ಸೋಮವಾರ, ಜನವರಿ 25, 2021

 ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸಕ್ಕೆ ಸಿ.ಪಿ.ಐ ಶ್ರೀನಿವಾಸ್ ಅವರಿಂದ ಚಾಲನೆ


ಯಾದಗಿರಿ.ಜ.25 (ಕ.ವಾ):-
ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಶಹಾಪುರ ವೃತ್ತದ ಸಿ.ಪಿ.ಐ ಶ್ರೀನಿವಾಸ್ ಅನ್ನಪೂರಿ ಅವರು ಸಲಹೆ ನೀಡಿದರು.

ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆ ವತಿಯಿಂದ 32ನೇ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸ ಜಾಗೃತಿ ಜಾಥಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ. ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‌ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದು ಸೂಚಿಸಿದರು.

ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯತೆ ತೋರದೆ ನಿಯಮ ಪಾಲನೆ ಮಾಡಬೇಕು. ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗೋಗಿ ಠಾಣೆಯ ಪಿ.ಎಸ್.ಐ ಸೋಮಲಿಂಗಪ್ಪ, ಬಿ-ಗುಡ್ಡಿ ಠಾಣೆಯ ಪಿ.ಎಸ್.ಐ ಸುಶೀಲ್ ಕುಮಾರ್, ಗುಪ್ತ ಮಾಹಿತಿ ಸಿಬ್ಬಂದಿಯಾದ ಹನುಮಂತ್ರಾಯ ಕಕ್ಕೇರಿ ಜಾಲಹಳ್ಳಿ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...