ರಾಷ್ಟಿçÃಯ ಹೆಣ್ಣು ಮಕ್ಕಳ ದಿನ ಆಚರಣೆ
ಗುರುಗಳಿಂದ ಗುರಿ ಸಾಧಿಸಿ:ಯಡಿಯಾಪೂರ
ಯಾದಗಿರಿ.ಜ.28 (ಕ.ವಾ):- ಗುರುಗಳ ಸಹಾಯದಿಂದ ನಿಮ್ಮ ಗುರಿಗಳನ್ನು ಸಾಧಿಸಿ ದೊಡ್ಡ ಮಟ್ಟದ ಅಧಿಕಾರಿಗಳಾಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜ.28 ರ ಗುರುವಾರ ದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಿಕಾ ಟಾಟಾ ಟ್ರಸ್ಟ್, ಅಜೀಮ್ ಪ್ರೇಮ್ಜೀ, ಮಕ್ಕಳ ಸಹಾಯವಾಣಿ, ಡಾನ್ ಬೋಸ್ಕೋ ಸೇವಾ ಸಂಸ್ಥೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಪ್ರತಿಭಾನ್ವಿತ ಬಾಲಕಿಯರಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಹನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯು ಮಹಿಳೆಯರು ಮುಂದಿದ್ದಾರೆ. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಸಹ ಬಾಲಕಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ನೀವು ಕೂಡಾ ಭವಿಷ್ಯದಲ್ಲಿ ದೊಡ್ಡ ಅಧಿಕಾರಿಗಳಾಗಬೇಕೆಂದು ಸಂಕಲ್ಪ ಮಾಡಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಶಿಲ್ಪಾ ಶರ್ಮಾ ಅವರು, ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸಮಾಜದಲ್ಲಿ ಹೆಣ್ಣಿನ ಅಸಮಾನತೆ ಹೋಗಲಾಡಿಸಲು ಜ.24-2015 ರಿಂದ ಆಚರಿಸುತ್ತಾ ಬರಲಾಗುತ್ತಿದೆ ಎಂದು ತಿಳಿಸಿದರು.
ಜಿ.ಪಂ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಪ್ರಸ್ತಾವಿಕ ನುಡಿಗಳಾಡಿದರು. ಎಲ್ಲ ಹೆಣ್ಣು ಮಕ್ಕಳ ಪ್ರತಿನಿಧಿಯಾಗಿ ಕಾರ್ಯಕ್ರಮದ ಮುಖ್ಯ ಅತಿಥಿ ಯಾಗಿ ಭಾಗವಹಿಸದ ವಿದ್ಯಾರ್ಥಿನಿ ಶಿಲ್ಪಾ ನಿಂಗಣ್ಣ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯಾದ ಮುಕ್ಕಣ್ಣ ಕಾರಿಗಾರ, ಸಿದ್ದರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ