ಕರ್ನಾಟಕ ಸರ್ಕಾರ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ಹಿರಿಯ ಸಹಾಯಕ ನಿರ್ದೇಶಕ ಕಚೇರಿ, ಜಿಲ್ಲಾಡಳಿತ ಭವನ, ಬಿ. ಬ್ಲಾಕ್, 1ನೇ ಮಹಡಿ, ಕೊಠಡಿ ಸಂಖ್ಯೆ: ಬಿ2ಎ, ಬಿ2ಬಿ, ಬಿ3, ಚಿತ್ತಾಪುರ ರಸ್ತೆ, ಯಾದಗಿರಿ-585202 ದೂರವಾಣಿ: 08473-253722 ಇ-ಮೇಲ್: vಚಿಡಿಣhಚಿbhಚಿvಚಿಟಿಥಿಚಿಜgiಡಿi@gmಚಿiಟ.ಛಿom
(1ನೇ ಸುತ್ತು) ದಿನಾಂಕ:30-01-2021
ಪತ್ರಿಕಾ ಪ್ರಕಟಣೆ
ಕುಷ್ಠರೋಗ: ಸಮಾಜದ ಮನೋಭಾವ ಬದಲಾಗಿದೆ-ವೆಂಕಟರೆಡ್ಡಿ ಗೌಡ ಮುದ್ನಾಳ್
ಯಾದಗಿರಿ.ಜ.30 (ಕ.ವಾ):- ಗುಣಮುಖವಾಗುವ ಕುಷ್ಠರೋಗದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿದ್ದು, ಹಿಂದಿಗಿAತಲೂ ಇದೀಗ ಕುಷ್ಠರೋಗಿಗಳನ್ನು ಸಕಾರಾತ್ಮಕವಾಗಿ ನೋಡುವ ಮನೋಭಾವ ಮೂಡಿದೆ ಎಂದು ಸ್ಥಳೀಯ ಶಾಸಕರಾದ ವೆಂಕಟರೆಡ್ಡಿ ಗೌಡ ಮುದ್ನಾಳ್ ಅವರು ಅಭಿಪ್ರಾಯಪಟ್ಟರು.
ಅವರು ಜ.30ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಜ.30ರಿಂದ ಫೆ.13ರ ವರೆಗೆ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ 2020-21 ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಕುಷ್ಠರೋಗ ಅರಿವು ಕಾರ್ಯಕ್ರಮವನ್ನು ಕುಷ್ಠರೋಗ ನಿರ್ಮೂಲನಾ ದಿನವನ್ನಾಗಿ ಆಚರಿಸುವುದು ಇನ್ನೂ ಉತ್ತಮ ಎಂಬ ಅಭಿಪ್ರಾಯಪಟ್ಟ ಶಾಸಕರು, ವೈದ್ಯರು, ನರ್ಸ್ಗಳು ಈ ರೋಗಿಗಳಿಗೆ ಉತ್ತಮ ಶುಶ್ರೂಷೆ ನೀಡಿ ಆರೈಕೆ ಮಾಡಿದ ಪರಿಣಾಮ ಕುಷ್ಠರೋಗವನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ, ಈ ರೋಗಿಗಳನ್ನು ಈ ಹಿಂದೆ ಊರ ಹೊರಗೆ ಇರಿಸುತ್ತಿದ್ದರು, ಇದೀಗ ಪರಿಸ್ಥಿತಿ ಬದಲಾಗಿದೆ ಎಂದರು.
ವೈದ್ಯರು ಹಾಗೂ ರೋಗಿಗಳ ಸಹಕಾರದಿಂದ ಈ ರೋಗವನ್ನು ನಿರ್ಮೂಲನೆ ಮಾಡಬಹುದಾಗಿದೆ, ಪ್ರಮುಖವಾಗಿ ಆಶಾ ಕಾರ್ಯಕರ್ತೆಯರು ಮಾತ್ರೆ, ಔಷಧಗಳನ್ನು ನೀಡುವ ಮೂಲಕ ಈ ರೋಗಿಗಳನ್ನು ಗುಣಪಡಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ್ ಮಾತನಾಡಿ, ನಗರದಲ್ಲಿರುವ ಕುಷ್ಠರೋಗಿಗಳ ಕಾಲೋನಿಗೆ ಭೇಟಿ ನೀಡಿದ್ದು, ಅಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿಕೊಡುವಂತೆ ಸಂಬAಧಿಸಿದವರಿಗೆ ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು ಉತ್ತಮ ಆರೈಕೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಮಾತನಾಡಿ, ಆರಂಭದಲ್ಲಿಯೇ ಕುಷ್ಠರೋಗವನ್ನು ಪತ್ತೆ ಹಚ್ಚಿದ್ದಲ್ಲೀ ಉತ್ತಮ ಚಿಕಿತ್ಸೆ ನೀಡಿ ಗುಣಪಡಿಸಬಹುದು, ಕುಷ್ಠರೋಗ ನಿರ್ಮೂಲನೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಪರಿಶ್ರಮದಿಂದ ಕುಷ್ಠರೋಗಿಗಳ ಚೇತರಿಕೆ ಪ್ರಮಾಣ ಹೆಚ್ಚಳವಾಗಿದೆ, ಕಳೆದ ವರ್ಷದಲ್ಲಿ ಜಿಲ್ಲೆಯಲ್ಲಿ ಕುಷ್ಠರೋಗದ 24 ಪ್ರಕರಣಗಳು ಪತ್ತೆಯಾಗಿವೆ, ಅವರ ಚಿಕಿತ್ಸೆಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ, ಮುಂಬರುವ ದಿನಗಳಲ್ಲಿ ಯಾವುದೇ ಪ್ರಕರಣಗಳು ವರದಿಯಾಗಬಾರದು, ಸಂಪೂರ್ಣ ನಿರ್ಮೂಲನೆಗೆ ಜಿಲ್ಲೆಯ ಜನತೆ ಸಹಕರಿಸಬೇಕು ಎಂದು ತಿಳಿಸಿದರು.
ನಾವೆಲ್ಲರೂ ನಮ್ಮ ಜಿಲ್ಲೆಯನ್ನು ಕುಷ್ಠರೋಗದಿಂದ ಮುಕ್ತಗೊಳಿಸಲು ಪಣತೊಟ್ಟು ಕಾರ್ಯಪ್ರವೃತ್ತರಾಗಿದ್ದೇವೆ. ಕುಷ್ಠರೋಗವನ್ನು ಸುಲಭವಾಗಿ ಪತ್ತೆ ಹಚ್ಚಿ, ಸಂಪೂರ್ಣವಾಗಿ ಗುಣಪಡಿಸಬಹುದು. ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಕುಷ್ಠರೋಗ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆ ತರಲು ನಾವು ಬದ್ದರಾಗೋಣ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಕುಷ್ಠರೋಗ ಶಾಪವಲ್ಲ, ಯಾವುದೇ ಕಾರಣಕ್ಕೂ ಭಯ ಪಡಬಾರದು, ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಬಹುದು ಎಂದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಭಗವಂತ ಅನ್ವರ್ ಮಾತನಾಡಿ, ಈ ರೋಗ ಬೇಗ ಪತ್ತೆಯಾದರೆ, ಚಿಕಿತ್ಸೆಯೂ ಬೇಗನೇ ಆರಂಭಿಸಿಬಹುದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ ಎಂದವರು ಹೇಳಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.
ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಗುಣಮುಖರಾದ ಕುಷ್ಠರೋಗಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೆಂಕಟರೆಡ್ಡಿ ಗೌಡ ಮುದ್ನಾಳ್ ಅವರು ಕುಷ್ಠರೋಗದಿಂದ ಗುಣಮುಖರಾದ ಹಿರಿಯರಿಗೆ ಸನ್ಮಾನಿಸಿದರು.
ಆರೋಗ್ಯ ಶಿಕ್ಷಣಾಧಿಕಾರಿ ರಂಗಣ್ಣ ಪಾಟೀಲ್ ಸ್ವಾಗತಿಸಿದರು. ಶರಣು ಹೊಸಮನಿ ವಂದಿಸಿದರು.
ಮಾರ್ಚ್ ಅಂತ್ಯದೊಳಗೆ ಹಂಪ್ಸ್ಗಳಿಗೆ ಬಣ್ಣ ಹಾಕಲು ಜಿಲ್ಲಾಧಿಕಾರಿ ಸೂಚನೆ
ಯಾದಗಿರಿ.ಜ.30 (ಕ.ವಾ):- ಮುಂಬರುವ ಮಾರ್ಚ್ ಅಂತ್ಯದೊಳಗೆ ಜಿಲ್ಲೆಯ ರಸ್ತೆಗಳಲ್ಲಿರುವ ಹಂಪ್ಸ್ಗಳಿಗೆ ವೈಜ್ಞಾನಿಕ ರೀತಿಯಲ್ಲಿ ಬಣ್ಣ ಬಳಿದು, ರಸ್ತೆ ಉಬ್ಬರವಿರುವ ಎಚ್ಚರಿಕೆಯ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಜ.30ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟಿçÃಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿAಗ್ ವಿಭಾಗ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಇತರೆ ಇಲಾಖೆಗಳಿಂದ ನಿರ್ಮಾಣವಾಗುವ ವಿವಿಧ ರೀತಿಯ ರಸ್ತೆಗಳಲ್ಲಿ ಹಾಕಲಾದ ಹಂಪ್ಸ್ಗಳು ಸಂಚಾರದ ವೇಳೆ ವಾಹನ ಸವಾರರ ಗಮನಕ್ಕೆ ಬರಬೇಕು, ಇಲ್ಲದಿದ್ದಲ್ಲೀ ಅವಘಡಗಳಾಗುವ ಸಂಭವವಿರುತ್ತದೆ, ಹಾಗಾಗಿ ಮುಂಬರುವ ಮಾರ್ಚ್ ಅಂತ್ಯದೊಳಗೆ ಹಂಪ್ಸ್ಗಳಿಗೆ ಬಣ್ಣ ಬಳಿದು, ಎಚ್ಚರಿಕಾ ಫಲಕಗಳನ್ನು ಅಳವಡಿಸಬೇಕು ಹಾಗೂ ಅವೈಜ್ಞಾನಿಕ ಹಂಪ್ಸ್ಗಳನ್ನು ತೆರವುಗೊಳಿಸಿ, ವೈಜ್ಞಾನಿಕವಾಗಿ ಅಳವಡಿಸುವಂತೆ ವಿವಿಧ ರೀತಿಯ ರಸ್ತೆ ನಿರ್ಮಾಣ ಎಜೆನ್ಸಿಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಕುರಿತು ಪರಿಶೀಲಿಸಬೇಕು, ರಸ್ತೆ ಹಂಪ್ಸ್ ಬರುವ 500 ಮೀಟರ್‌ಗಳ ಹಿಂದೆಯೇ ಹಂಪ್ಸ್ ಇರುವ ಬಗ್ಗೆ ಫಲಕವನ್ನು ಅಳವಡಿಸಬೇಕು, ಯಾವ ರಸ್ತೆಗಳಲ್ಲಿ ಪ್ರಗತಿ ಕಾಮಗಾರಿ ಅಥವಾ ದುರಸ್ಥಿ ನಡೆದರೂ ಆ ಕುರಿತು ಫಲಕಗಳನ್ನು ಅಳವಡಿಸಬೇಕು, ಯಾವುದೇ ಕಾರಣಕ್ಕೂ ಸಾರ್ವಜನಿಕರಿಗಾಗಲೀ, ವಾಹನ ಸವಾರರಿಗೆ ತೊಂದರೆಯಾಗಬಾರದು ಎಂದು ತಿಳಿಸಿದರು.
ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಲು ವಿವಿಧ ಶಾಲೆ – ಕಾಲೇಜುಗಳಲ್ಲಿ ಪೊಲೀಸ್, ಸಾರಿಗೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜಾಗೃತಿ ಮೂಡಿಸಲು ವಿವಿಧ ರೀತಿಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಯವರು, ಮಿತಿ ಮೀರಿದ ಸರಕು ಸಾಗಾಣಿಕೆ ಹಾಗೂ ಮಿತಿಗಿಂತಲೂ ಹೆಚ್ಚಿನ ಪ್ರಯಾಣಿಕರನ್ನು ಸಾಗಿಸುವ ವಾಹನಗಳ ಚಾಲಕರ ಡ್ರೆöÊವಿಂಗ್ ಲೈಸೆನ್ಸ್ ಅಮಾನತುಗೊಳಿಸಿ, ಈ ರೀತಿಯ ರೈಡ್‌ಗಳನ್ನು ಹೆಚ್ಚು ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್ ಅವರಿಗೆ ತಿಳಿಸಿದರು.
ಜಿಲ್ಲೆಯ ಎಲ್ಲಾ ರಸ್ತೆಗಳ 14 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ, ಅಲ್ಲಿ ಕಡ್ಡಾಯವಾಗಿ ಗುರುತಿನ ಫಲಕ ಅಳವಡಿಸಬೇಕು, ಹೊಸದಾಗಿ ಬರುವ ವಾಹನಗಳು ಕಡ್ಡಾಯವಾಗಿ ನೋಂದಾಯಿಸಿರಬೇಕು, ಆ ವಾಹನಗಳು ನಂಬರ್ ಪ್ಲೇಟ್‌ನೊಂದಿಗೆ ಹೊರಬರಬೇಕು, ದ್ವಿಚಕ್ರವಾಹನಗಳ ಸವಾರರು ಹೆಲ್‌ಮೆಟ್ ಬಳಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಸೇರಿದಂತೆ ರಸ್ತೆ ನಿರ್ಮಾಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.
ಕಳ್ಳಭಟ್ಟಿ ಸರಾಯಿ ಸಾಗಾಣಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಯದಗಿರಿ.ಜ30 (ಕ.ವಾ):- ಅಕ್ರಮ ಕಳ್ಳಭಟ್ಟಿ ಸರಾಯಿ ಮತ್ತು ಕೈ ಹೆಂಡ ತಯಾರಿಕೆ ಹಾಗೂ ಸಾಗಾಣಿಕೆ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಅಬಕಾರಿ ಉಪ ಆಯುಕ್ತ ಡಾ. ಸಂಗನಗೌಡ ಹೊಸಳ್ಳಿ ಅವರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜ.30ರ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಳ್ಳಭಟ್ಟಿ ಸರಾಯಿ ನಿರ್ಮೂಲನಾ ಸ್ಥಾಯಿ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಷಪುರಿತ ಮದ್ಯದ ಸೇವನೆಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಹಲವು ಜನರು ಪ್ರಾಣಕಳೆದುಕೊಂಡ ಬಗ್ಗೆ ಮಾದ್ಯಮಗಳಲ್ಲಿ ಆಗಾಗ್ಯೆ ವರದಿಯಾಗುತ್ತದೆ, ಯಾದಗಿರಿ ಜಿಲ್ಲೆಯಾದ್ಯಂತ ಈ ರೀತಿಯ ಯಾವುದೇ ಅವಘಡಗಳು ನಡೆಯದಂತೆ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯು ನೆರೆಯ ತೆಲಂಗಾಣ ಮತ್ತು ಆಂಧ್ರಪ್ರದೇಶಗಳೊAದಿಗೆ ಗಡಿ ಹಂಚಿಕೊAಡಿದ್ದು, ಈ ರಾಜ್ಯಗಳಿಂದ ತೆರಿಗೆ ಪಾವತಿಸದ ಮಧ್ಯ ಅಥವಾ ಮಾನವ ಸೇವನೆಗೆ ಯೋಗ್ಯವಲ್ಲದ ಮದ್ಯ ಹಾಗೂ ಅದರ ಸಾಗಾಣಿಕೆ ಆಗದಂತೆ ಹದ್ದಿನಕಣ್ಣಿಡಬೇಕು, ಸಂಬAದ ಪಟ್ಟ ಇಲಾಖೆಗಳು ಇದರ ಪರಿಶೀಲನೆಗೆ ಜಂಟಿಯಾಗಿ ಕಾರ್ಯನಿರ್ವಹಿಸಿಬೇಕೆಂದು ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಋಷಿಕೇಶ ಭಗವಾನ್ ಸೋನವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಸೇರಿದಂತೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಫೆ.1 ರಂದು ಮಡಿವಾಳ ಮಾಚಿದೇವರ ಜಯಂತಿ: ಸರಳ ಆಚರಣೆಗೆ ನಿರ್ಧಾರ
ಯಾದಗಿರಿ.ಜ.30 (ಕ.ವಾ):- ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಮುಂಬರುವ ಫೆಬ್ರುವರಿ 1 ರಂದು ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಜ.30ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುವುದು, ಅಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಗುತ್ತದೆ ಎಂದರು.
ಜಯಂತಿಯಲ್ಲಿ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸ್ಯಾನಿಟೈಜರ್ ಉಪಯೋಗಿಸಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿಯಾದ ಪ್ರಕಾಶ್ ರಜಪೂತ್,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ, ಸಮಾಜದ ಮುಖಂಡರು ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಇಂದು ವಿದ್ಯುತ್ ವ್ಯತ್ಯಯ
ಯಾದಗಿರಿ.ಜ30 (ಕ.ವಾ):- ಇಲ್ಲಿನ 110 ಕೆವಿ ವಿದ್ಯತ್ ವಿತರಣಾ ಕೇಂದ್ರದಲ್ಲಿ ನಿರಂತರ ವಿದ್ಯುತ್ ಪೂರೈಕೆ ಹಾಗೂ ವಿದ್ಯುತ್ ಅವಘಡಗಳಾದಂತೆ ತಡೆಯಲು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡ ಪ್ರಯುಕ್ತ ಇದೇ ಜ.31ರ ಭಾನುವಾರ ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯ ವರೆಗೆ ಯಾದಗಿರಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಗ್ರಾಹಕರು ಸಹಕರಿಸುವಂತೆ ಜೆಸ್ಕಾಂನ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆ ಕಾಣೆ: ಪತ್ತೆಗೆ ಮನವಿ
ಯಾದಗಿರಿ.ಜ30 (ಕ.ವಾ):- ಕಲಬುರಗಿ ಜಿಲ್ಲೆಯ ಚಿತ್ತಾಪೂರು ತಾಲೂಕಿನ ನಾಲವಾರ ಹೋಬಳಿಯ ಬಿಮನಹಳ್ಳಿಯ ನಿವಾಸಿ ಲಕ್ಷಿö್ಮ (25ವರ್ಷ) ಗಂಡ ರಾಜು ಎಂಬ ಮಹಿಳೆ ರಾಯಚೂರು ರೈಲು ನಿಲ್ದಾಣದಿಂದ 2020ರ ಡಿಸೆಂಬರ್ 31ರಿಂದ ಕಾಣೆಯಾಗಿರುತ್ತಾರೆ.
ದುಂಡು ಮುಖ, ಮೊಂಡ ಮೂಗು, ಅಗಲವಾದ ಹಣೆ, ಸಣ್ಣ ಕಿವಿ, 2 ಅಡಿ ಕಪ್ಪು ಕೂದಲಿನ ಸಾಧಾರಣ ಶರೀರವುಳ್ಳ ಇವರು 4.6 ಅಡಿ ಎತ್ತರವಿರುತ್ತಾರೆ.
ಕಾಣೆಯಾದಾಗ ಹಳದಿ ಬಣ್ಣದ ಕಾಟನ್ ಸೀರೆ, ಹಳದಿ ಬಣ್ಣದ ಕುಪ್ಪಸ ಧರಿಸಿರುತ್ತಾರೆ. ಕಾಲಿನಲ್ಲಿ ರೋಲ್ಡ್ಗೋಲ್ಡ್ ಚೈನು, ಕೈಯ್ಯಲಿ ಹಸಿರು ಹಾಜಿನ ಬಳೆ, ಬೆಳ್ಳಿ ಕಾಲುಂಗುರು, ತಾಳಿ ಹಾಗೂ ಕಿವಿಯೋಲೆ ಧರಿಸಿರುತ್ತಾರೆ, ಕನ್ನಡ ಮಾತನಾಡುವ ಇವರು ಪತ್ತೆಯಾದಲ್ಲೀ, ರಾಯಚೂರು ರೈಲು ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08532-231716 ಹಾಗೂ ಮೊಬೈಲ್ 9480802111ಗೆ ಮಾಹಿತಿ ನೀಡುವಂತೆ ರಾಯಚೂರು ರೈಲ್ವೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಗೃತಿ ಜಾಥಾಗೆ ಚಾಲನೆ
ಯಾದಗಿರಿ.ಜ30 (ಕ.ವಾ):- 32ನೇ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸ ಹಿನ್ನಲೆಯಲ್ಲಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಜ.30ರ ಶನಿವಾರ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ತಹಶೀಲ್ದಾರರ ಕಚೇರಿ ಆವರಣದಲ್ಲಿ ಸ್ಥಳೀಯ ಶಾಸಕರಾದ ವೆಂಕಟರೆಡ್ಡಿ ಗೌಡ ಮುದ್ನಾಳ್, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಅವರು ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ಸಾರಿಗೆ ಇಲಾಖೆಯ ಅಧಿಕಾರಿ ವೆಂಕಟಪ್ಪ ಕಲಾಲ್, ಮೌನೇಶ್, ಡಿವೈಎಸ್ ಸಂತೋಷ್ ಬನಟ್ಟಿ, ನಗರ ಠಾಣೆಯ ಪಿಎಸ್‌ಐ ಸೌಮ್ಯ, ಗ್ರಾಮೀಣ ಠಾಣೆಯ ಪಿಎಸ್‌ಐ ಸುರೇಶ್ ಕುಮಾರ್, ಸಂಚಾರಿ ಠಾಣೆಯ ಪಿಎಸ್‌ಐ ಪ್ರದೀಪ್ ಸೇರಿದಂತೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಜಾಥಾವು ನಗರದ ತಹಶೀಲ್ದಾರರ ಕಚೇರಿಯಿಂದ ನೂತನ ಬಸ್ ನಿಲ್ದಾಣದ ವರೆಗೆ ತೆರಳಿತು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ