ಶನಿವಾರ, ಜನವರಿ 16, 2021

 ಜಿಲ್ಲೆಯಲ್ಲಿ ಕೋವಿಶಿಲ್ಡ್ ಲಸಿಕಾಕರಣಕ್ಕೆ ಚಾಲನೆ

ದೀಪ ಬೆಳಗಿಸಿ ಲಸಿಕಾಕರಣಕ್ಕೆ ಚಾಲನೆ ನೀಡಿದ ಶಾಸಕ ವೆಂಕಟರಡ್ಡಿ ಮುದ್ನಾಳ


ಯಾದಗಿರಿ.ಜ.16(ಕ.ವಾ):- ದೇಶದ ಬಹುನಿರೀಕ್ಷಿತ ಕೋವಿಶೀಲ್ಡ್ ಲಸಿಕಾ ಕಾರ್ಯಕ್ರಮಕ್ಕೆ ಇಂದು ಶನಿವಾರ(ಜ.16) ಜಿಲ್ಲೆಯಲ್ಲೂ ಚಾಲನೆ ದೊರೆತಿದೆ.
ನಗರದ ಹೊಸ ಜಿಲ್ಲಾ ಆಸ್ಪತ್ರೆ ಒಳಗೊಂಡAತೆ ಜಿಲ್ಲೆಯ ಐದು ಲಸಿಕಾ ಕೇಂದ್ರಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಈಗಾಗಲೇ ಗುರುತಿಸಲಾಗಿರುವ ಆಯ್ದ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ.
ಕೋವಿಡ್ ಲಸಿಕೆ ನೀಡುವುದಕ್ಕೆ ಸಂಬAಧಿಸಿದAತೆ ಆರೋಗ್ಯ ಇಲಾಖೆಯು ನೀಡಿರುವ ಸಲಹೆ-ಸೂಚನೆಗಳನ್ನು ಮತ್ತು ಮಾರ್ಗದರ್ಶಿ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಶಾಸಕರು ಸಲಹೆ ನೀಡಿದರು.
ಯಾವುದೇ ರೀತಿಯ ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ, ಅಂತಕಕ್ಕೆ ಒಳಗಾಗದೆ ಕೋವಿಶೀಲ್ಡ್ ಲಸಿಕೆಯನ್ನು ಪ್ರತಿಯೊಬ್ಬ ಕೊರೊನಾ ವಾರಿಯರ್ಸ್ ಗಳು ಲಸಿಕೆ ಪಡೆಯಬೇಕೆಂದು ಹೇಳಿದರು.
ಕೋವಿಡ್-19 ಸಂದರ್ಭದಲ್ಲಿ ಕೊರೊನಾ ವಿರುದ್ಧ ಹೋರಾಡಿದ ಆನೇಕ ಇಲಾಖೆಯ ವಾರಿಯರ್ಸ್ ಮತ್ತು ಜನಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿ ಲಸಿಕೆಯನ್ನು ಒದಗಿಸಿಕೊಟ್ಟ ಮಾನ್ಯ ಪ್ರಧಾನಮಂತ್ರಿ ಅವರಿಗೆ ಜಿಲ್ಲೆಯ ಜನತೆಯ ವತಿಯಿಂದ ಅಭಿನಂದನೆಗಳ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾದ ಡಾ.ರಾಗಪ್ರಿಯಾ ಆರ್.ಅವರು ಮಾತನಾಡಿ ಕೋವಿಡ್ ಲಸಿಕೆ ನೀಡಲು ಅಗತ್ಯವಿರುವ ಸಿದ್ದತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 5 ಕೇಂದ್ರಗಳಾದ ಹೊಸ ಜಿಲ್ಲಾ ಆಸ್ಪತ್ರೆ, ಶಹಾಪೂರ, ಸುರಪುರ ತಾಲೂಕುಗಳ ಸಾರ್ವಜನಿಕ ಆಸ್ಪತ್ರೆ, ಯು.ಪಿ.ಹೆಚ್.ಸಿ ಸುರಪುರ ಹಾಗೂ ಪಿ.ಹೆಚ್.ಸಿ ಯರಗೋಳ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ಲಸಿಕೆ ನೀಡಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಪ್ರಥಮ ಹಂತದಲ್ಲಿ ಲಸಿಕೆ ನೀಡಲು 6438 ಕೋವಿಡ್ ವಾರಿಯರ್ಸ್ ಗುರುತಿಸಲಾಗಿದೆ. ಜ.16 ರ ಶನಿವಾರ ದಂದು ಜಿಲ್ಲೆಯಲ್ಲಿ ಒಟ್ಟು 445 ವಾರಿಯರ್ಸ್ಗಳಿಗೆ ಕೋವಿಡ್-19 ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಅವರಿಗೆ ಲಸಿಕೆಯನ್ನು ನೀಡಲು ಕ್ರಮ ವಹಿಸಲಾಗುವುದು.
ಮೊದಲ ಹಂತದಲ್ಲಿ ಗುರುತಿಸಲಾದ 5 ಲಸಿಕಾ ಕೇಂದ್ರಗಳಲ್ಲಿ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು, ಜಿಲ್ಲೆಯ ಎಲ್ಲ ಪಿ.ಎಚ್.ಸಿ, ಸಿ.ಎಚ್.ಸಿಗಳಲ್ಲಿ ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಡಾ.ಇಂದುಮತಿ ಪಾಟೀಲ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಸಂಜೀವ್ ಕುಮಾರ್ ರಾಯಚೂರಕರ್ ಸೇರಿದಂತೆ ಇತರರು ಕಾರ್ಯಕ್ರಮ ಭಾಗವಹಿಸಿದ್ದರ
Image may contain: 2 people, people standing

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...