ಶನಿವಾರ, ಜನವರಿ 30, 2021

ಇಂದು ಪಲ್ಸ್ ಪೋಲಿಯೋ

ಯಾದಗಿರಿ.ಜ.30 (ಕ.ವಾ):- ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 1,61,662 ಮಕ್ಕಳಿಗೆ ಜ.31 ರಂದು ನಡೆಯುವ  ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾ ಸಂತಾನೋತ್ಪತ್ತಿ ಮಕ್ಕಳ ಆರೋಗ್ಯ ಕಲ್ಯಾಣಾಧಿಕಾರಿ ಡಾ. ಸೂರ್ಯ ಪ್ರಕಾಶ್ ಕಂದಕೂರ ತಿಳಿಸಿದ್ದಾರೆ.


ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿ 653 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಜೊತೆಗೆ 12 ಮೊಬೈಲ್ ತಂಡ, 41 ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗುತ್ತಿದೆ. ಎಲ್ಲ ಟೋಲ್‌ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರ ತೆರೆದು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ.


ಲಸಿಕಾ ಸ್ವಯಂಸೇವಕರು ಹಾಗೂ ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಲಿದ್ದು, ಆರೋಗ್ಯ, ಪಂಚಾಯತ್ ರಾಜ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ ಇಲಾಖೆ ಹಾಗೂ ಇತರ ಇಲಾಖೆ ಅಧಿಕಾರಿಗಳು, ರೋಟರಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಹಕಾರ ಪಡೆಯಲಾಗುತ್ತದೆ.


ಸಾರ್ವಜನಿಕರು ಮಕ್ಕಳಿಗೆ ಕಡ್ಡಾಯವಾಗಿ ಈ ಲಸಿಕೆ ಹಾಕಿಸಬೇಕು. ಗ್ರಾಮಾಂತರ ಪ್ರದೇಶದಲ್ಲಿ ಫೆ.1 ಹಾಗೂ 2, ನಗರ ಪ್ರದೇಶಗಳಲ್ಲಿ ಫೆ. 1 ರಿಂದ 3ರವರೆಗೆ ಸ್ವಯಂಸೇವಕರು ಮನೆ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೋ ಹನಿ ಹಾಕಿಸಿಸಿಕೊಂಡಿದ್ದಾರೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜನರಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಅವಶ್ಯಕ: ನ್ಯಾಯಾಧೀಶ ಎಸ್.ಶ್ರೀಧರ

ಯಾದಗಿರಿ.ಜ.30 (ಕ.ವಾ):- ಜನರಲ್ಲಿ ಸ್ವಚ್ಛತೆ ಕುರಿತು ಬದಲಾಣೆಯ ಇಚ್ಛಾಶಕ್ತಿ ಉಂಟಾದಾಗ ಸ್ವಚ್ಛ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು  ಗೌರವಾನ್ವಿತ ನ್ಯಾಯಾಧೀಶರಾದ ಎಸ್.ಶ್ರೀಧರ ಅವರು ಹೇಳಿದರು.


ನಗರದಲ್ಲಿ ಜ.30 ರ ಶನಿವಾರ ದಂದು ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯಾದಗಿರಿ ನಗರ ಸಭೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ ರಾಷ್ಟ್ರೀಯ ಸ್ವಚ್ಚತಾ ದಿನಾಚರಣೆ ಅಂಗವಾಗಿ ಸ್ವಚ್ಛತಾ ಹಾಗೂ ಕಾನೂನು ಅರಿವು - ನೆರವು ಕಾರ್ಯಕ್ರಮದಲ್ಲಿ ನ್ಯಾಯಾಲಯದ ಆವರಣವನ್ನು ಸ್ವಚ್ಚಗೊಳಿಸುವ ಮೂಲಕ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ಅರ್ಜುನ ಬನಸೋಡೆ ಅವರು ಮಾತನಾಡಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಬೇಕು, ಪ್ಲಾಸ್ಟಿಕ್ ಸರಳವಾಗಿ ಕೊಳೆಯದ ಕಾರಣ ಪರಿಸರಕ್ಕೆ ಹಾನಿಯಾಗುತ್ತದೆ. ಸ್ವಚ್ಛ ಪರಿಸರದ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.


ನಗರಸಭೆಯ ಪೌರಾಯುಕ್ತರಾದ ಹೆಚ್.ಬಕ್ಕಪ್ಪ, ನಿಂಗಣ್ಣ ಬಂದಳ್ಳಿ, ಎಸ್.ಪಿ.ನಾಡೇಕರ್, ಗೋವಿಂದ್ ಜಾಧವ್, ನಾಗರಾಜ ಯರಗೋಳ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು. 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...