ಮಂಗಳವಾರ, ಜನವರಿ 19, 2021

 ಬಾಲ್ಯ ವಿವಾಹ ತಡೆಯಲು ಶಿಕ್ಷಣ ಅವಶ್ಯಕ: ಡಾ.ಜಯಶ್ರೀ

ಯಾದಗಿರಿ.ಜ.19 (ಕ.ವಾ):- ಹೆಚ್ಚಾಗುತ್ತಿರುವ ಬಾಲ್ಯ ವಿವಾಹವನ್ನು ತಡೆಯಲು ಶಿಕ್ಷಣ ಮಹತ್ವದ ಪಾತ್ರ ವಹಿಸುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯೆ ಡಾ. ಜಯಶ್ರೀ ಅವರು ಅಭಿಪ್ರಾಯಪಟ್ಟರು.
ಜ.19ರ ಮಂಗಳವಾರದAದು ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ಹಾಗೂ ಬಿಕ್ಷಾಟನೆಗಳು ಹೆಚ್ಚಾಗಿದೆ. ಇವುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ಶಾಲೆಯಿAದ ಮಾತ್ರ ಮಕ್ಕಳಿಗೆ ಸುರಕ್ಷತೆ ಮತ್ತು ಶಿಕ್ಷಣವಂತರಾಗಲು ಸಾಧ್ಯ ಅದ್ದರಿಂದ ಮಕ್ಕಳನ್ನು ಶಾಲೆಗೆ ಕರೆ ತರಲು ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು ಇವುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ನಾಗರಿಕರಾಗುವಂತೆ ಅವರು ಕರೆ ನೀಡಿದರು.
ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ತಂಡವನ್ನು ಈಗಾಗಲೇ ರಚಿಸಿದ್ದು, ಪಾಲಕರು ಸಹ ಬಾಲ್ಯ ವಿವಾಹಗಳಿಗೆ ಪ್ರೋತ್ಸಾಹ ಕೊಡದೆ ಮಕ್ಕಳನ್ನು ವಿದ್ಯಾವಂತರಾನ್ನಾಗಿ ಮಾಡಿ. ಸರ್ಕಾರ ಮದುವೆಗೆ ನಿಗದಿಪಡಿಸಿರುವ ವಯಸ್ಸು ಪೂರ್ಣವಾದ ನಂತರ ಮದುವೆ ಮಾಡಬೇಕು ಒಂದು ವೇಳೆ ಬಾಲ್ಯ ವಿವಾಹಗಳು ನಡೆದರೆ ಆ ವ್ಯಾಪ್ತಿಯ ತಹಶೀಲ್ದಾರ ಮತ್ತು ಸಂಬAಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವರು ಎಂದು ತಿಳಿಸಿದರು.
ಮಕ್ಕಳಲ್ಲಿ ಅಪೌಷ್ಠಿಕತೆ ತಡೆಯಲು ಬಾಣಂತಿಯರಿಗೆ ಪೌಷ್ಠಿಕ ಆಹಾರಗಳನ್ನು ನೀಡುತ್ತಿದು ಅಂಗನವಾಡಿಗಳಲ್ಲಿ ಮೊಟ್ಟೆ ಹಾಗೂ ಇನ್ನಿತರ ಆಹಾರವನ್ನು ನೀಡಲಾಗುತ್ತಿದೆ ಎಂದರು,
ಮಕ್ಕಳ ಹಕ್ಕುಗಳು ಒಂದು ವೇಳೆ ಉಲ್ಲಂಘನೆಯಾದರೆ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ದೂರು ನೀಡುವಂತೆ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಧಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
No photo description available.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...