ಶನಿವಾರ, ಜನವರಿ 2, 2021

 ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

***********************************
ಯಾದಗಿರಿ, ಜ.2 (ಕರ್ನಾಟಕ ವಾರ್ತೆ):- ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗಾಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2020-21ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವ ಸಂಘ ಸಂಸ್ಥೆಗಳು ನಿಗದಿಪಡಿಸಿದ ನಮೂನೆಗಳನ್ನು ಪಡೆದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿಗಳನ್ನು ಜ.20 ರ ರೊಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಪ್ರಶಸ್ತಿಗೆ ಆಯ್ಕೆಯಾದವರಿಗೆ ಅಂತರಾಷ್ಟೀಯ ಮಹಿಳಾ ದಿನಾಚರಣೆಯೆಂದು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**************************************************
ಯಾದಗಿರಿ, ಜ.2 (ಕರ್ನಾಟಕ ವಾರ್ತೆ):- ಜಿಲ್ಲೆಯ ಸುರಪುರ ನಗರಸಭೆಯ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ನಿವೇಶನ ಯೋಜನೆಯಡಿಯಲ್ಲಿ ನಿವೇಶನ ನಿರ್ಮಿಸುವ ಉದ್ದೇಶಕ್ಕಾಗಿ ಸುರಪುರ ಪಟ್ಟಣದ 5 ಕಿ.ಮೀ ಒಳಗಡೆ ನಗರ ಯೋಜನೆ ಪ್ರಾಧಿಕಾರ ಅಡಿಯಲ್ಲಿ ಬರುವ ಖಾಸಗಿ ಜಮೀನು ಬೇಕಾಗಿದ್ದು, ಆಸಕ್ತಿಯುಳ್ಳ ಜಮೀನು ಮಾಲೀಕರು ಅರ್ಜಿ ಸಲ್ಲಿಸುವಂತೆ ನಗರಸಭೆ ವತಿಯಿಂದ ಕೋರಲಾಗಿದೆ.
ಅರ್ಜಿ ಸಲ್ಲಿಸಲು 15 ದಿನಗಳ ಕಾಲವಕಾಶ ನೀಡಿದ್ದು, ಭೂ ಮಾಲೀಕರ ಒಪ್ಪಿಗೆ ಪತ್ರ , 15 ವರ್ಷಗಳ ಇಸಿ, ನಮೂನೆ 11ಎ, ಕುಟುಂಬ ವಂಶ ವೃಕ್ಷ, 200.ರೂ, ಮಾಲ್ಯದ ಛಾಪಾ ಕಾಗದ, ಟೊಂಚ್ ಮ್ಯಾಪ್, ಆಕಾರ ಬಂದ ಸೇರಿದಂತೆ ಇತರ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯವನ್ನು ಸಂಪರ್ಕ ಮಾಡಬಹುದು ಎಂದು ಸುರಪುರ ನಗರಸಭೆ ಪೌರಾಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...