ಗುರುವಾರ, ಸೆಪ್ಟೆಂಬರ್ 16, 2021

 ಶಹಾಪುರ: ನಿರಾಶ್ರಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

ಯಾದಗಿರಿ.ಸೆಪ್ಟೆಂಬರ್.೧೬(ಕರ್ನಾಟಕ ವಾರ್ತೆ): ೨೦೨೧-೨೨ನೇ ಸಾಲಿನ ಡೇ-ನಲ್ಮ್ ಅಭಿಯಾನದ ನಗರ ನಿರ್ಗತಿಕರ ವಸತಿ ರಹಿತ ಉಪ ಘಟಕದಡಿ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ನಿರಾಶ್ರಿತರನ್ನು ಎನ್‌ಜಿಓ(ಟಿgo) ಮೂಲಕ ಸಮೀಕ್ಷೆ ಕೈಗೊಳ್ಳಬೇಕಾಗಿದೆ. ಸೆಪ್ಟೆಂಬರ್ ೩೧ರ ಒಳಗಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅರ್ಹತೆ ಹೊಂದಿದ ನೋಂದಾಯಿತ ಸರ್ಕಾರೇತರ ಸಂಸ್ಥೆ/ನಗರ ಪ್ರದೇಶದ ಒಕ್ಕೂಟಗಳು ಸೆಪ್ಟೆಂಬರ್೨೦ ರೊಳಗಾಗಿ ತಮ್ಮ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಶಹಾಪುರ ನಗರಸಭೆ ಪೌರಾಯುಕ್ತರು ಪ್ರಕಟಣೆಗೆ ತಿಳಿಸಿದ್ದಾರೆ.


ಸರ್ಕಾರದ ಸುತ್ತೋಲೆ ಪ್ರಕಾರ ಸಮೀಕ್ಷೆ ಕೈಗೊಳ್ಳುವುದು, ಸರ್ಕಾರ ನಿಗದಿ ಪಡಿಸಿದ ದರದಂತೆ ಸಮೀಕ್ಷೆ ಅನುದಾನ ಬಿಡುಗಡೆ ಮಾಡಲಾಗುತ್ತದೆ, ಸದರಿ ಸಂಸ್ಥೆಯವರು ಈಗಾಗಲೇ ಬೇರೆ ಬೇರೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ವರದಿ ಲಗತ್ತಿಸಬೆಕು ಸಂಸ್ಥೆಯ ಪ್ರಸಕ್ತ ಸಾಲಿನ ನೊಂದಣಿ ಪತ್ರ ಲಗತ್ತಿಸತಕ್ಕದ್ದು.ಈ ಮೇಲಿನ ಎಲ್ಲಾ ಷರತ್ತುಗಳಿಗೆ ಅನುಗುಣವಾಗಿ ಅರ್ಜಿಗಳನ್ನು ಸಲ್ಲಿಸಬಹುದು.

************************************


ಡೆಂಗ್ಯೂ/ಚಿಕ್ಕನಗೂನ್ಯ ಜ್ವರ ತಡೆಯುವ ಸಲುವಾಗಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮ ಅಳವಡಿಕೆಗೆ ಸೂಚನೆ

ಯಾದಗಿರಿ.ಸೆಪ್ಟೆಂಬರ್.೧೬(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿರುವುದರಿAದ ಜಿಲ್ಲೆಯಾದ್ಯಂತ ಡೆಂಗ್ಯೂ/ಚಿಕ್ಕನಗೂನ್ಯ ಜ್ವರ ಬರದಂತೆ ಮುಂಜಾಗ್ರತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು ಪ್ರಕಟಣೆಗೆ ತಿಳಿಸಿದ್ದಾರೆ.


ಡೆಂಗ್ಯೂ ರೋಗವು ಏಡೀಸ್ ಈಜೀಪ್ಪಿ ಎಂಬ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೂಳ್ಳೆಯು ದಿನದಲ್ಲಿ ಮಾತ್ರ ಕಚ್ಚುತ್ತದೆ. ಈ ಸೂಳ್ಳೆಯು ಸ್ವಚ್ಛವಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳಸುತ್ತದೆ. ೭ ದಿನದಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ.ಆದ ಕಾರಣ ಪ್ರತಿ    ೩-೪ದಿನಗಳಿಗೊಮ್ಮೆ  ನೀರನ್ನು ಸಂಗ್ರಹಿಸುವ ತೊಟ್ಟೆ, ಬ್ಯಾರಲ್ ಪಾತ್ರೆಗಳನ್ನು ಸ್ವಚ್ಛವಾಗಿ ತಿಕ್ಕಿ ತೊಳೆದು ಬಿಸಿಲಿನಲ್ಲಿ ಒಣಗಿಸಿ ನೀರನ್ನು ತುಂಬಬೇಕು. ಏರ್‌ಕುಲರ್‌ನಲ್ಲಿ ಸಂಗ್ರಹವಾದ ನೀರು ಮತ್ತು ಹೂವಿನ ಕುಂಡಲಿಗಳಲ್ಲಿ ಸಂಗ್ರಹಿಸಿದ ನೀರನ್ನು ಕೂಡ ಪ್ರತಿ ೩-೪ ದಿನಗಳಿಗೊಮ್ಮೆ ಬದಲಾಯಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. 


ರೋಗದ ಲಕ್ಷಣ: ತೀವ್ರ ತಲೆ ನೋವು, ಕಣ್ಣು ನೋವು, ಕೀಲು ಮತ್ತು ಸ್ನಾಯು ನೋವು, ಹಸಿವಾಗದೇ ಇರುವುದು, ತುರಿಕೆ ಹಾಗೂ ತೀವ್ರ ಜ್ವರ ಬರುತ್ತವೆ.

ಅನುಸರಿಸಬೇಕಾದ ಕ್ರಮಗಳು: ಡೆಂಗ್ಯೂ ರೋಗದ ಕಲ್ಷಣ ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ಸಂಪರ್ಕಿಸಬೇಕು, ಹೆಚ್ಚಿನ ವಿಶ್ರಾಂತಿಯಲ್ಲಿರಬೇಕು, ನೀರಿನ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಪದಾರ್ಥಗಳನ್ನು ಸೇವಿಸಬೇಕು.

ಡೆಂಗ್ಯೂ ಜ್ವರ ಹರಡದಂತೆ ತಡೆಗಟ್ಟುವ ಕ್ರಮಗಳು: ಸೊಳ್ಳೆಯು ಕಚ್ಚದಂತೆ ಉದ್ದನೆಯ ತೋಳಿನ ಷರ್ಟ ಮತ್ತು ಪ್ಯಾಂಟ್‌ಗಳನ್ನು ಧರಿಸುವುದು ಹಾಗೂ ಸೊಳ್ಳೆ ಬತ್ತಿಯನ್ನು ಉಪಯೋಗಿಸಬೇಕು, ಮಲಗುವಾಗ ಸೊಳ್ಳೆ ಪರದೆಯನ್ನು ಹಾಕಿಕೊಳ್ಳುವುದು, ಮನೆಯಲ್ಲಿ ಮತ್ತು ಮನೆಯ ಸುತ್ತಮುತ್ತ ನೈರ್ಮಲ್ಯ ಕಾಪಾಡುವುದು ಹಾಗೂ ನಿರಿನ ಮೂಲಗಳ ಹತ್ತಿರ ಇರುವ ತಿಪ್ಪೆಗುಂಡಿಗಳನ್ನು ಸ್ಥಳಾಂತರಿಸುವುದು, ಟೈರ್ ಹಾಗೂ ತೆಂಗಿನ ಚಿಪ್ಪಿನಲ್ಲಿ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸುವುದು, ನೀರಿನ ಸರಬರಾಜು ಪೈಪ್‌ನಲ್ಲಿ ಸೋರಿಕೆ ಇದ್ದಲ್ಲಿ ತಕ್ಷಣವೇ ದುರಸ್ಥಿ ಅಥವಾ ಬದಲಾಯಿಸಬೇಕು, ಕುಡಿಯುವ ನೀರಿನ ಮೂಲಗಳಿಗೆ ಪ್ರತಿ ದಿನ ಹಾಗೂ ತೆರದ ಬಾವಿಗಳಲ್ಲಿ ವಾರಕೊಮ್ಮೆ ಕ್ಲೋರಿನೇಷನ್ ಮಾಡುವುದು, ಕ್ಲೋರಿನೇಷನ್ ಮಾಡಿದ ನೀರನ್ನೇ ಬಳಸುವುದು, ಜನರಿಗೆ ರೊಗದ ಬಗ್ಗೆ ಅರಿವು ಮೂಡಿಸಲು ಗ್ರಾಮದಲ್ಲಿ ಕರಪತ್ರಗಳನ್ನು ಮುದ್ರಿಸಿ ಹಂಚುವುದು ಹಾಗೂ ಜನಸಂದಣಿ ಪ್ರದೇಶದಲ್ಲಿ ಅಂಟಿಸುವುದರ ಮೂಲಕ ಸ್ವಚ್ಛತೆಯನ್ನು ಕೈಗೊಳ್ಳಲು ಸೂಚಿಸಲಾಗಿದೆ.

*******************************************

ಸಚಿವರ ಪ್ರವಾಸ

ಯಾದಗಿರಿ.ಸೆಪ್ಟೆಂಬರ್.೧೬(ಕರ್ನಾಟಕ ವಾರ್ತೆ): ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ.ನಾಗೇಶ ರವರು ಸೆಪ್ಟೆಂಬರ್ ೧೬ ರಂದು ಆಗಮಿಸಲಿದ್ದಾರೆ. ಅಂದು ಬೆಳಗ್ಗೆ ೬ ಗಂಟೆಗೆ ಯಾದಗಿರಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಬೆಳಗ್ಗೆ ೯ ಗಂಟೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸುವರು. ೧೧.೩೦ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವರು.


 




‘ಸ್ವಾತಂತ್ರö್ಯ ಸಮರ ಕರುನಾಡು ಅಮರ” ನಾಟಕ ಪ್ರದರ್ಶನ

ಯಾದಗಿರಿ.ಸೆಪ್ಟೆಂಬರ್.16(ಕರ್ನಾಟಕ ವಾರ್ತೆ): ಭಾರತ ಸ್ವಾತಂತ್ರö್ಯ ಹೋರಾಟದ ಕುರಿತು ರಂಗವಿಜಯ  ತಂಡ ಅಭಿನಯದ “ಸ್ವಾತಂತ್ರö್ಯ ಸಮರ ಕರುನಾಡು ಅಮರ” ನಾಟಕ ಪ್ರರ್ದಶನ ಸೆ.14 ರಂದು ನಗರದ ಹಿಂದಿ ಪ್ರಚಾರ ಸಭಾಂಗಣದಲ್ಲಿ ನಡೆಯಿತು.



ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ನಗರಸಭೆ ಇವರ ಸಂಯುಕ್ತಾರ್ಶರಯದಲ್ಲಿ ನಡೆದ ಕಾರ್ಯಕ್ರಮವನ್ನು ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ ಉದ್ಘಾಟಿಸಿದರು. ದೇಶದ ಸ್ವಾತಂತ್ರö್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇಂತಹ ನಾಟಕ ಪ್ರರ್ದಶನ ಶ್ಲಾಘನೀಯ, ಸ್ವಾತಂತ್ರö್ಯದ ಚರಿತ್ರೆ ಈಗಿನ ತಲೆ ಮಾರಿಗೆ ತಿಳಿಯಲು ಇದು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚನ್ನಬಸವ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ನಗರಸಭೆ ಆಯುಕ್ತ ಬಿ.ಟಿ. ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಹಳ್ಳಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮಹಿಪಾಲ ರೆಡ್ಡಿ, ಎ. ವೇಣುಗೋಪಾಲ, ಅನಿಲ ಗುರೂಜಿ, ನಾಗೇಶ್ ಕುಮಾರ, ವೈಜನಾಥ ಹಿರೇಮಠ, ಪಲ್ಲವಿ ಮಣಿ ಮತ್ತಿತರರು ಉಪಸ್ಥಿತರಿದ್ದರು.

ರಂಗವಿಜಯ ನಾಟಕ ತಂಡದ ನಿರ್ದೇಶಕ ಮಾಲೂರು ವಿಜಿ ಅವರು ನಾಟಕದ ಕುರಿತು ವಿವರ ನೀಡಿದರು. ಬಳಿಕ ಸ್ವಾತಂತ್ರö್ಯ ಸಮರ ಕರುನಾಡ ಅಮರ ನಾಟಕ ಪ್ರದರ್ಶನಗೊಂಡಿತು.



ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿ ಹಾಗೂ ಭಾವೈಕ್ಯತಾ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಯಾದಗಿರಿ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ಜರುಗಿಸಲಾಗುತ್ತದೆ. 

ಈ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ನೇರವೇರಿಸಲಿದ್ದಾರೆ. ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ  ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಧಾನಸಭಾ ಸದಸ್ಯ ನರಸಿಂಹ ನಾಯಕ(ರಾಜುಗೌಡ) ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 

ಈ ಕಾರ್ಯಕ್ರಮದಲ್ಲಿ ರಾಯಚೂರ ಲೋಕಸಭಾ ಸದಸ್ಯರು ರಾಜಾ ಅಮರೇಶ್ವರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಉಮೇಶ ಜಾಧವ್ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಕಡ್ಡಾಯವಾಗಿ ಮುಖಗವಸು ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳವುದು ಅಗತ್ಯ ವೆಂದು ಪ್ರಕಟಣೆ ತಿಳಿಸಿದೆ. 





ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ 10ನೇ ತರಗತಿ ಪ್ರವೇಶ: ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ (ನವೋದಯ), ಬಾಲಚೇಡ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಹಾಪೂರ ಈ ಶಾಲೆಗಳಲ್ಲಿ 10ನೇ ತರಗತಿ ಪ್ರವೇಶಕ್ಕಾಗಿ ಆಂಗ್ಲ ಮಾಧ್ಯಮದಲ್ಲಿ ಅಭ್ಯಾಸಸಿರುವ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾದಗಿರಿ ಬಾಲಚೇಡದ ವಸತಿ ಶಾಲೆಯಲ್ಲಿ 40 ವಿದ್ಯಾರ್ಥಿಗಳ ಮತ್ತು ಶಹಾಪೂರದ ವಸತಿ ಶಾಲೆಯಲ್ಲಿ 13 ವಿದ್ಯಾರ್ಥಿಗಳ ಖಾಲಿಯಿರುವ ಸ್ಥಾನಗಳನ್ನು ಉಚಿತವಾಗಿ ಭರ್ತಿ ಮಾಡಿಕೊಳ್ಳವ ಸಲುವಾಗಿ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 22 ರವರೆಗೂ ಅರ್ಜಿಗಳನ್ನು ಸಲ್ಲಿಸಬೇಕು. ಆಂಗ್ಲ ಮಾಧ್ಯಮದಲ್ಲಿ ಅಭ್ಯಾಸ ಮಾಡಿರುವ ಬಾಲಕಿಯರುಯ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ: 08473-253235 ಅಥವಾ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/ಥಿಚಿಜಚಿgiಡಿi/ಠಿubಟiಛಿ  ವೆಬ್‌ಸೈಟ್‌ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟಣೆ ಕೋರಿದೆ.


ಅಲ್ಪಸಂಖ್ಯಾತರ ಮೌಲಾನ ಆಜಾದ ಮಾದರಿ ಶಾಲೆಗೆ 6 ಮತ್ತು 7ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಯಾದಗಿರಿ ನಗರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನ ಆಜಾದ ಮಾದರಿ ಶಾಲೆಗೆ 6ನೇ ತರಗತಿಯಲ್ಲಿ 32 ವಿದ್ಯಾರ್ಥಿಗಳು ಮತ್ತು 7ನೇ ತರಗತಿಯಲ್ಲಿ 19 ವಿದ್ಯಾರ್ಥಿಗಳ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ 

ಆಸಕ್ತ ವಿದ್ಯಾರ್ಥಿಗಳು ಮೌಲಾನಾ ಆಜಾದ ಮಾದರಿ ಶಾಲೆ ವಿಶ್ವರಾಧ್ಯ ನಗರ, ಯಾದಗಿರಿ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 23 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ (ಮಿನಿವಿಧಾನ ಸೌಧ) ಯಾದಗಿರಿ ಕಛೇರಿ ದೂರವಾಣಿ ಸಂಖ್ಯೆ: 08473-253235ಗೆ ಸಂಪರ್ಕಿಸಬಹುದಾಗಿದೆ. 


ಸಂಘ/ಸAಸ್ಥೆಗಳ ನೋದಣಿ ನವೀಕರಣ ಮಾಡಿಕೊಳ್ಳಲು ಸೂಚನೆ

ಯಾದಗಿರಿ.ಸೆಪ್ಟೆಂಬರ್.16(ಕರ್ನಾಟಕ ವಾರ್ತೆ): ಜಿಲ್ಲೆಯ ನೊದಾಯಿಸಲ್ಪಟ್ಟ ಸಂಘಗಳು ಪೈಲಿಂಗ ಅರ್ಜಿ ಸಲ್ಲಿಸದೆ ಇರುವದು ಸರಕಾರದ ಗಮನಕ್ಕೆ ಬಂದಿದ್ದು, ಕಾರ್ಯನಿರತ ಸಂಘಗಳ ಹಿತದೃಷ್ಟಿಯಿಂದ 5 ವರ್ಷಗಳಿಗೆ ಮೇಲ್ಪಟ್ಟು ಪೈಲಿಂಗ ಮಾಡಿಕೊಳ್ಳದೆ ಬಾಕಿ ಇರುವ ಸಂಘ/ ಸಂಸ್ಥೆಗಳು ಪ್ರತಿ ವರ್ಷಕ್ಕೆ ರೂ. 2 ಸಾವಿರ ದಂತೆ ಹೆಚ್ಚುವರಿ ದಂಡ ಪಾವತಿಸಿ ಪೈಲಿಂಗ ಮಾಡಿಕೊಳ್ಳಲಾಗುವುದು. 

ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ಸಂಘಗಳ ನೊಂದಾಯಿಸಲ್ಪಟ್ಟ ಸಂಘವು ಪ್ರತಿ ವರ್ಷ ಪೈಲಿಂಗ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. 2021 ಮಾರ್ಚ್ 31 ರ ಅಂತ್ಯಕ್ಕೆ ಇದ್ದಂತೆ ಜಿಲ್ಲೆಯ ಒಟ್ಟು 9217 ಸಂಘವು ನೋದಣಿಯಾಗಿದ್ದು, ಇವುಗಳ ಪೈಕಿ 2021-22ನೇ ಸಾಲಿನಲ್ಲಿ ಕೇವಲ 387 ಸಂಘಗಳು ಮಾತ್ರ ನವೀಕರಣ ಅರ್ಜಿ ಸಲ್ಲಿಸಿರುವುದನ್ನು ಪರೀಶಿಲಿಸಿ ಬಾಕಿ ಉಳಿದ 8830 ಸಂಘಗಳು ನವೀಕರಣಕ್ಕೆ ಅರ್ಜಿ ಸಲ್ಲಸದೆ ಬಾಕಿ ಉಳಿದಿರುತ್ತದೆ.

ಪೈಲಿಂಗ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರ ರೊಳಗೆ ಸಲ್ಲಿಸಬೇಕು.ಇಲ್ಲದಿದ್ದಲ್ಲಿ ಅಂತಹ   ಸಂಘಗಳ ನೊಂದಣಿ ತನ್ನಿಂತಾನೆ ರದ್ದಾಗಿದೆ ಎಂದು ಸಂಬAಧಪಟ್ಟ ಸಂಘ/ಸAಸ್ಥೆಗಳು ಭಾವಿಸತಕ್ಕದ್ದು ಎಂದು ಯಾದಗಿರಿ ಸಹಕಾರ ಸಂಘಗಳ ಉಪ ನಿಂಧಕರು ಹಾಗೂ ಜಿಲ್ಲಾ ಸಂಘಗಳ ನೊಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಇಂದು ವಿಶ್ವಕರ್ಮ ಜಯಂತಿ 

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಜಯಂತಿಯನ್ನು ಸರಳವಾಗಿ, ಸಾಂಕೇತಿವಾಗಿ ಆಚರಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ. ಕೋವಿಡ್-19ರ ಹಿನ್ನಲೆ ತಮ್ಮ ಕಾರ್ಯಾಲಯ ಹಾಗೂ ಅಧೀನ ಕಚೇರಿಗಳಲ್ಲಿ ಕಡ್ಡಾಯವಾಗಿ, ಕೋವಿಡ್-19ರ ನಿಯಮಗಳನ್ನು ಪಾಲಿಸುವುದರ ಜೊತೆಗೆ ವಿಶ್ವಕರ್ಮ ಜಯಂತಿಯನ್ನು ಆಚರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.


ಹಿಂದುಳಿದ ವರ್ಗಗಳ ಹಾಸ್ಟೆಲ್  ಪ್ರವೇಶಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): 2021-22ನೇ ಸಾಲಿನ ಯಾದಗಿರಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ಪೋಷಕರ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ, ವರ್ಗ ಹಾಗೂ ಇತರೆ ರೂ.1.00 ಲಕ್ಷ ಒಳಗಿನ ವಿದ್ಯಾರ್ಥಿಗಳು ಆನ್‌ಲೈನ್ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ ಮೂಲಕ ಅರ್ಜಿಯನ್ನು ಅಕ್ಟೋಬರ್ 22 ರೊಳಗೆ ಸಲ್ಲಿಸಬೇಕು. ತಾಂತ್ರಿಕ ತೊಂದರೆಗಳಿದ್ದಲ್ಲಿ  bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಇ-ಮೇಲ್ ಮುಖಾಂತರ ಅಥವಾ ಯಾದಗಿರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 9743310896  ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ತೃಣಧಾನ್ಯಗಳ ಸಂಸ್ಕರಣಾ ಘಟಕ ಸ್ಥಾಪನೆ ಮತ್ತು ನಿರ್ವಹಣೆಗೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಕಾಂಕ್ಷಿ ಜಿಲ್ಲೆ ಯಾದಗಿರಿಗೆ ಆಯೋಗದಿಂದ ಕೃಷಿ ಇಲಾಖೆಗೆ ನೀಡಿದ ಯುನೈಟೆಡ್ ಅನುದಾನದಡಿ ಜಿಲ್ಲೆಯಲ್ಲಿ ತೃಣಧಾನ್ಯಗಳ ಸಂಸ್ಕರಣ ಘಟಕ ಸ್ಥಾಪನೆ ಹಾಗೂ ನಿರ್ವಹಣೆಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯಲ್ಲಿ ಎಲ್ಲಾ ದಾಖಲಾತಿಗಳನ್ನು ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬೇಕು. ಸ್ವೀಕರಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ನೇರ ಸಂದರ್ಶನ ಕೈಗೊಂಡು ಅರ್ಹ ವ್ಯಕ್ತಿ/ಸಂಸ್ಥೆಯನ್ನು ಆಯ್ಕೆ ಮಾಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರ  ಪ್ರಕಟಣೆ ತಿಳಿಸಿದೆ.


ಶುಕ್ರವಾರ, ಸೆಪ್ಟೆಂಬರ್ 3, 2021

 ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ : ಕೋವಿಡ್ ನಿಯಮ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ

ಯಾದಗಿರಿ; ಸೆಪ್ಟೆಂಬರ್, 03 ( ಕರ್ನಾಟಕ ವಾರ್ತಾ); ಮಹಾಮಾರಿ ಕೊರೋನಾ ಹಬ್ಬುವ ಆತಂಕದಿಂದ ಈ ಬಾರಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದ್ದು, ಈ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲಿಸಿ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ ಕೋವಿಡ್



ನಿಯಮ ಪಾಲಿಸಲು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ಅವರು ಸೂಚಿಸಿದರು.


ಗೌರಿ- ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಮಾರ್ಗಸೂಚಿಗಳನ್ನು ವಿವರಿಸಿದರು.


ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ - ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡುವಂತಿಲ್ಲ.


ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯಮೆರವಣಿಗೆ,ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.


ಪಾರಂಪರಿಕ ಗೌರಿ- ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸತಕ್ಕದ್ದು.


ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ, ಸ್ಯಾನಿಟೈಸೇಷನ್ ಮಾಡತಕ್ಕದ್ದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು.


ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್- 19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದು, ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.


ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ , ಜಿಲ್ಲಾಡಳಿತ, ಪೋಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.


ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ ಸಮಾರಂಭಗಳನ್ನು ನಿಷೇಧಿಸಿಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ ಸಮಾರಂಭಗಳಿಗೆ ಅನುಮತಿ ನೀಡಲಾಗಿರುವುದಿಲ್ಲ.


ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ , ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಈ ಸಭೆಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ,  ಯಾದಗಿರಿ ಸಿ.ಪಿ.ಐ ಸೋಮಶೇಖರ್ ಕೆಂಚಿರೆಡ್ಡಿ,  ಸಮಾಜದ ಮುಖಂಡರಾದ ಸಿದ್ದಪ್ಪ ಎಸ್ ಹೊಟ್ಟಿ, ಅಯ್ಯಣ್ಣಾ ಹುಂಡೇಕಾರ, ಭವರಿಲಾಲ ಧೋಖಾ, ಲಾಯಕ ಹುಸೇನ್ ಬಾದಲ್, ಅಬ್ದುಲ್ ವಾಹಿದಮಿಯ್ಯ, ಶಿವಾಜಿ ಸೇನಾ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಶೇಗುರಕರ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಉಪಸ್ಥಿತರಿದ್ದರು.

ಬುಧವಾರ, ಸೆಪ್ಟೆಂಬರ್ 1, 2021

 ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್ 01, (ಕರ್ನಾಟಕ ವಾರ್ತೆ): 2021-22ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ 60% ರಷ್ಟು ಅಂಕ ಪಡೆದು ಉತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯವು 2.00ಲಕ್ಷಗಳನ್ನು ಮೀರಿರಬಾರದು. ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಯಾದಗಿರಿ, ಶಹಾಪುರ, ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಕಛೇರಿಗಳಿಂದ ಅರ್ಜಿಗಳನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 15ರೊಳಗೆ ಸಂಬAಧಪಟ್ಟ ಕಚೇರಿಗಳಿಗೆ ಸಲ್ಲಿಸಬೇಕು. 

     ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ದೂ.ಸಂ: 08473-251530, ಸುರಪುರ ಸಮಾಜ ಕಲ್ಯಾಣ ಇಲಾಖೆ ದೂ.ಸಂ: 08443-258762, ಶಹಾಪುರ ಸಮಾಜ ಕಲ್ಯಾಣ ಇಲಾಖೆ 08479-240245, ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಚೇರಿ ದೂ.ಸಂ 08473-253741 ಗೆ ಸಂಪರ್ಕಿಸಲು ಪ್ರಕಟಣೆ ಕೋರಿದೆ. 





 ಇಂಟರ್ನ್ಶಿಪ್ ಅರ್ಜಿ ಅವಧಿ ವಿಸ್ತರಣೆ

ಯಾದಗಿರಿ,ಸೆಪ್ಟೆಂಬರ್ 01, (ಕರ್ನಾಟಕ ವಾರ್ತೆ): ಲಸಿಕೆ ಆಡಳಿತದಲ್ಲಿ ನೆರೆಯ ಕುಟುಂಬಗಳನ್ನು ಬೆಂಬಲಿಸುವ ಮೂಲಕ ಸಮುದಾಯಕ್ಕೆ ವ್ಯಾಕ್ಸಿನ್ ರಾಯಬಾರಿಯಾಗಿ ಕೆಲಸ ನಿರ್ವಹಿಸುವುದಕ್ಕಾಗಿ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಷ್ಠರೋಗಗಳ ನಿರ್ಮೂಲನೆ ಅಧಿಕಾರಿಗಳ ಕಚೇರಿ ವತಿಯಿಂದ ಇಂಟರ್ನ್ಶಿಪ್ (ಕಲಿಕೆ) ಹಮ್ಮಿಕೊಂಡಿದ್ದು, ಇಂಟರ್ನ್ಶಿಪ್ ಅರ್ಜಿ ಸಲ್ಲಸವ ಅವಧಿಯನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.

       ಅರ್ಜಿಸಲ್ಲಿಸಲು ಆಸಕ್ತರು ಸೇವಾ ಮನೋಭಾವನೆ ಹೊಂದಿರುವ 12 ನೇ ತರಗತಿ ಉತ್ತೀರ್ಣರಾಗಿರುವ ಅಥವಾ  ಅದಕ್ಕಿಂತ ಹೆಚ್ಚಿನ ಶಿಕ್ಷಣ ಹೊಂದಿರುವ, ಕನ್ನಡ ಭಾಷೆ ಬಲ್ಲವರು ಹಾಗೂ ಜಿಲ್ಲೆಯ ನಿವಾಸಿಯಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ yadgir.nic.in  ನ ಮೂಲಕ ಸಲ್ಲಿಸಬಹುದಾಗಿದೆ.

    ಈ ಇಂಟರ್ನ್ಶಿಪ್ ಅವಧಿ 6 ವಾರಗಳ ಕಾಲ ದಿನಕ್ಕೆ 2 ರಿಂದ 3ಗಂಟೆಗಳವರೆಗೆ ನಡೆಯಲಿದೆ. ಇಲ್ಲಿ ಇಂಟರ್ನ್ಶಿಪ್ ಪಡೆದವರು ಸರ್ಕಾರಿ ಅಧಿಕಾರಿಗಳ ನಾಯಕತ್ವದಲ್ಲಿ ಕೆಲಸ ಮಾಡಲು ವೃತ್ತಿಪರ ಮಾನ್ಯತೆ, ಅಭಿವೃದ್ಧಿ ಕ್ಷೇತ್ರದ ತಜ್ಞರಿಂದ ಕಲಿಯುವ ಅವಕಾಶ ಹಾಗೂ ಜಿಲ್ಲಾಡಳಿತದಿಂದ ಪ್ರಮಾಣಪತ್ರ ಸಹ ಪಡೆಯಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯಕ್ಕೆ  ಸಂಪಕಿಸಬಹುದಾಗಿದೆ ಎಂದು  ಪ್ರಕಟಣೆ ತಿಳಿಸಿದೆ.


ಮಂಗಳವಾರ, ಆಗಸ್ಟ್ 31, 2021

 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ; ಲಿಖಿತ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ,ಆಗಸ್ಟ್ 31, (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 7 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತಗಂಗೋತ್ರಿ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944ಗೆ ಸಂಪರ್ಕಿಸುವAತೆ ಕರಾಮುವಿ ಕುಲಸಚಿವ ಪ್ರೊ.ಆರ್. ರಾಜಣ್ಣ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 


ಕಾರ್ಮಿಕ ಅದಾಲತ್‌ಆಟೋ ಪ್ರಚಾರಕ್ಕೆ ಚಾಲನೆ

ಯಾದಗಿರಿ,ಆಗಸ್ಟ್ 31, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ  ಮಂಗಳವಾರದAದು “ಕಾರ್ಮಿಕ ಅದಾಲತ್‌ನ ಕುರಿತಾದ ಆಟೋ ಪ್ರಚಾರಕ್ಕೆ” ಯಾದಗಿರಿಯ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ನ್ಯಾಯಾಧೀಶರಾದ ಸಾಹೀಲ್ ಎಸ್ ಕುನ್ನಿಭಾವಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯಿಂದ ಈಗಾಗಲೇ ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಸಾಕಷ್ಟು ಯೊಜನೆಗಳು ಜಾರಿಯಲ್ಲಿದ್ದು, ಅವುಗಳ ಕುರಿತು ಕಾರ್ಮಿಕ ವರ್ಗದವರಲ್ಲಿ ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಂಡು ಬಾಕಿ ಇರುವ ಅರ್ಜಿಗಳ ವಿಲೇವಾರಿ ಮಾಡುತ್ತಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.  ಈ ಕಾರ್ಮಿಕ ಅದಾಲತ


ಸೆ.16 ರವರೆಗೆ ಚಾಲ್ತಿಯಲ್ಲಿದ್ದು, ಸೂಕ್ತ ದಾಖಲೆಗಳನ್ನು ಇಲಾಖೆಗೆ ಸಲ್ಲಿಸುವ ಮೂಲಕ ಅದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಯಾದಗಿರಿ ಕಾರ್ಮಿಕ ನಿರೀಕ್ಷಕರಾದ ಗಂಗಾಧರ, ಕಾರ್ಮಿಕ ನಿರೀಕ್ಷಕರಾದ ಸಾಬಿರಾ ಬೇಗಂ ಸೇರಿದಂತೆ ಇತರೆ ಸಿಬ್ಬಂದಿಗಳಿದ್ದರು.   

ಸೋಮವಾರ, ಆಗಸ್ಟ್ 30, 2021

 ಜಿಲ್ಲೆಯಲ್ಲಿ ಈ  ಸಾಲಿಗೆ ಶೇ 92.74 ರಷ್ಟು ಬಿತ್ತನೆ ಕಾರ್ಯ ಪೂರ್ಣ  

ಅತಿಯಾದ ರಸಗೊಬ್ಬರಗಳ ಬಳಕೆಯಿಂದ ಭೂಮಿ ಬರುಡಾಗುವ ಸಾಧ್ಯತೆ ಹೆಚ್ಚು

: ಜಂಟಿ ಕೃಷಿ ನಿರ್ದೇಶಕ ಅಭೀದ್ ಎಸ್.ಎಸ್

ಯಾದಗಿರಿ,ಆಗಸ್ಟ್ 30, (ಕರ್ನಾಟಕ ವಾರ್ತೆ): ಅತಿಯಾದ ರಸಗೊಬ್ಬರಗಳ ಬಳಕೆಯಿಂದ ಭೂಮಿ ಬರುಡಾಗುವ ಸಾಧ್ಯತೆ ಹೆಚ್ಚಿರುತ್ತದೆ ಹೀಗಾಗಿ ರೈತರು ಮಿತವಾಗಿ ರಸಗೊಬ್ಬರಗಳ ಬಳಕೆ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಅಭೀದ್ ಎಸ್.ಎಸ್ ಸಲಹೆ ನೀಡಿದರು.

ನಗರದ ಜಿ.ಪಂ ಸಂಕೀರ್ಣದಲ್ಲಿರುವ ಕೃಷಿ ಇಲಾಖೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

 ರೈತರು ರಸಗೊಬ್ಬರಗಳ ಬಳಕೆಯನ್ನು ಕಡಿಮೆಗೊಳಿಸಿ, ಸಾವಯುವ ಗೊಬ್ಬರಗಳ ಬಳಕೆಗೆ ಮುಂದಾಗಬೇಕು, ವಿಜ್ಞಾನಿಗಳ ಪ್ರಕಾರ ರಸಗೊಬ್ಬರ ಹೆಚ್ಚಾದ ಬಳಕೆಯಿಂದ ಭೂಮಿ ತನ್ನ ಫಲವತತ್ತೆಯನ್ನು ಕಳೆದುಕೊಳ್ಳುತ್ತದೆ ಎಂದರು. ರೈತರು ಡಿ.ಎ.ಪಿ. ಯೂರಿಯಾ ಬದಲಿಗೆ ಕಾಂಪ್ಲೇಕ್ಸ್ ನಂತಹ ಗೊಬ್ಬರವನ್ನು ಬಳಸಬೇಕು ಎಂದರು.

ಜಿಲ್ಲೆಯಲ್ಲಿ ಜನವರಿಯಿಂದ ಆಗಸ್ಟ್ 28ರವರಗೆ 292.0 ಮೀ.ಮೀನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಈ  ಸಾಲಿಗೆ ಶೇ 92.74 ರಷ್ಟು ಬಿತ್ತನೆ ಕಾರ್ಯ ಪೂರ್ಣ :   ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 92.74 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ಅದರಲ್ಲಿ 392799 ಹೇಕ್ಟರ್ ಬಿತ್ತನೆ ಗುರಿಯಲ್ಲಿ 364282 ಹೇಕ್ಟರ್ ನಷ್ಟು ಬಿತ್ತನೆಯಾಗಿದೆ ಎಂದವರು ತಿಳಿಸಿದರು.

ಈ ಬಾರಿ ಜಿಲ್ಲೆಯ ರೈತರು ಭತ್ತ, ಸಜ್ಜೆ, ತೊಗರಿ, ಹೆಸರು, ಶೇಂಗಾ, ಹತ್ತಿ ಬೆಳೆಗಳನ್ನು ಬೆಳೆದಿದ್ದು,ಇದರಲ್ಲಿ ಹೆಚ್ಚಿನ ರೈತರು ಹತ್ತಿ ಬೆಳೆಯನ್ನು ನೆಚ್ಚಿಕೊಂಡಿದ್ದಾರೆ ಎಂದು ಹೇಳಿದರು. 

ಸುರಪುರ ಭಾಗದಲ್ಲಿ ಇನ್ನು ಹೆಚ್ಚಿನ ಬಿತ್ತನೆ ಕಾರ್ಯ ನಡೆದಿದ್ದು, ಈ ವಾರದಲ್ಲಿ ಬಿತ್ತನೆ ಕಾರ್ಯದಲ್ಲಿ ಶೇ100ರಷ್ಟು ಪ್ರಗತಿ ಸಾಧಿಸುವುದಾಗಿ ಅವರು ತಿಳಿಸಿದರು.

ಬೆಳೆ ಸಮೀಕ್ಷೆಯಲ್ಲಿ ಜಿಲ್ಲೆಗೆ 3ನೇ ಸ್ಥಾನ ಅವರು ಬೆಳೆ ಸಮೀಕ್ಷೆಯಲ್ಲಿ 419869 ಪ್ಲಾಟುಗಳಲ್ಲಿ  34158ರಷ್ಟು ಕಾರ್ಯವನ್ನು ಈಗಾಗಲೇ ಪೂರ್ಣಗೊಂಡಿದ್ದು, ಶೇ 8.14ನಷ್ಟು ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಿಲ್ಲೆಗೆ 3ನೇ ಸ್ಥಾನ ಲಭಿಸಿದೆ ಎಂದವರು ಮಾಹಿತಿ ನೀಡಿದರು.

ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಡಿ.ಎ.ಪಿ ಗೊಬ್ಬರ ಹೊರತುಪಡಿಸಿ ಇನ್ಯಾವುದೇ ಗೊಬ್ಬರಗಳ ಕೊರತೆ ಜಿಲ್ಲೆಗೆಯಾಗಿರುವುದಿಲ್ಲ ಎಂದರು. ಡಿಎಪಿ 24559 ಮೆ.ಟನ್ ಬೇಡಿಕೆಯಲ್ಲಿ ಜಿಲ್ಲೆಗೆ 22907 ಮೆ.ಟನ್ ಪೂರೈಕೆಯಾಗಿದ್ದು,1651.2 ಮೆ.ಟನ್ ಕೊರತೆಯಾಗಿರುತ್ತದೆ. ಯೂರಿಯಾ ಗೊಬ್ಬರವು ಶೇ.139ರಷ್ಟು ಜಿಲ್ಲೆಗೆ ಸರಬರಾಜು ಮಾಡಿದ್ದು, ಬೇಡಿಕೆಗಿಂತ ಹೆಚ್ಚಿನ ಗೊಬ್ಬರ ಪೂರೈಸಿಲಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕರಾದ ಡಾ.ಬಾಲರಾಜ, ರಾಜಕುಮಾರ್ ಇದ್ದರು.

 ಪಡಿತರ ಚೀಟಿ:ಇ-ಕೆವೈಸಿ ಮಾಡಿಸಲು ಸೆ.10 ಕೊನೆಯ ದಿನ

ಯಾದಗಿರಿ,ಆಗಸ್ಟ್ 30, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳು ಹಾಗೂ ಆದ್ಯತೇತರ (ಎಪಿಎಲ್) ಪಡಿತರ ಚೀಟಿಗಳಲ್ಲಿರುವ ಸದಸ್ಯರು ಇಲ್ಲಿಯವರೆಗೂ ಇ-ಕೆವೈಸಿ (ಬಯೋಮೆಟ್ರಿಕ್ ದೃಢೀಕರಣ) ಮಾಡಲಾದ ಸದಸ್ಯರನ್ನು ಹೊರತುಪಡಿಸಿ ಉಳಿದ ಸದಸ್ಯರು ಸೆಪ್ಟೆಂಬರ್.1 ರಿಂದ 10 ರ ಒಳಗೆ ತಮ್ಮ ಪಡಿತರ ಚೀಟಿಯನ್ನು ನಿಯೋಜಿಸಲಾದ  ನ್ಯಾಯಬೆಲೆ ಅಂಗಡಿಗಳಲ್ಲಿಯೇ ಕಡ್ಡಾಯವಾಗಿ ಪಡಿತರ ಚೀಟಿಗಳ ಸದಸ್ಯರು ಉಚಿತವಾಗಿ ಇ-ಕೆವೈಸಿ (ಬಯೋಮೆಟ್ರಿಕ್ ದೃಢೀಕರಣ)  ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


 ಸೆಪ್ಟೆಂಬರ್ ತಿಂಗಳ ಪಡಿತರ ವಿತರಣೆಗೆ ಲಭ್ಯ

ಯಾದಗಿರಿ,ಆಗಸ್ಟ್ 30, (ಕರ್ನಾಟಕ ವಾರ್ತೆ): ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿಯಲ್ಲಿ ಸೆಪ್ಟೆಂಬರ್-2021 ರ ತಿಂಗಳಿಗೆ ಯಾದಗಿರಿ ಜಿಲ್ಲೆಯ ಎಎವೈ 29,527 ಪ್ರತಿ ಪಡಿತರ ಚೀಟಿಗಳಿಗೆ 35 ಕೆಜಿ ಅಕ್ಕಿ ಹಾಗೂ ಬಿಪಿಎಲ್ 8,48,467 ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ, ಮತ್ತು ಬಿಪಿಎಲ್ 2,33,804 ಪ್ರತಿ ಪಡಿತರ ಚೀಟಿಗಳಿಗೆ 2 ಕೆ.ಜಿ ಗೋಧಿ ಉಚಿತವಾಗಿ ವಿತರಿಸಲಾಗುವುದು ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಡಿಯಲ್ಲಿ ಸೆಪ್ಟೆಂಬರ್-2021 ರ ಮಾಹೆಗೆ ಎಎವೈ 1,19,663 ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಹಾಗೂ ಬಿಪಿಎಲ್ 8,48,467 ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್-2021 ರ ಮಾಹೆಗೆ ಆಹಾರಧಾನ್ಯ ಪಡೆಯಲು ಇಚ್ಛೆಯನ್ನು ವ್ಯಕ್ತಪಡಿಸಿದ ಆದ್ಯತೇತರ ಪಡಿತರ ಚೀಟಿ ಹೊಂದಿದವರಿಗೆ ಏಕ ಸದಸ್ಯರಿಗೆ ಅಕ್ಕಿ 5 ಕೆಜಿ ಹಾಗೂ ಎರಡು ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿ ಯನ್ನು ಪ್ರತಿ ಕೆಜಿಗೆ ರೂ,15/- ರಂತೆ ನೀಡಿ ಆಹಾರಧಾನ್ಯವನ್ನು ಪಡೆಯಬಹುದಾಗಿದೆ.
ಜಿಲ್ಲೆಯ ಆಯ್ದ 399 ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಓ.ಟಿ.ಪಿ. ಮುಖಾಂತರ ಅಥವಾ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು (Point of Sale – POS Shop Module) ವ್ಯವಸ್ಥೆ ಮಾಡಲಾಗಿದೆ. ಕುಟುಂಬದ ಸದಸ್ಯರಿಗೆ ಲಭ್ಯವಾಗಿರುವ ಅರ್ಹತಾ ಪ್ರಮಾಣವನ್ನು ತಿಳಿದುಕೊಂಡು ಆಹಾರ ಧಾನ್ಯ ಪಡೆದುಕೊಳ್ಳಲು ಸೂಚಿಸಿದೆ.
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಆಯಾ ತಾಲೂಕಿನ ತಹಸೀಲ್ದಾರ, ಜಿಲ್ಲೆಯ ಉಪ ನಿರ್ದೇಶಕರ ಕಚೇರಿU ದೂ.ಸಂ 08473-253707 ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರನ್ನು ದಾಖಲಿಸಲು ಕೋರಿದೆ. ಪಡಿತರ ಚೀಟಿದಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನ್ಯಾಯಬೆಲೆ ಅಂಗಡಿಯಿAದ ಆಹಾರಧಾನ್ಯವನ್ನು ಪಡೆದುಕೊಳ್ಳಲು ಪ್ರಕಟಣೆ ತಿಳಿಸಿದೆ.

ಮಂಗಳವಾರ, ಆಗಸ್ಟ್ 24, 2021

 ವಾಹನ ವಾರಸುದಾರರ ಪತ್ತೆಗೆ ಮನವಿ

ಯಾದಗಿರಿ:ಆಗಸ್ಟ್-24(ಕರ್ನಾಟಕ ವಾರ್ತೆ) ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯ ಆವರಣದಲ್ಲಿ ವಾರಸುದಾರರು ಇಲ್ಲದ 19 ವಾಹನಗಳಿದ್ದು, ಈ ವಾಹನಗಳಿಗೆ ಸಂಬAಧಿಸಿದ ವಾರಸುದಾರರು ತಮ್ಮ ವಾಹನಗಳ ದಾಖಲಾತಿ ಪ್ರತಿಯೊಂದಿಗೆ 48 ಗಂಟೆಗಳಲ್ಲಿ ಗ್ರಾಮೀಣ ಪೊಲೀಸ್ ಠಾಣೆಗೆ ಸಂಪರ್ಕಿಸಿ ಎಂದು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯ (ಕಾ.ಸು) ಆರಕ್ಷಕ ಉಪ ನಿರೀಕ್ಷಕರು ತಿಳಿಸಿದ್ದಾರೆ.
ವಾಹನಗಳ ಸಂಖ್ಯೆ:MH01AK1278 Passion pro, KA28R1518 HH Spelender, KA38E6320 HH CD 100, KA53K2518 HH Spelender, KA32L2575 Spelender NXG,
KA33L8285 TVS sports, KA04BJ6583 TVS victor, KA33K8098 Passion pro, KA05HD1855 HH Glamer, KA33W2249 Bajaj, KA21M363, KA05MF449, KA33A1384 TATA sumo, KA33A0405 TATA sumo.
ಚೆಸ್ಸಿ ನಂಬರ: passion pro MBLHA10DJFHD2496, HH CD Delux 07L02F17537, HH Passion pro 04F09C22707, HH Spelender MBIHA100FJA834752, Travels mahendra DLA2512K5250.
ಈ ಮೇಲಿನ ವಾಹನಗಳ ವಾರಸುದಾರರಿದಲ್ಲಿ ವಾಹನಗಳ ದಾಖಲಾತಿ ಪ್ರತಿಯೊಂದಿಗೆ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಗೆ ಬಂದು ಸಂಪರ್ಕಿಸಬಹುದಾಗಿದ್ದು, ಒಂದು ವೇಳೆ ವಾಹನಗಳ ಮಾಲಿಕರು ಸಂಪರ್ಕಿಸದೆ ಇದಲ್ಲಿ ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ವಾಹನಗಳನ್ನು ಹರಾಜು ಪ್ರಕ್ರಿಯೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08473-252303, 9480803576ಗೆ ಸಂಪರ್ಕಿಸಿ ಎಂದು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

   ಕಾಣೆಯಾದ ಮಹಿಳೆ ಪತ್ತೆಗೆ ಮನವಿ

ಯಾದಗಿರಿ:ಆಗಸ್ಟ್-24(ಕರ್ನಾಟಕ ವಾರ್ತೆ) ಯಾದಗಿರಿ ತಾಲೂಕಿನ ಮೈಲಾಪೂರ ನಿವಾಸಿ ಅನ್ನಪೂರ್ಣ ಗಂಡ ಶ್ರೀನಾಥ ಕಟ್ಟಿಮನಿ ವರ್ಷ (36) ಎಂಬ ಮಹಿಳೆಯು ಮನೆಯಿಂದ ಜೂನ್ 10 ರಂದು ಕಾಣೆಯಾಗಿರುತ್ತಾರೆ ಎಂದು ಪತಿ ನೀಡಿದ ದೂರಿನ್ವಯ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾಣೆಯಾದ ವ್ಯಕ್ತಿ ಕುರಿತು ಮಾಹಿತಿ ಅಥವಾ ಸುಳಿವು ಸಿಕ್ಕಲಿ ಯಾದಗಿರಿ ಮಹಿಳಾ ಪೊಲೀಸ್ ಠಾಣೆಗೆ ಅಥವಾ ಯಾದಗಿರಿ ಕಂಟ್ರೋಲ್ ರೂಂ  ದೂ.ಸಂ: 08473-253736, 08473-253255, 9480803639 ಗೆ ಕರೆ ಸಂಪರ್ಕಿಸಲು ಪ್ರಕಟಣೆ ಕೋರಿದೆ.


 ಕ್ರೀಡಾ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಯಾದಗಿರಿ:ಆಗಸ್ಟ್-24(ಕರ್ನಾಟಕ ವಾರ್ತೆ) 2020ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾಪಟುಗಳು ಅರ್ಜಿಯನ್ನು ಸೇವಾಸಿಂಧು ಆನ್‌ಲೈನ್ ವೆಬ್‌ಸೈಟ್ https://serviceonline.gov.in/karnataka ನ ಮೂಲಕ ಸೆಪ್ಟೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಯಾದಗಿರಿ:ಆಗಸ್ಟ್-24(ಕರ್ನಾಟಕ ವಾರ್ತೆ) 2021-22ನೇ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ 2020ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟಿçÃಯ, ರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಕ್ರೀಡಾಪಟುಗಳು ಅರ್ಜಿಯನ್ನು ಸೆಪ್ಟೆಂಬರ್ 15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಂಪರ್ಕಿಸಲು ಪ್ರಕಟಣೆ ಕೋರಿದೆ.

ಗುರುವಾರ, ಆಗಸ್ಟ್ 19, 2021

 19 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಯಾದಗಿರಿ ಆಗಸ್ಟ್.18(ಕರ್ನಾಟಕ ವಾರ್ತೆ): ನಿರಂತರ ವಿದ್ಯುತ್ ಪೂರೈಸಲು ಹಾಗೂ ವಿದ್ಯುತ್ ಅವಘಡ ಆಗದಂತೆ ತಡೆಯಲು 110ಕೆವಿ ಶಹಾಪೂರ, ಶಹಾಬಾದ ವಿದ್ಯುತ್ ಮಾರ್ಗದ ವಿದ್ಯುತ್‌ತಂತಿ ಬದಲಾವಣೆ ಕೆಲಸ ನಿರ್ವಹಿಸುತ್ತಿರುವ ಪ್ರಯುಕ್ತ ಆಗಸ್ಟ್ 19 ರ ಗುರುವಾರ ದಂದು ಬೆಳಿಗ್ಗೆ 9 ರಿಂದ ಸಾಯಂಕಾಲ 5ಗಂಟೆಯ ವರೆಗೆ 11ಕೆವಿ ಬಿ.ಗುಡಿಫೀಡರ್, 11ಕೆವಿ ಮುಡಬೂಳ ಎನ್.ಜೆ.ವೈ ಫೀಡರ್, 11ಕೆವಿ ಮದ್ದರಕಿ ಐಪಿಸೆಟ್ ಫೀಢರ್‌ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಬಿ.ಗುಡಿ, ಎನ್.ಜಿ.ಓಕಾಲೋನಿ, ಬಾಪುಗೌಡ ನಗರ, ಮೂಡಬೂಳ, ಮದ್ದರಕಿ, ಕೊಡಮನಹಳ್ಳಿ, ಅರಳಹಳ್ಳಿ, ಸಾದ್ಯಪೂರ, ಹುಲಕಲ್, ಹೋತಪೇಠ, ಮಕ್ತಾಪೂರ, ಹಾಲಭಾವಿ, ಇಂಗಳಗಿ, ಸಲಾದಪೂರ, ಶಾಖಾಪೂರ, ದಿಗ್ಗಿ, ಸೈದಾಪೂರ, ಉಮರದೊಡ್ಡಿ, ನಾಗನಟಗಿ, ಬಾಣತಿಹಾಳ ಗ್ರಾಮಗಳಿಗೆ ಹಾಗೂ ಸುತ್ತಮುತ್ತಲಿನ ತಾಂಡಗಳಿಗೆ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಜೆಸ್ಕಾಂಗೆ ಸಹಕರಿಸುವಂತೆ ಕಾರ್ಯನಿರ್ವಾಹಕ ಅಭಿಯಂತರರು (ವಿ), ಕಾ ಮತ್ತು ಪಾ ವಿಭಾಗ, ಗು.ವಿ.ಸ.ಕಂ.ನಿ, ಯಾದಗಿರಿ ಇವರು ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಸಂಗೀತ ಅಕಾಡೆಮಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ ಆಗಸ್ಟ್-18(ಕರ್ನಾಟಕ ವಾರ್ತೆ): ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು 2021-22ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.
ಅರ್ಜಿಯನ್ನು ಅಕಾಡೆಮಿಯ ವೆಬ್‌ಸೈಟ್ https://sangeetanrityaacademy.karnataka.gov.in ಮೂಲಕ ಪಡೆದು ಅಥವಾ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿಯನ್ನು ಪಡೆಯಬಹುದಾಗಿದೆ.
ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ.10 ಸ್ಟಾಂಪ್ ಹಚ್ಚಿದ ಸ್ವ ವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ ಜೆ.ಸಿ.ರಸ್ತೆ ಬೆಂಗಳೂರು-560 002 ಇಲ್ಲಿಗೆ ಕಳುಹಿಸಿಕೊಡಬೇಕಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಮೇಲ್ಕಂಡ ವಿಳಾಸಕ್ಕೆ ಕಳುಹಿಸಿಕೊಡಲು ಕೊನೆಯ ಸೆಪ್ಟಂಬರ್ 17 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ.

ಬುಧವಾರ, ಆಗಸ್ಟ್ 4, 2021

 ಕೋವಿಡ್-19 ಕುರಿತು ಇಂಟರ್ನ್ಶಿಪ್: ಅರ್ಜಿ ಆಹ್ವಾನ

ಯಾದಗಿರಿ: ಆಗಸ್ಟ್.4 (ಕರ್ನಾಟಕ ವಾರ್ತಾ): ಲಸಿಕೆ ಆಡಳಿತದಲ್ಲಿ ನೆರೆಯ ಕುಟುಂಬಗಳನ್ನು ಬೆಂಬಲಿಸುವ ಮೂಲಕ ಸಮುದಾಯಕ್ಕೆ ವ್ಯಾಕ್ಸಿನ್ ರಾಯಬಾರಿಯಾಗಿ ಕೆಲಸ ನಿರ್ವಹಿಸುವುದಕ್ಕಾಗಿ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಷ್ಠರೋಗಗಳ ನಿರ್ಮೂಲನೆ ಅಧಿಕಾರಿಗಳ ಕಚೇರಿ ವತಿಯಿಂದ ಇಂಟರ್ನ್ಶಿಪ್ (ಕಲಿಕೆ) ಹಮ್ಮಿಕೊಂಡಿದ್ದು, ಇದಕ್ಕಾಗಿ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

       ಅರ್ಜಿಸಲ್ಲಿಸಲು ಆಸಕ್ತರು ಸೇವಾ ಮನೋಭಾವನೆ ಹೊಂದಿರುವ 12 ನೇ ತರಗತಿ ಉತ್ತೀರ್ಣರಾಗಿರುವ ಅಥವಾ  ಅದಕ್ಕಿಂತ ಹೆಚ್ಚಿನ ಶಿಕ್ಷಣ ಹೊಂದಿರುವ, ಕನ್ನಡ ಭಾಷೆ ಬಲ್ಲವರು ಹಾಗೂ ಜಿಲ್ಲೆಯ ನಿವಾಸಿಯಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ ಥಿಚಿಜgiಡಿ.ಟಿiಛಿ.iಟಿ

ನ ಮೂಲಕ ಸಲ್ಲಿಸಬಹುದಾಗಿದೆ.

    ಈ ಇಂಟರ್ನ್ಶಿಪ್ ಅವಧಿ 6 ವಾರಗಳ ಕಾಲ ದಿನಕ್ಕೆ 2 ರಿಂದ 3ಗಂಟೆಗಳವರೆಗೆ ನಡೆಯಲಿದೆ. ಇಲ್ಲಿ ಇಂಟರ್ನ್ಶಿಪ್ ಪಡೆದವರು ಸರ್ಕಾರಿ ಅಧಿಕಾರಿಗಳ ನಾಯಕತ್ವದಲ್ಲಿ ಕೆಲಸ ಮಾಡಲು ವೃತ್ತಿಪರ ಮಾನ್ಯತೆ, ಅಭಿವೃದ್ಧಿ ಕ್ಷೇತ್ರದ ತಜ್ಞರಿಂದ ಕಲಿಯುವ ಅವಕಾಶ ಹಾಗೂ ಜಿಲ್ಲಾಡಳಿತದಿಂದ ಪ್ರಮಾಣಪತ್ರ ಸಹ ಪಡೆಯಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯಕ್ಕೆ  ಸಂಪಕಿಸಬಹುದಾಗಿದೆ ಎಂದು  ಪ್ರಕಟಣೆ ತಿಳಿಸಿದೆ.


ಕೃತಕ ಅಂಗಾಗಳ ಜೋಡಣೆಗೆ ಅರ್ಜಿ ಆಹ್ವಾನ

ಯಾದಗಿರಿ: ಆಗಸ್ಟ್.4 (ಕರ್ನಾಟಕ ವಾರ್ತಾ): ಯಾದಗಿರಿ ನಗರ ಸಭೆ ವ್ಯಾಪ್ತಿಯಲ್ಲಿ 2019-20ನೇ ಸಾಲಿನ ಶೇ.5% ಯೋಜನೆಯಡಿಯಲ್ಲಿ ಎಸ್.ಎಫ್.ಸಿ ಅನುದಾನದ ಅಡಿಯಲ್ಲಿ ವಿಕಲಚೇತನ ಹೊಂದಿರುವ ಫಲಾನುಭವಿಗಳಿಗೆ ಕೃತಕ ಅಂಗಾಗಳ ಜೋಡಣೆ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಸಲಾಗಿದೆ.

ಅರ್ಜಿ ಸಲ್ಲಿಸುವ ಫಲಾನುಭವಿಗಳು ಸ್ಥಳೀಯ ನಿವಾಸಿಯಾಗಿರಬೇಕು, ಅಂಗವಿಕಲರ ಪ್ರಮಾಣ ಪತ್ರ, ಜಾತಿ & ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಬಿ.ಪಿ.ಎಲ್ ಕಾರ್ಡ & ಐಡಿ ಕಾರ್ಡ,  2 ಫೋಟೋ ಅರ್ಜಿಯನ್ನು  ಆಗಸ್ಟ್ 2 ರಿಂದ ಆಗಸ್ಟ್ 16ರೊಳಗೆ ನಗರಸಭೆ ಕಾರ್ಯಲಯಕ್ಕೆ ಸಲ್ಲಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಗರ ಸಭೆ ಕಾರ್ಯಾಲಯದ ದೂ.ಸಂ: 08473-252312 ಗೆ ಸಂಪರ್ಕಿಸಲು ಕೋರಿದಾರೆ. 


ಯಾದಗಿರಿ ನಗರಸಭೆ; ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

ಯಾದಗಿರಿ: ಆಗಸ್ಟ್.4 (ಕರ್ನಾಟಕ ವಾರ್ತಾ): 2021-22ನೇ ಸಾಲಿನ ಡೇ-ನಲ್ಮ್ ಯೋಜನೆಯಡಿಯಲ್ಲಿ ವೈಯಕ್ತಿಕ ಬ್ಯಾಂಕ್ ಸಾಲಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಲಿಂಕೆಜ್ ಸಾಲಸೌಲಭ್ಯ ಮತ್ತು ಸ್ವಸಹಾಯ ಸಂಘಗಳ ರಚನೆ ವಿವಿಧ ಕಾರ್ಯಕ್ರಮಗಳ ಸೌಲಭ್ಯಗಳನ್ನು ಯಾದಗಿರಿ ನಗರಸಭೆ ವತಿಯಿಂದ ಕಲ್ಪಿಸಿಕೊಡಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹರು ಮತ್ತು ಆಸ್ತಕಿ ಇರುವ ಅರ್ಜಿದಾರರು ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಟ ಮೂರು ವರ್ಷ ವಾಸವಾಗಿರಬೇಕು, ಬಡತನ ರೇಖೆಗಿಂತ ಕೆಳಗಿನವರಾಗಿರಬೇಕು, ಅರ್ಜಿದಾರರು ವಿವಿಧ ಕಾರ್ಯಾಕ್ತಮಗಳಿಗೆ ಪ್ರತ್ಯೇಕ ಅರ್ಜಿಗಳು ಸಲ್ಲಿಸಬೇಕು, ಅರ್ಜಿದಾರರು ಇತರೆ ದಾಖಲೆಗಳೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಚುನಾವಣೆ ಗುರುತಿನ ಪತ್ರ ಹಾಗೂ ಆಧಾರ ಕಾರ್ಡ್ ಕಡ್ಡಾಯವಾಗಿ ಲಗತ್ತಿಸಬೇಕು ಇವೆಲ್ಲಾ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿ ಆಗಸ್ಟ್ 17 ರೊಳಗಾಗಿ ನಗರಸಭೆ ಕಾರ್ಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತ/ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಬಹುದು. 


ಆಗಸ್ಟ್ 12 ರಂದು ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆ

ಯಾದಗಿರಿ,ಆಗಸ್ಟ್04,(ಕರ್ನಾಟಕ.ವಾರ್ತಾ): ಗುರುಮಿಠಕಲ್ ತಾಲೂಕ ಪಂಚಾಯತಿಯ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಶಾಸಕ ನಾಗನಗೌಡ ಕಂದಕೂರ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 12 ರಂದು ಬೆಳಗ್ಗೆ 11.ಗಂಟೆಗೆ ಗುರುಮಿಠಕಲ್‌ನ ಪುರಸಭೆ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  ಈ ಸಭೆಯಲ್ಲಿ 2021 ಜುಲೈ 31 ರ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಕುರಿತು ಚರ್ಚಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


 ವಿಷಯುಕ್ತ ತ್ಯಾಜ್ಯವನ್ನು ಹಳ್ಳ- ಕೊಳ್ಳಗಳಿಗೆ ಹರಿಬಿಡುವ ಕೆಮಿಕಲ್ ಕಾರ್ಖಾನೆಗಳ ವಿರುದ್ದ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ*

*ಕೈಗಾರಿಕೆ ಅಭಿವೃದ್ಧಿಯಾದ್ರೆ ಜಿಲ್ಲೆಯೂ ಅಭಿವೃದ್ಧಿಯಾಗುತ್ತದೆ; ಜಿಲ್ಲಾಧಿಕಾರಿ*

ಯಾದಗಿರಿ : ಆಗಸ್ಟ್, 04 ( ಕರ್ನಾಟಕ ವಾರ್ತಾ);
ಕಡೆಚೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ .ಅವರ ಅಧ್ಯಕ್ಷತೆಯಲ್ಲಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಈ ವೇಳೆ ಜಿಲ್ಲಾಧಿಕಾರಿ ಮಾತನಾಡಿ, ವಿಷಯುಕ್ತ ತ್ಯಾಜ್ಯವನ್ನು ಹಳ್ಳ- ಕೊಳ್ಳಗಳಿಗೆ ಹರಿಬಿಡುವ ಕೆಮಿಕಲ್ ಕಾರ್ಖಾನೆಗಳ ವಿರುದ್ದ ಕ್ರಮ ಕೈಗೊಳ್ಳಿ ಎಂದರು.
ಮಾಲಿನ್ಯಕಾರಕ ತ್ಯಾಜ್ಯವನ್ನು ಕಾರ್ಖಾನೆಗಳ ಬೇಜವಾಬ್ದಾರಿಯಿಂದ ಕೈಗಾರಿಕಾ ಪ್ರದೇಶದ ಸುತ್ತಲಿನ ಜನತೆ ತೀವ್ರ ಆತಂಕ ವ್ಯಕ್ತ ಪಡಿಸುತ್ತಿದ್ದಾರೆ. ಕೈಗಾರಿಕಾ ಪ್ರದೇಶದಿಂದ ಹಳ್ಳ - ಕೊಳ್ಳಗಳಿಗೆ ಹರಿದ ಕಲುಷಿತ ರಾಸಾಯನಿಕ ದ್ರವದಿಂದ ಜಲಚರ, ಪಶು-ಪಕ್ಷಿಗಳು ಸೇವಿಸಿ ನಾಶವಾಗುತ್ತಿವೆ. ಹಾಗಾಗಿ ಮಾಲಿನ್ಯ ಎಸಗುತ್ತಿರುವ ಟೈರ್ ಘಟಕ ವಿರುದ್ಧ ಕೂಡಲೇ ಕಾನೂನು ಪ್ರಕಾರ ಕ್ರಮ ತೆಗೆದುಕೊಂಡು ಘಟಕವನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ಸ್ಥಾಪನೆಗೆ ನಿವೇಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿಯವರೆಗೆ 173 ಅರ್ಜಿಗಳು ಬಂದಿವೆ. ಮೀಸಲಾತಿಗೆ ಅನ್ವಯ ಶೇಕಡಾ 22.5 ರಷ್ಟು ಕಲ್ಪಿಸಬೇಕಾಗಿದೆ. ಸುಮಾರು 700 ಎಕರೆ ಭೂಮಿ ಹಂಚಿಕೆಗೆ ಲಭ್ಯವಿದೆ. ಅದರಲ್ಲಿ ಪರಿಶಿಷ್ಟ ಜಾತಿ/ ಪಂಗಡದವರಿಗೆ 161 ಎಕರೆ ಹಂಚುವ ಮೀಸಲಾತಿ ಇದೆ. ಇಲ್ಲಿಯವರೆಗೆ 11 ಎಕರೆ ಹಂಚಿಕೆ ಮಾಡಲಾಗಿದೆ. ಇನ್ನೂ ನಮಗೆ ಬಂದಿರುವ ಅರ್ಜಿಗಳನ್ನು ವಿಲೇವಾರಿ ಮಾಡಿ ಅರ್ಹರಿಗೆ ಹಂಚಿ ಮಾಡಬೇಕಾಗಿದೆ ಎಂದು ಕೈಗಾರಿಕಾ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಇನ್ನೂ ಒಂದು ವಾರದೊಳಗೆ ಬಂದಿರುವ ಅರ್ಜಿಗಳಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡಿ ಎಂದು ಸಹಾಯಕ ಆಯುಕ್ತರಿಗೆ ಸೂಚಿಸಿದರು.
*ಕೈಗಾರಿಕಾ ಅಭಿವೃದ್ಧಿಯಾದರೆ ಜಿಲ್ಲೆಯೂ ಅಭಿವೃದ್ಧಿಯಾಗುತ್ತದೆ. ಕೈಗಾರಿಕಾ ಪ್ರದೇಶದ ನಿವೇಶನ ಸೌಲಭ್ಯವು ಅರ್ಹರಿಗೆ ಉಪಯೋಗವಾಗಬೇಕು. ನಿವೇಶನ ಪಡೆದ ನಂತರ ಕೈಗಾರಿಕೆಗಳು ಸಮರ್ಪಕವಾಗಿ ಬಳಕೆಯಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಅಧಿಕಾರಿಗಳು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು*
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕಿ ರೇಖಾ ಮ್ಯಾಗೇರಿ, ಯಾದಗಿರಿ ತಹಶೀಲ್ದಾರ ಚೆನ್ನಮಲ್ಲಪ್ಪ ಘಂಟಿ, ಇನ್ನಿತರರು ಉಪಸ್ಥಿತರಿದ್ದರು.
May be an image of 2 people and indoor
Like
Comment
Share

ಮಂಗಳವಾರ, ಆಗಸ್ಟ್ 3, 2021

 ಅಲ್ಪಸಂಖ್ಯಾತರಿAದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ.ಆಗಸ್ಟ್.3(ಕ.ವಾ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ಹಾಗೂ ಡಿ.ಎಡ್ ಓದುತ್ತಿರುವ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿವೇತನದ ಅರ್ಜಿಗಳನ್ನು ಸಂಬAಧಪಟ್ಟ ಜಿಲ್ಲಾ/ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲತತ್ತಿಸಿ, ದ್ವೀಪತ್ರಿಗಳಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ವಿದ್ಯಾರ್ಥಿಗಳು ವಾರ್ಷಿಕ ರೂ.25,000 (ಗರಿಷ್ಠ 2 ವರ್ಷಗಳಿಗೆ ಶೈಕ್ಷಣಿಕ) ಅವಧಿಯಲ್ಲಿ ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dom.karnataka.gov.in ಅಥವಾ www.dom.karnataka.gov.in/yadagiri/public ನಿಂದ ಪಡೆದು ಕೊಳ್ಳಬಹುದಾಗಿದ್ದು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಇಲಾಖೆಯ ದೂ.ಸಂ:08473-253235, 9731090143 ಗೆ ಸಂಪರ್ಕಿಸಲು ಕೋರಿದಾರೆ.

 ವಿಕಲಚೇತನ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ: ಅರ್ಜಿ ಆಹ್ವಾನ

ಯಾದಗಿರಿ.ಆಗಸ್ಟ್.3(ಕ.ವಾ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸ್ಪರ್ಧಾಚೇತನ ಯೋಜನೆಯಡಿ ಪಿ.ಯು.ಸಿ ಮೇಲ್ಪಟ್ಟು ವ್ಯಾಸಂಗ ಮಾಡುವ ಅರ್ಹ ಎಲ್ಲ ವಿಕಲಚೇತನ ವಿದ್ಯಾರ್ಥಿಗಳು ಐ.ಎ.ಎಸ್. ಕೆ.ಎ.ಎಸ್, ಎಸ್.ಡಿ.ಎ, ಎಫ್.ಡಿ.ಎ, ಹಾಗೂ ಇನ್ನಿತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಎ1 ಕೆರಿಯರ್ ಅಕಾಡೆಮಿಯು ಉಚಿತ ತರಬೇತಿ ನೀಡುತ್ತಿದೆ. ಆಸ್ತಕ ಅರ್ಹ ಎಲ್ಲಾ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತರಬೇತಿ ಪಡೆಯಲು ಬೇಕಾಗಿರುವ ದಾಖಲಾತಿಗಳು ಅಂಗವಿಕಲತೆ ಗುರುತಿನ ಚೀಟಿ ಶೇ40% ಮೇಲ್ಪಟ್ಟು, ಆಧಾರ ಕಾರ್ಡ್, ವಾಸಸ್ಥಳ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಕಲತೆ ತೋರುವ ಭಾವಚಿತ್ರ 2 ಮತ್ತು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಸೂಕ್ತ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಇಲಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 08473-253740 ಸಂಪರ್ಕಿಸಲು ಕೋರಿದೆ..

ತೋಟಗಾರಿಕೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಯಾದಗಿರಿ.ಆಗಸ್ಟ್.3(ಕ.ವಾ): 2021-22ನೇ ಸಾಲಿನ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ರಾಷ್ಟಿçÃಯ ತೋಟಗಾರಿಕೆ ಮೀಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಹೊಸ ಕೃಷಿ ಪ್ರದೇಶ ವಿಸ್ತರಣೆಯಲ್ಲಿ ಬರುವ ಬಾಳೆ, ದಾಳಿಂಬೆ, ನೇರಳೆ, ಅಂಜೂರ, ಡ್ರಾö್ಯಗನ್ ಫ್ರೊಟ್, ಸೀಬೆ ಹಾಗೂ ಕೀಟ ಮತ್ತು ರೋಗ ನಿಯಂತ್ರಣ, ನೀರು ಸಂಗ್ರಹಣಾ ಘಟಕ, ಯಾಂತ್ರೀಕರಣ, ಕೋಯ್ಲೋತ್ತರ ನಿರ್ವಹಣೆ ಘಟಕಗಳಿಗೆ ಸಹಾಯಧನವನ್ನು ತೋಟಗಾರಿಕೆ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತ ರೈತರು ಆಗಸ್ಟ 16 ರೊಳಗೆ ಅರ್ಜಿಯನ್ನು ದಾಖಲಾತಿಗಳೊಂದಿಗೆ ಸಂಬAಧಪಟ್ಟ ತಾಲ್ಲೂಕ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು. ಲಭ್ಯವಿರುವ ಅನುದಾನದ ಮೇರೆಗೆ, ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತೋಟಗಾರಿಕೆಯ ಉಪ ನಿರ್ದೇಶಕರು (ಜಿಪಂ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 ಉದ್ಯೋಗ ಖಾತ್ರಿ ಯೋಜನೆ: ರೈತ ಬಂಧು ಅಭಿಯಾನ 

ಯಾದಗಿರಿ.ಆಗಸ್ಟ್.3(ಕ.ವಾ): ಮಹಾತ್ಮ ಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ರೈತ ಬಂಧು ಅಭಿಯಾನ ಅಂಗವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಆಗಸ್ಟ್ 15 ರಿಂದ ಅಕ್ಟೋಬರ್ 15 ರವರೆಗೆ 2 ತಿಂಗಳ ಕಾಲ ರೈತರ ಎರೆಹುಳ ಗೊಬ್ಬರ ತಯಾರಿಕೆ ಮತ್ತು ಬಳಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಠ25 ಎರೆಹುಳ ತೊಟ್ಟಿಗಳನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಉದ್ದೇಶಗಳು: ಆರ್ಥಿಕ ಸ್ಥಿರತೆ,ತ್ಯಾಜ್ಯ ವಸ್ತುಗಳ ಸದ್ಭಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಗೊಳಿಸಿ ಸ್ವಚ್ಛ ಪರಿಸರ ಸೃಷ್ಠಿಸಲು ಅನುಕೂಲ,ರೈತರಲ್ಲಿ ಎರೆಹುಳ ಗೊಬ್ಬರ ಉತ್ಪಾದನೆ,ಅದರ ಉಪಯುಕ್ತತತೆ ಹಾಗೂ ಸಾವಯವ ಕೃಷಿ ಉತ್ತೇಜಿಸುವ ಬಗ್ಗೆ ಜಾಗೃತಿ,ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಹಾಗೂ ರೈತರಿಗೆ ಎರೆಹುಳ ಗೊಬ್ಬರದ ಉತ್ಪಾದನೆ ಹಾಗೂ ಉದ್ಯಮಶೀಲತೆ ಅವಕಾಶಗಳ ಬಗ್ಗೆ ಪೂರಕ ಮಾಹಿತಿ ನೀಡಿ ಪ್ರೋತ್ಸಾಹಿಸುವುದು.

ಫಲಾನುಭವಿಗಳ ವರ್ಗ: ವೈಯಕ್ತಿಕ ಫಲಾನುಭವಿಗಳು,ಸ್ವಸಹಾಯ ಗುಂಪು,ರೈತ ಉತ್ಪಾದಕ ಸಂಸ್ಥೆಗಳು,ಸಮುದಾಯ ಘಟಕ ನರೇಗಾ ಯೋಜನೆಯಡಿ ಜಾನುವಾರು ಶೆಡ್ ನಿರ್ಮಿಸಿಕೊಂಡಿರುವ ಹಾಗೂ ಬಯೋಗ್ಯಾಸ ಘಟಕಗಳ ಫಲಾನುಭವಿಗಳಿಗೆ ಕಡ್ಡಾಯವಾಗಿ ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು.. 

ಅರ್ಹ ಫಲಾನುಭವಿಗಳು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ,ಅಲೆಮಾರಿ ಜನಗಳು, ಬುಡಕಟ್ಟು ಜನಾಂಗ,ಬಡತನರೇಖೆ ಕೆಳಮಟ್ಟದಲ್ಲಿ ಇರುವ ಇತರೆ ಕುಟುಂಬಗಳು,ಸ್ರಿö್ತÃ ಪ್ರಧಾನ ಕುಟುಂಬಗಳು, ವಿಕಲಚೇತನ ಪ್ರಧಾನ ಕುಟುಂಬಗಳು, ಭೂಸುಧಾರಣಾ ಫಲಾನುಭವಿಗಳು, ಇಂದಿರಾ ಆವಾಜ್ ಯೋಜನೆಯ ಫಲಾನುಭವಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ ಅಧಿನಿಯಮ 2006(2007 ರ2)ರಡಿಯ ಫಲಾನುಭವಿಗಳು

ಅನುಮೋದಿತ ಎರೆಹುಳು ಗೊಬ್ಬರ ತಯಾರಿಕೆ ಮಾದರಿಗಳು: ಎರೆಹುಳು ಗೊಬ್ಬರ ತಯಾರಿಕೆ ತೊಟ್ಟಿ ವಿಧಾನವು ಹೆಚ್ಚು ಬಳಕೆಯಲ್ಲಿರುವುದರಿಂದ,ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2 ಎರೆಹುಳು ಘಟಕದ ತೊಟ್ಟಿಯನ್ನು ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 


ಶನಿವಾರ, ಜುಲೈ 31, 2021

 ಕಾಣೆಯಾದ  ವ್ಯಕ್ತಿ ಪತ್ತೆಗೆ ಮನವಿ


ಯಾದಗಿರಿ: ಜುಲೈ,31 (ಕರ್ನಾಟಕ ವಾರ್ತಾ): ಯಾದಗಿರಿ ನಗರದ ಮಾತಾಮಾಣೀಕೇಶ್ವರಿ ನಗರ ನಿವಾಸಿ ನಗರದ ಶುಭಂ ಪೆಟ್ರೋಲ್ ಪಂಪ್ ಮೆನೇಜರ್  ಭರತಕುಮಾರ ಜೈನ (58) ಎಂಬವರು ಪೆಟೋಲ್ ಬಂಕ್ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಜುಲೈ 28 ರಂದು ಬೆಳಗ್ಗೆ ಹೋದವರು ಇಲ್ಲಿಯವರೆಗೆ ಮರಳಿ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ ಎಂದು ಮಗ ನೀಡಿದ ದೂರಿನ್ವಯ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದೆ.

ಕಾಣೆಯಾದ ವ್ಯಕ್ತಿ ಸದೃಡ ಮೈಕಟ್ಟು, ಸಾದಾಗೆಂಪು ಮೈ ಬಣ್ಣ, ದುಂಡನೆಯ ಮುಖ, ಅಂದಾಜು 5 ಫೀಟ್ 6 ಇಂಚ್ ಎತ್ತರ ಇದ್ದು, ನೀಲಿ ಬಣ್ಣದ ಟೀ ಶರ್ಟ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ ಧರಿಸಿರುತ್ತಾರೆ.

ಕಾಣೆಯಾದ ವ್ಯಕ್ತಿ ಕುರಿತು ಮಾಹಿತಿ ಅಥವಾ ಸುಳಿವು ಸಿಕ್ಕಲಿ ಯಾದಗಿರಿ ನಗರ ಪೊಲೀಸ್ ಠಾಣೆಗೆ ಅಥವಾ ಯಾದಗಿರಿ ಕಂಟ್ರೋಲ್ ರೂಂ  ದೂ.ಸಂ: 08473-253736, 251778 ಗೆ ಕರೆ ಸಂಪರ್ಕಿಸಲು ಪ್ರಕಟಣೆ ಕೋರಿದೆ.


ಶುಕ್ರವಾರ, ಜುಲೈ 23, 2021

 ವಿಶ್ವ ಕೌಶಲ್ಯ ದಿನ ಆಚರಣೆ

ಕೌಶಲ್ಯ ವೃದ್ಧಿಸಿಕೊಂಡು ಉದ್ಯೋಗ ಪಡೆದುಕೊಳ್ಳಲು ಯುವಜನತೆಗೆ ಕರೆ

ಯಾದಗಿರಿ:ಜುಲೈ 23(ಕ.ವಾ): ಯುವ ಜನತೆಯ ನಿರುದ್ಯೋಗ ಪರಿಹಾರಕ್ಕಾಗಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸಲು ಸರಕಾರವು ಕೌಶಲ್ಯಾಭಿವೃದ್ಧಿ, ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ ಹಾಗೂ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ನಿರುದ್ಯೋಗ ಯುವಕ ಯುವತಿಯರಿಗೆ ಮಾರುಕಟ್ಟೆ/ಉದ್ಯೋಗ ಆಧಾರಿತ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತಿದ್ದು ಯುವಜನತೆ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಅವರು ತಿಳಿಸಿದರು.


ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ 01 ತರಬೇತಿ ಕೇಂದ್ರದ ವತಿಯಿಂದ 05 ವಿವಿಧ ವಿಷಯಗಳಲ್ಲಿ 150 ಅಭ್ಯರ್ಥಿಗಳಿಗೆ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ 09 ವಿವಿಧ ವಿಷಯಗಳಲ್ಲಿ 840 ಅಭ್ಯರ್ಥಿಗಳಿಗೆ ಹಾಗೂ ದಿನ ದಯಾಳ್ ಅಂತ್ಯೋದಯ-ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ 07 ವಿವಿಧ ವಿಷಯಗಳಲ್ಲಿ 872 ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ಒದಗಿಸಲಾಗಿರುತ್ತದೆ.

 ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ತರಬೇತಿ ಪಡೆದುಕೊಂಡ ಅಭ್ಯರ್ಥಿಗಳು ಬೆಂಗಳೂರು ಹಾಗೂ ಹೈದರಾಬಾದ್ ನಂತಹ ನಗರಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಕ್ಕೆ ಸೇರಿಕೊಂಡು ಕೌಟುಂಬಿಕ ಜೀವನ ಸಾಗಿಸುತ್ತಿರುವುದು ರಾಷ್ಟç ಮಟ್ಟದಲ್ಲಿ ಪ್ರಶಂಸನೀಯವಾಗಿದೆ. ದೀನ ದಯಾಳ್ ಅಂತ್ಯೋದಯ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಲ್ಲಿ ತರಬೇತಿ ಪಡೆದುಕೊಂಡ ಹಲವಾರು ಅಭ್ಯರ್ಥಿಗಳು ಜಿಲ್ಲೆಯ ವಿವಿಧ ಬ್ಯಾಂಕುಗಳಲ್ಲಿ ಸಾಲ ಪಡೆದುಕೊಂಡು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿರುತ್ತಾರೆ.

ಪ್ರಸ್ತುತ ಕೋವಿಡ್-19ರ ಸಾಂಕ್ರಾಮಿಕ ರೋಗದ ನಿರ್ವಹಣೆಗಾಗಿ ಮಾನವ ಸಂಪನ್ಮೂಲದ ಸಿದ್ದತೆಗಾಗಿ ಆರೋಗ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಜಿಲ್ಲೆಯಲ್ಲಿನ ನಿರುದ್ಯೋಗ ಯುವಕ ಯುವತಿಯರಿಗೆ 06 ವಿವಿಧ ವಿಷಯಗಳಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಯೋಜನೆಯನ್ನು ರೂಪಿಸಲಾಗಿರುತ್ತದೆ. 

 ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ  ಸುಮಾರು 4000 ಕ್ಕಿಂತ ಹೆಚ್ಚಿನ ನಿರುದ್ಯೋಗ ಯುವಕ ಯುವತಿಯರಿಗೆ ವಿವಿಧ ವಿಷಯಗಳಲ್ಲಿ ಕೌಶಲ್ಯ ತರಬೇತಿಗಳನ್ನು ನೀಡಲು ಶಾಸಕರ ಪ್ರಯತ್ನದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಸುಮಾರು ರೂ. 4 ಕೋಟಿಯಷ್ಟು ಅನುದಾನವನ್ನು ಕಾಯ್ದಿರಿಸಲಾಗಿದೆ. ಈ ವಿಷಯವು ರಾಜ್ಯದಲ್ಲಿಯೇ ಪ್ರಥಮ ಪ್ರಯತ್ನವಾಗಿರುತ್ತದೆ. ಇದರಿಂದಾಗಿ ಯುವಜನತೆಗೆ ವಿವಿಧ ಕೈಗಾರಿಕೆ, ಉದ್ಯಮಸಂಸ್ಥೆಗಳಲ್ಲಿ ವೇತನಾಧಾರಿತ ಉದ್ಯೋಗ ಹಾಗೂ ಸ್ವಯಂ ಉದ್ಯೋಗ ಪಡೆಯುವಲ್ಲಿ ಸಹಕಾರಿಯಾಗುವುದು ಎಂದರು.                                                            


ಜಿಲ್ಲೆಯಲ್ಲಿನ ನಿರುದ್ಯೋಗ ಯುವಕ-ಯುವತಿಯರು ಹಾಗೂ ಉದ್ಯೋಗಕಾಂಕ್ಷಿಗಳು ಸರಕಾರದ ಕೌಶಲ್ಯ ಯೋಜನೆಗಳ ಸೌಲಭ್ಯ ಪಡೆದುಕೊಂಡು ವಿವಿಧ ವಲಯಗಳಲ್ಲಿ ಉದ್ಯೋಗವಕಾಶಗಳನ್ನು ಹೊಂದುವAತಾಗಲಿ, ಕೌಶಲ್ಯವಿಲ್ಲದೆ ಭವಿಷ್ಯವಿಲ್ಲ-ಕೌಶಲ್ಯ ಭಾರತ ನಿರ್ಮಾಣಕ್ಕೆ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಭು ದೊರೆ, ಸಹಾಯಕ ನಿರ್ದೇಶಕರಾದ ಬಸಪ್ಪ ತಳವಡಿ ಇದ್ದರು.


ಸ್ವಚ್ಛತೆಯಿಂದ ಡೆಂಗ್ಯೂ ನಿಯಂತ್ರಿಸಲು ಸಾಧ್ಯ:  ಡಾ.ಲಕ್ಷಿö್ಮÃಕಾಂತ 

ಯಾದಗಿರಿ,ಜುಲೈ-23,(ಕ.ವಾ): ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದರ ಮೂಲಕ ಡೆಂಗ್ಯೂ ಜ್ವರ ನಿಯಂತ್ರಣ ಮಾಡಲು ಸಾಧ್ಯ. ಡೆಂಗಿಗೆ ಯಾವುದೇ ಲಸಿಕೆ ಅಥವಾ ವ್ಯಾಕ್ಸಿನ್ ಇಲ್ಲ ಆದ್ದುದರಿಂದಾಗಿ ನಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದರಿಂದಾಗಿ ಡೆಂಗ್ಯೂ ರೋಗದಂತಹ ಸಾಂಕ್ರಾಮಿಕ ರೋಗಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಲಕ್ಷಿö್ಮÃಕಾಂತ ಅಭಿಪ್ರಾಯ ವ್ಯಕ್ತಪಡಿಸಿದರು.    

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿಗಳ ಸಭಾಂಗಣದಲ್ಲಿ ಡೆಂಗಿ ವಿರೋಧಿ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅವರು “ಡೆಂಗೀ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ” ಎಂಬ ಘೋಷವಾಕ್ಯದೊಂದಿಗೆ ಮಾತನಾಡಿದರು.  

ಮಳೆಗಾಲ ಆರಂಭವಾದರೆ ಡೆಂಗ್ಯೂ, ಕಾಮಾಲೆ, ಮಲೇರಿಯಾ ಮತ್ತು ಚಿಕ್ಕನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುತ್ತದೆ.  ಮಳೆ ನೀರು, ಚರಂಡಿ ನೀರು, ಗ್ಯಾರೇಜ್ ಹಾಗೂ ಬಸ್ ಡಿಪೋಗಳಲ್ಲಿನ ಬಳಕೆಗೆಬಾರದ ಟಯರ್ ಗಳಲ್ಲಿ ನೀರು ಶೇಖರಣೆಗೊಳ್ಳುವುದರಿಂದಾಗಿ ಲಾರ್ವೆಗಳ ಉತ್ಪತ್ತಿಗೆ ಕಾರಣವಾಗುತ್ತದೆ. ಲಾರ್ವೆಗಳನ್ನು ನಾಶಪಡಿಸುವ ಸಲುವಾಗಿ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ 70% ರಷ್ಟು ಕಪ್ಪೆಮೀನುಗಳನ್ನು ಬಿಡಲಾಗಿದೆ ಎಂದು ಹೇಳಿದರು. 

ಡೆಂಗಿ ಜ್ವರ ವೈರಸಿನಿಂದ ಉಂಟಾಗುವ ಕಾಯಿಲೆಯಾಗಿದ್ದು, ಈಡಿಸ್ ಇಜಿಪ್ಟೆöÊ ಸೊಳ್ಳೆಯ ಕಚ್ಚುವಿಕೆಯಿಂದಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತಾ ಹೋಗುತ್ತದೆ. ಪ್ರಾರಂಭದ ಹಂತದಲ್ಲಿ ತೀವ್ರ ಜ್ವರ,ವಿಪರೀತ ತಲೆನೋವು, ಬಾಯಿ,ಮೂಗು ಮತ್ತು ಒಸಡುಗಳಲ್ಲಿ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳೇ ಡೆಂಗಿನ ಲಕ್ಷಣಗಳಾಗಿವೆ ಮತ್ತು ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು. 

ಸಾರ್ವಜನಿಕರು ಯಾವುದೇ ಜ್ವರವಿರಲಿ ರಕ್ತಪರೀಕ್ಷೆ ಮಾಡಿಸಿಕೊಂಡು ಸೊಳ್ಳೆ ಪರದೆ ಉಪಯೋಗಿಸುವುದರ ಮುಖಾಂತರವಾಗಿ ಸಾಂಕ್ರಾಮಿಕ ರೋಗದಿಂದ ಮುಕ್ತರಾಗಲು ಸಾಧ್ಯವಾಗುತ್ತದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸುವುದು ಮುಖ್ಯವಾಗಿದೆ. ಆರೋಗ್ಯ ಕಾರ್ಯಕರ್ತರು ಮನೆಭೇಟಿಗೆ ಬಂದಾಗ ಎಲ್ಲರೂ ಸಹಕರಿಸಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. 

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ ಮಾತನಾಡಿ, ಡೆಂಗ್ಯೂ ನಿವಾರಣೆಗಾಗಿ ಸೊಳ್ಳೆಗಳ ಉತ್ಪತ್ತಿಯಾಗದಂತೆ ಮಾಡುವುದರಿಂದಾಗಿ ಡೆಂಗ್ಯೂನ್ನು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಈ ಸೊಳ್ಳೆಗಳು ನೀರನ್ನು ಸಂಗ್ರಹಿಸಿಡುವ ಸಿಮೆಂಟ್ ತೊಟ್ಟಿ,ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ಮು,ಬ್ಯಾರೆಲ್, ಮಣ್ಣಿನ ಮಡಿಕೆ ಮತ್ತು ಉಪಯೋಗಿಸಿದ ಒರಳುಕಲ್ಲು ಮುಂತಾದ ಕಡೆ ಶೇಖರಿಸಿರುವ ನೀರುಗಳಲ್ಲಿ ಲಾರ್ವೆಗಳ ಉತ್ಪತ್ತಿಯಾಗದಂತೆ ವಾರಕ್ಕೊಮ್ಮೆ ಶುಚಿಗೊಳಿಸಬೇಕು ಎಂದು ಅವರು ತಿಳಿಸಿದರು.  

ಬಯಲಿನಲ್ಲಿ ಘನತ್ಯಾಜ್ಯ ವಸ್ತುಗಳಾದ ಟಯರ್,ಎಳನೀರು ಚಿಪ್ಪು,ಒಡೆದ ಬಾಟಲಿ, ಮುಂತಾದವುಗಳಲ್ಲಿ ಮನೆ ನೀರು ಸಂಗ್ರಹವಾಗದAತೆ ಎಚ್ಚರ ವಹಿಸಬೇಕು.  ಸೂಕ್ತ ವಿಲೇವಾರಿ ಮಾಡುವುದರ ಜೊತೆಗೆ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳ ಕಚ್ಚುವಿಕೆಯಿಂದ ದೂರವಿರಬೇಕು. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುದಕ್ಕಿಂತ ರೋಗಬಾರದಂತೆ ಮುಂಜಾಗೃತೆಕ್ರಮ ತೆಗೆದುಕೊಳ್ಳುವುದು ಅತ್ತುö್ಯತ್ತಮ ಎಂದರು.  

ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ ಕಾಂತ ನಿರೂಪಿಸಿ,ವಂದಿಸಿದರು. 






ಬೆಳೆ ನಿರ್ವಹಣೆ ಕುರಿತು ರೈತರಿಗೆ ಸಲಹೆಗಳು 

ಯಾದಗಿರಿ:ಜುಲೈ 23(ಕ.ವಾ):  ಜಿಲ್ಲೆಯಲ್ಲಿ ಸುಮಾರು 15326 ಹೇಕ್ಟರ್ ರಷ್ಟು ಹೆಸರು ಬೀತ್ತನೇಯಾಗಿದ್ದು ಕಳೆದ ವಾರದರಿಂದ ಸುರಿಯುತ್ತಿರುವ ಮಳೆ ಮತ್ತು ಮೊಡ ಕವಿದ ವಾತವರಣದಿಂದ ಸಮೃದ್ದವಾಗಿ ಬೆಳೆದ ಬೆಳೆಯು ಹೂ ಮತ್ತು ಕಾಯಿ ಕಟ್ಟುವ ಹಂತದಲ್ಲಿದ್ದು ಬೆಳೆಗೆ ಅನೇಕ ಕೀಟ ಮತ್ತು ರೋಗಗಳ ಭಾದೆ ಅಲ್ಲಲಿ ಕಂಡುಬರುತ್ತಿದೆ. 

ಮುಖ್ಯವಾಗಿ ಸಸ್ಯ ಹೇನು, ನುಸಿಗಳು, ಥ್ರೀಪ್ಸ, ಮತ್ತು ಹಳದಿ ನಂಜಾಣು ರೋಗ ಕಂಡುಬAದಿದ್ದು ಇವುಗಳ ನಿಯಂತ್ರಣ ಕ್ರಮಗಳು ಈ ಕೆಳಗಿನಂತಿವೆ.

1. ಸಸ್ಯ ಹೇನು ಹಾಗೂ ಥ್ರೀಪ್ಸ್ ಕೀಟದಲಕ್ಷಣ:-

ಚಿಗುರೆಲೆ ಮತ್ತು ಕಾಯಿಗಳಿಂದ ರಸ ಹೀರುವುದರಿಂದ ಇಳುವರಿ ಕಡಿಮೆಯಾಗುತ್ತದೆ.

ನಿಯಂತ್ರಣ: ಪ್ರತಿ ಲೀಟರ್ ನೀರಿಗೆ 1 ಮೀ.ಲೀ ಮಿಥೈಲ್ ಪ್ಯಾರಾಥಿಯಾನ್ 50 ಇ.ಸಿ ಅಥವಾ 1 ಮಿ.ಲೀ ಮನೋಕ್ರೋಟೊಫಾಸ್ 36 ಎಸ್.ಎಲ್‌ಅಥವಾ 1.7 ಮಿ.ಲಿ ಡೈಮಿಥೋಯೆಟ್ 30 ಇ.ಸಿ ಬೆರಸಿ ಸಿಂಪಡಿಸಬೇಕು.

2. ಹಳದಿ ನಂಜಾಣು ರೋಗ ರೋಗದ ಲಕ್ಷಣ:-

ಈ ರೋಗ ಭಾದೆಯಿಂದ ಗಿಡಗಳು ಕುಳ್ಳಗಾಗುತ್ತವೆ. ಎಲೆಗಳ ಮೇಲೆ ಹಳದಿ ಬಣ್ಣ ಕಾಣಿಸಿಕೊಂಡು ಎಲೆಗಳು ಉದುರುತ್ತವೆ. 

ನಿಯಂತ್ರಣ: ರೋಗಗ್ರಸ್ತ ಗಿಡಗಳು ಕಂಡುಬAದಲ್ಲಿತಕ್ಷuವೆಕಿತ್ತಿ ಮಣ್ಣಿನಲ್ಲಿ ಮುಚ್ಚಿ ಹಾಕುವುದು. ಮೋನೋಕ್ರೊಟೋಫಾಸ್ 2.0 ಮೀ ಲೀ/ಲೀ ನೀರಿಗೆ ಬೇರಸಿ ಸಿಂಪಡಿಸಿರಿ ಅಥವಾಇಮಿಡಾಕ್ಲೊಪ್ರಿಡ್ 0.5 ಮಿ.ಲಿ/ಲೀ ನೀರಿಗೆ ಬೆರಸಿ ಸಿಂಪಡಿಸಿರಿ 

3. ಕಾಯಿ ಕೊರೆಯುವ ಹುಳು ಹಾನಿ ಕೀಟದಲಕ್ಷಣ :-

ಈ ಕೀಟಗಳು ಎಲೆ ಮತ್ತು ಕಾಯಿ ಕೊರೆದು ತಿನ್ನುವುದರಿಂದ ಬೆಳೆಯಲ್ಲಿ ಹೆಚ್ಚು ಹಾನಿಯಾಗುತ್ತದೆ. 

ನಿಯಂತ್ರಣ: ಪ್ರತಿ ಲೀಟರ್ ನೀರಿಗೆ 1 ಮಿ.ಲೀ ಮನೋಕ್ರೋಟೊಫಾಸ್ 36 ಎಸ್.ಎಲ್‌ಅಥವಾ 0.5 ಮಿ.ಲಿ ಫೆನವಲರೇಟ್ 20 ಇ.ಸಿ ಅಥವಾ 2 ಮಿ.ಲೀ. ಕ್ವಿನಾಲ್‌ಫಾಸ್ 25 ಇ.ಸಿ ಬೆರೆಸಿ ಸಿಂಪರಿಸಬೇಕು. 


ಸೂಚನೆ: ಹೂವಾಡುವ ಮತ್ತು ಕಾಳು ಕಟ್ಟುವ ಸಮಯದಲ್ಲಿ ಶೇ.1ರ 19:19:19 (10ಗ್ರಾಂ/ಲೀಟರ್ ನೀರಿಗೆ) ಅಥವಾ ಶೇ.2ರ 

ಡಿ.ಎ.ಪಿ. (20ಗ್ರಾಂ ಡಿ.ಎ.ಪಿ. ಪ್ರತಿ ಲೀಟರ್ ನೀರಿಗೆ) ಬೆರಿಸಿ ಸಿಂಪರಣೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜುಲೈ 26 ರಂದು ಐ.ಟಿ.ಐ ಕಾಲೇಜುನಲ್ಲಿ ಕೋವಿಡ್-19 ರ ಲಸಿಕೆ ಅಭಿಯಾನ

ಯಾದಗಿರಿ:ಜುಲೈ 23(ಕ.ವಾ): ಯಾದಗಿರಿ ತಾಲೂಕಿನ ಸರಕಾರಿ ಅನುದಾನಿತ ಹಾಗೂ ಖಾಸಗಿ ಐ.ಟಿ.ಐ ಕಾಲೇಜುಗಳ ಸಹಭಾಗಿತ್ವದಲ್ಲಿ ಸುಮಾರು 400 ಮಮದಿ ತರಬೇತಿ ಪಡೆಯುತ್ತಿರುವ ಕೌಶಲ್ಯ ಅಭಿವೃದ್ಧಿ ವಿದ್ಯಾರ್ಥಿಗಳಿದ್ದು, ವಿದ್ಯಾರ್ಥಿಗಳಿಗೆ ಜುಲೈ 26 ರಂದು ಐ.ಟಿ.ಐ ಕಾಲೇಜಿನಲ್ಲಿ ಕೋವಿಡ್-19 ರ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಯಾದಗಿರಿ ಜವಾಹರ ಐ.ಟಿ.ಐ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಸರಕಾರಿ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ. 










ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಕಿರುಚಿತ್ರ ಸ್ಪರ್ಧೆ

ಯಾದಗಿರಿ:ಜುಲೈ 23(ಕ.ವಾ): ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ ಯೋಜನೆಯು(ನಗರ) ಪ್ರಾರಂಭವಾಗಿ 2021ರ ಜೂನ್ 25ಕ್ಕೆ 6 ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನಗರ ಪ್ರದೇಶದ ಜನರಿಗೆ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಮತ್ತು ಯಶೋಗಾಥೆಗಳನ್ನು ಸಮಾಜಕ್ಕೆ ತಿಳಿಸಲು, ಸಮುದಾಯಾದರಿತ ಸಂಘ/ಸAಸ್ಥೆಗಳು ಮತ್ತು  ಯುವ ಜನಾಂಗವನ್ನು ಉತ್ತೇಜಿಸಲು ಮತ್ತು ಅವರಲ್ಲಿ ಉತ್ತಮ ಸ್ಪರ್ಧಾಭಾವನೆಯನ್ನು ತರುವ ನಿಟ್ಟನಲ್ಲಿ ಪಿ.ಎಂ.ಎ.ವೈ.ಯೋಜನೆಯ ಫಲಾನುಭವಿಗಳ ಯಶೋಗಾಥೆಗಳ ಕಿರುಚಿತ್ರಗಳನ್ನು ತಯಾರಿಸಲು 18 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯರಿಗೆ ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸುವಲು ಅರ್ಜಿ ಆಹ್ವಾನಿಸಲಾಗಿದೆ.

ಸ್ಪರ್ಧೆಯ ವಿಷಯ ಕುಶೀಯೋನ್ ಕಾ ಆಶಿಯಾನ “ಸಂತಸ ತಂದ ಮನೆ” ಸ್ಪರ್ಧೆಗೆ ಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ತಮ್ಮ ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಬೇಕು. ಸ್ಪರ್ಧೆಯು 1ನೇ ಜುಲೈ-2021 ರಿಂದ ಪ್ರಾರಂಭವಾಗಿ 2021  ಸೆಪ್ಟಂಬರ್ 15 ರ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.

ಫಲಾನುಭವಿಗಳ ಪಟ್ಟಿಯನ್ನು ಸಂಬAದಿಸಿದ ನಗರ ಸ್ಥಳೀಯ ಸಂಸ್ಥೆಗಳು ನೊಂದಾಯಿಸಿಕೊAಡ ಅರ್ಹ ಸ್ಪರ್ಧಿದಾರರಿಗೆ ನೀಡಲಾಗುವುದು. ಸ್ಫರ್ಧಿಗಳಿಗೆ ಸಹಾಯಕವಾಗಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂಧಿ ಮತ್ತು ಜಿಲ್ಲಾ ನಗರ ತಾಂತ್ರಿಕ ಕೋಶದ ತಜ್ಞರುಗಳ ಸೇವೆ ಲಭ್ಯವಿರುತ್ತದೆ. 

ಸ್ಪರ್ಧಿಗಳು ಉತ್ತಮ ಸಂದೇಶ ಮತ್ತು ಉತ್ತಮ ಮೊಬೈಲ್(ಊigh-ಡಿಚಿಜiಚಿಣioಟಿ) ಅಥವಾ ಕ್ಯಾಮರಾಗಳಿಂದ ಚಿತ್ರಿಕರಣ ಮಾಡುವುದು. ಚಿತ್ರಿಕರಿಸಿದ ಕಿರುಚಿತ್ರವನ್ನು ಆನ್‌ಲೈನ್ ಮೂಲಕ ಅಪ್ಲೋಡ್ ಮಾಡುವುದು. ಆನ್‌ಲೈನ್ ಮೂಲಕ ಅಪ್ಲೋಡ್ ಮಾಡಿದ ಕಿರುಚಿತ್ರವನ್ನು ರಾಜ್ಯ ಮಟ್ಟದ ನೋಡಲ್ ಏಜೆನ್ಸಿ ಪರಿಶೀಲಿಸಿ, ಆಯ್ಕೆಯಾದ ಕಿರುಚಿತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಸ್ಪರ್ಧೇಯಲ್ಲಿ ವಿಜೇತರಾಗುವ ಕ್ರಮವಾಗಿ 25 ಫಲಾನುಭವಿಗಳಿಗೆ ಪ್ರಥಮ ಬಹುಮಾನವಾಗಿ ರೂ. 25,000/-ದ್ವಿತೀಯ ಬಹುಮಾನವಾಗಿ ರೂ.20,000/- ಮತ್ತು ತೃತೀಯ ಬಹುಮಾನವಾಗಿ ರೂ.15,000/- ಗಳ ನಗದು  ಮತ್ತು ಪ್ರಶಸ್ತಿ ಪತ್ರಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು.

ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಪಿ.ಎಮ.ಎ.ವೈ.(ನ) ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ವಸತಿ ವಿಷಯ ನಿರ್ವಾಹಕರು, ಜಿಲ್ಲಾ ನಗರಾಭಿವೃದ್ಧಿ ಕೋಶದ ನಗರ ಮಟ್ಟದ ತಾಂತ್ರಿಕ ಕೋಶದ ತಜ್ಞರುಗಳನ್ನು ಸಂಪರ್ಕಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

                  

ನಿರುದ್ಯೋಗಿಗಳಿಗೆ ಸಾಲ: ಡೇ-ನಲ್ಮ್ ಯೋಜನೆಯಡಿ ಅರ್ಜಿ ಆಹ್ವಾನ

ಯಾದಗಿರಿ:ಜುಲೈ 23(ಕ.ವಾ): ಜಿಲ್ಲೆಯ ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿನ  ನಿರುದ್ಯೋಗ ಯುವಕ-ಯುವತಿಯರಿಗೆ ದೀನದಯಾಳ್ ಅಂತ್ಯೋದಯ (ಡೇ-ನಲ್ಮ್) ಯೋಜನೆಯಡಿ 2021-22ನೇ ಸಾಲಿಗೆ ಬ್ಯಾಂಕಿನಿAದ ಬಡ್ಡಿ ಸಹಾಯಧನ ಸಾಲ ಪಡೆದು ಸ್ವ-ಉದ್ಯೋಗ ಮಾಡಲಿಚ್ಚಿಸುವವರಿಗೆ ಹಾಗೂ ಮಹಿಳೆಯರಿಗೆ ಸ್ವ-ಸಹಾಯ ಸಂಘ ರಚಿಸುವ ಕುರಿತು ಮತ್ತು ಸ್ವ-ಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ಪಡೆದುಕೊಳ್ಳುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳವರು ಆಯಾ ನಗರಸ್ಥಳೀಯ ಸಂಸ್ಥೆಗಳಲ್ಲಿರುವ ಸಮುದಾಯ ಸಂಘಟನಾಧಿಕಾರಿಗಳು/ಸಮುದಾಯ ಸಂಘಟಕರನ್ನು ಭೇಟಿ ಮಾಡಿ, ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ಅವಧಿಯೊಳಗಾಗಿ ಅರ್ಜಿಗಳನ್ನು ಆಯಾ ನಗರಸಭೆಯ ಪೌರಾಯುಕ್ತರು ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆ ತಿಳಿಸದೆ.









ಪ್ರಧಾನ ಮಂತ್ರಿ ಆವಾಸ ಯೋಜನೆ ತರಬೇತಿ ಮತ್ತು ಕಾರ್ಯಾಗಾರ

ಯಾದಗಿರಿ:ಜುಲೈ 23(ಕ.ವಾ): ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ ಯೋಜನೆಯು(ನಗರ) ಪ್ರಾರಂಭವಾಗಿ 2021ರ ಜೂನ್ 25ಕ್ಕೆ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನಗರ ಪ್ರದೇಶದ ಜನರಿಗೆ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು “ಆವಾಸ್ ಪರ ಸಂವಾದ” ಎಂಬ ಶೀರ್ಷಿಕೆಯಡಿಯಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ, ಹಣಕಾಸು ಸಂಸ್ಥೆಗಳು, ಸಮುದಾಯ ಆದಾರಿತ ಸಂಘಸAಸ್ಥೆಗಳ ಪದಾಧಿಕಾರಿಗಳಿಗೆ ಮತ್ತು ಯುವಕರಿಗೆ ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಕಾರ್ಯಾಗಾರ ಮತ್ತು ತರಬೇತಿಗಳನ್ನು ಏರ್ಪಡಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳು. ಶಿಕ್ಷಣ ಸಂಸ್ಥೆಗಳು ಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕ್‌ಗಳಿAದ ಅರ್ಜಿ ಆಹ್ವಾನಿಸಲಾಗಿದೆ. 

ತರಬೇತಿ ಮತ್ತು ಕಾರ್ಯಗಾರ ಹಮ್ಮಿಕೊಳ್ಳಲು ಆಸಕ್ತ ಇರುವ ಸಂಸ್ಥೆಗಳು ಪಿ.ಎಂ.ಎ.ವೈ. ವೆಬ್‌ಸೈಟ್ ನಲ್ಲಿ (hಣಣಠಿ://ಠಿmಚಿಥಿ-uಡಿbಚಿಟಿ.gov.iಟಿ/) ಕಡ್ಡಾಯವಾಗಿ ನೊಂದಾಯಿಸಿಕೊಳ್ಳಬೇಕು. ಆಯ್ಕೆಯಾಗುವ ಅರ್ಹ ಸಂಸ್ಥೆಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಾಹಿತಿ ನೀಡಲಾಗುವುದು. ನೊಂದಣಿ ಮಾಡಿಸಿಕೊಳ್ಳಲು ಜುಲೈ 28 ಕೊನೆಯ ದಿನವಾಗಿದ್ದು, ತರಬೇತಿ ಮತ್ತು ಕಾರ್ಯಾಗಾರಗಳನ್ನು 2021 ರ ಸೆಪ್ಟಂಬರ್ 30 ರೊಳಗೆ ಆಯೋಜಿಸುವುದು. 

ತರಬೇತಿಯ ಪೋಟೋ, ವಿಡಿಯೋ, ಮತ್ತಿತರ ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು. ತರಬೇತಿಯಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರವನ್ನು, ಪ್ರತಿ ಆನ್‌ಲೈನ್ ತರಬೇತಿಗೆ ರೂ.7000/- ಮತ್ತು ಆಫ್‌ಲೈನ್ ತರಬೇತಿಗೆ ರೂ.35,000/-ಗಳ ಅನುದಾನವನ್ನು ನೀಡಲಾಗುವುದು. 

ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ವಸತಿ ವಿಷಯ ನಿರ್ವಾಹಕರು ಮತ್ತು ಯಾದಗಿರಿ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ನಗರ ಮಟ್ಟದ ತಾಂತ್ರಿಕ ಕೋಶದ ತಜ್ಞರುಗಳನ್ನು ಸಂಪರ್ಕಿಸಲು ಕೊರಲಾಗಿದೆ.


ಅಲ್ಪ ಸಂಖ್ಯಾತರ ಆಯೋಗ ಪ್ರವಾಸ ರದ್ದು

ಯಾದಗಿರಿ.ಜುಲೈ.23(ಕ.ವಾ): ಕರ್ನಾಟಕ ಅಲ್ಪ ಸಂಖ್ಯಾತರ ಆಯೋಗವು ಜುಲೈ 28 ರಂದು ನಿಗದಿಪಡಿಸಿದ್ದ ಯಾದಗಿರಿ ಜಿಲ್ಲಾ ಪ್ರವಾಸವನ್ನು ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಕಾರಣ ರದ್ದು ಪಡಿಸಲಾಗಿದೆ ಎಂದು ಅಲ್ಪ ಸಂಖ್ಯಾತೆರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.



ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ.ಜುಲೈ.23(ಕ.ವಾ): ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ  ಇಲಾಖೆ  ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳು  18 ರಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಜಂಟಿ ನಿರ್ದೇಶಕರು, ಯಾದಗಿರ ಜಿಲ್ಲಾಡಳಿತ ಭವನ, ಸಿಡಾಕ್-ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ 1ನೇ ಮಹಡಿ, ಎ ಬ್ಲಾಕ್, ರೋ. ನಂ. ಎ11, ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದ್ದು, ಜುಲೈ 28ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ. ಸಂ: 8147307003, 9901914945 ಸಂಪರ್ಕಿಸಬಹುದು.






28ರAದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೋನ್-ಇನ್ ಕಾರ್ಯಕ್ರಮ

ಯಾದಗಿರಿ:ಜುಲೈ-23(ಕ.ವಾ): ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಮತ್ತು ಉತ್ತಮ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಜುಲೈ 28 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಪೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

   ಜಿಲ್ಲೆಯ ಎಲ್ಲಾ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಂಬAಧಿಸಿದAತೆ ಯಾವುದಾದರೂ ದೂರು ಮತ್ತು ಜಿಲ್ಲೆಯ ಸಂಚಾರ ವ್ಯವಸ್ಥೆ ಸೇರಿದಂತೆ ಇನ್ನಿತರ ಸುಧಾರಣೆಗಳ ಬಗ್ಗೆ ಸಲಹೆ ಅಥವಾ ಸಮಸ್ಯೆಗಳಿದ್ದರೆ ನೇರವಾಗಿ ದೂ.ಸಂ:08473-253730 ಕರೆ ಮಾಡಿ ಪರಿಹಾರ ಕಂಡುಕೊಳ್ಳುವAತೆ ಪ್ರಕಟಣೆ ತಿಳಿಸಿದೆ.


                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...