ಬುಧವಾರ, ಮಾರ್ಚ್ 4, 2020

 ಕರೋನಾ ವೈರಸ್ ಅರಿವು ಮೂಡಿಸುವ ಕಾರ್ಯಕ್ರಮ
‘ಕರೋನಾ ವೈರಸ್ ಬಗ್ಗೆ ಗಾಬರಿ ಪಡುವ ಅಗತ್ಯವಿಲ್ಲ’
-ಜಿಲ್ಲಾಧಿಕಾರಿಗಳು ಎಂ. ಕೂರ್ಮಾರಾವ್
ಯಾದಗಿರಿ, ಮಾರ್ಚ್ 04 (ಕರ್ನಾಟಕ ವಾರ್ತೆ):  ಕರೋನಾ ವೈರಸ್ ಬಗ್ಗೆ ಯಾರು ಗಾಬರಿಪಡಬಾರದು, ಮುಂಜಾಗ್ರತಾ ಕ್ರಮವಾಗಿ ಎಚ್ಚರಿಂದ ಇರಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ. ಕೂರ್ಮಾರಾವ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಕರೋನಾ ವೈರಸ್ ಅರಿವು ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ನೆರೆ ರಾಜ್ಯ ತೆಲಾಂಗಣದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕರೋನಾ ವೈರಸ್ ಸೋಂಕು ಬಗ್ಗೆ ಸುಳಿವೇ ಇಲ್ಲ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಯಾರು ಗಾಬರಿಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಕರೋನಾ ವೈರಸ್ ಪ್ರಕರಣಗಳನ್ನು ಸಾಂಕ್ರಮಿಕವಾಗಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚಿರಿಕಾ ಕ್ರಮಗಳು ಅನುಸರಿಬೇಕೆಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಸ್ಯರು, ಸಂಬಂಧಪಟ್ಟ ಮೆಡಿಕಲ್ ಕಾಳೇಜುಗಳ ಡೀನ್ ಹಾಗೂ ಸದಸ್ಯರು, ಇಂಡಿಯನ್ ಮೆಡಿಕಲ್ ಅಸೋಷಿಯೇಷನ್ ಜಿಲ್ಲಾ ಪ್ರತಿನಿಧಿಗಳು, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಕರು ಸೇರಿದಂತೆ ವಿವಿಧ ಇಲಾಖೆಯ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಕೆಳಹಂತದ ಅಧಿಕಾರಿಗಳ ತಂಡ ರಚಿಸಿ ಕರೋನಾ ವೈರಸ್ ಬಗ್ಗೆ ಭಯ ಭೀತರಾಗದಂತೆ ಅರಿವು ಮೂಡಿಸಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಮಾತನಾಡಿ, ಬೇರೆ ಕಡೆಯಿಂದ ಬಂದ ಪ್ರಯಾಣಿಕರಿಗೆ ಯಾವುದೇ ರೀತಿಯ ರೋಗದ ಲಕ್ಷಣಗಳು ಕಂಡು ಬಂದಲ್ಲಿ ತುರ್ತಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಬಳಿ ಕರೆದುಕೊಂಡು ಹೋಗಿ ಪರಿಶೀಲಿಸಿ ಚಿಕಿತ್ಸೆ ನೀಡಬೇಕು. ಜೊತೆಗೆ ಜಿಲ್ಲೆಯ ಹೊರಹೊಲಯದಲ್ಲಿ ಕರೋನಾ ವೈರಸ್ ಬಗ್ಗೆ ಅರಿವು ಮೂಡಿಸುವ ಬ್ಯಾನರ್‍ಗಳು ಹಾಕಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾಗಳಾದ ಡಾ. ಎಂ.ಎಸ್ ಪಾಟೀಲ್ ಅವರಿಗೆ ಹೇಳಿದರು. 
ರೋಗದ ಲಕ್ಷಣಗಳು: ಜ್ವರ, ತಲೆ ನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಹಾಗೂ ಭೇದಿ ಇವು ಕರೋನಾ ವೈರಸ್ ಲಕ್ಷಣಗಳಾಗಿವೆ ಎಂದು ಹೇಳಿದರು. 
ಇನ್ನು ಸಾರ್ವಜನಿಕರು ಮುಂಜಾಗ್ರತ ಕ್ರಮವಾಗಿ ಸೋಂಕು ಪೀಡಿತರ ಸಂಪರ್ಕದಿಂದ ದೂರವಿರಬೇಕು, ಶಂಕಿತ ರೋಗಿಯು ಮನೆಯಲ್ಲಿಯೇ ಪ್ರತ್ಯೇಕವಾಗಿರಬೇಕು, ಟ್ರಿಪಲ್ ಲೇಯರ್ ಮಾಸ್ಕ್ ಬಳಸಬೇಕು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಆಗಾಗೆ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು, ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್/ ಕೈ ವಸ್ತ್ರ ಉಪಯೋಗಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಘಳಬಾರದು, ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.  
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಡಾ. ನಾರಾಯಣಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...