ಇಂದು ಗಣರಾಜ್ಯೋತ್ಸವ ದಿನಾಚರಣೆ
ಯಾದಗಿರಿ.ಜ.25 (ಕ.ವಾ):- ಜಿಲ್ಲಾಡಳಿತದ ವತಿಯಿಂದ ಇದೇ ಜ.26ರ ಮಂಗಳವಾರ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಮುರುಗೇಶ್ ಆರ್. ನಿರಾಣಿ ಅವರು ಬೆಳಿಗ್ಗೆ 9 ಗಂಟೆಗೆ ರಾಷ್ಟç ಧ್ವಜಾರೋಹಣ ನೆರವೇರಿಸುವರು.
ಸ್ಥಳೀಯ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ, ಸುರಪುರ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ), ಸಂಸದರಾದ ರಾಜಾ ಅಮರೇಶ್ವರ ನಾಯಕ್, ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ, ಶಹಾಪೂರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ, ಕೃಷ್ಣಾ ಕಾಡಾದ ಅಧ್ಯಕ್ಷರಾದ ಶರಣಪ್ಪ ತಳವಾರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಹಾಗೂ ಇತರೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ