ಮುಖ್ಯಮಂತ್ರಿಗಳಿAದ ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾನ ಸಮಾರಂಭವನ್ನು ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ಇದೇ ಜ.6ರ ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಹರ್ಷವರ್ಧನ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್, ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು, ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ್, ಮೀನುಗಾರಿಕೆ, ಬಂದರು ಮತ್ತು ಒಳನಾಡಿನ ಸಾರಿಗೆ ಹಾಗೂ ಮುಜುರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್, ಕರ್ನಾಟಕ ನೀರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಸುರಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವಗೌಡ ಪಾಟೀಲ್ ಯಡಿಯಾಪುರ, ಕಲಬುರಗಿ ಕ್ಷೇತ್ರದ ಸಂಸದ ಡಾ. ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ್, ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೂಶಿ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗವಹಿಸುವರು.
ಇಂದಿನಿAದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್ ಅವರು ಇದೇ ಜ.5 ಹಾಗೂ 6 ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಕೈಗೊಂಡಿರುವ ಪ್ರವಾಸದ ವಿವರ ಇಂತಿದೆ.
ಇದೇ ಜ.6ರಂದು ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಯ ಪ್ರವಾಸ ಕೈಗೊಳ್ಳುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ತಯಾರಿ ಮತ್ತು ಅಧಿಕಾರಿ ಹಾಗೂ ಶಾಸಕರು ಹಾಗೂ ಸ್ಥಳೀಯ ಮುಖಂಡರೊAದಿಗೆ ಚರ್ಚಿಸುವರು ಹಾಗೂ ಸ್ಥಳ ಪರಿಶೀಲನೆ ನಡೆಸುವರು.
ಬೆಳಿಗ್ಗೆ 11 ಗಂಟೆಗೆ ಯಾದಗಿರಿಯಿಂದ ಬಸವ ಕಲ್ಯಾಣಕ್ಕೆ ಪ್ರಯಾಣಿಸುವರು.
ಜ.6ರ ಮಧ್ಯಾಹ್ನ ಬಸವಕಲ್ಯಾಣದಿಂದ ಯಾದಗಿರಿಗೆ ಆಮಿಸುವರು. ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5 ಕ್ಕೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6ರಂದು ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಸಚಿವರ ಭೇಟಿ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಅವರು ಇದೇ ಜ.6ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಜ.6ರಂದು ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 2.45ಕ್ಕೆ ಯಾದಗಿರಿಗೆ ಆಗಮಿಸುವರು. ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರ್‌ಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6ರಂದು ಉಪ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಇದೇ ಜ.6ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಜ.6ರಂದು ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 2.45ಕ್ಕೆ ಯಾದಗಿರಿಗೆ ಆಗಮಿಸುವರು. ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರ್‌ಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುಮಿಠಕಲ್‌ನಲ್ಲಿಂದು ಟೌನ್‌ಹಾಲ್, ಆಡಿಟೋರಿಯಂ ಕಟ್ಟಡ ನಿರ್ಮಾಣಕ್ಕೆ ಚಾಲನೆ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಜಿಲ್ಲೆಯ ಗುರುಮಿಠಕಲ್ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಟೌನ್ ಹಾಲ್ ಕಟ್ಟಡದ ನಿರ್ಮಾಣ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಡಿಟೋರಿಯಂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಇದೇ ಜ.5ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಪೂರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಿಳಿ ಅಧ್ಯಕ್ಷರೂ ಹಾಗೂ ಸುರುಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ಮುಖ್ಯ ಅತಿ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ