ಸೋಮವಾರ, ಜನವರಿ 11, 2021

 ರಾಷ್ಟಿçÃಯ ಮತದಾರರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ಯಾದಗಿರಿ,ಜ 11 (ಕ.ವಾ);- ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸುವುದು ಹಾಗೂ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಯಾದ ಶಿಲ್ಪಾ ಶರ್ಮಾ ಅವರು ಹೇಳಿದರು.
ಜನವರಿ 25 ರಂದು ನಡೆಯುವ ರಾಷ್ಟಿçÃಯ ಮತದಾರರ ದಿನಾಚರಣೆ ಅಂಗವಾಗಿ ವಿವಿಧ ಶಾಲಾ – ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು.
ರಾಜ್ಯ ಮಟ್ಟದ ಸ್ಪರ್ಧಾ ಚಟವಟಿಕೆಗಳಾದ ಪ್ರಬಂಧ ಸ್ಪರ್ಧೆ (ಕನ್ನಡ ಹಾಗೂ ಇಂಗ್ಲೀಷ) ಮತ್ತು ಭಿತ್ತಿ ಪತ್ರ, ಕೊಲಾಜ್ ಮೇಕಿಂಗ್ ನಡೆಸಲು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪ್ರೌಢಶಾಲೆ ಸೇರಿದಂತೆ ಇತರ ಕಾಲೇಜಿನ ನಾಲ್ಕು ವಿಭಾಗಗಳ ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಸ್ಪರ್ಧೆಯನ್ನು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ವಿಡಿಯೋ ಕಾನ್ಪೆರೆನ್ಸ್ ಮುಖಾಂತರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯಾದ ಮುಕ್ಕಣ್ಣ ಕರಿಗಾರ, ಡಿ.ಡಿ.ಪಿ.ಯುರಾದ ಚಂದ್ರಕAತ ಹಳ್ಳಿ, ಡಿ.ಡಿ.ಪಿ.ಐರಾದ ಶ್ರೀನಿವಾಸ ರಡ್ಡಿ, ಜಿಲ್ಲಾ ಪಂಚಾಯಿತಿ ಎನ್.ಆರ್.ಡಿ.ಎಮ್.ಎಸ್.ರಾದ ಸಿದ್ದಾರಡ್ಡಿ, ಪ್ರಾಚಾರ್ಯರಾದ ವೆಂಕರಾಮನ ಕುಲಕರ್ಣಿ ಹಾಗೂ ಕಿರಣಸಿಂಗ್, ದೀಪಿಕಾ, ಭವಾನಿ, ಪ್ರಜ್ಞೆ ಲಕ್ಷಿö್ಮÃ ಸೇರಿದಂತೆ ಇತರರ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.
Image may contain: 2 people, table and indoor

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...