ಸಹಾಯಧನ ಪಡೆಯಲು ಅರ್ಜಿ ಅಹ್ವಾನ
ಯಾದಗಿರಿ.ಜ.20 (ಕ.ವಾ):- ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆದು ಸಹಾಯಧನ ನೀಡುವ ಹೊಸ ಯೋಜನೆಯನ್ನು ಇಲಾಖೆ ಜಾರಿಗೆ ತಂದಿದ್ದು,ಇದಕ್ಕೆ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯನ್ನು ಸದುಪಯೋಗವನ್ನು ಪಡೆದುಕೊಳ್ಳಲು ಕಳೆದ 3 ಶೈಕ್ಷಣಿಕ ವರ್ಷದಲ್ಲಿ ಅಧಿಕೃತ ಅಂತರ-ರಾಷ್ಟಿçÃಯ, ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಅಥವಾ ರಾಜ್ಯ ಮಟ್ಟದ/ಅಂತರ-ರಾಜ್ಯ/ ಅಂತರ-ವಿಶ್ವವಿದ್ಯಾಲಯ/ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ (ವಿಕಲಚೇತನ ಕ್ರೀಡಾಪಟುಗಳೂ ಸೇರಿದಂತೆ) ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಹಾಗೂ ಸಹಾಯಧನವನ್ನು ಪಡೆಯಬಹುದಾಗಿದೆ.
ಆಸಕ್ತ ಕ್ರೀಡಾಪಟುಗಳು/ಕ್ರೀಡಾ ಪೋಷಕರು ತಮ್ಮ ಕ್ರೀಡಾ ದಾಖಲೆ/ಪ್ರಮಾಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ಸಹಾಯಧನ ಪಡೆಯಲು ಫೆ. 02, 2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು,
ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ಕ್ರೀಡಾಂಗಣ ದಲ್ಲಿನ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಯಾದಗಿರಿ ಇಲ್ಲಿ ಸಂಪರ್ಕ ಮಾಡಬಹುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಸಬ್-ಇನ್ಸ್ಪೆಕ್ಟ್ರ್ ಹುದ್ದೆಗೆ ಅರ್ಜಿ ಆಹ್ವಾನ
ಯಾದಗಿರಿ.ಜ.20 (ಕ.ವಾ):- ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಖಾಲಿ ಉಳಿದ ವೃಂದಗಳ ಪೊಲೀಸ್ ಸಬ್ ಇನ್ಸ್ಪೆಕ್ಟ್ರ್ (ಸಿವಿಲ್) (ಪುರುಷ, ಮಹಿಳಾ & ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಖಾಲಿ ಹುದ್ದೆಗಳ ವರ್ಗಿಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅಧಿಕೃತ ವೆಬ್‌ಸೈಟ್ ತಿತಿತಿ.ಡಿeಛಿಡಿuiಣmeಟಿಣ.ಞsಠಿ.gov.iಟಿ ನಲ್ಲಿನ ಅಧಿಸೂಚನೆಯನ್ನು ಗಮನಿಸಬೇಕು, ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಕೃತ ವೆಬ್‌ಸೈಟ್ ನೀಡಲಾಗಿರುವ ಅಧಿಸೂಚನೆಯಲ್ಲಿನ ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡು ಅರ್ಜಿಯನ್ನು ಸಲ್ಲಿಸಭೇಕೆಂದು ಯಾದಗಿರಿ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಜನ ಸಂಪರ್ಕ ಸಭೆ
ಯಾದಗಿರಿ.ಜ20 (ಕ. ವಾ): ಭ್ರಷ್ಟಾಚಾರಕ್ಕೆ ಸಂಬAಧಿಸಿದAತೆ ಅಹವಾಲು ಸಲ್ಲಿಸಿಲು ಜ.22 ರಂದು ಸುರಪುರ ತಹಸೀಲ್ ಕಾರ್ಯಾಲಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ವತಿಯಿಂದ ಜನ ಸಂಪರ್ಕ ಸಭೆ ಹಾಗೂ ಅರ್ಜಿ ಅಹವಾಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಈ ಕಾರ್ಯಕ್ರಮದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಡಿ.ಎಸ್.ಪಿ ಉಮಾಶಂಕರ, ಪಿ.ಐ ಗಳಾದ ಬಾಬಾಸಾಹೇಬ್ ಪಾಟೀಲ್,ಗುರುಪಾದ ಬಿರಾದಾರ ಅವರು ಭಾಗಿಯಾಗಲಿದ್ದು, ಸಾರ್ವಜನಿಕರು ಭೇಟಿಯಾಗಿ ಅಂದು 11 ಗಂಟೆಯಿAದ 2 ಗಂಟೆಯವರೆಗೆ ಅಹವಾಲು ಸಲ್ಲಿಸಬಹುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪ –ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ