ಬುಧವಾರ, ಮಾರ್ಚ್ 18, 2020

ಮಾ.26ರಂದು ಪೂರ್ವಸಿದ್ಧತಾ ಸಭೆ

ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): 2020-21ನೇ ಸಾಲಿನ ಡಾ.ಬಾಬು ಜಗಜೀವನರಾಂ ರವರ 113ನೇ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮ ದಿನಾಚರಣೆಯ ಪೂರ್ವಸಿದ್ಧತಾ ಸಭೆಯನ್ನು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 26ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎಸ್.ಎಸ್.ಚನ್ನಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ
ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ಆಯುಷ್ ಆಯುರ್ವೇದ ಚಿಕಿತ್ಸಾಲಯಗಳಿಗೆ ಮಂಜೂರಾಗಿರುವ ಗುತ್ತಿಗೆ ಆಧಾರದ ಅರೆಕಾಲಿಕ ಯೋಗ ತರಬೇತುದಾರರು ಮತ್ತು ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ ಹುದ್ದ್ದೆಗಳಿಗೆ ನಡೆದ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ಪ್ರಕಟಿಸಲಾದ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಆಯುಷ್ ಕಚೇರಿಗೆ ಮಾರ್ಚ್ 31ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯುವ ಬರಹಗಾರರಿಂದ ಅರ್ಜಿ ಆಹ್ವಾನ
ಯಾದಗಿರಿ, ಮಾರ್ಚ್ 18 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದಿಂದ 2019ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪೆÇ್ರೀತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿದಾರರು ವಯೋಮಿತಿ 18ರಿಂದ 35 ವರ್ಷದೊಳಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾμÉ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 15ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 080-22484516, 22017704 ಸಂಪರ್ಕಿಸಲು ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...