ಶನಿವಾರ, ಜನವರಿ 30, 2021

ಇಂದು ಪಲ್ಸ್ ಪೋಲಿಯೋ

ಯಾದಗಿರಿ.ಜ.30 (ಕ.ವಾ):- ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 1,61,662 ಮಕ್ಕಳಿಗೆ ಜ.31 ರಂದು ನಡೆಯುವ  ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾ ಸಂತಾನೋತ್ಪತ್ತಿ ಮಕ್ಕಳ ಆರೋಗ್ಯ ಕಲ್ಯಾಣಾಧಿಕಾರಿ ಡಾ. ಸೂರ್ಯ ಪ್ರಕಾಶ್ ಕಂದಕೂರ ತಿಳಿಸಿದ್ದಾರೆ.


ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ 653 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಜೊತೆಗೆ 12 ಮೊಬೈಲ್ ತಂಡ, 41 ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗುತ್ತಿದೆ. ಎಲ್ಲ ಟೋಲ್‌ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರ ತೆರೆದು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ.


ಲಸಿಕಾ ಸ್ವಯಂಸೇವಕರು ಹಾಗೂ ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಲಿದ್ದು, ಆರೋಗ್ಯ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ ಇಲಾಖೆ ಹಾಗೂ ಇತರ ಇಲಾಖೆ ಅಧಿಕಾರಿಗಳು, ರೋಟರಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಹಕಾರ ಪಡೆಯಲಾಗುತ್ತದೆ.


ಸಾರ್ವಜನಿಕರು ಮಕ್ಕಳಿಗೆ ಕಡ್ಡಾಯವಾಗಿ ಈ ಲಸಿಕೆ ಹಾಕಿಸಬೇಕು. ಗ್ರಾಮಾಂತರ ಪ್ರದೇಶದಲ್ಲಿ ಫೆ.1 ಹಾಗೂ 2, ನಗರ ಪ್ರದೇಶಗಳಲ್ಲಿ ಫೆ. 1 ರಿಂದ 3ರವರೆಗೆ ಸ್ವಯಂಸೇವಕರು ಮನೆ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೋ ಹನಿ ಹಾಕಿಸಿಸಿಕೊಂಡಿದ್ದಾರೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜನರಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಅವಶ್ಯಕ: ನ್ಯಾಯಾಧೀಶ ಎಸ್.ಶ್ರೀಧರ

ಯಾದಗಿರಿ.ಜ.30 (ಕ.ವಾ):- ಜನರಲ್ಲಿ ಸ್ವಚ್ಛತೆ ಕುರಿತು ಬದಲಾಣೆಯ ಇಚ್ಛಾಶಕ್ತಿ ಉಂಟಾದಾಗ ಸ್ವಚ್ಛ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು  ಗೌರವಾನ್ವಿತ ನ್ಯಾಯಾಧೀಶರಾದ ಎಸ್.ಶ್ರೀಧರ ಅವರು ಹೇಳಿದರು.


ನಗರದಲ್ಲಿ ಜ.30 ರ ಶನಿವಾರ ದಂದು ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯಾದಗಿರಿ ನಗರ ಸಭೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ ರಾಷ್ಟ್ರೀಯ ಸ್ವಚ್ಚತಾ ದಿನಾಚರಣೆ ಅಂಗವಾಗಿ ಸ್ವಚ್ಛತಾ ಹಾಗೂ ಕಾನೂನು ಅರಿವು - ನೆರವು ಕಾರ್ಯಕ್ರಮದಲ್ಲಿ ನ್ಯಾಯಾಲಯದ ಆವರಣವನ್ನು ಸ್ವಚ್ಚಗೊಳಿಸುವ ಮೂಲಕ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ಅರ್ಜುನ ಬನಸೋಡೆ ಅವರು ಮಾತನಾಡಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಬೇಕು, ಪ್ಲಾಸ್ಟಿಕ್ ಸರಳವಾಗಿ ಕೊಳೆಯದ ಕಾರಣ ಪರಿಸರಕ್ಕೆ ಹಾನಿಯಾಗುತ್ತದೆ. ಸ್ವಚ್ಛ ಪರಿಸರದ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.


ನಗರಸಭೆಯ ಪೌರಾಯುಕ್ತರಾದ ಹೆಚ್.ಬಕ್ಕಪ್ಪ, ನಿಂಗಣ್ಣ ಬಂದಳ್ಳಿ, ಎಸ್.ಪಿ.ನಾಡೇಕರ್, ಗೋವಿಂದ್ ಜಾಧವ್, ನಾಗರಾಜ ಯರಗೋಳ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು. 


 ಕರ್ನಾಟಕ   ಸರ್ಕಾರ

ವಾರ್ತಾ  ಮತ್ತು  ಸಾರ್ವಜನಿಕ  ಸಂಪರ್ಕ  ಇಲಾಖೆ

ಹಿರಿಯ ಸಹಾಯಕ ನಿರ್ದೇಶಕ ಕಚೇರಿ, ಜಿಲ್ಲಾಡಳಿತ ಭವನ, ಬಿ. ಬ್ಲಾಕ್, 1ನೇ ಮಹಡಿ, ಕೊಠಡಿ ಸಂಖ್ಯೆ: ಬಿ2ಎ, ಬಿ2ಬಿ, ಬಿ3, ಚಿತ್ತಾಪುರ ರಸ್ತೆ, ಯಾದಗಿರಿ-585202 ದೂರವಾಣಿ: 08473-253722 ಇ-ಮೇಲ್: vಚಿಡಿಣhಚಿbhಚಿvಚಿಟಿಥಿಚಿಜgiಡಿi@gmಚಿiಟ.ಛಿom

   (1ನೇ ಸುತ್ತು)                                                         ದಿನಾಂಕ:30-01-2021

ಪತ್ರಿಕಾ ಪ್ರಕಟಣೆ

ಕುಷ್ಠರೋಗ: ಸಮಾಜದ ಮನೋಭಾವ ಬದಲಾಗಿದೆ-ವೆಂಕಟರೆಡ್ಡಿ ಗೌಡ ಮುದ್ನಾಳ್

ಯಾದಗಿರಿ.ಜ.30 (ಕ.ವಾ):- ಗುಣಮುಖವಾಗುವ ಕುಷ್ಠರೋಗದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿದ್ದು, ಹಿಂದಿಗಿAತಲೂ ಇದೀಗ ಕುಷ್ಠರೋಗಿಗಳನ್ನು ಸಕಾರಾತ್ಮಕವಾಗಿ ನೋಡುವ ಮನೋಭಾವ ಮೂಡಿದೆ ಎಂದು ಸ್ಥಳೀಯ ಶಾಸಕರಾದ ವೆಂಕಟರೆಡ್ಡಿ ಗೌಡ ಮುದ್ನಾಳ್ ಅವರು ಅಭಿಪ್ರಾಯಪಟ್ಟರು. 

ಅವರು ಜ.30ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಜ.30ರಿಂದ ಫೆ.13ರ ವರೆಗೆ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ 2020-21 ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.  

  ಕುಷ್ಠರೋಗ ಅರಿವು ಕಾರ್ಯಕ್ರಮವನ್ನು ಕುಷ್ಠರೋಗ ನಿರ್ಮೂಲನಾ ದಿನವನ್ನಾಗಿ ಆಚರಿಸುವುದು ಇನ್ನೂ ಉತ್ತಮ ಎಂಬ ಅಭಿಪ್ರಾಯಪಟ್ಟ ಶಾಸಕರು, ವೈದ್ಯರು, ನರ್ಸ್ಗಳು ಈ ರೋಗಿಗಳಿಗೆ ಉತ್ತಮ ಶುಶ್ರೂಷೆ ನೀಡಿ ಆರೈಕೆ ಮಾಡಿದ ಪರಿಣಾಮ ಕುಷ್ಠರೋಗವನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ, ಈ ರೋಗಿಗಳನ್ನು ಈ ಹಿಂದೆ ಊರ ಹೊರಗೆ ಇರಿಸುತ್ತಿದ್ದರು, ಇದೀಗ ಪರಿಸ್ಥಿತಿ ಬದಲಾಗಿದೆ ಎಂದರು. 

ವೈದ್ಯರು ಹಾಗೂ ರೋಗಿಗಳ ಸಹಕಾರದಿಂದ ಈ ರೋಗವನ್ನು ನಿರ್ಮೂಲನೆ ಮಾಡಬಹುದಾಗಿದೆ, ಪ್ರಮುಖವಾಗಿ ಆಶಾ ಕಾರ್ಯಕರ್ತೆಯರು ಮಾತ್ರೆ, ಔಷಧಗಳನ್ನು ನೀಡುವ ಮೂಲಕ ಈ ರೋಗಿಗಳನ್ನು ಗುಣಪಡಿಸುತ್ತಿದ್ದಾರೆ ಎಂದರು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ್ ಮಾತನಾಡಿ, ನಗರದಲ್ಲಿರುವ ಕುಷ್ಠರೋಗಿಗಳ ಕಾಲೋನಿಗೆ ಭೇಟಿ ನೀಡಿದ್ದು, ಅಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿಕೊಡುವಂತೆ ಸಂಬAಧಿಸಿದವರಿಗೆ ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು ಉತ್ತಮ ಆರೈಕೆ ಮಾಡುತ್ತಿದ್ದಾರೆ ಎಂದು ಹೇಳಿದರು.  

ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಮಾತನಾಡಿ, ಆರಂಭದಲ್ಲಿಯೇ ಕುಷ್ಠರೋಗವನ್ನು ಪತ್ತೆ ಹಚ್ಚಿದ್ದಲ್ಲೀ ಉತ್ತಮ ಚಿಕಿತ್ಸೆ ನೀಡಿ ಗುಣಪಡಿಸಬಹುದು, ಕುಷ್ಠರೋಗ ನಿರ್ಮೂಲನೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. 

ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಪರಿಶ್ರಮದಿಂದ ಕುಷ್ಠರೋಗಿಗಳ ಚೇತರಿಕೆ ಪ್ರಮಾಣ ಹೆಚ್ಚಳವಾಗಿದೆ, ಕಳೆದ ವರ್ಷದಲ್ಲಿ ಜಿಲ್ಲೆಯಲ್ಲಿ ಕುಷ್ಠರೋಗದ 24 ಪ್ರಕರಣಗಳು ಪತ್ತೆಯಾಗಿವೆ, ಅವರ ಚಿಕಿತ್ಸೆಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ, ಮುಂಬರುವ ದಿನಗಳಲ್ಲಿ ಯಾವುದೇ ಪ್ರಕರಣಗಳು ವರದಿಯಾಗಬಾರದು, ಸಂಪೂರ್ಣ ನಿರ್ಮೂಲನೆಗೆ ಜಿಲ್ಲೆಯ ಜನತೆ ಸಹಕರಿಸಬೇಕು ಎಂದು ತಿಳಿಸಿದರು. 

 ನಾವೆಲ್ಲರೂ ನಮ್ಮ ಜಿಲ್ಲೆಯನ್ನು ಕುಷ್ಠರೋಗದಿಂದ ಮುಕ್ತಗೊಳಿಸಲು ಪಣತೊಟ್ಟು ಕಾರ್ಯಪ್ರವೃತ್ತರಾಗಿದ್ದೇವೆ. ಕುಷ್ಠರೋಗವನ್ನು ಸುಲಭವಾಗಿ ಪತ್ತೆ ಹಚ್ಚಿ, ಸಂಪೂರ್ಣವಾಗಿ ಗುಣಪಡಿಸಬಹುದು. ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಕುಷ್ಠರೋಗ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆ ತರಲು ನಾವು ಬದ್ದರಾಗೋಣ ಎಂದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಕುಷ್ಠರೋಗ ಶಾಪವಲ್ಲ, ಯಾವುದೇ ಕಾರಣಕ್ಕೂ ಭಯ ಪಡಬಾರದು, ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಬಹುದು ಎಂದರು. 

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಭಗವಂತ ಅನ್ವರ್ ಮಾತನಾಡಿ, ಈ ರೋಗ ಬೇಗ ಪತ್ತೆಯಾದರೆ, ಚಿಕಿತ್ಸೆಯೂ ಬೇಗನೇ ಆರಂಭಿಸಿಬಹುದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ ಎಂದವರು ಹೇಳಿದರು. 

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು. 

ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಗುಣಮುಖರಾದ ಕುಷ್ಠರೋಗಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೆಂಕಟರೆಡ್ಡಿ ಗೌಡ ಮುದ್ನಾಳ್ ಅವರು ಕುಷ್ಠರೋಗದಿಂದ ಗುಣಮುಖರಾದ ಹಿರಿಯರಿಗೆ ಸನ್ಮಾನಿಸಿದರು. 

ಆರೋಗ್ಯ ಶಿಕ್ಷಣಾಧಿಕಾರಿ ರಂಗಣ್ಣ ಪಾಟೀಲ್ ಸ್ವಾಗತಿಸಿದರು. ಶರಣು ಹೊಸಮನಿ ವಂದಿಸಿದರು. 


ಮಾರ್ಚ್ ಅಂತ್ಯದೊಳಗೆ ಹಂಪ್ಸ್ಗಳಿಗೆ ಬಣ್ಣ ಹಾಕಲು ಜಿಲ್ಲಾಧಿಕಾರಿ ಸೂಚನೆ 

ಯಾದಗಿರಿ.ಜ.30 (ಕ.ವಾ):- ಮುಂಬರುವ ಮಾರ್ಚ್ ಅಂತ್ಯದೊಳಗೆ ಜಿಲ್ಲೆಯ ರಸ್ತೆಗಳಲ್ಲಿರುವ ಹಂಪ್ಸ್ಗಳಿಗೆ ವೈಜ್ಞಾನಿಕ ರೀತಿಯಲ್ಲಿ ಬಣ್ಣ ಬಳಿದು, ರಸ್ತೆ ಉಬ್ಬರವಿರುವ ಎಚ್ಚರಿಕೆಯ ಫಲಕಗಳನ್ನು ಅಳವಡಿಸುವಂತೆ  ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಅವರು ಜ.30ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ರಾಷ್ಟಿçÃಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿAಗ್ ವಿಭಾಗ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಇತರೆ ಇಲಾಖೆಗಳಿಂದ ನಿರ್ಮಾಣವಾಗುವ ವಿವಿಧ ರೀತಿಯ ರಸ್ತೆಗಳಲ್ಲಿ ಹಾಕಲಾದ ಹಂಪ್ಸ್ಗಳು ಸಂಚಾರದ ವೇಳೆ ವಾಹನ ಸವಾರರ ಗಮನಕ್ಕೆ ಬರಬೇಕು, ಇಲ್ಲದಿದ್ದಲ್ಲೀ ಅವಘಡಗಳಾಗುವ ಸಂಭವವಿರುತ್ತದೆ, ಹಾಗಾಗಿ ಮುಂಬರುವ ಮಾರ್ಚ್ ಅಂತ್ಯದೊಳಗೆ ಹಂಪ್ಸ್ಗಳಿಗೆ ಬಣ್ಣ ಬಳಿದು, ಎಚ್ಚರಿಕಾ ಫಲಕಗಳನ್ನು ಅಳವಡಿಸಬೇಕು ಹಾಗೂ ಅವೈಜ್ಞಾನಿಕ ಹಂಪ್ಸ್ಗಳನ್ನು ತೆರವುಗೊಳಿಸಿ, ವೈಜ್ಞಾನಿಕವಾಗಿ ಅಳವಡಿಸುವಂತೆ ವಿವಿಧ ರೀತಿಯ ರಸ್ತೆ ನಿರ್ಮಾಣ ಎಜೆನ್ಸಿಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು. 

ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಕುರಿತು ಪರಿಶೀಲಿಸಬೇಕು, ರಸ್ತೆ ಹಂಪ್ಸ್ ಬರುವ 500 ಮೀಟರ್‌ಗಳ ಹಿಂದೆಯೇ ಹಂಪ್ಸ್ ಇರುವ ಬಗ್ಗೆ ಫಲಕವನ್ನು ಅಳವಡಿಸಬೇಕು, ಯಾವ ರಸ್ತೆಗಳಲ್ಲಿ ಪ್ರಗತಿ ಕಾಮಗಾರಿ ಅಥವಾ ದುರಸ್ಥಿ ನಡೆದರೂ ಆ ಕುರಿತು ಫಲಕಗಳನ್ನು ಅಳವಡಿಸಬೇಕು, ಯಾವುದೇ ಕಾರಣಕ್ಕೂ ಸಾರ್ವಜನಿಕರಿಗಾಗಲೀ, ವಾಹನ ಸವಾರರಿಗೆ ತೊಂದರೆಯಾಗಬಾರದು ಎಂದು ತಿಳಿಸಿದರು. 

ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಲು ವಿವಿಧ ಶಾಲೆ – ಕಾಲೇಜುಗಳಲ್ಲಿ ಪೊಲೀಸ್, ಸಾರಿಗೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜಾಗೃತಿ ಮೂಡಿಸಲು ವಿವಿಧ ರೀತಿಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಯವರು, ಮಿತಿ ಮೀರಿದ ಸರಕು ಸಾಗಾಣಿಕೆ ಹಾಗೂ ಮಿತಿಗಿಂತಲೂ ಹೆಚ್ಚಿನ ಪ್ರಯಾಣಿಕರನ್ನು ಸಾಗಿಸುವ ವಾಹನಗಳ ಚಾಲಕರ ಡ್ರೆöÊವಿಂಗ್ ಲೈಸೆನ್ಸ್ ಅಮಾನತುಗೊಳಿಸಿ, ಈ ರೀತಿಯ ರೈಡ್‌ಗಳನ್ನು ಹೆಚ್ಚು ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್ ಅವರಿಗೆ ತಿಳಿಸಿದರು. 

ಜಿಲ್ಲೆಯ ಎಲ್ಲಾ ರಸ್ತೆಗಳ 14 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ, ಅಲ್ಲಿ ಕಡ್ಡಾಯವಾಗಿ ಗುರುತಿನ ಫಲಕ ಅಳವಡಿಸಬೇಕು, ಹೊಸದಾಗಿ ಬರುವ ವಾಹನಗಳು ಕಡ್ಡಾಯವಾಗಿ ನೋಂದಾಯಿಸಿರಬೇಕು, ಆ ವಾಹನಗಳು ನಂಬರ್ ಪ್ಲೇಟ್‌ನೊಂದಿಗೆ ಹೊರಬರಬೇಕು, ದ್ವಿಚಕ್ರವಾಹನಗಳ ಸವಾರರು ಹೆಲ್‌ಮೆಟ್ ಬಳಸಬೇಕು ಎಂದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಸೇರಿದಂತೆ ರಸ್ತೆ ನಿರ್ಮಾಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು. 


ಕಳ್ಳಭಟ್ಟಿ ಸರಾಯಿ ಸಾಗಾಣಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಯದಗಿರಿ.ಜ30 (ಕ.ವಾ):- ಅಕ್ರಮ ಕಳ್ಳಭಟ್ಟಿ ಸರಾಯಿ ಮತ್ತು ಕೈ ಹೆಂಡ ತಯಾರಿಕೆ ಹಾಗೂ ಸಾಗಾಣಿಕೆ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಅಬಕಾರಿ ಉಪ ಆಯುಕ್ತ ಡಾ. ಸಂಗನಗೌಡ ಹೊಸಳ್ಳಿ ಅವರಿಗೆ ಸೂಚನೆ ನೀಡಿದರು. 

 ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜ.30ರ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಳ್ಳಭಟ್ಟಿ ಸರಾಯಿ ನಿರ್ಮೂಲನಾ ಸ್ಥಾಯಿ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಷಪುರಿತ ಮದ್ಯದ ಸೇವನೆಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಹಲವು ಜನರು ಪ್ರಾಣಕಳೆದುಕೊಂಡ ಬಗ್ಗೆ ಮಾದ್ಯಮಗಳಲ್ಲಿ ಆಗಾಗ್ಯೆ ವರದಿಯಾಗುತ್ತದೆ, ಯಾದಗಿರಿ ಜಿಲ್ಲೆಯಾದ್ಯಂತ ಈ ರೀತಿಯ  ಯಾವುದೇ ಅವಘಡಗಳು ನಡೆಯದಂತೆ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

 ಜಿಲ್ಲೆಯು ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶಗಳೊAದಿಗೆ ಗಡಿ ಹಂಚಿಕೊAಡಿದ್ದು, ಈ ರಾಜ್ಯಗಳಿಂದ ತೆರಿಗೆ ಪಾವತಿಸದ ಮಧ್ಯ ಅಥವಾ ಮಾನವ ಸೇವನೆಗೆ ಯೋಗ್ಯವಲ್ಲದ ಮದ್ಯ ಹಾಗೂ ಅದರ ಸಾಗಾಣಿಕೆ ಆಗದಂತೆ ಹದ್ದಿನಕಣ್ಣಿಡಬೇಕು, ಸಂಬAದ ಪಟ್ಟ ಇಲಾಖೆಗಳು ಇದರ ಪರಿಶೀಲನೆಗೆ ಜಂಟಿಯಾಗಿ ಕಾರ್ಯನಿರ್ವಹಿಸಿಬೇಕೆಂದು ಅವರು ಸೂಚಿಸಿದರು.

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಋಷಿಕೇಶ ಭಗವಾನ್ ಸೋನವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಸೇರಿದಂತೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. 


ಫೆ.1 ರಂದು ಮಡಿವಾಳ ಮಾಚಿದೇವರ ಜಯಂತಿ: ಸರಳ ಆಚರಣೆಗೆ ನಿರ್ಧಾರ

ಯಾದಗಿರಿ.ಜ.30 (ಕ.ವಾ):- ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಮುಂಬರುವ ಫೆಬ್ರುವರಿ 1 ರಂದು ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. 

  ಜ.30ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. 

 ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು,  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುವುದು, ಅಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಗುತ್ತದೆ ಎಂದರು.  

 ಜಯಂತಿಯಲ್ಲಿ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸ್ಯಾನಿಟೈಜರ್ ಉಪಯೋಗಿಸಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿಯಾದ ಪ್ರಕಾಶ್ ರಜಪೂತ್,  

 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ, ಸಮಾಜದ ಮುಖಂಡರು ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು. 


ಇಂದು ವಿದ್ಯುತ್ ವ್ಯತ್ಯಯ

ಯಾದಗಿರಿ.ಜ30 (ಕ.ವಾ):- ಇಲ್ಲಿನ 110 ಕೆವಿ ವಿದ್ಯತ್ ವಿತರಣಾ ಕೇಂದ್ರದಲ್ಲಿ ನಿರಂತರ ವಿದ್ಯುತ್ ಪೂರೈಕೆ ಹಾಗೂ ವಿದ್ಯುತ್ ಅವಘಡಗಳಾದಂತೆ ತಡೆಯಲು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡ ಪ್ರಯುಕ್ತ ಇದೇ ಜ.31ರ ಭಾನುವಾರ ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯ ವರೆಗೆ ಯಾದಗಿರಿ ನಗರ ಹಾಗೂ  ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಗ್ರಾಹಕರು ಸಹಕರಿಸುವಂತೆ ಜೆಸ್ಕಾಂನ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಮಹಿಳೆ ಕಾಣೆ: ಪತ್ತೆಗೆ ಮನವಿ

ಯಾದಗಿರಿ.ಜ30 (ಕ.ವಾ):- ಕಲಬುರಗಿ ಜಿಲ್ಲೆಯ ಚಿತ್ತಾಪೂರು ತಾಲೂಕಿನ ನಾಲವಾರ ಹೋಬಳಿಯ ಬಿಮನಹಳ್ಳಿಯ ನಿವಾಸಿ ಲಕ್ಷಿö್ಮ (25ವರ್ಷ) ಗಂಡ ರಾಜು ಎಂಬ ಮಹಿಳೆ ರಾಯಚೂರು ರೈಲು ನಿಲ್ದಾಣದಿಂದ 2020ರ ಡಿಸೆಂಬರ್ 31ರಿಂದ ಕಾಣೆಯಾಗಿರುತ್ತಾರೆ. 

 ದುಂಡು ಮುಖ, ಮೊಂಡ ಮೂಗು, ಅಗಲವಾದ ಹಣೆ, ಸಣ್ಣ ಕಿವಿ, 2 ಅಡಿ ಕಪ್ಪು ಕೂದಲಿನ ಸಾಧಾರಣ ಶರೀರವುಳ್ಳ ಇವರು 4.6 ಅಡಿ ಎತ್ತರವಿರುತ್ತಾರೆ. 

ಕಾಣೆಯಾದಾಗ ಹಳದಿ ಬಣ್ಣದ ಕಾಟನ್ ಸೀರೆ, ಹಳದಿ ಬಣ್ಣದ ಕುಪ್ಪಸ ಧರಿಸಿರುತ್ತಾರೆ. ಕಾಲಿನಲ್ಲಿ ರೋಲ್ಡ್ಗೋಲ್ಡ್ ಚೈನು, ಕೈಯ್ಯಲಿ ಹಸಿರು ಹಾಜಿನ ಬಳೆ, ಬೆಳ್ಳಿ ಕಾಲುಂಗುರು, ತಾಳಿ ಹಾಗೂ ಕಿವಿಯೋಲೆ ಧರಿಸಿರುತ್ತಾರೆ, ಕನ್ನಡ ಮಾತನಾಡುವ ಇವರು ಪತ್ತೆಯಾದಲ್ಲೀ, ರಾಯಚೂರು ರೈಲು ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08532-231716 ಹಾಗೂ ಮೊಬೈಲ್ 9480802111ಗೆ ಮಾಹಿತಿ ನೀಡುವಂತೆ ರಾಯಚೂರು ರೈಲ್ವೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಜಾಗೃತಿ ಜಾಥಾಗೆ ಚಾಲನೆ

ಯಾದಗಿರಿ.ಜ30 (ಕ.ವಾ):- 32ನೇ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸ ಹಿನ್ನಲೆಯಲ್ಲಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಜ.30ರ ಶನಿವಾರ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. 

ನಗರದ ತಹಶೀಲ್ದಾರರ ಕಚೇರಿ ಆವರಣದಲ್ಲಿ ಸ್ಥಳೀಯ ಶಾಸಕರಾದ ವೆಂಕಟರೆಡ್ಡಿ ಗೌಡ ಮುದ್ನಾಳ್, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಅವರು ಜಾಗೃತಿ ಜಾಥಾಗೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ಸಾರಿಗೆ ಇಲಾಖೆಯ ಅಧಿಕಾರಿ ವೆಂಕಟಪ್ಪ ಕಲಾಲ್, ಮೌನೇಶ್, ಡಿವೈಎಸ್ ಸಂತೋಷ್ ಬನಟ್ಟಿ, ನಗರ ಠಾಣೆಯ ಪಿಎಸ್‌ಐ ಸೌಮ್ಯ, ಗ್ರಾಮೀಣ ಠಾಣೆಯ ಪಿಎಸ್‌ಐ ಸುರೇಶ್ ಕುಮಾರ್, ಸಂಚಾರಿ ಠಾಣೆಯ ಪಿಎಸ್‌ಐ ಪ್ರದೀಪ್ ಸೇರಿದಂತೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. 

ಜಾಥಾವು ನಗರದ ತಹಶೀಲ್ದಾರರ ಕಚೇರಿಯಿಂದ ನೂತನ ಬಸ್ ನಿಲ್ದಾಣದ ವರೆಗೆ ತೆರಳಿತು. 


ಗುರುವಾರ, ಜನವರಿ 28, 2021

 ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ.ಜ.28 (ಕ.ವಾ):- ಸುರಪುರ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ನಿವೇಶನ ರಹಿತ ಅರ್ಜಿದಾರ ರಿಂದ ಅರ್ಜಿಯನ್ನು ಆಹ್ವಾನಸಲಾಗಿದೆ. ಆಸಕ್ತರು ಪ್ರಕಟಣೆ ಹೊರಡಿಸಿದ 7 ದಿನಗಳ ಒಳಗಾಗಿ ಆದಾಯ, ಅಧಾರ ಕಾರ್ಡ್, ರೇಷನ್ ಕಾರ್ಡ್, ವಾಸಸ್ಥಳ ಪ್ರಮಾಣ ಹಾಗೂ ಮೂರು ಭಾವ ಚಿತ್ರ ಹಾಗೂ ವಿದ್ಯುತ್ ಬಿಲ್ಲು ಪಾವತಿಸಿದ ರಶೀದಿ ಮತ್ತು 20 ರೂ. ಛಾಪಾ ಕಾಗದದ ಮೇಲೆ ನಿವೇಶನ ಇಲ್ಲದಿರುವ ಬಗ್ಗೆ ಕೋರ್ಟ್ ನೋಟರಿದೊಂದಿಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಸುರಪುರ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ವಾಡಿ - ಗದಗ ರೈಲ್ವೆ ಯೋಜನೆ

ಸ್ವಾಧೀನಪಡಿಸಿದ ಹೆಚ್ಚುವರಿ ಜಮೀನಿಗೆ ಬೆಲೆ ನಿಗದಿಗೊಳಿಸಿದ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ


ಯಾದಗಿರಿ.ಜ.28 (ಕ.ವಾ):- ವಾಡಿ-ಗದಗ ರೈಲ್ವೆ ಯೋಜನೆಗಾಗಿ ಸುರಪುರ ಹಾಗೂ ಶಹಾಪೂರ ತಾಲ್ಲೂಕಿನ ಹಳಿಗಳಲ್ಲಿ ಸ್ವಾಧೀನಪಡಿಸಿದ ಹೆಚ್ಚುವರಿ ಜಮೀನಿಗೆ ಭೂ ಬೆಲೆಯನ್ನು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್ ಅವರು ನಿಗದಿಗೊಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜ.28 ರ ಗುರುವಾರ ನಡೆದ ವಾಡಿ-ಗದಗ ರೈಲ್ವೆ ಯೋಜನೆಗಾಗಿ ಸ್ವಾಧೀನಪಡಿಸಿದ ಜಮೀನಿಗಳಿಗೆ ಭೂಬೆಲೆ ನಿರ್ಧರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸುರಪುರ ತಾಲ್ಲೂಕಿನ ವಿವಿಧ ಹಳ್ಳಿಗಳ 14.28 ಎಕರೆ ಹಾಗೂ ಶಹಾಪೂರ ತಾಲ್ಲೂಕಿನ 8.35 ಎಕರೆ ಹೆಚ್ಚುವರಿ ಜಮೀನಿಗೆ ಬೆಲೆ ನಿಗಧಿಗಿರುವ ಮಾರ್ಗಸೂಚಿಗಳನ್ನು ಬಳಸಿಕೊಂಡು ಬೆಲೆಯನ್ನು ನಿಗಧಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು. ಬೆಲೆಗಳ ಬಗ್ಗೆ ಜಮೀನಿನ ಮಾಲೀಕರು(ರೈತರು) ಕೇಳಿದ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿಗಳು ಸ್ವವಿಸ್ತಾರವಾಗಿ ವಿವರಿಸಿದರು.
ಇದೇ ಸಂದರ್ಭದಲ್ಲಿ ಭೂಸ್ವಾಧೀನ ಅಧಿಕಾರಿಯಾದ ಶರಣಪ್ಪ, ರೈಲ್ವೆ ಅಧಿಕಾರಿಗಳು ಸೇರಿದಂತೆ ರೈತರು ಶಹಾಪೂರ ಮತ್ತು ಸುರಪುರ ತಾಲ್ಲೂಕಿನ ಅಧಿಕಾರಿಗಳಿದ್ದರು.
Image may contain: 1 person, sitting, table and indoor

 ರಾಷ್ಟಿçÃಯ ಹೆಣ್ಣು ಮಕ್ಕಳ ದಿನ ಆಚರಣೆ

ಗುರುಗಳಿಂದ ಗುರಿ ಸಾಧಿಸಿ:ಯಡಿಯಾಪೂರ

ಯಾದಗಿರಿ.ಜ.28 (ಕ.ವಾ):- ಗುರುಗಳ ಸಹಾಯದಿಂದ ನಿಮ್ಮ ಗುರಿಗಳನ್ನು ಸಾಧಿಸಿ ದೊಡ್ಡ ಮಟ್ಟದ ಅಧಿಕಾರಿಗಳಾಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜ.28 ರ ಗುರುವಾರ ದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಿಕಾ ಟಾಟಾ ಟ್ರಸ್ಟ್, ಅಜೀಮ್ ಪ್ರೇಮ್‌ಜೀ, ಮಕ್ಕಳ ಸಹಾಯವಾಣಿ, ಡಾನ್ ಬೋಸ್ಕೋ ಸೇವಾ ಸಂಸ್ಥೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಪ್ರತಿಭಾನ್ವಿತ ಬಾಲಕಿಯರಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಹನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯು ಮಹಿಳೆಯರು ಮುಂದಿದ್ದಾರೆ. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಸಹ ಬಾಲಕಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ನೀವು ಕೂಡಾ ಭವಿಷ್ಯದಲ್ಲಿ ದೊಡ್ಡ ಅಧಿಕಾರಿಗಳಾಗಬೇಕೆಂದು ಸಂಕಲ್ಪ ಮಾಡಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಶಿಲ್ಪಾ ಶರ್ಮಾ ಅವರು, ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸಮಾಜದಲ್ಲಿ ಹೆಣ್ಣಿನ ಅಸಮಾನತೆ ಹೋಗಲಾಡಿಸಲು ಜ.24-2015 ರಿಂದ ಆಚರಿಸುತ್ತಾ ಬರಲಾಗುತ್ತಿದೆ ಎಂದು ತಿಳಿಸಿದರು.
ಜಿ.ಪಂ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಪ್ರಸ್ತಾವಿಕ ನುಡಿಗಳಾಡಿದರು. ಎಲ್ಲ ಹೆಣ್ಣು ಮಕ್ಕಳ ಪ್ರತಿನಿಧಿಯಾಗಿ ಕಾರ್ಯಕ್ರಮದ ಮುಖ್ಯ ಅತಿಥಿ ಯಾಗಿ ಭಾಗವಹಿಸದ ವಿದ್ಯಾರ್ಥಿನಿ ಶಿಲ್ಪಾ ನಿಂಗಣ್ಣ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯಾದ ಮುಕ್ಕಣ್ಣ ಕಾರಿಗಾರ, ಸಿದ್ದರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು.
Image may contain: 3 people, indoor, text that says 'AzimPremju OCIN Û KKalike ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಣೆ, ಸಾರ್ವಜನಿಕ ಶಿಕ್ಷಣ ಇಲಾಣೆ, ಟಾಟಾ ಬ್ರಸ್ಟ್, ಅಜೀಮ್ ಪ್ರೇಮ್ಜೀ, ಮಕ್ಕಳ ಸಹಾಯವಾಣಿ, ಡಾನ್ ಬೋಸೋ ಸೇವಾ ಸಂಸ್ಥೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ಯಯುಕ್ತಾತ್ರಯದಲ್ಲಿ "ರಾಷ್ಟ್ರೀಯ ಪ್ರತಿಭಾನ್ವಿತ ಅಂಗವಾಗಿ ಅಧಿಕಾರಿಗಳೊಂದಿಗೆ ಸಭಾಂಗಣ, ಯಾದಗಿರಿ'

 ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ದತ್ತಾತ್ರೆಯ ಪಾಟೀಲ್ ಸೂಚನೆ

ಯಾದಗಿರಿ.ಜ.28 (ಕ.ವಾ):- ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೆಯ ಪಾಟೀಲ್ ರೇವೂರು ಅವರು ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜ.27 ರ ಬುಧುವಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಶಹಾಪೂರ ನಗರದಲ್ಲಿ ಕೈಗೊಂಡಿರುವ ವಿವಿಧ ವಾರ್ಡ್ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಮತ್ತು ಯಾದಗಿರಿ ನಗರದ ಚಿತ್ತಾಪೂರ ಮುಖ್ಯ ರಸ್ತೆ ಓಊ-150 ಯಿಂದ ಙIಒS ಕಾಲೇಜಿನ ವರೆಗೆ ರಸ್ತೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸುರಪುರ ಮತ್ತು ಕೆಂಭಾವಿ ನಗರಗಳಿಗೆ ಸಂಬAಧಿಸಿದAತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಗೆ ವಹಿಸಿಲಾದ ಶುದ್ಧ ಕುಡಿಯುವ ನೀರಿನ ಪೂರೈಕೆಗಾಗಿ ಒಟ್ಟು 6 ಕಾಮಗಾರಿಗಳನ್ನು ವಹಿಸಲಾಗಿದೆ ಅವುಗಳನ್ನು ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಕಲಬುರಗಿ ಹಾಗೂ ಲೋಕೋಪಯೋಗಿ ಇಲಾಖೆ ಯಾದಗಿರಿ ಇವರಿಗೆ ವಹಿಸಲಾದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ತಿಳಿಸಿದರು.
ಆರ್ಥಿಕ ವರ್ಷ ಮುಕ್ತಾಯಗೊಳ್ಳುತ್ತಿರುವದರಿಂದ ಇನ್ನೂ ಪ್ರಾರಂಭವಾಗದೆ ಇರುವ 42 ಕಮಗಾರಿಗಳನ್ನು ಕೂಡಲೇ ಪ್ರಾರಂಭಿಸಲು ಕಾರ್ಯನಿರ್ವಾಹಕ ಇಂಜಿನಿಯರ್ ಪಂಚಾಯತ್ ರಾಜ್ ಇಲಾಖೆ ಇವರಿಗೆ ಸೂಚಿಸಿದರು. ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ, ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಲು ತಿಳಿಸಿದರು.
ನಿರ್ಮಿತಿ ಕೇಂದ್ರ ರವರಿಗೆ ವಹಿಸಲಾದ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ ಯಾದಗಿರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಯಾದಗಿರಿ ಮತ್ತು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಮಂಡಳಿ ರವರಿಗೆ ವಹಿಸಲಾದ ಕಾಮಗಾರಿಗಳನ್ನು ತ್ವರಿತವಾಗಿ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದ ಅವರು ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬವಾಗದೆ ನಿಗಧಿತ ಅವಧಿಯೊಳಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕರು ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ನರಸಿಂಹ ನಾಯಕ (ರಾಜುಗೌಡ), ಶಾಸಕರಾದ ವೆಂಕಟರೆಡ್ಡಿ ಗೌಡ ಮುದ್ನಾಳ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪುರ, ಉಪಾಧ್ಯಕ್ಷರಾದ ಗಿರಿಜಮ್ಮ ರೊಟ್ನಡಗಿ, ಕೆ.ಕೆ.ಆರ್.ಡಿ.ಬಿ ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿಯಾದ ಡಾ.ರಾಗಪ್ರಿಯಾ ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಯಾದ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಯಾದ ಪ್ರಕಾಶ ಜಿ.ರಜಪೂತ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾದ ಮುಕ್ಕಣ್ಣ ಕಾರಿಗಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
Image may contain: 4 people

ಸೋಮವಾರ, ಜನವರಿ 25, 2021

 


ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಸಾರ್ವಜನಿಕರ ಕಷ್ಟಗಳಿಗೆ ಪ್ರಮಾಣಿಕವಾಗಿ ಸ್ಪಂದಿಸಿ ಅಧಿಕಾರಿಗಳಿಗೆ ಕಿವಿಮಾತು




ಯಾದಗಿರಿ.ಜ.26 (ಕ.ವಾ):-  ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ 72ನೆ ಗಣರಾಜ್ಯೋತ್ಸವದ ನಿಮಿತ್ಯ ಜಿಲ್ಲಾಧಿಕಾರಿಗಳಾದ ಡಾ .ರಾಗಪ್ರಿಯಾ ಆರ್ ಅವರು ಜ.26ರ ಮಂಗಳವಾರ ದಂದು ಧ್ವಜಾರೋಹಣ ನೆರವೇರಿಸಿದರು.


ನಂತರ ಮಾತನಾಡಿದ ಅವರು , ಜ.26 1950ರಂದು ಭಾರತ ದೇಶ ಗಣರಾಜ್ಯವಾಯಿತು ಅದರ ಸವಿನೆನಪಿಗಾಗಿ ನಾವು ಇಂದು ಗಣರಾಜ್ಯೋತ್ಸವ ದಿನಾಚರಣೆಯಾಗಿ ಬಹಳ ಅರ್ಥಪೂರ್ಣವಾಗಿ ಆಚರಿಸಿತ್ತಾ ಬಂದಿದ್ದೇವೆ ಎಂದರು. ಸಾರ್ವಜನಿಕರ ಕಷ್ಟಗಳಿಗೆ ನಾವು (ಅಧಿಕಾರಿಗಳು) ಪ್ರಮಾಣಿಕವಾಗಿ ಸ್ಪಂದಿಸದರೆ ಮಾತ್ರ ನಮ್ಮ ಮೇಲೆ ಜನರಿಗೂ ಗೌರವ ಬರುತ್ತದೆ ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.


ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತ ದೇಶದ ಲಿಖಿತ ಸಂವಿದಾನವನ್ನು ರಚಿಸಿ 1949ರ ನ.26ರಂದು ಅಂಗೀಕರಿಸಲಾಗಿದೆ ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಕಳೆದ ತಿಂಗಳು ಜರುಗಿದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ, ಚುನಾವಣಾ ಆಯೋಗ ಸೇರಿದಂತೆ ಇತರ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.


ಸಾರ್ವಜನಿಕರ ಕಷ್ಟಗಳಿಗೆ ನಾವು (ಅಧಿಕಾರಿಗಳು) ಪ್ರಮಾಣಿಕವಾಗಿ ಸ್ಪಂದಿಸದರೆ ಮಾತ್ರ ನಮ್ಮ ಮೇಲೆ ಜನರಿಗೂ ಗೌರವ ಬರುತ್ತದೆ ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಯಾದ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿ.ಪಂ ಉಪಕಾರ್ಯದರ್ಶಿಯಾದ ಮುಕ್ಕಣ್ಣ ಕರಿಗಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


 ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ, ರಾಷ್ಟç ಧ್ವಜಾರೋಹಣ ನೆರೆವೇರಿಸಿ ಗೌರವ ಸ್ವೀಕರ                                            ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ; ಸಚಿವ ಮುರುಗೇಶ ಆರ್. ನಿರಾಣಿ

ಯಾದಗಿರಿ.ಜ.26 (ಕ.ವಾ):- ನಗರದ ಸರಕಾರಿ ಪದವಿ




ಪೂರ್ವ ಕಾಲೇಜ್ ಮೈದಾನದಲ್ಲಿ ಜನವರಿ 26 ರ ಮಂಗಳವಾರ ದಂದು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ 72 ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಮುರುಗೇಶ ಆರ್.ನಿರಾಣಿ ಅವರು ರಾಷ್ಟç ಧ್ವಜಾರೋಹಣ ನೆರವೇರಿಸಿ. ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು.
ಅವರು ಸಂದೇಶ ಇಂತಿದೆ.

• ಆತ್ಮೀಯ ಸಂಸದರೇ, ಜಿಲ್ಲೆಯ ವಿಧಾನಸಭಾ ಮತ್ತು ವಿಧಾನ ಪರಿಷತ್ತಿನ ಶಾಸಕ ಮೀತ್ರರೇ, ಸರ್ಕಾರದ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರುಗಳೇ, ಜಿಲ್ಲಾ ಪಂಚಾಯತ್ ಅಧ್ಯಕ್ಷರೇ, ಉಪಾಧ್ಯಕ್ಷರೇ ಮತ್ತು ಸದಸ್ಯರುಗಳೇ, ಜಿಲ್ಲಾಧಿಕಾರಿಯವರೇ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ, ಇತರೆ ಅಧಿಕಾರಿ ಮಿತ್ರರೇ, ನೌಕರ ಬಾಂಧವರೇ, ಶಿಕ್ಷಕ- ಶಿಕ್ಷಕಿಯರೇ, ಸುದ್ದಿ ಮಾಧ್ಯಮದ ಬಂಧುಗಳೇ ಹಾಗೂ ನೆರೆದಿರುವ ಎಲ್ಲ ದೇಶಾಭಿಮಾನಿಗಳೇ ತಮ್ಮೆಲ್ಲರಿಗೂ 72ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

• ಬಂಧುಗಳೇ, ಬಹು ಭಾಷೆ, ಸಂಸ್ಕೃತಿಯ ಸಮ್ಮಿಲನದ ಯಾದಗಿರಿಯ ಜನ ಭಾವೈಕ್ಯತೆಯ ಪ್ರತೀಕವಾಗಿದ್ದಾರೆ. ಕಲ್ಯಾಣ ಕರ್ನಾಟಕ ಪ್ರಮುಖ ಅಂಗವಾದ ಯಾದಗಿರಿ ಕರ್ನಾಟಕದ ಅಸ್ಮಿತೆಯ ಸಂಕೇತವಾಗಿದೆ.
• ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟç. ನಮ್ಮ ಸಂವಿಧಾನದ ಆಶಯವು ಇಡೀ ಜಗತ್ತಿಗೆ ಮಾದರಿಯಾಗಿದೆ. ಆ ಕಾರಣದಿಂದಾಗಿಯೇ ವಿಭಿನ್ನ ವೇಷಭೂಷಣ, ಭಾಷೆ, ಜೀವನ ಶೈಲಿಯನ್ನು ಹೊಂದಿರುವ ಅಸಂಖ್ಯಾತ ಸಮುದಾಯಗಳಿದ್ದರೂ ಏಕತೆಯನ್ನು ಸಾಧಿಸಲು ಸಾಧ್ಯವಾಗಿದೆ. ನಮ್ಮ ದೇಶದ ಕಾರ್ಯಾಂಗ, ನ್ಯಾಯಾಂಗ ಹಾಗೂ ಶಾಸಕಾಂಗ ವ್ಯವಸ್ಥೆಯೂ ದೇಶದ ಪ್ರತಿಯೊಬ್ಬರಿಗೂ ಭದ್ರತೆ ಹಾಗೂ ಸಮಾನ ಅವಕಾಶಗಳನ್ನು ನೀಡಿವೆ. ಅದ್ದರಿಂದ ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಎಲ್ಲ ದೇಶವಾಸಿಗಳು ಋಣಿಯಾಗಿರಬೇಕು.

• ಸ್ವಾತಂತ್ರö್ಯ ದೊರೆತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾವು ರೂಪಿಸಿಕೊಂಡು 7 ದಶಕಗಳು ಕಳೆದಿವೆ. ಈ ನಿಟ್ಟಿನಲ್ಲಿ ನಡೆದು ಬಂದ ದಾರಿ ಸಾಧಿಸಿದ ಪ್ರಗತಿಯಲ್ಲಿ ಹಲವಾರು ಏರಿಳಿತಗಳನ್ನು ಕಂಡಿದ್ದೇವೆ.
• ನಮ್ಮ ಹೆಮ್ಮೆಯ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರ ನೇತೃತ್ವದಲ್ಲಿ ಇಡೀ ದೇಶವೇ ಆತ್ಮನಿರ್ಭರ ಭಾರತದತ್ತ ಹೆಜ್ಜೆ ಇಟ್ಟಿದೆ. ಸ್ವಾವಲಂಬನೆಯ ಬದುಕನ್ನು ಸಾಕಾರಗೊಳಿಸುವ ನಿಟ್ಟನಿಲ್ಲಿ ಆತ್ಮ ನಿರ್ಭರ ಭಾರತ ಕಟ್ಟುವ ಕಾಯಕದಲ್ಲಿ ಪ್ರತಿಯೊಬ್ಬ ದೇಶವಾಸಿಯದ್ದು ಪಾಲಿದೆ.
• ಆತ್ಮನಿರ್ಭರ ಭಾರತ ಕಟ್ಟುವ ಕಾಯಕ ನಮ್ಮ ಮನೆಯಿಂದ ಪ್ರಾರಂಭವಾಗಿ ನಮ್ಮ ಊರು, ನಮ್ಮ ತಾಲೂಕು, ಜಿಲ್ಲೆ ರಾಜ್ಯ ಹಾಗೂ ಕೊನೆಗೆ ರಾಷ್ಟç ಮಟ್ಟದಲ್ಲಿ ಕೊನೆಗೊಳ್ಳಬೇಕು. ಜಗತ್ತಿನ ಅತಿಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ನಮಗೆ ಜನಸಂಖ್ಯೆ ಶಾಪವಲ್ಲ. ಒಟ್ಟು ಜನಸಂಖ್ಯೆಯನ್ನು ಶ್ರೇಷ್ಟ ಮಾನವ ಸಂಪನ್ಮೂಲವಾಗಿ ಪರಿವರ್ತಿಸಿಕೊಳ್ಳುವ ವಿಫುಲ ಅವಕಾಶಗಳಿವೆ. ಅತಿಹೆಚ್ಚು ಇಂಜಿನಿಯರ್‌ಗಳು, ತಂತ್ರಜ್ಞರು, ವೈದ್ಯರು, ಪದವಿಧರರನ್ನು ಹೊಂದಿರುವ ರಾಷ್ಟç ನಮ್ಮದು.
• ದೇಶದ ಶೇ.70 ರಷ್ಟು ಜನಸಂಖ್ಯೆ 40 ವರ್ಷದ ಕೆಳಗಿನವರಾಗಿದ್ದು, ಯುವ ಭಾರತವನ್ನು ಕಟ್ಟಲು ಇದು ಸಕಾಲವಾಗಿದೆ. ಭಾರತೀಯರ ಜ್ಞಾನ ಹಾಗೂ ಬುದ್ದಿಶಕ್ತಿಗೆ ಅಂತರಾಷ್ಟಿçÃಯ ಮಾನ್ಯತೆಯಿದೆ. ಪ್ರತಿಭಾ ಪಲಾಯನವನ್ನು ತಪ್ಪಿಸಿ ಭಾರತದಲ್ಲಿಯೇ ನಮ್ಮ ಯುವಕ-ಯುವತಿಯರಿಗೆ ಅವಕಾಶಗಳನ್ನು ಸೃಷ್ಟಿಸಿಕೊಡುವುದು ಆ ಮೂಲಕ ಆತ್ಮನಿರ್ಭರ ಭಾರತ ನಿರ್ಮಿಸುವುದು ಮೋದಿಜಿಯವರ ಮಹತ್ವಾಕಾಂಕ್ಷೆಯಾಗಿದೆ.
• ಕರ್ನಾಟಕದ ಗಣಿ ಸಂಪತ್ತನ್ನು ವ್ಯವಸ್ಥಿತವಾಗಿ, ಕಾನೂನುಬದ್ದವಾಗಿ ಬಳಕೆ ಮಾಡಿಕೊಳ್ಳುವುದರ ಜೊತೆಗೆ ಮುಂದಿನ ಪೀಳಿಗೆಗೆ ಸಂಪತ್ತನ್ನು ಸುರಕ್ಷಿತವಾಗಿ ಕಾಪಾಡಿಕೊಡುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡುವುದಿಲ್ಲ. ಗಣಿಗಾರಿಕೆಯಲ್ಲಿ ತೊಡಗಿಕೊಂಡ ಕಾರ್ಮಿಕರ ಹಿತ ಮತ್ತು ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಯಾವುದೇ ಅಹಿತಕರ ಘಟನೆಗೆ ನಡೆಯಲು ಅವಕಾಶ ನೀಡದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಲಾಖೆಯ ಮೂಲಕ ನಿರ್ದೇಶನ ನೀಡಲಾಗಿದೆ.
• ಭಾರತ ವಿಶ್ವದ ಅತಿದೊಡ್ಡ ಫಲವತ್ತಾದ ಭೂಮಿಯನ್ನು ಹೊಂದಿದೆ. ನಮ್ಮ ಮಣ್ಣು ಮತ್ತು ನೀರಿಗೆ ಜಗತ್ತಿಗೆ ಅನ್ನವನ್ನು ನೀಡುವ ದಿವ್ಯ ಶಕ್ತಿ ಇದೆ. ತಾಯಿ ಭಾರತೀ ನಮ್ಮನ್ನು ಸೇರಿದಂತೆ ವಿಶ್ವವನ್ನು ಸಲಹುವ ಅನ್ನಪೂರ್ಣೆಶ್ವರಿ. ಈ ನಿಟ್ಟಿನಲ್ಲಿ ಯುವಕರು ಕೃಷಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳಬೇಕು. ಕೃಷಿ ಒಂದು ಪಾರಂಪರಿಕೆ ಉದ್ಯೋಗವಾಗದೇ ಒಂದು ಲಾಭದಾಯಕ ಉದ್ಯಮವಾಗಿ ಪರಿವರ್ತನೆಗೊಳ್ಳಬೇಕು. ಕೃಷಿಯನ್ನು ಒಂದು ಪ್ರೋಫೇಶನ್ ಎನ್ನುವ ನಿಟ್ಟಿನಲ್ಲಿ ಕೃಷಿಯನ್ನು ಅಭಿವೃದ್ದಿಗೊಳಿಸಬೇಕು. ಕೃಷಿಗೆ ಸ್ಥಳೀಯ ಮಟ್ಟದಲ್ಲಿಯೆ ಮಾರುಕಟ್ಟೆ ಕಲ್ಪಿಸುವುದು. ಕೃಷಿ ಉತ್ಪನಗಳ ಮೌಲ್ಯವರ್ಧನೆ ಮಾಡುವುದು ಆತ್ಮನಿರ್ಭರ ಭಾರತದ ಮೊದಲ ಹೆಜ್ಜೆಯಾಗಿದೆ.
• ರೈತರ ಆದಾಯವನ್ನು ದ್ವಿಗುಣಗೊಳಿಸುವುದು ನಮ್ಮ ಕೇಂದ್ರ ಸರ್ಕಾರದ ಬಹುಮುಖ್ಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಕೃಷಿ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದೆ. ರೈತರ ಬೆವರಿಗೆ ಪೂರ್ಣಫಲವನ್ನು ನೀಡುವುದು. ಅವನು ಬೆಳೆದ ಫಸಲಿನ ಪೂರ್ಣ ಲಾಭವನ್ನು ರೈತರಿಗೆ ದೊರೆಯುವಂತೆ ಮಾಡುವುದು ಕೇಂದ್ರ ಸರ್ಕಾರದ ಮುಖ್ಯ ಗುರಿಯಾಗಿದೆ.
• ಕೊವಿಡ್-19 ಸಂಕ್ರಮಣ ಕಾಲದಲ್ಲಿ ಭಾರತ ಅನುಸರಿಸಿದ ನೀತಿಗಳು, ತೆಗೆದುಕೊಂಡ ನಿರ್ಧಾರಗಳು, ಜಗತ್ತಿನಲ್ಲಿ ಭಾರತದ ವರ್ಚಸ್ಸನ್ನು ಹೆಚ್ಚಿಸಿವೆ. ನಮ್ಮ ಪ್ರತಿಭಾವಂತ ವಿಜ್ಞಾನಿಗಳ ಸಂಶೋಧನೆಗೆ ಸಲಾಂ. ಇಡೀ ದೇಶವೇ ಕೊರೊನಾದಿಂದ ತತ್ತರಿಸಿದ ಸಮಯದಲ್ಲಿ ದೃತಿಗೆಡದೇ, ಸತತ ಪರಿಶ್ರಮ ಪಟ್ಟು ಲಸಿಕೆಯನ್ನು ಸಿದ್ದಪಡಿಸಿದ್ದು, ಕೊವ್ಯಕ್ಸಿನ್ ಮತ್ತು ಕೊವಿಶಿಲ್ಡ್ ಲಸಿಕೆಗಳಿಗೆ ಅಂತರಾಷ್ಟಿçÃಯ ಮಾನ್ಯತೆ ಹಾಗೂ ಬೇಡಿಕೆ ದೊರಕಿದ್ದು ಭಾರತೀಯರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಎಲ್ಲ ದೇಶವಾಸಿಗಳ ಪರವಾಗಿ ಅವಿರತವಾಗಿ ಶ್ರಮ ಪಟ್ಟ ಎಲ್ಲರಿಗೂ ವಂದನೆ ಅಭಿನಂದನೆಗಳು.
• ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪರವರ ನೇತೃತ್ವದ ರಾಜ್ಯ ಸರ್ಕಾರ ಕೃಷಿ, ಉದ್ಯೋಗ, ನೀರಾವರಿ, ಶಿಕ್ಷಣ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಲು ಅಗತ್ಯ ಕ್ರಮ ಕೈಗೊಂಡಿದೆ. ಕನ್ನಡ ನಾಡಿನ ಕುರಿತು ಯಡಿಯೂರಪ್ಪರವರ ಕಾಳಜಿ ಅನನ್ಯವಾಗಿದೆ. ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ರಾಜ್ಯ ಬಿಜೆಪಿ ಸರ್ಕಾರ ಬದ್ದವಾಗಿದೆ. ಜಿಲ್ಲೆಯಲ್ಲಿ ನೀರಾವರಿ ಹಾಗೂ ಕೈಗಾರಿಕೆಗಳ ನಿರ್ಮಾಣ ಮೂಲಕ ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ.

ಯಾದಗಿರಿ ಜಿಲ್ಲೆ ಅಭಿವೃದ್ದಿಯ ಪಕ್ಷಿನೋಟ.
ಒಕ್ಕೂಟ ವ್ಯವಸ್ಥೆಯ ಆಶಯದಂತೆ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ನೇತೃತ್ವದ ನಮ್ಮ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಇದರ ಪ್ರತಿಫಲವು ಯಾದಗಿರಿ ಸೇರಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ದೊರೆಯುತ್ತಿದೆ. ನಮ್ಮ ರಾಜ್ಯ ಸರ್ಕಾರವೂ ಈ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹಲವಾರು ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ.
• ಮಹತ್ವಾಕಾಂಕ್ಷಿ ಜಿಲ್ಲೆ:
ಯಾದಗಿರಿ ಜಿಲ್ಲೆಯು ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ಆಯ್ಕೆಯಾಗಿದ್ದು, ನವೆಂಬರ್ 2020ರಲ್ಲಿ ನೀತಿ ಆಯೋಗ ನಿಗದಿಪಡಿಸಿರುವ ಎಲ್ಲಾ ಸೂಚ್ಯಂಕಗಳ ಪ್ರಗತಿಯಲ್ಲಿ ಯಾದಗಿರಿ ಜಿಲ್ಲೆಯು ದೇಶದಲ್ಲಿಯೇ 2 ನೇ ಸ್ಥಾನ ಪಡೆದುಕೊಂಡಿರುವುದರಿAದ, ನೀತಿ ಆಯೋಗವು ಜಿಲ್ಲೆಗೆ 2 ಕೋಟಿ ಅನುದಾನವನ್ನು ಹಂಚಿಕೆ ಮಾಡಿದ್ದು ಹೆಮ್ಮೆಯ ವಿಷಯವಾಗಿದೆ.
• ಪ್ರವಾಹ ಹಾಗೂ ಪರಿಹಾರ:
2020 ರ ಆಗಸ್ಟ್, ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹ ದಿಂದಾಗಿ ಬೆಳೆಹಾನಿ ಅನುಭವಿಸಿದ್ದ 39,355 ಫಲಾನುಭವಿಗಳಿಗೆ 23.62 ಕೋಟಿ ರೂಪಾಯಿ ಪರಿಹಾರವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ, ಇನ್ನುಳಿದ 31,175 ಫಲಾನುಭವಿಗಳಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಮಳೆಯಿಂದ ಮನೆ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ನೀಡಲು ರಾಜೀವ್ ಗಾಂಧಿ ವಸತಿ ನಿಗಮಕ್ಕೆ 4.97 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಹಾನಿಯಾಗಿರುವ ’ಬಿ’ ಮತ್ತು ‘ಸಿ’ ವರ್ಗದ ಮನೆಗಳಿಗೆ ನೇರವಾಗಿ ನೆರೆ ಸಂತ್ರಸ್ತರ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ.
ಜಿಲ್ಲೆಯಲ್ಲಿ ಮಳೆ & ಪ್ರವಾಹದಿಂದ ಹಾನಿಯಾದ ಮೂಲಭೂತ ಸೌಕರ್ಯಗಳ ದುರಸ್ತಿಗಾಗಿ 10.07 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ದುರಸ್ತಿ ಕಾರ್ಯಗಳು ಪ್ರಗತಿಯಲ್ಲಿವೆ.
• ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಕೋವಿಡ್-19 ಸೋಂಕು ಇಡೀ ವಿಶ್ವವನ್ನು ತಲ್ಲಣಗೊಳಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಜನಸಾಮಾನ್ಯರ ನೆರವಿಗೆ ಈ ತುರ್ತು ಪರಿಸ್ಥಿತಿಯಲ್ಲಿ ಸ್ಪಂದಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪ್ರಯತ್ನದ ಫಲಶೃತಿಯಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿರುವುದು ಸಂತೋಷದ ಸಂಗತಿಯಾಗಿದೆ.

ಇದೇ ಜನವರಿ 6ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ. ಬಿ.ಎಸ್. ಯಡಿಯೂರಪ್ಪ ಅವರು ಯಾದಗಿರಿಗೆ ಆಗಮಿಸಿ, ಮುದ್ನಾಳ್ ಗ್ರಾಮದಲ್ಲಿ ಅಂದಾಜು ಮೊತ್ತ 438.75 ಕೋಟಿ ರೂ.ಗಳ ನೂತನ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದು ಈ ಭಾಗದ ಆರೋಗ್ಯ ಕ್ಷೇತ್ರದ ಅಭಿವೃದ್ದಿಗೆ ಹೊಸ ಚೈತನ್ಯ ದೊರಕಿದಂತಾಗಿದೆ. ಅದರೊಡನೆ ಕೋವಿಡ್-19 ಎದುರಿಸಲು ಜಿಲ್ಲೆಯಲ್ಲಿ ಸುಸಜ್ಜಿತವಾದ 300 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆಯನ್ನು ಅಂದು ಲೋಕಾರ್ಪಣೆ ಮಾಡಿದರು. ಇದರಿಂದಾಗಿ ಬಡ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಲಭಿಸುತ್ತಿದೆ.

ಕೊವಿಡ್ ಲಸಿಕೆಯು ಸಾಕಷ್ಟು ಪ್ರಮಾಣದಲ್ಲಿ ದೊರೆಯುವಂತೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಗೆ ಈಗಾಗಲೇ 3 ಸಾವಿರ ಡೋಸ್ ಲಸಿಕೆ ಬಂದಿದ್ದು, ಲಸಿಕೆ ನೀಡುವ ಕಾರ್ಯ ಭರದಿಂದ ಸಾಗಿರುವುದು ನೆಮ್ಮದಿಯ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಈ ಲಸಿಕೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ವೈದ್ಯರು, ಸ್ಟಾಫ್‌ನರ್ಸ್ಗಳು, ಗ್ರೂಪ್-ಡಿ ಸಿಬ್ಬಂದಿ ಸೇರಿದಂತೆ 5,300 ಆರೋಗ್ಯ ಕಾರ್ಯಕರ್ತರನ್ನು ಲಸಿಕೆಗಾಗಿ ಗುರುತಿಸಲಾಗಿದೆ. ಅವರೆಲ್ಲರಿಗೂ ಹಂತಹAತವಾಗಿ ಲಸಿಕೆ ನೀಡಲಾಗುತ್ತಿದೆ.

ಗುಣಮುಖರಾದವರ ಸಂಖ್ಯೆ ಅಧಿಕ
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19ನ ಸೋಂಕು ಹಿನ್ನೆಲೆಯಲ್ಲಿ 2,14,147 ಮಂದಿಯ ಸ್ಯಾಂಪಲ್ ಸಂಗ್ರಹಿಸಲಾಗಿದೆ. ಅವುಗಳಲ್ಲಿ 10,649 ಪಾಸಿಟಿವ್ ವರದಿಯಾಗಿದೆ, 10,568 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆರೋಗ್ಯವಂತರಾಗಿದ್ದಾರೆ.

• ಕಂದಾಯ ಇಲಾಖೆ:
ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ
ಜಿಲ್ಲೆಯಲ್ಲಿ ಒಟ್ಟು 1,43,843 ಫಲಾನುಭವಿಗಳಿಗೆ ಪ್ರತಿ ತಿಂಗಳು ಪಿಂಚಣಿ ನೀಡಲಾಗುತ್ತಿದೆ.
• ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ:
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ ಜಿಲ್ಲೆಗೆ 2013-14 ಸಾಲಿನಿಂದ 2019-20 ಸಾಲಿನವರಗೆ ಒಟ್ಟು 707.52 ಕೋಟಿ ರೂ.ಗಳು ಅನುದಾನ ದೊರೆತಿದ್ದು, ಅದರಲ್ಲಿ 2,506 ಕಾಮಗಾರಿಗಳು ಮಂಜೂರಾಗಿದ್ದು, 2,130 ಕಾಮಗಾರಿಗಳು ಪೂರ್ಣಗೊಂಡಿರುತ್ತವೆ, ಅದಕ್ಕಾಗಿ ಒಟ್ಟು 513.42 ಕೋಟಿ ರೂ.ಗಳ ಅನುದಾನ ಭರಿಸಲಾಗಿದೆ.

• ಲೋಕೋಪಯೋಗಿ ಇಲಾಖೆ:
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ 424 ಕಿ.ಮೀ ರಾಜ್ಯ ಹೆದ್ದಾರಿ ಮತ್ತು 1,217 ಕಿ.ಮೀ. ಜಿಲ್ಲಾ ಮುಖ್ಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳ ನಿರ್ವಹಣೆಯನ್ನು ಕೈಗೊಳ್ಳಲಾಗುತ್ತಿದೆ. SಇP & ಖಿSP ಯೋಜನೆಯಡಿ ಒಟ್ಟು 40 ಕೋಟಿ ರೂ.ಗಳ ಅನುದಾನದಲ್ಲಿ 143 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, 27 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದದ್ದು ಪ್ರಗತಿಯಲ್ಲಿವೆ.
ನೆರೆ ಹಾವಳಿಯಿಂದ ಹಾನಿಯಾದ ಜಿಲ್ಲೆಯ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಸ್ತೆ, ಸೇತುವೆ ಮತ್ತು ಕಟ್ಟಡಗಳ ತುರ್ತು ದುರಸ್ತಿಗಾಗಿ ಒಟ್ಟು 99 ಕಾಮಗಾರಿಗಳನ್ನು 18 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ವಹಿಸಲಾಗುತ್ತಿದೆ. ಅವುಗಳಲ್ಲಿ 15 ಕಾಮಗಾರಿಗಳು ಪೂರ್ಣಗೊಂಡಿವೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಯೋಜನೆಯಡಿ ಒಟ್ಟು 513 ಕಾಮಗಾರಿಗಳನ್ನು 264 ಕೋಟಿ ರೂ.ಗಳ ಮೊತ್ತದಲ್ಲಿ ಕೈಗೊಂಡಿದ್ದು, 456 ಕಾಮಗಾರಿಗಳು ಪೂರ್ಣಗೊಂಡಿವೆ. ಅವುಗಳಿಗೆ ಒಟ್ಟು 178 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
2020-21ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 58.16 ಕೋಟಿ ರೂಪಾಯಿಗಳಲ್ಲಿ ಒಟ್ಟು 98 ಕಾಮಗಾರಿಗಳಿಗಾಗಿ ರೂಪಿಸಿದ ಕ್ರಿಯಾ ಯೋಜನೆ ಅನುಮೋದನೆಯಾಗಿದೆ.
• ನಗರಾಭಿವೃದ್ಧಿ ಇಲಾಖೆ
2020-21ನೇ ಸಾಲಿನ 15ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನದಡಿಯಲ್ಲಿ ರೂ. 19.53 ಕೋಟಿಗಳು ಹಂಚಿಕೆಯಾಗಿದ್ದು, ಅದರಲ್ಲಿ ರೂ. 9.76 ಕೋಟಿಗಳು ಬಿಡುಗಡೆಯಾಗಿದೆ. ಸದರಿ ಯೋಜನೆಯಡಿ 307 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.

2020-21ನೇ ಸಾಲಿನ Sಈಅ ಮುಕ್ತ ನಿಧಿ ಯೋಜನೆಯಡಿಯಲ್ಲಿ ರೂ. 3.91 ಕೋಟಿ ಹಂಚಿಕೆ ಆಗಿದ್ದು, ಇದರಲ್ಲಿ ರೂ. 2.24 ಕೋಟಿಗಳು ಬಿಡುಗಡಯಾಗಿದೆ. ಸದರಿ ಯೋಜನೆಯಡಿ 90 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಮಿಷನ್ (Sಃಒ) ಯೋಜನೆಯಡಿ ರೂ. 4.28 ಕೋಟಿ ಬಿಡುಗಡೆಯಾಗಿದ್ದು, ರೂ. 1.82 ಕೋಟಿ ಖರ್ಚು ಮಾಡಲಾಗಿದೆ.
• ಮಹತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ 32 ಲಕ್ಷ ಮಾನವ ದಿನಗಳ ಗುರಿಗಳನ್ನು ನಿಗಧಿಪಡಿಸಲಾಗಿದೆ. 2021 ರ ಜನವರಿ ಅಂತ್ಯದವರೆಗೆ 28.85 ಲಕ್ಷ ಮಾನವ ದಿನಗಳನ್ನು ಸೃಜಿಸಿ, 11,083 ಕೋಟಿ ರೂ.ಗಳ ಅನುದಾನ ಭರಿಸಲಾಗಿದೆ.
ವೈಯಕ್ತಿಕ ಕಾಮಗಾರಿಗಳ ಪೈಕಿ 4,571 ಇಂಗು ಗುಂಡಿಗಳು, 136 ಪೌಷ್ಠಿಕ ತೋಟಗಳು, 2,334 ಬದು ನಿರ್ಮಾಣ, 730 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ, 36 ಅಂಗನವಾಡಿ ಕೇಂದ್ರಗಳು, 20 ಶಾಲಾ ಕಾಂಪೌAಡ್, 16 ಸಂತೆಕಟ್ಟೆ ಹಾಗೂ ಆಟದ ಮೈದಾನಗಳ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
• ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ:
2020-21ನೇ ಸಾಲಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 155 ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಪ್ರತಿ ಮನೆಗಳಿಗೆ ನಳ ನೀರು ಸಂಪರ್ಕಕ್ಕಾಗಿ ಪ್ರಸಕ್ತ ಸಾಲಿನಲ್ಲಿ 237 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, 155 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ. 2020-21ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯ ಒಟ್ಟು 65,578 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕ ನೀಡುವ ಗುರಿ ಹೊಂದಲಾಗಿದೆ.


• ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ:
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಜಿಲ್ಲೆಯ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಮತ್ತು ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಪ್ರಸಕ್ತ ಸಾಲಿನಲ್ಲಿ ಸೇವಾ ಸಿಂಧು ವ್ಯಾಪ್ತಿಯಡಿ 5,231 ಅರ್ಜಿ ಸ್ವೀಕರಿಸಿ, 1,363 ಪಾಸುಗಳನ್ನು ವಿತರಿಸಲಾಗಿದೆ, 19 ವಿಕಲಚೇತರಿಗೆ ಪಾಸುಗಳನ್ನು ವಿತರಿಸಲಾಗಿದ್ದು, ಇನ್ನುಳಿದ ಪಾಸುಗಳ ವಿತರಣಾ ಕಾರ್ಯ ಪ್ರಗತಿಯಲ್ಲಿದೆ.
• ಪದವಿ ಪೂರ್ವ ಶಿಕ್ಷಣ ಇಲಾಖೆ:
2020-21ನೇ ಸಾಲಿಗೆ ಎರಡು ಹೊಸ ಪದವಿ ಪೂರ್ವ ಕಾಲೇಜುಗಳಿಗೆ ಮಂಜೂರಾತಿ ನೀಡಲಾಗಿದೆ. 51 ಉಪನ್ಯಾಸಕರನ್ನು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ನೇಮಕ ಮಾಡಿಕೊಳ್ಳಲಾಗಿದೆ. ಅತಿ ಹೆಚ್ಚು ಅಂಕ ಪಡೆದ 9 Sಅ/Sಖಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಗಿದೆ.
• ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ:
ಭಾಗ್ಯಲಕ್ಷ್ಮೀ ಯೋಜನೆಯಡಿ ಇದುವರೆಗೆ 62,984 ಫಲಾನುಭವಿಗಳಿಗೆ ಬಾಂಡ್‌ಗಳನ್ನು ವಿತರಿಸಲಾಗಿದೆ. ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ 2020-21ನೇ ಸಾಲಿನಲ್ಲಿ ಜಿಲ್ಲೆಯ 40,913 ಫಲಾನುಭವಿಗಳ ಖಾತೆಗೆ ಒಟ್ಟು 16.18 ಕೋಟಿ ರೂಪಾಯಿ ಹಣ ಜಮಾ ಮಾಡಲಾಗಿದೆ. ಸಮಗ್ರ ಶಿಶು ಅಭಿವೃದ್ದಿ ಯೋಜನೆಯಡಿ 2020-21ನೇ ಸಾಲಿನಲ್ಲಿ 1,76,096 ಫಲಾನುಭವಿಗಳಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸಲಾಗಿದೆ, ಅದಕ್ಕಾಗಿ 4,068 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ.
ಮಾತೃ ಪೂರ್ಣ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 16,320 ಗರ್ಬಿಣಿಯರಿಗೆ ಹಾಗೂ 17,619 ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ವಿತರಿಸಲಾಗಿದೆ. ಕ್ಷೀರಭಾಗ್ಯ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 1,386 ಅಂಗನವಾಡಿ ಕೇಂದ್ರಗಳಲ್ಲಿ 1,37,478 ಮಕ್ಕಳಿಗೆ ಕೆನೆ ಸಹಿತ ಹಾಲು ವಿತರಿಸಲಾಗಿದೆ.
• ಸ್ಪಚ್ಛ ಭಾರತ್ ಮಿಷನ್:
ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಒಟ್ಟು 11,019 ಶೌಚಾಲಯಗಳನ್ನು ನಿರ್ಮಿಸಲಾಗಿದೆ, ಅದಕ್ಕಾಗಿ ಒಟ್ಟು 23.85 ಕೋಟಿ ರೂಪಾಯಿಗಳನ್ನು ಭರಿಸಲಾಗಿದೆ. ಘನ ತ್ಯಾಜ್ಯ ನಿರ್ವಹಣಾ ಘಟಕಗಳ ನಿರ್ವಹಣೆಗಾಗಿ 122 ಗ್ರಾಮ ಪಂಚಾಯತ್‌ಗಳ ಪೈಕಿ 78 ಗ್ರಾಮ ಪಂಚಾಯತ್‌ಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಪ್ರಾರಂಭಕ್ಕೆ ಅನುಮೋದನೆ ನೀಡಲಾಗಿದೆ.
• ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ:
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಉದ್ಯಮಶೀಲತಾ ಅಭಿವೃದ್ದಿ ಯೋಜನೆಯಡಿ ನಿರುದ್ಯೋಗಿ ಪರಿಶಿಷ್ಟ ಜಾತಿ ಯುವಕ ಯುವತಿಯರಿಗೆ 1 ಲಕ್ಷ ರೂಪಾಯಿ ಸಹಾಯಧನವನ್ನು ನೀಡಲಾಗುತ್ತಿದೆ. 2019-20 ನೇ ಸಾಲಿನಲ್ಲಿ ಭೂ ಒಡೆತನ ಯೋಜನೆಯಡಿ 50 ಅರ್ಹ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಕೃಷಿ ಯೋಗ್ಯ ಭೂಮಿ ಮಂಜೂರು ಮಾಡಲಾಗಿದೆ.
2018-19 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ 266 ಖುಷ್ಕಿ ಜಮೀನಿನ ಸಣ್ಣ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು 3 ಲಕ್ಷ ರೂಪಾಯಿ ಸಹಾಯಧನ ನೀಡಿ, ಕೊಳವೆಬಾವಿ, ಪಂಪ್‌ಸೆಟ್ ಮೋಟಾರ್ ಅಳವಡಿಸಿ, ವಿದ್ಯುದ್ದೀಕರಣ ಮಾಡಿ ಕೊಡಲಾಗುತ್ತಿದೆ.
• ಮಹನೀಯರೇ, ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿದೆ. ಸರ್ಕಾರದ ಉತ್ತಮ ಕಾರ್ಯಗಳಿಗೆ ಸಾರ್ವಜನಿಕರು ಒತ್ತಾಸೆಯಾಗಿ ನಿಲ್ಲಬೇಕು ಮತ್ತು ಅವುಗಳ ಸಂಪೂರ್ಣ ಲಾಭವನ್ನು ಅರ್ಹತೆಗೆ ಅನುಗುಣವಾಗಿ ಮತ್ತು ಸಮಷ್ಠಿಯಾಗಿ ಪಡೆಯಬೇಕು ಎಂದು ವಿನಂತಿಸುತ್ತೇನೆ.
• ದೇಶ ಇಂದು ಎದುರಿಸುತ್ತಿರುವ ಕೆಲವು ಗಂಭೀರ ಸಮಸ್ಯೆಗಳ ನಿವಾರಣೆಗೆ ಯುವಜನತೆ ಬೆಂಬಲವಾಗಿ ನಿಲ್ಲಬೇಕು. ಭಾರತ ಇಂದು ಜಗತ್ತಿನಲ್ಲಿ ಪ್ರಬುದ್ಧ ರಾಷ್ಟçವಾಗಿ ಹೊರಹೊಮ್ಮಿದ್ದು, ವಿದ್ಯಾವಂತರಾದ ಯುವಜನರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ದೇಶದ ಅಭಿವೃದ್ಧಿಗೆ ನೆರವಾಗಬೇಕು ಎಂಬುದು ನನ್ನ ಹಂಬಲವಾಗಿದೆ.
ಎಲ್ಲರಿಗೂ ಮತ್ತೊಮ್ಮೆ ಗಣರಾಜ್ಯೋತ್ಸವದ ಶುಭಾಶಯಗಳು.
~ಜೈ ಹಿಂದ್, ಜೈ ಕರ್ನಾಟಕ.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ಸ್ತಬ್ದ ಚಿತ್ರಗಳ ಪ್ರದರ್ಶನ ನಡೆಸಲಾಯಿತು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಯಾದಗಿರಿ ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿ ಮುದ್ನಾಳ, ಬಸನಗೌಡ ಎಸ್.ಪಾಟಿಲ್ ಯಡಿಯಾಪೂರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರು ಹಾಗೂ ಸುರಪುರ ವಿಧಾನ ಸಭಾ ಸದಸ್ಯರಾದ ನರಸಿಂಹ ನಾಯಕ (ರಾಜುಗೌಡ) ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಅಂಬಿಗರ ಚೌಡಯ್ಯ ನಿಗಮ ಮಂಡಳಿಯ ಅಧ್ಯಕ್ಷರಾದ ಬಾಬುರಾವ ಚಿಂಚನಸೂರು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಮ್ಮ ಸದಾ ಶಿವಪ್ಪಗೌಡ ರೋಟ್ನಡಗಿ, ನಗರಸಭೆ ಅಧ್ಯಕ್ಷರಾದ ವಿಲಾಸ ಬಿ.ಪಾಟೀಲ್, ಜಿಲ್ಲಾಧಿಕಾರಿಯಾದ ಡಾ.ರಾಗಪ್ರಿಯಾ ಆರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ಹಕ ಅಧಿಕಾರಿಯಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಋಷಿಕೇಶ ಭಗವಾನ್ ಸೋನವಣೆ, ಐ.ಎ.ಎಸ್ ಪ್ರೋಫೆಷನರಿಯಾದ ಅಶ್ವಿಜಾ, ಅಪರ ಜಿಲ್ಲಾಧಿಕಾರಿಯಾದ ಪ್ರಕಾಶ್ ಜಿ.ರಜಪೂತ್, ಸಹಾಯಕ ನಿರ್ದೇಶಕಾರ ಶಂಕರಗೌಡ ಸೋಮನಾಳ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.



ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...