ಮಂಗಳವಾರ, ಜನವರಿ 5, 2021

 ಇಂದು ಮುಖ್ಯಮಂತ್ರಿಗಳಿAದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ 

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭವನ್ನು ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ಇದೇ ಜ.6ರ ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ. 

ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಹರ್ಷವರ್ಧನ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. 

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ, ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು, ಐಟಿ-ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಮತ್ತು ಕೌಶಲ್ಯಾಭಿವೃದ್ದಿ ಸಚಿವರಾದ ಡಾ. ಅಶ್ವಥ್ ನಾರಾಯಣ್ ಸಿ.ಎನ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡಿನ ಸಾರಿಗೆ ಹಾಗೂ ಮುಜುರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು, ನಗರಾಭಿವೃದ್ದಿ ಸಚಿವರಾದ ಭೈರತಿ ಬಸವರಾಜ್, ಕರ್ನಾಟಕ ನೀರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಸುರಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. 

ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್ ಅವರು ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವಗೌಡ ಪಾಟೀಲ್ ಯಡಿಯಾಪುರ, ಕಲಬುರಗಿ ಕ್ಷೇತ್ರದ ಸಂಸದ ಡಾ. ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ್, ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೂಶಿ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗವಹಿಸುವರು. 


ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಇಂದು  

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇದೇ ಜ.6ರ ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮದ ವಿವರಗಳು ಇಂತಿವೆ: 

 ಜ.6ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 2.45ಕ್ಕೆ ಯಾದಗಿರಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವರು. ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತೆ ಆವರಣದಲ್ಲಿ ಆಯೋಜಿಸಲಾಗಿರುವ ಯಾದಗಿರಿ ವಿಧಾನಸಭ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು. 

 ಸಂಜೆ 5 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್ ಮೂಲಕ ಬೀದರ್ ಏರ್‌ವೇಸ್‌ಗೆ ಸಂಜೆ 5.45ಕ್ಕೆ ತೆರಳಿ, ಸಂಜೆ 6 ಗಂಟೆಗೆ ಬೀದರ್ ಏರ್‌ಬೇಸ್‌ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 



ಕೆಕೆಆರ್‌ಡಿಬಿ ಅಧ್ಯಕ್ಷರ ಜಿಲ್ಲಾಪ್ರವಾಸ ಇಂದು   

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಸಿ ಪಾಟೀಲ್ ರೇವೂರ ಅವರು ಇದೇ ಜ.6ರ ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

 ಅವರು ಜ.6ರ ಬುಧವಾರ ಮಧ್ಯಾಹ್ನ 2.30ಕ್ಕೆ ಆಗಮಿಸಿ, ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕೆಕೆಆರ್‌ಡಿಬಿ ಅಧ್ಯಕ್ಷರ ಆಪ್ತ ಸಹಾಯಕ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. 

7ರಂದು ಶಿಬಿರ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ  ಜಿಲ್ಲೆಯ  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ 17 ವರ್ಷದೊಳಗಿನ ಬಾಲಕ/ ಬಾಲಕಿಯರಿಗಾಗಿ  ಜಿಲ್ಲಾ, ರಾಜ್ಯ ಮತ್ತು ರಾಷ್ಟç ಮಟ್ಟದ ಕೀಡ್ರಾಪಟುಗಳಿಗೆ ಜ.7 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಪ್ರತಿಭಾನ್ವೇಷಣಾ ಆಯ್ಕೆ ಶಿಬಿರ ಆಯೋಜಿಸಲಾಗಿದೆ.

ಈ ಆಯ್ಕೆ ಶಿಬಿರವು ಜ.7 ರ ಬೆಳಿಗ್ಗೆ 10 ಗಂಟೆಯಿAದ ಪ್ರಾರಂಭವಾಗಲಿದೆ. ಆಸಕ್ತರು ಜಾತಿ ಪ್ರಮಾಣ ಪತ್ರ ನಕಲು ಪ್ರತಿ ಹಾಗೂ ಬ್ಯಾಂಕ್ ಖಾತೆಯ ಪುಸ್ತಕದ ಪ್ರತಿಯೊಂದಿಗೆ ಕಡ್ಡಾಯವಾಗಿ ಯಾವುದಾದರು ಒಂದು ಗುರುತಿನ ಚೀಟಿ ತರುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಿಂಗಳು ಪೂರ್ತಿ ಶೇ. 50 ರಿಯಾಯಿತಿಯಲ್ಲಿ ಕನ್ನಡ ಪುಸ್ತಕ ಮಾರಾಟ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):-  ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇಕಡಾ 50 ರಷ್ಟು ರಿಯಾಯಿತಿ ದರದಲ್ಲಿ ಜನವರಿ ತಿಂಗಳು ಪೂರ್ತಿ ಮಾರಾಟ ಮಾಡಲಾಗುತ್ತಿದೆ.

ಈ ಸೌಲಭ್ಯವು ಬೆಂಗಳೂರಿನ ಕನ್ನಡ ಭವನದಲ್ಲಿನ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕçತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸೇರಿದಂತೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಕನ್ನಡ ಸಿರಿಗನ್ನಡ ಪುಸ್ತಕ ಮಳಿಗೆಗಳಲ್ಲಿ ಲಭ್ಯವಿದೆ. ಅಲ್ಲದೆ ಆನ್‌ಲೈನ್ ಮೂಲಕ ಖರಿದಿಸುವರಿಗೂ ಸಹ ರಿಯಾಯಿತಿ ಪಡೆಯಬಹುದಾಗಿದೆ.  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ. 

ಅಂತಿಮ ಆಯ್ಕೆ ಪ್ರಕಟ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಸ್ಥಳೀಯ ವೃಂದದ 12 ಮತ್ತು ಪರಸ್ಥಳೀಯ ವೃಂದದ 09 ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಕಳೆದ ಸೆ.28 ರಂದು ನಡೆದ ಪರೀಕ್ಷೆಯಲ್ಲಿ ಗೈರು ಹಾಜರಾದ ಅಭ್ಯರ್ಥಿಗಳ ಬದಲಿಗೆ ಬೇರೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡಿರುವ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಪಿಎಸ್‌ಟಿ ಮತ್ತು ಇಟಿ ಪರೀಕ್ಷೆಯನ್ನು ಈಗಾಗಲೇ ನಗರದಲ್ಲಿ ನಡೆಸಲಾಗಿದ್ದು, ಈ ಪರೀಕ್ಷೆಯಲ್ಲಿ ಗೈರು ಹಾಜರಾದ ಅಭ್ಯರ್ಥಿಗಳ ಬದಲಿಗೆ ಬೇರೊಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿರುವ ಪಟ್ಟಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯಲ್ಲಿನ ಸೂಚನಾ ಪಲಕದಲ್ಲಿ ಮತ್ತು ತಿತಿತಿ.ಥಿಚಿಜgiಡಿಠಿoಟiಛಿe.iಟಿ ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾದಗಿರಿಯಿಂದ ಬೆಂಗಳೂರಿಗೆ ನಾನ್ ಎಸಿ ಬಸ್ ಪ್ರಾರಂಭ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ಯಾದಗಿರಿ-ಮಂತ್ರಾಲಯ ಮಾರ್ಗವಾಗಿ ಬೆಂಗಳೂರಿಗೆ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಜ.1 ರಿಂದ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಯವರು ತಿಳಿಸಿದ್ದಾರೆ.

ಈ ನಾನ್ ಎಸಿ ಸ್ಲೀಪರ್ ಸಾರಿಗೆ ಯಾದಗಿರಿಯಿಂದ ಸಂಜೆ 7 ಗಂಟೆಗೆ ಹೊರಡಲಿದ್ದು ಸೈದಾಪೂರ, ರಾಯಚೂರು, ಮಂತ್ರಾಲಯ ಮಾರ್ಗವಾಗಿ ಮರುದಿನ ಬೆಳಿಗ್ಗೆ 06 ಗಂಟೆಗೆ ಬೆಂಗಳೂರು ತಲುಪುತ್ತದೆ, ಮತ್ತೇ ಅದೇ ದಿನ ಸಾಯಂಕಾಲ 9 ಗಂಟೆಗೆ ಬೆಂಗಳೂರಿನಿAದ ಅನಂತಪೂರ ಮಾರ್ಗವಾಗಿ ಮಾರನೆ ದಿನ ಬೆಳಿಗ್ಗೆ 07.15 ಗಂಟೆಗೆ ಆಗಮಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಮೀನು ನೀಡಲು ಅರ್ಜಿ ಆಹ್ವಾನ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲೆಯ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ನಿವೇಶನ ಯೋಜನೆ ಅಡಿ ನಿವೇಶನ ನಿರ್ಮಾಸಿಸುವ ಉದ್ದೇಶಕ್ಕಾಗಿ ಪಟ್ಟಣದ 5 ಕೀ.ಮೀ ಒಳಗಡೆ ನಗರ ಯೋಜನೆ ಪ್ರಾಧಿಕಾರ ಅಡಿಯಲ್ಲಿ ಬರುವ ಖಾಸಗಿ ಜಮೀನು ಬೇಕಾಗಿದು ಆಸಕ್ತಿಯುಳ್ಳ ಜಮೀನು ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. 

ಆಸಕ್ತ ಭೂ ಮಾಲಿಕರ ಒಪ್ಪಿಗೆ ಪತ್ರ, ಉದ್ದೇಶಿಸಿರುವ ಜಮೀನು ವಸತಿಗೆ ಯೋಗ್ಯವಾಗಿರುವ ಬಗ್ಗೆ ತಹಸೀಲ್ದಾರರಿಂದ ದೃಢೀಕರಣ, ನಮೂನೆ (ಜಿಲ್ಲಾಧಿಕಾರಿಗಳ ಸಹಿಯೊಂದಿಗೆ), ಭೂ ಮಾಲೀಕರ ಕುಟುಂಬಗಳ ವಂಶವೃಕ್ಷ ದಾಖಲೆಗಳೊಂದಿಗೆ ಜ.19ರೊಳಗೆ ಕೆಂಭಾವಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಪುರಸಭೆ ಕಾರ್ಯಾಲಯದಲ್ಲಿ ಪಡೆಯಬಹುದಾಗಿದೆ. 

ಜಿಲ್ಲಾ ಉಸ್ತುವಾರಿ ಸಚಿವರಿಂದ ನಂದಿನಿ ಪಾರ್ಲರ್ ಉದ್ಘಾಟನೆ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ನಂದಿನಿ ಹಾಲಿನ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ್ದಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ, ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ ಮೂಲಕ ಹಾಲು ಹಾಗೂ ಹಾಲಿನ ಉತ್ಪನ್ನಗಳು ತಯಾರಿಸಿ ಮಾರಾಟ ಮಾಡಲಾಗುತ್ತಿದೆ, ಜನರು ಇದರ ಸದುಪಯೋಗ ಪಡೆಯುವಂತೆ ಪಶುಸಂಗೋಪನೆ, ಹಜ್ ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಅವರು ಕರೆ ನೀಡಿದರು. 

 ಅವರು ಜ.5ರ ಮಂಗಳವಾರ ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ನಂದಿನಿ ಪಾರ್ಲರ್ ಉದ್ಘಾಟಿಸಿ ಮಾತನಾಡಿದರು. 

ಈ ವೇಳೆ ಖುದ್ದು ಸಚಿವರೇ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು ವಿಶೇಷವಾಗಿತ್ತು. 

ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ನಂದಿನಿ ಸಿಹಿ ಉತ್ಸವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಗ್ರಾಹಕರು 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...