ಮಂಗಳವಾರ, ಜನವರಿ 5, 2021

 ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಪರಿಶೀಲನೆ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲು ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇದೇ ಜ.6ರ ಬುಧವಾರ ಜಿಲ್ಲೆಗೆ ಆಗಮಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವ ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿರುವ ನೂತನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕೈಗೊಂಡಿದ್ದ ಸಿದ್ದತೆಗಳನ್ನು ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್ ಅವರು ಜ.5ರ ಮಂಗಳವಾರ ಭೇಟಿ ನೀಡಿದರು.
ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವ ಸ್ಥಳವನ್ನು ಸಂಪೂರ್ಣವಾಗಿ ಪರಿಶೀಲಿಸಿದ ಸಚಿವರು, ನಿಗದಿತ ಅವಧಿಯೊಳಗೆ ಪೆಂಡಾಲ್ ಕಾರ್ಯಗಳು ಪೂರ್ಣಗೊಳ್ಳಬೇಕು, ವೇದಿಕೆ ನಿರ್ಮಾಣ ಸೂಕ್ತವಾಗಿ ಆಗಬೇಕು, ವಿದ್ಯುತ್ ಸಂಪರ್ಕ, ಆಸನಗಳು, ಧ್ವನಿವರ್ಧಕಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ವಾಹನ ನಿಲ್ದಾಣಕ್ಕೆ ಸೂಕ್ತ ಸ್ಥಳವನ್ನು ಕಾಯ್ದಿರಿಸಬೇಕು, ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರನ್ನೂ ಥರ್ಮಲ್ ಸ್ಕಿçÃನಿಂಗ್‌ಗೆ ಒಳಪಡಿಸಬೇಕು, ಕಡ್ಡಾವಾಗಿ ಮಾಸ್ಕ್ ಧರಿಸಬೇಕು, ಕುಡಿಯುವ ನೀರು ಪೂರೈಕೆ, ಮಧ್ಯಾಹ್ನದ ಭೋಜನ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ಥಳೀಯ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್, ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ, ಯಾದಗಿರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ್ ಸೇರಿದಂತೆ ಜನಪತ್ರಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಅಯ್ಯಪ್ಪ ಕ.ರ.ವೇ, Vishwanath Reddy Allur and 6 others

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...