ಅಕ್ರಮವಾಗಿ ಮರಳು ಸಾಗಣೆ: ಶಿಕ್ಷೆ
ಯಾದಗಿರಿ,ಜ 15 (ಕ.ವಾ);-ಅಕ್ರಮವಾಗಿ ಮರಳು ಸಾಗಣೆ ಮಾಡಿದ ಅರೋಪ ಸಾಬೀತಾಗಿದ್ದರಿಂದ ಅಪಾರಾಧಿಗೆ 10 ಸಾವಿರ ರೂಪಾಯಿ ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಇಲ್ಲಿನ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಕಾಡಪ್ಪ ಹುಕ್ಕೇರಿ ಅವರು ಆದೇಶ ನೀಡಿದ್ದಾರೆ.
2017 ರ ಮಾರ್ಚ್ 10 ರಂದು ಟ್ರಾö್ಯಕ್ಟರ್ ಚಾಲಕ ನಾಗಪ್ಪ ಗೋಗಿ ಶಹಾಪುರ ತಾಲೂಕಿನ ಹೈಯ್ಯಾಳ ಗ್ರಾಮದ ಹತ್ತಿರದ ಕೃಷ್ಣಾ ನದಿಯಿಂದ ಸರ್ಕಾಕ್ಕೆ ರಾಜಧನ ತುಂಬದೆ ಟ್ರಾö್ಯಕ್ಟರ್ ನಲ್ಲಿ ಮರಳು ಕಳವು ಮಾಡಿಕೊಂಡು ತೆರಳುತ್ತಿದ್ದಾಗ ಶಹಾಪುರ ತಾಲೂಕಿನ ಭೀಗುಡಿ- ಗೋಗಿ ರಸ್ತೆಯ ಬಳಿ ಪೊಲೀಸ್ರು ದಾಳಿ ಮಾಡಿ ಟ್ರಾö್ಯಕ್ಟರ್ ಜಪ್ತಿ ಮಾಡಿಕೊಂಡಿದ್ದರು. ಈ ಬಗ್ಗೆ ದೂರು ಸಹ ದಾಖಲಾಗಿತ್ತು. ಗೋಗಿ ಪೊಲೀಸ್ ಠಾಣೆಯ ಅಂದಿನ ಪಿ.ಎಸ್.ಐ ಕೃಷ್ಣಾ ಸುಬೇದಾರ ನ್ಯಾಯಾಲಯಕ್ಕೆ ಅರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಸಹಾಯಕ ವಕೀಲ ವಿನಾಯಕ ಕೋಡ್ಲಾ ಕಲಬುರ್ಗಿ ವಾದ ಮಂಡಿಸಿದರು.
ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ.
ಯಾದಗಿರಿ,ಜ 15 (ಕ.ವಾ);- ಕೋವಿಡ್-19 ಹಿನ್ನೆಲೆ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ಅವರು ಶಿವಯೋಗಿ ಸಿದ್ದರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ ಹಾಗೂ ಸಮಾಜದ ಮುಖಂಡರಾದ ನಾಗಪ್ಪ ಬೆನಕಲ್, ಶರಣಪ್ಪ ಸಾತೂರಕರ, ಹಣಮಂತ, ಜಯಪ್ರಕಾಶ್, ಹಳ್ಳೆಪ್ಪ ಧೋತ್ರೆ, ಬಾಲಪ್ಪ ಮಂಜಲಕರ್, ಅಂಜಪ್ಪ ಯತ್ತರಕರ್, ಮಲ್ಲಿಕಾರ್ಜುನ ಚಿನ್ನಾಕಾರ್, ಲಘಮಣ್ಣ ಮುಂಡರಗಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಹಾಯ ಧನಕ್ಕೆ ಅರ್ಜಿ: ಅವಧಿ ವಿಸ್ತರಣೆ
ಯಾದಗಿರಿ,ಜ 15 (ಕ.ವಾ);- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನ ಬೈಕ್ ಖರೀದಿಗೆ ಸಹಾಯ ಧನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ.23 ರವರೆಗೆ ವಿಸ್ತರಿಸಲಾಗಿದೆ.
ಇ- ವಾಣಿಜ್ಯ ಸಂಸ್ಥೆಗಳಾದ Zomಚಿಣo, Sತಿiggಥಿ, Ubeಡಿ eಣs, ಂmಚಿzoಟಿ¸ ಸೇರಿದಂತೆ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ.25,000/-ಗಳ ಸಹಾಯ ಧನವನ್ನು ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಜ.23 ರ ಸಂಜೆ 5.00 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್:ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಿ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡಿತರ ಚೀಟಿಗಳಿಗೆ ಅಕ್ಕಿ ಸೇರಿದಂತೆ 2 ಕೆ.ಜಿ. ಗೋಧಿ ಉಚಿತ ವಿತರಣೆ
ಯಾದಗಿರಿ,ಜ 15 (ಕ.ವಾ);- ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆಯ 29,354 ಪಡಿತರ ಚೀಟಿಗಳಿಗೆ ಎನ್.ಎಫ್.ಎಸ್.ಎ ಅಡಿಯಲ್ಲಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಮತ್ತು 2,35,318 ಬಿಪಿಎಲ್ ಪಡಿತರ ಚೀಟಿಗಳ 8,48,991 ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಓ.ಎಮ್.ಎಸ್.ಎಸ್.(ಡಿ) ಅಡಿಯಲ್ಲಿ ಬಿ.ಪಿ.ಎಲ್. ಪಡಿತರ ಚೀಟಿಗಳಿಗೆ 2 ಕೆ.ಜಿ. ಗೋಧಿಯನ್ನು ಉಚಿತವಾಗಿ ವಿತರಿಸಲು ಬಿಡುಗಡೆ ಮಾಡಲಾಗಿದೆ.
ಡಿಸೆಂಬರ್-2020 ಆಹಾರಧಾನ್ಯ ಪಡೆಯಲು ಇಚ್ಛೆಯನ್ನು ವ್ಯಕ್ತಪಡಿಸಿದ ಆದ್ಯತೇತರ ಪಡಿತರ ಚೀಟಿ ಹೊಂದಿದವರಿಗೆ ಏಕ ಸದಸ್ಯರಿಗೆ ಅಕ್ಕಿ 5 ಕೆಜಿ ಹಾಗೂ ಎರಡು ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿ ಯನ್ನು ಪ್ರತಿ ಕೆಜಿಗೆ ರೂ,15/- ರಂತೆ ನೀಡಿ ಆಹಾರಧಾನ್ಯವನ್ನು ಪಡೆಯಬಹುದಾಗಿದೆ.
ಜಿಲ್ಲೆಯ ಆಯ್ದ 399 ನ್ಯಾಯಬೆಲೆ ಅಂಗಡಿಗಳಲ್ಲಿ ಬಿ.ಪಿ.ಎಲ್. ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಓ.ಟಿ.ಪಿ. ಮುಖಾಂತರ ಅಥವಾ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು (Poiಟಿಣ oಜಿ Sಚಿಟe – PಔS Shoಠಿ ಒoಜuಟe) ವ್ಯವಸ್ಥೆ ಮಾಡಲಾಗಿದೆ. ಕುಟುಂಬದ ಸದಸ್ಯರಿಗೆ ಲಭ್ಯವಾಗಿರುವ ಅರ್ಹತಾ ಪ್ರಮಾಣವನ್ನು ತಿಳಿದುಕೊಂಡು ಅಕ್ಕಿಯನ್ನು ಪಡೆದುಕೊಳ್ಳಲು ಸೂಚಿಸಿಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಗೆ, ಆಯಾ ತಾಲೂಕಿನ ತಹಸೀಲ್ದಾರ ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರನ್ನು ದಾಖಲು ಮಾಡಬಹುದು.
ಪಡಿತರ ಚೀಟಿದಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನ್ಯಾಯಬೆಲೆ ಅಂಗಡಿಯಿAದ ಆಹಾರಧಾನ್ಯವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.29ರಂದು ವಾಹನಗಳ ಬಹಿರಂಗ ಹರಾಜು
ಯಾದಗಿರಿ,ಜ 15 (ಕ.ವಾ);- ಮೋಟಾರು ವಾಹನ ತೆರಿಗೆ ಕಾಯ್ದೆಯಡಿ ತೆರಿಗೆ ಸಂದಾಯ ಮಾಡದ
ಕಾರಣ ಸ್ವಾಧೀನಪಡಿಸಿಕೊಂಡಿರುವ ವಾಹನಗಳನ್ನು ಹಾಲಿ ಇರುವ ಸ್ಥಿತಿಯಲ್ಲಿಯೇ ಬಹಿರಂಗ
ಹರಾಜು ಹಾಕಿ ಸರ್ಕಾರಕ್ಕೆ ಬರಬೇಕಾದ ಬಾಕಿ ತೆರಿಗೆಯನ್ನು ಸಂಗ್ರಹಿಸಲು ಜ.29 ರಂದು ಬೆಳಗ್ಗೆ 10
ಗಂಟೆಯಿAದ ಮಧ್ಯಾಹ್ನ 02:00 ರ ಸಮಯದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಯ
ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ತೆರಿಗೆ ಸಂದಾಯ ಮಾಡಿ ವಾಹನವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳಲು ಸಂಬAಧಪಟ್ಟ
ವಾಹನಗಳ ಮಾಲೀಕರಿಗೂ ಹಾಗೂ ಹಣಕಾಸು ಸಂಸ್ಥೆಯವರಿಗೆ ನೋಟಿಸು ಮುಖಾಂತರ
ತಿಳಿಸಿದ್ದರೂ ಸಹ ತೆರಿಗೆ ಮತ್ತು ದಂಡ ಸಂದಾಯ ಮಾಡಿ ವಾಹನವನ್ನು ಮರಳಿ ಪಡೆಯಲು
ಮುಂದೆ ಬಂದಿರುವದಿಲ್ಲ. ಆದ್ದರಿಂದ ಕರ್ನಾಟಕ ಮೋಟಾರು ವಾಹನ ತೆರಿಗೆ 27 ಬಿ ಮತ್ತು
19.02.1997 ರ ಸಾರಿಗೆ ಆಯುಕ್ತರ ಸುತ್ತೋಲೆಯ ಪ್ರಕಾರ ವಾಹನಗಳನ್ನು ಹರಾಜು ಹಾಕಲಾಗುತ್ತಿದೆ
ಎಂದರು.
ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಕಡ್ಡಾಯವಾಗಿ ಜಿಎಸ್‌ಟಿ ಟೀನ್ ನಂಬರ್ ಹೊಂದಿರಬೇಕು ಹಾಗೂ ಸರ್ವೋಚ್ಛ ನ್ಯಾಯಾಲಯ ವಾಹನಗಳ ಮಾಹಿತಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ
ಅಳವಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧೀಕ್ಷಕರಾದ ಮೌನೇಶ ಅವರ ದೂರವಾಣಿ ಸಂಖ್ಯೆ 9886435781 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನಿ ನೀರಾವರಿ ವ್ಯವಸ್ಥೆ ಅಳವಡಿಕೆಗೆ ಅರ್ಜಿ ಆಹ್ವಾನ
ಯಾದಗಿರಿ. ಜ.15 (ಕರ್ನಾಟಕ ವಾರ್ತೆ) 2020-21ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆ ಸೂಕ್ಷö್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ಅಳವಡಿಕೆಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಈ ಸಹಾಯಧನ ಲಭ್ಯವಿದ್ದು, ಈ ವರ್ಗಗಳ ಆಸಕ್ತ ರೈತರು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಬAಧಿಸಿದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ