ರಾಷ್ಟಿçÃಯ ಮತದಾರರ ದಿನಾಚಾರಣೆ ಮತದಾನ ಕಡ್ಡಾಯಗೊಳಿಸುವ ಕಾನೂನು ಜಾರಿಗೆ ಬರಲಿ:ಶ್ರೀಧರ
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ ರಾಷ್ಟಿçÃಯ ಮತದಾರರ ದಿನಾಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನ ಆಚರಿಸಲಾಗುತ್ತಿದ್ದು, ಮತದಾರರು ಹೆಸರು ನೊಂದಾಯಿಸಿಕೊAಡು ಭವ್ಯ ಭಾರತ ನಿರ್ಮಾಣಕ್ಕೆ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಪ್ರಸ್ತುತ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಮತದಾನ ಶೇಕಡವಾರು ಪ್ರಮಾಣ ಬಹಳ ಕಡಿಮೆಯಾಗುತ್ತಿರುವದು ತುಂಬಾ ಬೇಸರದ ಸಂಗತಿಯಾಗಿದೆ ಎಂದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದಲ್ಲಿ 1950ರಲ್ಲಿ ಚುನಾವಣಾ ಆಯೋಗ ಸ್ಥಾಪನೆಯಾದ ನೆನೆಪಿಗಾಗಿ 2011 ರ ಜ.25 ರಿಂದ ರಾಷ್ಟಿçÃಯ ಮತದಾರರ ದಿನಾಚಾರಣೆಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ವರ್ಷ 9 ಲಕ್ಷ ಮತದಾರರು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊAಡಿದರೆ ಈ ವರ್ಷ 10.12 ಲಕ್ಷ ಮತದಾರರಿದ್ದಾರೆ .ಇದರಲ್ಲಿ 10,975 ಜನ ಯುವ ಮತದಾರರಿದ್ದಾರೆ ಎಂದರು.
ಮತದಾರರಲ್ಲಿ ತಿಳುವಳಿಕೆ ಮೂಡಿಸುವುದು, ಕಡ್ಡಾಯ ಮತದಾನಕ್ಕೆ ಸಂದೇಶ ತಿಳಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದ್ದು ತಂತ್ರಜ್ಞಾನಗಳ ಸಹಾಯದಿಂದ ಎಫಿಕ್ (ಇಠಿiಛಿ) ತಂತ್ರಾAಶವನ್ನು ಬಳಸಿಕೊಂಡು ಹೊಸ ಮತದಾರರು ಮತದಾರರ ಪಟ್ಟಿಯಲ್ಲಿ ಸ್ವಯಂ ನೋಂದಾಯಿಸಿಕೊಳಬೇಕು ಎಂದು ಸಲಹೆ ನೀಡಿದರು.
ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಮತದಾರರ ಗುರುತಿನ ಚೀಟಿ ಮಿತರಣೆ: 11 ನೇ ರಾಷ್ಟಿçÃಯ ಮತದಾರರ ದಿನಾಚರಣೆ-2021 ರ ನಿಮಿತ್ತ ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮತದಾರರ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ನೂತನ ಮತದಾರರಿಗೆ ಮತದಾನ ಗುರುತಿನ ಚೀಟಿ ವಿತರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಸುಮೈಯ ಬೇಗಂ, ಫರ್ಹನಾ ಬೇಗಂ, ರುಕ್ಸಾನಾ ಬೇಗಂ, ಅಖಿಲಾ, ಕೃತಿಕ, ಅಂಬಿಕಾ, ಸಂದೀಪ, ಶ್ರವಾಣಿ, ಐಶ್ವರ್ಯ, ಮಹೇಶ್ವರ್ ರೆಡ್ಡಿ, ಪ್ರಿಯಾಂಕ ಹಾಗೂ ಮತ್ತಿತರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಯಿತು.
ವಿವಿಧ ಸ್ಪರ್ಧೆಗಳಿಗೆ ಪ್ರಶಸ್ತಿ ಮತ್ತು ಬಹುಮಾನ: ರಾಷ್ಟಿçÃಯ ಮತದಾರರ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ಪ್ರೌಢ ಶಾಲೆ, ಪದವಿ ಪೂರ್ವ, ಪದವಿ/ ಸ್ನಾತಕೋತ್ತರ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಬಹುಮಾನ ವಿತರಣೆ ಮಾಡಲಾಯಿತು. ಅಲ್ಲದೇ ಸ್ಪೀಪ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಶಾಲಾ/ ಕಾಲೇಜುಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ಅರ್ಜುನ ಬನಸೋಡೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಆಸ್ರೀನಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ.ಜಿ ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಬಿಲ್ಲುಗಾರಿಕೆ ಸಾಧನೆ ಮಾಡಿದ ಬಾಲಕಿ ಬಸಮ್ಮ ಇದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ