ ಮೈಕ್ ಮುಖಾಂತರ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಅಲ್ಲದೇ ಜಿಲ್ಲೆಯಲ್ಲಿರೋ ಅಂಗನವಾಡಿಗಳಲ್ಲಿ ಮಕ್ಕಳಿಗಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು . ಅಲ್ಲದೇ ಪ್ರತಿಯೊಂದು ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಬೇಸಿಗೆ ಹೆಚ್ಚಿದಂತೆ ಜಿಲ್ಲೆಯಲ್ಲಿರುವ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಜಾನುವಾರುಗಳಿಗೆ ನೀರು ಕುಡಿಯಲು ತೊಂದರೆಯಾಗಲಿದ್ದು, ಎಲ್ಲಾ ಕೆರೆಗಳಿಗೆ ನೀರು ತುಂಬಿಸಬೇಕು. ಜೊತೆಗೆ ಜಾನುವಾರುಗಳ ಆರೋಗ್ಯ ದೃಷ್ಟಿಯಿಂದ ಔಷಧಿಗಳ ವ್ಯವಸ್ಥೆ ಸರಿಯಾಗಿ ಮಾಡಬೇಕು ಎಂದರು.
 ಬೇಸಿಗೆಗೆ ಸಂಬAಧಪಟ್ಟAತೆ ವಿವಿಧ ಸಮಸ್ಯೆಗಳ ಬಗ್ಗೆ ನಿಮ್ಮ ಕೆಳ ಹಂತದ ಅಧಿಕಾರಿಗಳ ಜೊತೆಗೆ ಟಾಸ್ಕ್ ಪೋರ್ಸ್ ಸಭೆ ಮಾಡಬೇಕು. ಅಲ್ಲದೇ ಹೊಸ ವಾಟ್ಸ್ ಆಪ್ ಗ್ರೂಪ್ ಕ್ರಿಯೆಟ್ ಮಾಡಿ ಅದರಲ್ಲಿ ದಿನನಿತ್ಯ ನಡೆಯುವ ಕಾರ್ಯಕ್ರಮಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು. ಬೇಸಿಗೆ ಬಿಸಿಗಾಳಿಯಲ್ಲಿ ಏನು ಮಾಡಬಾರದು..? ಬಿಗಿಯಾದ ಗಾಢ ಬಣ್ಣದ ಸಿಂಥೇಟಿಕ್ ಬಟ್ಟೆ ಧರಿಸಬಾರದು, ಸೋಡಾ, ಇತ್ಯಾದಿ ಕಾಬ್ರೋನೇಟೆಡ್ ತಂಪು ಪಾನಿಯ ಹೆಚ್ಚಾಗಿ ಸೇವಿಸಬಾರದು, ಕಾಫಿ, ಟೀ ಅತೀ ಸಕ್ಕರೆ ಅಂಶವುಳ್ಳ ಪಾನಿಯ ಅತೀಯಾಗಿ ಸೇವನೆ ಮಾಡಬಾರದು, ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬಾರದು. ಬಿಸಿಗಾಳಿಯಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು..? ಸಡಿಲವಾದ ತಿಳು ಬಣ್ಣದ ಬಟ್ಟೆ ಧರಿಸಬೇಕು, ಮನೆಯಿಂದ ಹೊರಗಡೆ ಹೋಗುವಾಗ ಶುದ್ಧ ನೀರು ತೆಗೆದುಕೊಂಡು ಹೋಗಬೇಕು, ಆಗಾಗ ನಿಧಾನವಾಗಿ, ಧಾರಾಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಬೇಕು, ಹಣ್ಣಿಮ ರಸ, ಪಾನಕ ಕುಡಿಯಬೇಕು, ಬಿಸಿಲಿಗೆ ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ತೀವ್ರ ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಇನ್ನು ಈ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದರಿಂದ ಮುಂಬುರುವ ಬೇಸಿಗೆಯ ಬಿಸಿಗಾಳಿಯಿಂದ ರಕ್ಷಿಸಕೊಳ್ಳಬೇಕಾಗಿದೆ ಎಂದು ಅವರು ತಿಳಿಸದರು.  ಸಭೆಯಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್‌ಸೋನಾವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್. ಸೋಮನಾಳ, ತಾಲೂಕು ತಹಶೀಲ್ದಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...