ಶುಕ್ರವಾರ, ಫೆಬ್ರವರಿ 26, 2021

 ವಾಹನ ವಾರಸುದಾರರ ಪತ್ತೆಗೆ ಮನವಿ

ಯಾದಗಿರಿ,ಫೆ.೨೬ (ಕ.ವಾ):- ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧಡೆ ವಾರಸುದಾರರಿಲ್ಲದ ೧೩ ವಾಹನಗಳು ಪತ್ತೆಯಾಗಿವೆ.

ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ವಾಹನಗಳನ್ನು ತಂದು ನಗರ ಪೊಲೀಸ್ ಠಾಣೆಯಲ್ಲಿ ಇರಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನ ವಾರಸುದಾರರ ಪತ್ತೆಗಾಗಿ ಠಾಣಾ ಆವರಣದಲ್ಲಿ ವಾಹನಗಳನ್ನು  ನಿಲ್ಲಿಸಲಾಗಿದೆ ಎಂದು ನಗರ ಪೊಲೀಸ್ ಆರಕ್ಷಕ ಉಪನೀರಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಯಾದಗಿರಿ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸಲು ಅವರು ಕೋರಿದ್ದಾರೆ.  


ಚೆಕ್ ವಿತರಣೆ


ಯಾದಗಿರಿ.ಫೆ.೨೬ (ಕ.ವಾ):- ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನಾ ಸ್ಕೀಮ್ ಅಡಿಯ ಫಲಾನುಭವಿಯೊಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ  ಅವರ ಪತ್ನಿಗೆ ಯೋಜನೆಯ ಹಣವನ್ನು ವಿತರಿಸಲಾಗಿದೆ.

ಕಿಸನ್ ಎಂಬ ವ್ಯಕ್ತಿ ಮರಣ ಹೊಂದಿದ್ದು, ಅವರ ಪತ್ನಿ ಚಂದ್ರಿಬಾಯಿ ಅವರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನಾ ಸ್ಕೀಮ್ ಅಡಿ ೨ ಲಕ್ಷ ರೂ.ಗಳ ಚೆಕ್‌ನ್ನು ನಗರದ ಅಲಿಪುರ ದೊಡ್ಡ ತಾಂಡಾದಲ್ಲಿ ವಿತರಿಸಲಾಗಿದೆ ಎಂದು ಅಲಿಪುರ ಎಸ್.ಬಿ.ಐ ಶಾಖೆಯ ವ್ಯವಸ್ಥಾಪಕರಾದ ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್.ಬಿ.ಐ, ಡಿ.ಎಸ್.ಹೆಚ್. (ಯಾದಗಿರಿ) ಮುಖ್ಯ ವ್ಯವಸ್ಥಾಪಕರು (ಎಫ್ ಐ) ಶಿವರಾಜ್ ಪಾಟೀಲ್ ಗೌಡ ಹಾಗೂ ಗ್ರಾಮ ಪಂಚಾಯತ್ ನೂತನ ಸದಸ್ಯರು ಉಪಸ್ಥಿತರಿದ್ದರು ಎಂದು ಅವರು ತಿಳಿಸಿದ್ದಾರೆ.  


ಬುಧವಾರ, ಫೆಬ್ರವರಿ 24, 2021

           ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ಕುರಿತು ವಿಶೇಷ ಕಾರ್ಯಾಗಾರ

ಉಚಿತವಾಗಿ ಸಿಗುವ ಆ್ಯಪ್ ಬಳಸುವದರಿಂದ ಹ್ಯಾಕಿಂಗ್ ಸಾಧ್ಯತೆ ಹೆಚ್ಚು: ವಿವೇಕ ಹೊನಗುಂಟಿಕರ್ 

ಯಾದಗಿರಿ.ಫೆ.24(ಕ.ವಾ):- ಅಂತರ್ಜಾಲದಲ್ಲಿ ಉಚಿತವಾಗಿ ಸಿಗುವ ಆ್ಯಪ್ ಮತ್ತು ಸಾಫ್ಟ್ ವೇರ್‌ಗಳ ಬಳಕೆಯಿಂದ  ಅನುಮತಿಯಿಲ್ಲದೇ ಮಾಹಿತಿ ಕದಿಯುವ (ಹ್ಯಾಕಿಂಗ್) ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ವಿವೇಕ ಹೊನಗುಂಟಿಕರ್ ತಿಳಿಸಿದರು.


ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇ-ಆಡಳಿತ ಮತ್ತು ದತ್ತಾಂಶ ವಿಶ್ಲೇಷಣಾ ಕೇಂದ್ರ, ಆಡಳಿತ ಸಂಸ್ಥೆ  ಮೈಸೂರು, ಇ-ಆಡಳಿತ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ತರಬೇತಿ ಸಂಸ್ಥೆ, ಯಾದಗಿರಿ ಇವರ ಸಹಯೋಗದೊಂದಿಗೆ ಎನ್‌ಇಜಿಡಿ ಸಾಮರ್ಥ್ಯಾಭಿವೃದ್ಧಿ ಯೋಜನೆಯಡಿ ಆಯೋಜಿಸಿದ್ದ ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.


ಇಂದಿನ ದಿನಗಳಲ್ಲಿ ಹ್ಯಾಕಿಂಗ್ ಮತ್ತು ಹ್ಯಾಕರ್ಸ್ ಕಾನೂನು ಬಾಹಿರವಾಗಿ ತೀರಾ ಖಾಸಗಿ ವಿಷಯಗಳನ್ನು ಸಹ ಕದಿಯುತ್ತಿದ್ದು, ಇದನ್ನು ತಡೆಯಲು ಮೊಬೈಲ್ ಮತ್ತು ಕಂಪ್ಯೂಟರ್‌ಗಳಲ್ಲಿ ಅಂತರ್ಜಾಲವನ್ನು ಬಳಸಿ ಇನ್‌ಸ್ಟಾಲ್ ಮಾಡಿಕೊಳ್ಳುವ  ಆ್ಯಪ್ ಮತ್ತು ಸಾಫ್ಟ್ ವೇರ್ ಗಳಿಂದ ವೈರಸ್ ಸಹ ಇನ್‌ಸ್ಟಾಲ್ ಆಗುತ್ತದೆ. ಹೀಗಾಗಿ ಹ್ಯಾಕಿಂಗ್ ಮಾಡಲು ಹ್ಯಾಕರ್ಸ್ ಗಳಿಗೆ ಆಹ್ವಾನ ಕೊಟ್ಟಂತಾಗುತ್ತದೆ ಎಂದು ಅವರು ತಿಳಿಸಿದರು.


ಜಗತ್ತಿನಲ್ಲಿ ಅಂತರ್ಜಾಲವನ್ನು ಕೇವಲ 4% ರಷ್ಟು ಮಾತ್ರ ಸಕ್ರಮ ಕಾರ್ಯಗಳಿಗೆ ಬಳಸುತ್ತಿದ್ದು ಇನ್ನುಳಿದ 96% ರಷ್ಟು ಅಕ್ರಮವಾಗಿ ಬಳಸುತ್ತಿದ್ದಾರೆ ಮತ್ತು ಹ್ಯಾಕಿಂಗ್ ತಡೆಗಟ್ಟಲು ಒಟಿಪಿ ಕ್ರಮವನ್ನು ಬಳಸುತ್ತಿರುವುದು ನಮ್ಮ ದೇಶ ಮಾತ್ರ ಎಂದರು.


ಸಾಮಾಜಿಕ ಜಾಲತಾಣಗಳ ಮೂಲಕ ನೋಟಿಫಿಕೇಷನ್ ಗಳನ್ನು ಕಳುಹಿಸಿ ನಮ್ಮ ಗಮನ ಸೆಳೆಯಲು ಆಮಿಷಯೊಡ್ಡಿ ಹಣ ಸೇರಿದಂತೆ ನಮ್ಮ ಮಾಹಿತಿಗಳನ್ನು ಕದಿಯುತ್ತಾರೆ. ಇದರ ಬಗ್ಗೆ ಎಚ್ಚರಿಕೆ ವಹಿಸುವಂತೆ ಅವರು ಸಲಹೆ ನೀಡಿದರು.


ಕಾರ್ಯಗಾರವನ್ನು ಅಬಕಾರಿ ಇಲಾಖೆ ಉಪ ಆಯುಕ್ತ ಶಿವನಗೌಡ ಉದ್ಘಾಟಿಸಿದರು. ಯಾದಗಿರಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಅಂಬೋಜಿ ನಾಯ್ಕೊಡಿ, ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಅಜಿತ್ ನಾಯಕ್, ಡಿಸ್ಟಿçಕ್ಟ್ ಇನ್ಫಾರಮಿಟಿಕ್ ಅಧಿಕಾರಿ ಶ್ರೀನಿವಾಸರಾವ ಕುಲಕರ್ಣಿ, ಕಲಬುರಗಿ ವಿಭಾಗಿ ಇ-ಆಡಳಿತ ಸಂಸ್ಥೆಯ ಹಿರಿಯ ಭೊದಕರು ಕವಿತಾ ಎಮ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.


ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಮನವಿ

ಯಾದಗಿರಿ.ಫೆ.24(ಕ.ವಾ):- ಶಹಾಪುರ ನಗರಸಭೆ ವ್ಯಾಪ್ತಿಯ 2021-22ರ ಟ್ರೇಡ್ ಲೈಸನ್ಸ್ ಫೀ ದರಗಳ ಪಟ್ಟಿಯನ್ನು ನಗರಸಭೆ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು ವ್ಯಾಪರಸ್ಥರಿಂದ ಯಾವುದೇ ತಕರಾರು/ಆಕ್ಷೇಪಣೆಗಳಿದ್ದಲ್ಲಿ ವಾರದೊಳಗೆ ನಗರಸಭೆ ಕಾರ್ಯಾಲಯಕ್ಕೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ನಂತರ ಬರುವ ತಕರಾರು/ಆಕ್ಷೇಪಣೆ ಪರಿಗಣಿಸಲಾಗುವುದಿಲ್ಲವೆಂದು ಶಹಾಪುರ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾಚ್ 3 ರಂದು ಕೆಡಿಪಿ ಸಭೆ

ಯಾದಗಿರಿ.ಫೆ.24(ಕ.ವಾ):- ಇದೇ ಮಾಚ್ 3ರಂದು ಪಶು ಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.


ನಗರದ ಜಿಲ್ಲಾ ಪಂಚಾಯತ್  ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ಆರಂಭವಾಗಲಿದ್ದು ಸಭೆಯಲ್ಲಿ 2021ರ ಜನವರಿ ತಿಂಗಳ ಅಂತ್ಯದವರೆಗೆ ಇಲಾಖೆವಾರು ಸಾಧಿಸಿರುವ ಪ್ರಗತಿ ಸೇರಿದಂತೆ ಇನ್ನುಳಿದ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಅಧಿಕಾರಿಗಳು ಸಭೆಗೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಫೆ.26 ರಂದು ಸಾರಿಗೆ ಅದಾಲತ್

ಯಾದಗಿರಿ.ಫೆ.24(ಕ.ವಾ):- ಇದೇ ಫೆ.26 ರಂದು ಯಾದಗಿರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮಧ್ಯಾಹ್ನ 3 ಗಂಟೆಯಿAದ 5 ರವರೆಗೆ ಸಾರಿಗೆ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಾಹನದ ಹಾಗೂ ಚಾಲನಾ ಪತ್ರದ ಕುರಿತು ಯಾವುದೇ ಕುಂದು-ಕೊರತೆಗಳಿದ್ದಲ್ಲಿ  ಹಾಜರಾಗಿ ಬಗೆಹರಿಸಿಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸೋಮವಾರ, ಫೆಬ್ರವರಿ 22, 2021

 ಅನರ್ಹ ಪಡಿತರ ಚೀಟಿದಾರರು ಮತ್ತು ಸರ್ಕಾರಿ ನೌಕರರು ಪಡಿತರ ಚೀಟಿ ಹಿಂದಿರುಗಿಸಲು ಸೂಚನೆ

ಯಾದಗಿರಿ,ಫೆ22.(ಕ.ವಾ):-ಜಿಲ್ಲೆಯಲ್ಲಿನ ಅನರ್ಹ ಪಡಿತರ ಚೀಟಿದಾರರು  ಮತ್ತು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು ಸ್ವಯಂಪ್ರೇರಿತವಾಗಿ ಪಡಿತರ ಚೀಟಿಯನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಅಂತ್ಯೋದಯ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರ ಬಗ್ಗೆ ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಹಾಗೂ ಸರಕಾರಿ ನೌಕರರು ಬಗ್ಗೆ ತನಿಖೆ ನಡೆಸುತ್ತಿದ್ದು, ಅನರ್ಹ ಪಡಿತರ ಚೀಟಿದಾರರು ಮತ್ತು ಬಿ.ಪಿ.ಎಲ್ ಕಾರ್ಡ ಹೊಂದಿರುವ ಸರ್ಕಾರಿ ನೌಕರರು ಸ್ವಯಂ ಪ್ರೇರಿತವಾಗಿ ಪಡಿತರ ಚೀಟಿಯನ್ನು ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಗಳಲ್ಲಿ ಹಿಂದಿರುಗಿಸಲು ಸೂಚಿಸಲಾಗಿದೆ.

ಒಂದು ವೇಳೆ ಸರಕಾರದ ಮಾನದಂಡಗಳನ್ನು ಉಲ್ಲಂಘಿಸಿ ಪಡಿತರ ಚೀಟಿ ಹೊಂದಿದ್ದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹೆಚ್ಚುವರಿ ಸ್ಥಾನಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಯಾದಗಿರಿ,ಫೆ22.(ಕ.ವಾ):-2020-21ನೇ ಸಾಲಿನ ಯಾದಗಿರಿ ತಾಲೂಕಿನ ಬಾಲಛೇಡ ಗ್ರಾಮದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿನ ಆಂಗ್ಲ ಮಾಧ್ಯಮದ ನವೋದಯ ಮಾದರಿ ವಸತಿ (ಬಾಲಕರ) ಶಾಲೆಯಲ್ಲಿ ಭರ್ತಿಯಾಗದೇ ಖಾಲಿ ಉಳಿದಿರುವ ಹೆಚ್ಚುವರಿ ಸ್ಥಾನಗಳಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು, ಪ್ರಾಶುಂಪಾಲರು, ಅಲ್ಪಸಂಖ್ಯಾತರ ನವೋದಯ ಮಾದರಿ ವಸತಿ ಶಾಲೆ ಬಾಲಛೇಡ ಇವರಿಂದ ಅರ್ಜಿ ನಮೂನೆಗಳನ್ನು ಪಡೆದುಕೊಂಡು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ 2021ರ ಮಾರ್ಚ 6ರೊಳಗೆ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುರಪುರದಲ್ಲಿ ಉದ್ಯೋಗ ಮೇಳ

ಯಾದಗಿರಿ,ಫೆ.22(ಕ.ವಾ):- ರಾಷ್ಟಿçÃಯ ವೃತ್ತಿ ಸೇವಾ ಅಡಿಯಲ್ಲಿ (ಎನ್.ಸಿ.ಎಸ್) ಸುರಪುರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಫೆಬ್ರವರಿ 23 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆ ವರೆಗೆ  ಒಂದು ದಿನದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ, ಡಿಪ್ಲೋಮೊ, ಬಿಇ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. 

ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕಚೇರಿಗೆ ಹಾಗೂ ದೂರವಾಣಿ ಸಂಖ್ಯೆ 94482 50868, 08473-253718 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ವಯೋಶ್ರೇಷ್ಠ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಯಾದಗಿರಿ,ಫೆ.22(ಕ.ವಾ):-2020-21ನೇ ಸಾಲಿನ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದಿAದ ವಯೋಶ್ರೇಷ್ಠ ಸಮ್ಮಾನ-2021 ಹಿರಿಯ ನಾಗರಿಕರ ರಾಷ್ಟç ಪ್ರಶಸ್ತಿಗೆ ಹಿರಿಯರ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಹಿರಿಯ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಅರ್ಜಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರರಣ ಅಧಿಕಾರಿಗಳ ಕಾರ್ಯಾಲಯದ ಇಲಾಖೆಯಿಂದ ಪಡೆದು ಇಂಗ್ಲೀಷ್ ಅಥವಾ ಹಿಂದಿ ಭಾಷೆಯಲ್ಲಿ ಭರ್ತಿ ಮಾಡಿ 2021ರ ಮಾರ್ಚ 10ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಸಹಾಯವಾಣಿ  ದೂ.ಸಂ: 08473-253531 ಸಂಪರ್ಕಿಸಲು ಕೋರಿದ್ದಾರೆ. 


ಫೆ. 23ರಂದು ರಸ್ತೆ ಕಾಮಗಾರಿಯ ಉದ್ಘಾಟನಾ ಸಮಾರಂಭ

 ಯಾದಗಿರಿ,ಫೆ.22(ಕ.ವಾ):- 2019-20ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮೈಕ್ರೋ ಯೋಜನೆಯಡಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 419.79 ಲಕ್ಷ ರೂ.ಗಳಲ್ಲಿ ಕೈಗೆತ್ತಿಕೊಂಡಿರುವ  ಯಾದಗಿರಿಯಿಂAದ ಮೈಲಾಪೂರಕ್ಕೆ ವಾಯ ವರ್ಕನಳ್ಳಿ ರಸ್ತೆ ನಿರ್ಮಾಣ ಕಾಮಗಾರಿ ಉದ್ಘಾಟನೆ ಸಮಾರಂಭ ಇದೇ 23ರ ಬೆಳಿಗ್ಗೆ 10 ಗಂಟೆಗೆ ವರ್ಕನಳ್ಳಿ ಗ್ರಾಮದಲ್ಲಿ ನಡೆಯಲಿದೆ.

ಕ್ರಾರ್ಯಕ್ರಮವನ್ನು ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಉದ್ಘಾಟಿಸುವರು.

ಸ್ಥಳೀಯ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ, ಸುರಪುರ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ), ಸಂಸದರಾದ ರಾಜಾ ಅಮರೇಶ್ವರ ನಾಯಕ್, ರಾಜ್ಯಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ.ಕರ್ನಾಟಕ ಮಂಡಳಿ ಪ್ರದೇಶಾಭಿವೃದ್ಧಿ ಅಧ್ಯಕ್ಷ ದತ್ತಾತ್ರೇಯ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಸೇರಿದಂತೆ ಇತರ ಗಣ್ಯರು ಭಾಗವಹಿಸುವರು.

ವಿಚಾರ ಸಂಕಿರಣ:ಭಾಗವಹಿಸುವವರು ಅರ್ಜಿ ಸಲ್ಲಿಸಲು ಕೋರಿಕೆ

ಯಾದಗಿರಿ,ಫೆ.22(ಕ.ವಾ):- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮಾರ್ಚ್ ತಿಂಗಳಲ್ಲಿ ಎಂ.ಗೋಪಾಲಕೃಷ್ಣ ಅಡಿಗರ ಜನ್ಮಶತಮಾನೋತ್ಸವ ನೆನಪಿಗಾಗಿ ‘ಗೋಪಾಲಕೃಷ್ಣ ಅಡಿಗ ಮತ್ತು ಕನ್ನಡ ಸಾಹಿತ್ಯ’ ಎಂಬ  ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿವೆ. ವಿಚಾರ ಸಂಕಿರಣದಲ್ಲಿ ಭಾಗವಹಿಸುವವರು ಮತ್ತು  ಪರ್ಯಾಯ ಗೋಷ್ಠಿಯಲ್ಲಿ ಅಡಿಗರ ಸಾಹಿತ್ಯ ಕುರಿತಾಗಿ ಪ್ರಬಂಧ ಮಂಡಿಸುವವರು ಫೆಬ್ರವರಿ 25ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಅಕಾಡೆಮಿಗೆ ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ನಿಬಂಧನೆಗೊಳಪಟ್ಟು ಅರ್ಜಿ ಮತ್ತು ಪ್ರಬಂಧಗಳನ್ನು ಸಲ್ಲಿಸಲು ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‌ಸೈಟ್ ಅನ್ನು ತಿತಿತಿ.ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg   ಸಂಪರ್ಕಿಸಲು ಅವರು ಕೋರಿದ್ದಾರೆ

  

ಗುರುವಾರ, ಫೆಬ್ರವರಿ 18, 2021

 ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ


ಯಾದಗಿರಿ.ಫೆ.18 (ಕ.ವಾ):- ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ದೊರೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ನಡೆದ ಈ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ನಂತರ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಮಾತನಾಡಿ, ವರ್ಷಪೂರ್ತಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಪುನಃಶ್ಚೇತನ ಕಾರ್ಯಕ್ರಮದಂತೆ ಇದ್ದು, ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಹಾಗೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಬೇಕು. ದಿನನಿತ್ಯದ ಕರ್ತವ್ಯದಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುವುದು ಸಹಜ. ಎಲ್ಲರೂ ಕೂಡಿ ಆಟ ಆಡಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಮನಸ್ಸು ಪುನಃಶ್ಚೇತನಗೊಳ್ಳುತ್ತದೆ ಎಂದರು.
ನೌಕರರು ಕ್ರೀಡಾಕೂಟಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕ್ರೀಡಾ ಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದರು. ಇಲಾಖೆಯ ಕಾರ್ಯನಿರ್ವಹಿಸುತ್ತಿರುವ ನೌಕರರು ಹಲವು ಒತ್ತಡಗಳಿಂದ ಹೊರ ಬಂದು ನೆಮ್ಮದಿಯುಳ್ಳ ಜೀವನ ನಡೆಸಬೇಕಾದರೆ ಕ್ರೀಡೆ ಅತಿ ಅವಶ್ಯಕವಾಗಿದೆ ಎಂದು ಹೇಳಿದರು.
ಸರ್ಕಾರಿ ನೌಕರರಿಗೆ ಎರಡು ದಿನಗಳ ಕಾಲ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ನೌಕರರಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆಯಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಎಸ್.ಪಾಟೀಲ್ ಯಡಿಯಾಪೂರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಗಿರಿಜಮ್ಮಾ ರೋಟ್ನಡಗಿ, ನಗರಸಭೆ ಅಧ್ಯಕ್ಷರಾದ ವಿಲಾಸ ಬಿ. ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಚಂಡ್ರಿಕಿ, ಜಿಲ್ಲಾ ಪಂಚಾಯತ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಋಷಕೇಶ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಹಿಪಾಲರಡ್ಡಿ ಮಾಲಿ ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು ಬಾವಿಹಳ್ಳಿ ಸೇರಿದಂತೆ ಇತರರು ಇದ್ದರು.

 ಫೆ.23 ರಂದು ಸುರಪುರದಲ್ಲಿ ಉದ್ಯೋಗ ಮೇಳ

ಯಾದಗಿರಿ,ಫೆ.18(ಕ.ವಾ):- ರಾಷ್ಟಿçÃಯ ವೃತ್ತಿ ಸೇವಾ ಅಡಿಯಲ್ಲಿ (ಎನ್.ಸಿ.ಎಸ್) ಸುರಪುರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಫೆಬ್ರವರಿ 23 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆ ವರೆಗೆ  ಒಂದು ದಿನದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ, ಡಿಪ್ಲೋಮೋ, ಬಿಇ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯ ನೀಡಲಾಗುವುದಿಲ್ಲ. 

ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕಚೇರಿಗೆ ಹಾಗೂ ದೂರವಣಿ ಸಂಖ್ಯೆ 9448250868, 08473-253718 ಸಂಪರ್ಕಿಸಬಹುದಾಗಿದೆ.

ಸಶಸ್ತç ಪೊಲೀಸ್ ಕಾನ್ಸೆ÷್ಟÃಬಲ್ ನೇಮಕಾತಿ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಯಾದಗಿರಿ.ಫೆ.18(ಕ.ವಾ):- ಯಾದಗಿರಿ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದ 46  ಸಶಸ್ತç ಪೊಲೀಸ್ ಕಾನ್ಸೆ÷್ಟÃಬಲ್ (ಪುರುಷ) ಹುದ್ದೆಗಳ ನೇಮಕಾತಿಗೆ ಸಂಬAಧಿಸಿದAತೆ  ಪಿಎಸ್‌ಟಿ ಮತ್ತು ಇಟಿ ಪರೀಕ್ಷೆಯಲ್ಲಿ ಗೈರುಹಾಜರಾದ ಮತ್ತು ಅನರ್ಹರಾದ ಅಭ್ಯರ್ಥಿಗಳ ಬದಲಿಗೆ ಬೇರೊಬ್ಬ (ಕೆಕೆ) ಅಭ್ಯರ್ಥಿಗಳನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಹುದ್ದೆಗಳ ನೇಮಕಾತಿಗೆ 2020ರ ಅಕ್ಟೋಬರ್ 18 ರಂದು ಯಾದಗಿರಿ ನಗರದಲ್ಲಿ ಲಿಖಿತ ಪರಿಕ್ಷೆಯನ್ನು ನಡೆಸಿ ಲಿಖಿತ ಪರೀಕ್ಷೆಯಲ್ಲಿ 1:5 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ 2020ರ ಡಿಸೆಂಬರ್ 17 ರಿಂದ 24ರ ವರೆಗೆ ಪಿಎಸ್‌ಟಿ ಮತ್ತು ಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು.

 ಪಿಎಸ್‌ಟಿ ಮತ್ತು ಇಟಿ ಪರೀಕ್ಷೆಯಲ್ಲಿ ಗೈರುಹಾಜರಾದ ಮತ್ತು ಅನರ್ಹರಾದ ಅಭ್ಯರ್ಥಿಗಳ ಬದಲಿಗೆ ಬೇರೊಬ್ಬ (ಕೆ.ಕೆ) ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ಇದೀಗ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಮತ್ತು ವೆಬ್‌ಸೈಟ್ ಥಿಚಿಜgiಡಿಠಿoಟiಛಿe.ಞಚಿಡಿಟಿಚಿಣಚಿಞಚಿ.gov.iಟಿ  ಮೂಲಕ ಅಭ್ಯರ್ಥಿಗಳು ನೋಡಬಹುದಾಗಿದೆ ಎಂದು ಯಾದಗಿರಿ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಿಲ್ಲೆಯ 14 ದೇವಸ್ಥಾನಗಳ ವ್ಯವಸ್ಥಾಪನ ಸಮಿತಿ ರಚನೆಗೆ ಅರ್ಜಿ ಆಹ್ವಾನ

ಯಾದಗಿರಿ.ಫೆ.18(ಕ.ವಾ):- ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 25ರನ್ವಯ (ಪ್ರವರ್ಗ “ಎ” ಅಧಿಸೂಚಿತ) ಜಿಲ್ಲೆಯಲ್ಲಿರುವ ಪ್ರವರ್ಗ “ಬಿ” ಮತ್ತು “ಸಿ” ವರ್ಗದ ಅಧಿಸೂಚಿತ 14 ಸಂಸ್ಥೆಗಳಿಗೆ (ದೇವಸ್ಥಾನಗಳು) 9 ಸದಸ್ಯರ  ವ್ಯವಸ್ಥಾಪನಾ ಸಮಿತಿ ರಚನೆಗೆ ಆಸಕ್ತ ಭಕ್ತರಿಂದ ಅರ್ಜಿ ಆಹ್ವಾನಿಸಿದೆ.

ವ್ಯವಸ್ಥಾಪನಾ ಸಮಿತಿ ಸದಸ್ಯರ ಅವಧಿ 4 ವರ್ಷವಾಗಿದ್ದು, ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ನಿಗಧಿತ ನಮೂನೆ-1 (ಬಿ) ಅರ್ಜಿಯನ್ನು ಆಯಾ ತಹಶೀಲ್ದಾರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಈ ಪ್ರಕಟಣೆ ಹೊರಡಿಸಿದ 15 ದಿನದೊಳಗಾಗಿ ಸಂಬAಧಿಸಿದ ತಹಸೀಲ್ದಾರರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.

ಪ್ರತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ 9 ಜನ ಸದಸ್ಯರನ್ನು ಆಯ್ಕೆ ಮಾಡಬೇಕಾಗಿರುತ್ತದೆ. ಇದರಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು/ ಅರ್ಚಕರು, ಪ.ಜಾ/ಪ.ಪಂ. ಕನಿಷ್ಠ ಒಬ್ಬ ಸದಸ್ಯರು, ಇಬ್ಬರು ಮಹಿಳೆಯರು, ದೇವಸ್ಥಾನವಿರುವ ಪ್ರದೇಶದ ಸ್ಥಳೀಯ ಓರ್ವ ಗ್ರಾಮಸ್ಥರು ಹಾಗೂ ಇತರೆ 4 ಜನ ಸದಸ್ಯರನ್ನು ಆಯ್ಕೆ ಮಾಡಬೇಕಾಗಿರುತ್ತದೆ. ಸದಸ್ಯರಾಗಬಯಸುವವರು ದೇವರಲ್ಲಿ ನಂಬಿಕೆವುಳ್ಳವರಾಗಿದ್ದು, ಸನ್ನಡತೆ ಹಾಗೂ ಗೌರವ ಕಾಯ್ದುಕೊಂಡಿರಬೇಕಾಗಿರುತ್ತದೆ.

ದೇವಸ್ಥಾನಗಳ ಪಟ್ಟಿ: ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿಯ ಶ್ರೀ ಬಲಭೀಮೇಶ್ವರ ದೇವಸ್ಥಾನ, ದಿಗ್ಗಿ ಗ್ರಾಮದ ಶ್ರೀ ಸಂಗಮೇಶ್ವರ ದೇವಸ್ಥಾನ, ಶಹಾಪೂರ ಪಟ್ಟಣದ ಶ್ರೀ ಹನುಮಾನ ದೇವಸ್ಥಾನ, ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ, ಹೆಬ್ಬಾಳ(ಕೆ) ಗ್ರಾಮದ ಶ್ರೀ ಪರಮಾನಂದ ದೇವಸ್ಥಾನ, ಸುರಪೂರ ತಾಲೂಕಿನ ದೇವರಗೋನಾಳ ಗ್ರಾಮದ ಶ್ರೀ ಮೌನೇಶ್ವರ ದೇವಸ್ಥಾನ, ನಗನೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ, ಕಕ್ಕೇರಾ ಗ್ರಾಮದ ಶ್ರೀ ಸೋಮನಾಥ ದೇವಸ್ಥಾನ, ವಡಗೇರಾ ತಾಲೂಕಿನ ಹೈಯಾಳ(ಬಿ) ಗ್ರಾಮದ ಶ್ರೀ ಹೈಯಾಳಲಿಂಗೇಶ್ವರ ದೇವಸ್ಥಾನ, ಸಂಗಮ (ಡಿ) ಗ್ರಾಮದ ಶ್ರೀ ಸಂಗಮೇಶ್ವರ ದೇವಸ್ಥಾನ, ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದ ಶ್ರೀ ರಾಚಪ್ಪಯ್ಯ-ಕಡ್ಲಪಯ್ಯ ದೇವಸ್ಥಾನ ಹಾಗೂ ಇಡ್ಲೂರು ಗ್ರಾಮದ ಶ್ರೀ ಶಂಕರಲಿAಗೇಶ್ವರ ದೇವಸ್ಥಾನ. 


ಬುಧವಾರ, ಫೆಬ್ರವರಿ 17, 2021

 ಮಹತ್ವಕ್ಷಾಂಕ್ಷಿ ಜಿಲ್ಲಾ ಸಾಧನೆಯಲ್ಲಿ ಯಾದಗಿರಿಗೆ ಎರಡನೇ ಸ್ಥಾನ:

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಫೆ.17 (ಕ.ವಾ):- ಪ್ರಧಾನಮಂತ್ರಿಗಳ ವಿಶೇಷ ಕಾರ್ಯಕ್ರಮಗಳಲ್ಲಿ ಒಂದಾದ ಮಹತ್ವಾಕ್ಷಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮದ 2020 ರ ನವೆಂಬರ್ ತಿಂಗಳ ಒಟ್ಟಾರೆ ಕಾರ್ಯಕ್ಷಮತೆ ವಿಭಾಗದಲ್ಲಿ ದೇಶದ 112 ಜಿಲ್ಲೆಗಳಲ್ಲಿ ಯಾದಗಿರಿ ಜಿಲ್ಲೆಯು  ಎರಡನೇ ಸ್ಥಾನ  ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆ 2ನೇ ಸ್ಥಾನ ಪಡೆದಿದ್ದು ಆದ್ದರಿಂದ ಚಾಲೆಂಜ್ ವಿಧಾನದ ಅಡಿಯಲ್ಲಿ 2 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಆರೋಗ್ಯ, ಕೃಷಿ ಸೇರಿದಂತೆ ಇತರ ವಲಯಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದರು. 

ಜುಲೈ 2020 ರಲ್ಲಿ ದೇಶದ 112 ಜಿಲ್ಲೆಗಳ ಪೈಕಿ ಕೃಷಿ ಮತ್ತು ಜಲ ಸಂಪನ್ಮೂಲ ಕ್ಷೇತ್ರದಲ್ಲಿ ಮೂರನೇ ಸ್ಥಾನ ಗಳಿಸಿದ್ದರಿಂದ ಜಿಲ್ಲೆಗೆ ನೀತಿ ಆಯೋಗದಿಂದ  3 ಕೋಟಿ ರೂ. ಅನುದಾನ ಸಹ ಘೋಷಣೆಯಾಗಿತ್ತು ಎಂದು ಅವರು ತಿಳಿಸಿದರು. 

2019-20 ಸಾಲಿನನಲ್ಲಿ ನೀತಿ ಆಯೋಗದ ನಿಧಿಯಿಂದ ಜಿಲ್ಲಾಡಳಿತವು ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಮತ್ತು ಶಾಲೆಗಳಿಗೆ ಪ್ರೋತ್ಸಾಹಧನವನ್ನು ತ್ರೆöÊಮಾಸಿಕ ಮೌಲ್ಯಮಾಪನದ ಮೂಲಕ  ನೀಡಲಾಗುವದು. ಜಿಲ್ಲಾಡಳಿತದ ಕಾರ್ಯಕ್ರಮಗಳಲ್ಲಿ ಒಂದಾದ ಲಂಬಾಣಿ ಜನಾಂಗದ ಮಹಿಳೆಯರ ಅಭಿವೃದ್ಧಿಗಾಗಿ ಅವರಲ್ಲಿ ಕೈಗಾರಿಕಾ ತರಬೇತಿ ನೀಡಿ ವಲಸೆ ಹೋಗುವುದನ್ನು ತಡೆಗಟ್ಟಲು ಮತ್ತು ಅವರದೇ ಆದ ಆದಾಯ ಹೊಂದುವಲ್ಲಿ ನೆರವಾಗುವದೆಂದು  ಅವರು ತಿಳಿಸಿದರು.

ತಂತ್ರಾಜ್ಞಾನಾಧಾರಿತ ಶಿಕ್ಷಣ: ಈ ಕಾರ್ಯಕ್ರಮದ ಮೂಲಉದ್ದೇಶ ಮಕ್ಕಳಿಗೆ ಧ್ವನಿ ಮತ್ತು ದೃಶ್ಯ ಮಾಧ್ಯಮದ ಮೂಲಕ ಕಲಿಕೆಯ ಮಟ್ಟ ಹೆಚ್ಚಿಸುವದು. ಟ್ಯಾಬ್‌ಗಳಲ್ಲಿ ಮೊದಲೇ ಲೋಡ್ ಮಾಡಲಾದ ದೃಶ್ಯಾವಳಿಗಳ ಮೂಲಕ ಕಲಿಕೆ ಉತ್ತೇಜನಗೊಳಿಸುವುದೆಂದು ಹೇಳಿದರು.

ನೀತಿ ಆಯೋಗವು ಜಿಲ್ಲೆಯ ಅಭಿವೃದ್ಧಿಗಾಗಿ 5 ಕ್ಷೇತ್ರಗಳಲ್ಲಿ 49 ಸೂಚ್ಯಂಕಗಳನ್ನು ನಿಗದಿಪಡಿಸಿದೆ. ಈ 5 ಕ್ಷೇತ್ರಗಳು ತಮ್ಮದೇಯಾದ ತೂಕವನ್ನು ಹೊಂದಿವೆ. ಅದರಂತೆ ಆರೋಗ್ಯ ಮತ್ತು ಪೌಷ್ಠಿಕಾಂಶ 13 ಸೂಚ್ಯಂಕಗಳಲ್ಲಿ ಶೇ.30 ರಷ್ಟು, ಕೃಷಿ ಮತ್ತು ಜಲಸಂಪನ್ಮೂಲ 10 ಸೂಚ್ಯಂಕಗಳಲ್ಲಿ ಶೇ.20 ಮತ್ತು ಶಿಕ್ಷಣ 8 ಸೂಚ್ಯಂಕಗಳಲ್ಲಿ ಶೇ.30 ಹಾಗೂ ಆರ್ಥಿಕ ಸೇರ್ಪಡೆ ಮೂಲಭೂತ ಸೌಕಾರ್ಯ ವಲಯಗಳಲ್ಲಿ ಸಹ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದವರು ತಿಳಿಸಿದರು. 

ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹಾಗೂ ಮಹತ್ವಾಕ್ಷಾಂಕ್ಷಿ ಜಿಲ್ಲೆ ಕಾರ್ಯಕ್ರಮದ ಸಂಯೋಜಕರು ಸುದ್ದಿಗೋಷ್ಠಿಯಲ್ಲಿದ್ದರು.





ಫೆ.18 ರಿಂದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಯಾದಗಿರಿ.ಫೆ.17 (ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಯಾದಗಿರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರಕಾರಿ ನೌಕರರ ಸಂಘದ ಸಂಯುಕ್ತಾಶ್ರದಲ್ಲಿ ನಡೆಯಲಿರುವ 2020-21ನೇ ಸಾಲಿನ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕçತಿಕ ಸ್ಪರ್ಧೆಗಳು ಇದೇ ಫೆ.18 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಸ್ಥಳೀಯ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮಾಲಿ ಪಾಟೀಲ ಕ್ರೀಡಾಜ್ಯೋತಿ ಸ್ವೀಕರಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ, ಸುರಪುರ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ), ಸಂಸದರಾದ ರಾಜಾ ಅಮರೇಶ್ವರ ನಾಯಕ್, ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ, ಶಹಾಪೂರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ, ಕೃಷ್ಣಾ ಕಾಡಾದ ಅಧ್ಯಕ್ಷರಾದ ಶರಣಪ್ಪ ತಳವಾರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಹಾಗೂ ಇತರೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  


ಸಸಿ, ಕಸಿ ಗಿಡಗಳ ಪೂರೈಕೆಗೆ ಅರ್ಜಿ ಆಹ್ವಾನ

ಯಾದಗಿರಿ.ಫೆ.17 (ಕ.ವಾ):- ಯಾದಗಿರಿ ಜಿಲ್ಲಾದ್ಯಾಂತ 121 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಆಯ್ದ ಫಲಾನುಭವಿಗಳ ಮನೆಗಳ ಮುಂದೆ ಒಟ್ಟು ಅಂದಾಜು ರೂ.2.94 ಲಕ್ಷಗಳ ಮೊತ್ತಕ್ಕೆ ಪೌಷ್ಟಿಕ ತೋಟ ನಿರ್ಮಿಸಿಲು ಉದ್ದೇಶಿಸಿರುವ ಕಾರಣ  ಖಾಸಗಿ ನರ್ಸರಿಗಳಿಂದ ಉತ್ತಮ ಗುಣಮಟ್ಟದ ವಿವಿಧ ಸಸಿ/ ಕಸಿ ಗಿಡಗಳ  ಪೂರೈಕೆಗೆ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತಿಯುಳ್ಳ ಖಾಸಗಿ ನರ್ಸರಿ ಮಾಲಿಕರು ಅಥವಾ ಸಂಸ್ಥೆಯವರು ನಿಗದಿತ ಅರ್ಜಿ ನಮೂನೆ ಮತ್ತು ಷರತ್ತನ್ನೊಳಗೊಂಡ ನಿಬಂಧನೆಗಳು ಹಾಗೂ ದರಪಟ್ಟಿಯ ನಮೂನೆಯನ್ನು (ಅನುಬಂಧ -1, 2 ಮತ್ತು 3) ಜಿಲ್ಲಾ ಪಂಚಾಯತ ಕಾರ್ಯಾಲಯದಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಫೆ.18ರ ಮಧ್ಯಾಹ್ನ 2:00 ಗಂಟೆಯೊಳಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಹೆಸರಿನಲ್ಲಿ ಸಲ್ಲಿಸುವಂತೆ ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.   

 

  

   


 ಚೆಕ್ ಪೋಸ್ಟ್ಗಳನ್ನು ಬಲಗೊಳಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ. 

ಯಾದಗಿರಿ.ಫೆ.17 (ಕ.ವಾ):- ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಚೆಕ್ ಪೋಸ್ಟ್ಗಳನ್ನು ಬಲಗೊಳಿಸುವುದರ ಜತೆಗೆ ವಿಶೇಷ ನಿಗಾವಹಿಸಲು ಹೆಚ್ಚಿನ ಮಟ್ಟದಲ್ಲಿ ಅಧಿಕಾರಿಗಳನ್ನು ನಿಯೋಜನೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸೂಚಿಸಿದರು. 


ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಫೆ.17 ರ ಬುಧವಾರ ದಂದು ನಡೆದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಜಿಲ್ಲೆಯಲ್ಲಿ ಖನಿಜ ಸಂಪನ್ಮೂಲಗಳ ಅಕ್ರಮ ಸಾಗಾಟ ಮತ್ತು ಬಳಕೆ ಸಂಪೂರ್ಣ ನಿಯಂತ್ರಣಗೊಳ್ಳಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಸಂಬAಧ ಪಟ್ಟ ಇಲಾಖೆಯ ಅಧಿಕಾರಗಳು ಕ್ರಮಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.


ಜಿಲ್ಲೆಯಲ್ಲಿ ಈವರೆಗೆ ಪರವಾನಿಗಿ ಪಡೆದಿರುವ ಮರಳು ನಿಕ್ಷೇಪಗಳಲ್ಲಿ ಆಗಿರುವ ನಿಯಮ ಉಲ್ಲಂಘನೆಗಳ ವಿರುದ್ದ ಕ್ರಮ ಕೈಗೊಳ್ಳಬೇಕು, ಒಂದೇ ಪರವಾನಗಿ ಬಳಸಿ ಹಲವು ಟ್ರಿಪ್‌ಗಳ ಸಾಗಾಟ, ಜಿ.ಪಿ.ಎಸ್. ದುರ್ಬಳಕೆ ಪ್ರಕರಣಗಳನ್ನು ಪಟ್ಟಿ ಮಾಡಿ ಉದ್ದೇಶ ಪೂರ್ವಕ ತಪ್ಪು ಎಸಗಿರುವವರ ವಾಹನಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಸಾರಿಗೆ ಇಲಾಖೆಗೆ ವರದಿ ನೀಡಿ ಅಲ್ಲಿಯೂ ನಿಯಮಾನುಸಾರ ಪ್ರಕರಣ ದಾಖಲಿಸಿ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಎಲ್ಲಾ ಮರಳು ನಿಕ್ಷೇಪ ಮಾಲಿಕರು ನಿಯಮ ಪಾಲನೆ ಮಾಡಬೇಕು. ಅಕ್ರಮಕ್ಕೆ ಪ್ರೋತ್ಸಾಹ ನೀಡಿದರೆ ಅವರ ಪರವಾನಗಿ ರದ್ದು ಪಡಿಸಬೇಕಾಗುತ್ತದೆ. ಅದೇ ರೀತಿ ಮರಳು ಸಾಗಾಟ ಪರ್ಮಿಟ್ ವಿರತಣೆ ವೇಳೆ ತಪ್ಪುಗಳಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ತಿಳಿಸಿದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಋಷಿಕೇಶ ಭಾಗವಾನ ಸೋನಾವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ದಾಮೋಧಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಯಾದ ಕಿರಣ ಕುಮಾರ್, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ವಡಿಗೇರಾ ತಹಶೀಲ್ದಾರ್ ಸುರೇಶ, ಗುರುಮಠಕಲ್ ತಹಶೀಲ್ದಾರ್ ಸಂಗಮೇಶ, ಸೇರಿದಂತೆ ಇತರರು ಸಭೆಯಲ್ಲಿ ಇದ್ದರು. 


ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ” ಎಂಬ ಗ್ರಾಮವಾಸ್ತವ್ಯ ಕಾರ್ಯಕ್ರಮ

ಫೆ.20 ರಂದು ಖಾನಾಪುರ ಎಸ್.ಎಚ್. ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ವಾಸ್ತವ್ಯ

ಯಾದಗಿರಿ.ಫೆ.17 (ಕ.ವಾ):- ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ ಎಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲೆಯಲ್ಲಿ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡುವಂತೆ ಸರ್ಕಾರದ ಸೂಚಿಸಿದ್ದು,  ಫೆ.20 ರಂದು ಸುರಪುರ ತಾಲ್ಲೂಕಿನ  ಖಾನಾಪುರ ಎಸ್. ಎಚ್. ನಲ್ಲಿ ಗ್ರಾಮವಾಸ್ತವ್ಯ ಮಾಡುವುದಾಗಿ ಜಿಲ್ಲಾಧಿಕಾರಿಗಳಾದ ಡಾ. ರಾಗಾಪ್ರಿಯಾ ಆರ್. ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಅಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆವರೆಗೆ ಗ್ರಾಮವಾಸ್ತವ್ಯ ನಡೆಸಲಿದ್ದು, ಪ್ರಮುಖವಾಗಿ ಕಂದಾಯ ಇಲಾಖೆಯ ಸಮಸ್ಯೆಗಳ ಪರಿಹರಿಸಲಾಗುವುದು ಎಂದರು.

ಖಾನಾಪುರ ಎಸ್. ಎಚ್. ಗ್ರಾಮವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಅದೇ ದಿನ ಇನ್ನುಳಿದ ತಾಲ್ಲೂಕುಗಳಲ್ಲಿ ತಹಸೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿಸಿದರು.

ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮ, ಯಾದಗಿರಿ ತಾಲ್ಲೂಕಿನ ಲಿಂಗೇರಿ ಗ್ರಾಮ, ಗುರುಮಠಕಲ್ ತಾಲ್ಲೂಕಿನ ಮಿನಾಸಪೂರ, ಶಹಾಪೂರ ತಾಲ್ಲೂಕಿನ ಶಿರವಾಳ ಹಾಗೂ ವಡಗೇರಾ ತಾಲ್ಲೂಕಿನ ಬೆಂಡೆಬೆAಬಳಿ ಹಳ್ಳಿಗಳಲ್ಲಿ ಗ್ರಾಮವಾಸ್ತವ್ಯ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಪಹಣಿಯಲ್ಲಿನ ಲೋಪದೋಷಗಳ ಸರಿಪಡಿಸುವಿಕೆ,  ಆಕಾರ ಬಂದ್ ತಾಳೆಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಪೌತಿ ಖಾತೆಯಲ್ಲಿ ನೈಜ ವಾರಸುದಾರರ ಹೆಸರು ಸೇರ್ಪಡೆ,  ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ,  ಸ್ಮಶಾನ ಜಾಗ ಲಭ್ಯತೆ ಬಗ್ಗೆ ಪರಿಶೀಲಿಸುವುದು. ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನಿನ ಕಾಯ್ದಿರಿಸಲು ಕ್ರಮವಹಿಸುವುದು. ಸರಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು, ಆಧಾರ ಕಾರ್ಡಿನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ,  ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಅರ್ಹ ಅಂಗವಿಕಲ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.  

ಹದ್ದುಬಸ್ತು, ಪೋಡಿ, ಪೋಡಿಮುಕ್ತ ಗ್ರಾಮ, ದರಕಾಸ್ತು ಪೋಡಿ ಕಂದಾಯ ಗ್ರಾಮಗಳ ರಚನೆ ಮುಂತಾದ ಕಂದಾಯ ಇಲಾಖೆಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಕ್ರಮವಹಿಸಲಾಗುವುದು ಎಂದರು.

ಸ್ಥಳದಲ್ಲಿಯೇ ಕೌಂಟರ್ ತೆರೆದು ಆನ್‌ಲೈನ್ ತಂತ್ರಾAಶದ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಕಂದಾಯ ಇಲಾಖೆಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಯತ್ನಿಸಲಾಗುವುದು. ಇತರೆ ಇಲಾಖೆಗಳ ಅರ್ಜಿಗಳನ್ನು ಆಯಾ ಇಲಾಖೆ ರವಾನಿಸಲಾಗುವುದು ಎಂದು ಅವರು ತಿಳಿಸಿದರು.

ಕಂದಾಯ ಇಲಾಖೆ, ಕೃಷಿ ಇಲಾಖೆ,ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಪಂಚಾಯತ್ ಇಲಾಖೆ, ಪಶು ಸಂಗೋಪನೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆಗಳಿಂದ ಗ್ರಾಮವಾಸ್ತವ್ಯ ದಿನದಂದು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಮಳಿಗೆ (ಸ್ಟಾಲ್)ಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು. 

ರೈತರ ಗುರುತಿನ ಸಂಖ್ಯೆ : ರೈತರು ಕೃಷಿ ಮತ್ತು ಸಂಬAಧಿಸಿದ ಇತರೆ ಇಲಾಖೆಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಹಣಿ ಪತ್ರಿಕೆ,ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಒಂದು ಫೋಟೋ ಹಾಗೂ  ಬ್ಯಾಂಕ್ ಪಾಸ್ ಬುಕ್ ಈ ಎಲ್ಲಾ ದಾಖಲೆಗಳನ್ನು ಪದೇ ಪದೆ ನೀಡುವುದನ್ನು ತಪ್ಪಿಸಲು ಕೇಂದ್ರೀಕೃತ ಈಖUIಖಿS ತಂತ್ರಾAಶದಲ್ಲಿ ದಾಖಲಿಸಿ, ರೈತನ ರೈತರ ಗುರುತಿನ ಸಂಖ್ಯೆಯನ್ನು ನೀಡಲು ಇ- ಆಡಳಿತ ವತಿಯಿಂದ ರೈತರ ಗುರುತಿನ ಸಂಖ್ಯೆ (ಈಖUIಖಿS Iಆ) ತಂತ್ರಾAಶವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಇದರ ಪ್ರಯೋಜನ ಪಡೆಯಬೇಕೆಂದು ಅವರು ಕೋರಿದರು. 

ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಶಿಬಿರ ಏರ್ಪಡಿಸಿ, ಗ್ರಾಮದ ಜನರ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರು.

ಗ್ರಾಮವಾಸ್ತವ್ಯ ನಡೆಯುವ ಗ್ರಾಮಗಳ ಜೊತೆಗೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ 2-3 ಹಳ್ಳಿಗಳ ಸಮಸ್ಯೆಗಳನ್ನೂ ಪರಿಹರಿಸಲು ಶ್ರಮಿಸಲಾಗುವುದು ಎಂದ ಅವರು , ಅಂದು ಸಂಬAಧಪಟ್ಟ ಹಳ್ಳಿಗಳ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ ಅವರು ಇದ್ದರು.   

   


ಸೋಮವಾರ, ಫೆಬ್ರವರಿ 15, 2021

 ಸಂತ ಸೇವಾಲಾಲ್ ಜಯಂತಿ ಆಚರಣೆ 

ಯಾದಗಿರಿ.ಫೆ.15 (ಕ.ವಾ):- ಕೋವಿಡ್-19 ಹಿನ್ನೆಲೆಯಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ  ನಗರದ ಜಿಲ್ಲಾಧಿಕಾರಿ ಕಚೇರಿಯ ಅಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.  

  

ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ಅವರು ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.


ಇದೇ ಸಂದರ್ಭದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ, ಕೃಷಿ  ಅಧಿಕಾರಿಯಾದ ರಾಜಕುಮಾರ್, ಹಾಗೂ ಸಮಾಜದ ಮುಖಂಡರಾದ ಅನಿತಾ ಸುರೇಶ ರಾಠೋಡ, ಗುರು ಪ್ರಸಾದ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. 





ಅಧಿಕಾರಿಗಳಿಂದ ಬಾಲ್ಯ ವಿವಾಹ ತಡೆ

ಯಾದಗಿರಿ.ಫೆ.15 (ಕ.ವಾ):- ಫೆ.15ರ ಸೋಮವಾರರಂದು ಯಾದಗಿರಿ ತಾಲ್ಲೂಕಿನ ಹಳಿಗೇರಾ  ಗ್ರಾಮದಲ್ಲಿ ನಡೆಯುತ್ತಿದ 16 ವರ್ಷದ ಬಾಲಕಿಯ ಬಾಲ್ಯವಿವಾಹವನ್ನು ತಡೆದು ಬಾಲಕಿಯ ರಕ್ಷಣೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. 


 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದ ಮೇರೆಗೆ, ಮಕ್ಕಳ ಸಹಾಯವಾಣಿಯ ದೂರಿನ ಅನ್ವಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ ಮಣ್ಣೂರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಣ್ಣ ದೇಸಾಯಿ ಸಿಬ್ಬಂದಿ ಸಾಬಯ್ಯ ಎನ್, ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ನಾಗಪ್ಪ ಹಾಗೂ ಪೋಲಿಸ್ ಇಲಾಖೆ ಸಿಬ್ಬಂದಿಯವರಾದ ಹಣಮಂತ್ರಾಯ ಅವರ ತಂಡ ದಾಳಿ ನಡೆಸಿ ಬಾಲ್ಯ ವಿವಾಹವನ್ನು ತಡೆದಿದ್ದಾರೆ. 


ಬಾಲ್ಯ ವಿವಾಹ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-2006ರ ಪ್ರಕಾರ 18 ವರ್ಷದ ಒಳಗಿನ ಮಕ್ಕಳಿಗೆ ಬಾಲ್ಯ ವಿವಾಹ ಮಾಡಿದ್ದಲ್ಲಿ ಕಾನೂನು ಪ್ರಕಾರ ಅಪರಾಧವಾಗುತ್ತದೆ ಎಂದು ಬಾಲಕಿಯ ಪೋಷಕರಿಗೆ ಮತ್ತು ಸಾರ್ವಜನಿಕರಿಗೆ ತಿಳುವಳಿಕೆ ಹೇಳಿ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತಾಗಿ ಮಾಹಿತಿ ನೀಡಲಾಗಿದೆ. 


ಬಾಲಕಿಯನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದ್ದು, ಬಾಲಕಿಯ ಪಾಲನೆ ಪೋಷಣೆ ಹಾಗೂ ರಕ್ಷಣೆಗಾಗಿ ಸರಕಾರಿ  ಬಾಲ ಮಂದಿರದಲ್ಲಿ ಪುನರ್ ವಸತಿಗಾಗಿ ಒಪ್ಪಿಸಲಾಗಿದೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

  ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಯಾದಗಿರಿ.ಫೆ.15 (ಕ.ವಾ):- 2020-21 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ಸಮುದಾಯದ  ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ, ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾ-ಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳು ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2021ರ ಮಾರ್ಚ್ 5 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗೆ ಇಲಾಖೆ ವೆಬ್‌ಸೈಟ್ ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಾರ್ಯಾಲಯಕ್ಕೆ ಸಂಪರ್ಕಿಸಿಲು ಯಾದಗಿರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



 


 



ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಫೆ.15 (ಕ.ವಾ):- ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸೋಮವಾರ ಯಾದಗಿರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು. 


ಲಸಿಕೆ ಪಡೆದ ನಂತರ ನಿಯಮದಂತೆ ಕೆಲ ನಿಮಿಷಗಳ ಕಾಲ ನಿಗಾ  ಕೊಠಡಿಯಲ್ಲಿ ಇದ್ದು, ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಅಡ್ಡ ಪರಿಣಾಮಗಳಿಲ್ಲ. ಹೀಗಾಗಿ ಅಧಿಕಾರಿ, ಸಿಬ್ಬಂದಿ ಭಯಪಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 


ಈಗ ನಾನು ಲಸಿಕೆ ಹಾಕಿಸಿಕೊಂಡಿದ್ದು, ಯಾವುದೇ ತೊಂದರೆ ಇಲ್ಲ. ಹಾಗಾಗಿ ಲಸಿಕೆ ಪಡೆಕೊಳ್ಳುವರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ. ಅನೇಕ ದೇಶಗಳು ಭಾರತ ಸಿದ್ಧಪಡಿಸಿದ ಲಸಿಕೆ ಪಡೆಯಲು ಮನವಿ ಮಾಡಿದ್ದಾರೆ. ಹೀಗಿರುವಾಗ ನಮ್ಮ ದೇಶದಲ್ಲಿ ಸಂಶೋಧನೆ ಮಾಡಿದ ಲಸಿಕೆ ಬಗ್ಗೆ ಸಂಶಯ ಪಡಬಾರದು ಎಂದರು.


ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಪೌರ ಕಾರ್ಮಿಕರು ಸೇರಿದಂತೆ  ಒಟ್ಟು 25,000 ಸಾವಿರ ಮುಂಚೂಣಿಯಲ್ಲಿರುವ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.


ಸರ್ಕಾರವು ಜನರ ಆರೋಗ್ಯವನ್ನು ಗಮನದಲ್ಲಿರಿಸಿ ಲಸಿಕೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಹಂತಹAತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುತ್ತದೆ. ಲಸಿಕೆ ಪಡೆಯುವ ಸಂದರ್ಭ ಬಂದಾಗ ಯಾರೂ ಕೂಡ ಹಿಂಜರಿಯಬಾರದು. ಲಸಿಕೆ ಸುಲಭವಾಗಿ ಸಿಗುತ್ತಿದೆ ಎಂದು ನಿರ್ಲಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದರು.


ಲಸಿಕೆಯನ್ನು ಪ್ರತಿಯೊಬ್ಬರಿಗೂ ನೀಡುವುದಕ್ಕೆ ತುಂಬಾ ದಿನಗಳಾಗಬಹುದು. ಅಲ್ಲಿಯವರೆಗೂ ಪ್ರತಿಯೊಬ್ಬರೂ ಮಾಸ್ಕ ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದನ್ನು ಮರೆಯಬಾರದು ಎಂದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಸಂಜೀವ್ ಕುಮಾರ್ ರಾಯಚೂರಕರ್, ಆರ್.ಸಿ.ಹೆಚ್. ಡಾ. ಸೂರ್ಯಪ್ರಕಾಶ್ ಕಂದಕೂರು, ಆರ್.ಎಮ್.ಒ ಡಾ. ನೀಲಮ್ಮ, ಕೋವಿಡ್ ನೋಡಲ್ ಅಧಿಕಾರಿ ಡಾ.ಸುನೀಲ್ ಕುಮಾರ್ ಪಾಟೀಲ್, ಡಾ.ಪ್ರೇಮ, ಸಿಸ್ಟರ್ ಸಾವಿತ್ರಿ ಸೇರಿದಂತೆ ಇತರರು ಇದ್ದರು.  


ಶುಕ್ರವಾರ, ಫೆಬ್ರವರಿ 12, 2021




 ಕೈಗಾರಿಕಾ ನಿವೇಶನ ಹಂಚಿಕೆ ಅರ್ಜಿಗಳ ಅನುಮೋದನೆ ಪಡೆದುಕೊಳ್ಳವಂತೆ ಸೂಚನೆ

                                               : ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಫೆ.12 (ಕ.ವಾ):- ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಪರಿಶೀಲಿಸಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು  ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 


ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  


ಕಡೇಚೂರ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಹಂಚಿಕೆಯಾಗಿರುವ ಘಟಕಗಳಿಗೆ ಕೈಗಾರಿಕೆ ಸ್ಥಾಪಿಸುವ ಕುರಿತು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಕೆ.ಐ.ಎ.ಡಿ.ಬಿ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.


ವಿದ್ಯುತ್ ಸಂಪರ್ಕ ಕಲ್ಪಿಸಲು ಕೈಗೆತ್ತಿಕೊಳ್ಳಲಾಗಿರುವ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗಳನ್ನು ನಿಗತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 


ಜಿಲ್ಲೆಯ ಕಡೆಚೂರ ಹಾಗೂ ಮುಂಡರಗಿ ಸೇರಿದಂತೆ ವಿವಿಧ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಉದ್ದಿಮೆ ಸ್ಥಾಪನೆಗೆ ನಿವೇಶನ ಪಡೆದಿದ್ದು, ಕೆಲ ಕೈಗಾರಿಕೋದ್ಯಮಿಗಳು ಉದ್ದಿಮೆ ಸ್ಥಾಪನೆ ಮಾಡದಿರುವುದರಿಂದ ಹಂಚಿಕೆ ಮಾಡಲಾದ ನಿವೇಶನವನ್ನು ನಿಯಮಾನುಸಾರ ರದ್ದತಿಗೆ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು.


ನಿವೇಶನ ಪಡೆದ ಕೈಗಾರಿಕೋದ್ಯಮಿಗಳು ಘಟಕ ಸ್ಥಾಪಿಸಿ ಉದ್ಯೋಗ ನೀಡುವಂತಾಗಬೇಕು. ಆದರೆ ಕೆಲವು ನಿವೇಶನಗಳು ಇಲ್ಲಿ ಖಾಲಿ ಉಳಿದಿದ್ದು ನಮ್ಮ ಗಮನಕ್ಕೆ ಬಂದಿದ್ದು ತೀವ್ರ ಬೇಸರದ ಸಂಗತಿಯಾಗಿದ್ದು, ಇಂತಹ ನಿವೇಶನಗಳು ರದ್ದುಗೊಳಿಸಿ ಅರ್ಹರಿಗೆ ಮರು ಹಂಚಿಕೆ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 


ಇಂದಿನ ದಿನಮಾನದಲ್ಲಿ ಕೈಗಾರಿಕೆ ನಡೆಸುವುದು ತುಂಬಾ ಕಷ್ಟದ ಕೆಲಸವಾಗಿದೆ. ಹೀಗಾಗಿ ಕೈಗಾರಿಕೆ ಸ್ಥಾಪಿಸಿ ನಿರುದ್ಯೋಗಿಗಳಿಗೆ ಕೆಲಸ ನೀಡಲು ಮುಂದೆ ಬರುವ ಉದ್ಯಮಿಗಳಿಗೆ ಅನಗತ್ಯ ತೊಂದರೆ ನೀಡದೆ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಅಗತ್ಯವಿದೆ. ಹೀಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಕೆ.ಐ.ಎ.ಡಿ.ಬಿ., ಕೆ.ಎಸ್.ಎಸ್.ಐ.ಡಿ.ಸಿ. ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಉದ್ಯಮಿದಾರರಿಗೆ ಸೂಕ್ತ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. 


ಇದೇ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರಾದ ಮಾಣಿಕ ವಿ.ರಘೋಜಿ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಪರಿಸರ ಮಾಲಿನ್ಯ ಇಲಾಖೆಯ ಪ್ರಾದೇಶಿಕ ಅಧಿಕಾರಿಯಾದ ವೆಂಕಟೇಶ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಅಧಿಕಾರಿಯಾದ ಪ್ರಕಾಶ, ಕೈಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿಯಾದ ರೇಖಾ ಮ್ಯಾಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.


 ಫೆ.16 ರಂದು ಉದ್ಯೋಗ ಮೇಳ

ಯಾದಗಿರಿ,ಫೆ. 12 (ಕ.ವಾ):- ರಾಷ್ಟಿçÃಯ ವೃತ್ತಿ ಸೇವಾ ಅಡಿಯಲ್ಲಿ (ಓಅS) ಒಂದು ದಿನದ ಉದ್ಯೋಗ ಮೇಳವನ್ನು ಫೆಬ್ರವರಿ 16 ರಂದು ಬೆಳಗ್ಗೆ 10 ರಿಂದ ಸಾಯಂಕಾಲ 4 ಗಂಟೆಯ ವರೆಗೆ ಶಹಾಪೂರದ ಸರಕಾರಿ ಪದವಿ ಮಹಾವಿಧ್ಯಾಲಯದಲ್ಲಿ ಆಯೋಜಿಸಲಾಗಿದೆ. 

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐ.ಟಿ.ಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ಪಾಸಾದ ವಯೋಮಿತಿ 18 ರಿಂದ್ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಈ ಸಂದರ್ಶನಕ್ಕೆ (ಉದ್ಯೋಗ ಮೇಳ) ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯ ನೀಡಲಾಗುವದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. 9448250868, 08473-253718  ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


ಬಾಲಗೌರವ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಯಾದಗಿರಿ.ಫೆ.12 (ಕ.ವಾ):- ಕರ್ನಾಟಕ ರಾಜ್ಯ ಬಾಲವಿಕಾಸ ಆಕಾಡೆಮಿ ವತಿಯಿಂದ  ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಸಾಧಕರಿಂದ “ಬಾಲಗೌರವ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ.

ಸಂಗೀತ, ನೃತ್ಯ, ನಟನೆ, ಕ್ರೀಡೆ ಮತ್ತು ಚಿತ್ರಕಲೆ, ಕರಕುಶಲ, ಬರವಣಿಗೆ, ಸಂಶೋಧನೆ(ಹೊಸ ಆವಿಷ್ಕಾರ) ಈ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಪ್ರಶಸ್ತಿ ಪುರಷ್ಕೃತರಾಗಿರುವ  ಮಕ್ಕಳು ಅಕಾಡೆಮಿ “ಬಾಲಗೌರವ ಪ್ರಶಸ್ತಿ”ಗಾಗಿ ತಮ್ಮ ಸ್ವಯಂ ದೃಢಿಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಅರ್ಜಿಯನ್ನು ಯೋಜನಾಧಿಕಾರಿಗಳು ಧಾರವಾಡದಲ್ಲಿರುವ ಕರ್ನಾಟಕ ಬಾಲ ವಿಕಾಸ ಆಕಾಡೆಮಿಗೆ ಇದೇ ಫೆಬ್ರವರಿ 20ರೊಳಗೆ ಅರ್ಜಿಗಳನ್ನು ತಲುಪಿಸಬೇಕು. ನಂತರ ಬರುವ ಅರ್ಜಿಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ. 

ವಿಶೇಷ ಸೂಚನೆ ಅರ್ಜಿ ಸಲ್ಲಿಸುವಾಗ ‘ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ’ ಎಂದು ಲಕೋಟೆ ಮೇಲೆ ನಮೂದಿಸಬೇಕೆಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಯಾದಗಿರಿ.ಫೆ.12 (ಕ.ವಾ):- ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿವೇತನದ ತಂತ್ರಾAಶದ http://sw.kar.nic.in
ವೆಬ್‌ಸೈಟ್ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ ನಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. 08473-251530 ಸಂಪರ್ಕಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರುವಾರ, ಫೆಬ್ರವರಿ 11, 2021

 ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ವೀಕ್ಷಣೆ

ಯಾದಗಿರಿ.ಫೆ.11 (ಕ.ವಾ):- ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಗುರುವಾರದಂದು ನಗರದ ವಿವಿಧೆಡೆ ತೆರಳಿ, ಅಭಿವೃದ್ಧಿ ಕಾಮಗಾರಿಗಳ ವೀಕ್ಷಿಸಿದರು. 

ಹಳೆ ಬಸ್ ನಿಲ್ದಾಣ ಹತ್ತಿರ ನಿರ್ಮಾಣವಾಗುತ್ತಿರುವ ಮೀನು ಮಾರುಕಟ್ಟೆ ಹಾಗೂ ವಾಲ್ಮೀಕಿ ಭವನದ ಹತ್ತಿರ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಮತ್ತು ಕನಕದಾಸರ ವೃತ್ತದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಉದ್ಯಾನವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ನಂತರ ಮಾತನಾಡಿದ ಅವರು ನಗರದಲ್ಲಿ ನಿರ್ಮಾಣವಾಗುತ್ತಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದ ಕಾಮಗಾರಿಗಳನ್ನಾಗಿ ನಿಗದಿತ ಸಮಯದಲ್ಲಿ ಅಚ್ಚುಕಟ್ಟಾಗಿ ಕಾಮಗಾರಿಗಳನ್ನು ಮುಗಿಸುವಂತೆ ಸಂಬAಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಕನಕದಾಸರ ವೃತ್ತದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನವನ್ನು ಆದಷ್ಟು ಬೇಗ ಮುಗಿಸಿ ಸಾರ್ವಜನಿಕರಿಗೆ ವಾಯುವಿವಾರಕ್ಕೆ ಅನುವು ಮಾಡಿಕೊಂಡಬೇಕೆAದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.


ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದೇವಿಂದ್ರಪ್ಪ ಚೌವ್ಹಾಣ, ಜಿಲ್ಲಾ ನಿರ್ಮಿತಿ ಕೇಂದ್ರದ ಅಧಿಕಾರಿಯಾದ ಕಿರಣ ಕುಮಾರ್ ಸೇರಿದಂತೆ ಇತರರು ಸ್ಥಳದಲ್ಲಿ ಇದ್ದರು.  






ಮಾವು ಬೆಳೆಗೆ ತಗಲಲಿರುವ ಸಂಭವನೀಯ ರೋಗಗಳ ತಡೆಗೆ ಸಲಹೆ 

ಯಾದಗಿರಿ,ಫೆ. 11 (ಕ.ವಾ):- ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಾವಿಗೆ ತಗಲಲಿರುವ ಸಂಭವನೀಯ ಹೂ ತೆನೆ ಕಪ್ಪಾಗುವ ರೋಗ ಹಾಗೂ ಬೂದಿರೋಗಗಳನ್ನು ತಡೆಗಟ್ಟಲು ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಮಾವು ಬೆಳೆಗಾರರಿಗೆ ಸಲಹೆ ನೀಡಿದ್ದಾರೆ. 


ಮಾವು ಹೂ ಬಿಡುವ ಸಮಯದಲ್ಲಿ ಜಾಸ್ತಿ ಉಷ್ಣತೆ ಮತ್ತು ಆರ್ದ್ರತೆ ಇರುವ ಕಾರಣ ಈ ರೋಗಗಳು ಹರಡುವ ಸಾಧ್ಯತೆಯಿದ್ದು,  ಮಾವಿನ ಗಿಡಗಳಿಗೆ ಹೆಕ್ಸಾಕೋನಾಜೋಲ್ 2 ಮಿ.ಲೀ ಅಥವಾ ಥಯೋಫಿನೇಟ್ ಮಿಥೈಲ್ 1 ಗ್ರಾಂ, ಕಾರ್ಬನ್‌ಡೈಜಿಮ್ 1.5 ಗ್ರಾಂ ಮತ್ತು ಟ್ರೆöÊಸೆಕ್ಲೊಜೋಲ್ 0.25 ಗ್ರಾಂ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

ಬೂದು ರೋಗ: ಬಾಧೆಯು ಹೂ ಬಿಡುವ ಹಂತದಿAದ ಕಾಯಿ ಕಟ್ಟುವರೆಗೂ ಕಂಡುಬರುತ್ತದೆ, ಹೂಗೊಂಚಲು ಹಾಗೂ ಚಿಗುರುಗಳ ಮೇಲೆ ಬೂದಿಯಂತಹ ಬೆಳವಣಿಗೆಯಾಗಿ ಕಾಯಿಗಳು ಕೂಡ ಉದುರುವುದನ್ನು ಕಾಣಬಹುದಾಗಿದೆ.


ನಿರ್ವಹಣೆ: ಹೂ ಬಿಡುವ ಮುಂಚೆ ಹಾಗೂ ಕಾಯಿ ಕಟ್ಟಿದ ಕೂಡಲೇ 3 ಗ್ರಾಂ ಗಂಧಕ 80 ಡಬ್ಲೂö್ಯ ಪಿ ಅಥವಾ 1 ಗ್ರಾಂ ಟ್ರೆöÊಡೊಮಾರ್ಫ 25 ಡಬ್ಲೂö್ಯ.ಪಿ. ಅಥವಾ 1 ಗ್ರಾಂ ಕಾರ್ಬನ್‌ಡೈಜಿಮ್ 50 ಡಬ್ಲೂö್ಯ.ಪಿ.ಹೆಕ್ಸಾಕೋನಾಜೋಲ್ 2 ಮಿ.ಲೀ ನೀರಿನಲ್ಲಿ ಕರಗಿಸಿ ಸಿಂಪಡಣೆಯನ್ನು ಪುನರಾವರ್ತಿಸಬೇಕು.


ಜಿಗಿಹುಳು; ಬಾಧೆಯು ಹೂ ಬಿಡುವ ಹಂತದಲ್ಲಿ ಹೆಚ್ಚಾಗಿ ಕಂಡುಬರುವುದು. ಜಿಗಿ ಹುಳು ಬೆಣೆ ಆಕಾರ ಕಂಡುಬರುವುದು. ಫ್ರೌಢ ಮತ್ತು ಅಪ್ಸರೆಗಳು ಹೂ ಗೊಂಚಲಿನಿAದ ರಸ ಹೀರುವುದರಿಂದ ಹೂಗಳು ಉದುರುತ್ತವೆ. ಜಿಗಿ ಹುಳುಗಳು ಅಂಟು ಪದಾರ್ಥವನ್ನು ಶ್ರವಿಸುವುದರಿಂದ ಹೂಗೊಂಚಲಿನಲ್ಲಿ ಕಪ್ಪು ಬೂಷ್ಟ್ ಬೆಳವಣಿಗೆಯಾಗುತ್ತದೆ.


ನಿರ್ವಹಣೆ: 2ಗ್ರಾಂ ನೀರಲ್ಲಿ ಕರಗುವ ಗಂಧಕ ಅಥವಾ 0.25 ಮೀ.ಲೀ ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್‌ನ್ನು ಮುಂಜಾಗ್ರತಾ ಕ್ರಮವಾಗಿ ಸಿಂಪಡಣೆ ಮಾಡಬೇಕು ಅಥವಾ ಅಜಾದಿರೇಕ್ಟಿನ್ 3000 ಪಿ.ಪಿ.ಎಮ್.2 ಮೀ.ಲೀ.ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಹೂ ಬಿಡುವ ಸಂದರ್ಭದಲ್ಲಿ ಸಿಂಪಡಿಸಬಹುದು.


ಹೂ ಉದುರುವುದನ್ನು ತಡೆಗಟ್ಟಲು ಪ್ಲಾನೋಫಿಕ್ಸ್ (ಎನ್.ಎನ್.ಎ) 0.3 ಮೀ.ಲಿ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಣೆ ಮಾಡಬೇಕು. 


    ಈ ಹಂತದಲ್ಲಿ ಔಷಧಿಗಳ ಸಿಂಪರಣೆಯಿAದ ಕೀಟ ರೋಗಗಳ ನಿಯಂತ್ರಣವಾಗುವುದರ ಜೊತೆಗೆ ಮುಂದಿನ ಹಂತದಲ್ಲಿ ಅವು ಉಲ್ಬಣಗೊಳ್ಳುವುದನ್ನು ತಪ್ಪಿಸುತ್ತದೆ. ಇಲ್ಲದಿದ್ದರೆ ಕಾಯಿಯ ಸಂಖ್ಯೆ  ಕಡಿಮೆ ಆಗುತ್ತವೆ ಮತ್ತು ಇಳುವರಿಗೆ ತೀವ್ರ ಧಕ್ಕೆಯಾಗುತ್ತದೆ.


ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಹಾರ್ಟಿಕ್ಲಿನಿಕ್ ದೂ: ಸಂಖ್ಯೆ: 78991 33206. ಅಥವಾ ಹೋಬಳಿ ಮಟ್ಟದ ಅಧಿಕಾರಿಗಳಿಗೆ  ಸಂಪರ್ಕಿಸಿ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  

 




 ಗ್ರಾ.ಪಂ ಉಪಚುನಾವಣೆ:ಮತದಾರರ ಪಟ್ಟಿ ತಯಾರಿಸಲು ಡಿಸಿ ಡಾ. ರಾಗಪ್ರಿಯಾ ಆರ್.ಸೂಚನೆ

ಯಾದಗಿರಿ, ಫೆ. 11 (ಕ.ವಾ):- ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸುವ ಸಂಬAಧ ಚಾಲ್ತಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿಯ ಡಾಟಾವನ್ನು ಪಡೆದುಕೊಂಡು, ಗ್ರಾಮ ಪಂಚಾಯಿತಿಯ ಕ್ಷೇತ್ರವಾರು ಮತದಾರರ ಪಟ್ಟಿಯನ್ನು ತಯಾರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯಾದ ಡಾ. ರಾಗಪ್ರಿಯಾ ಆರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.                      

ಶಹಾಪೂರ ತಾಲ್ಲೂಕಿನ ಗೋಗಿಪೇಠ ಗ್ರಾಮ ಪಂಚಾಯಿತಿಯ 7 ಕ್ಷೇತ್ರಗಳ 19 ಸ್ಥಾನಗಳಿಗೆ ಹಾಗೂ ಮುಡಬೂಳ ಗ್ರಾಮ ಪಂಚಾಯಿತಿಯ ಕ್ಷೇತ್ರ-04 ಮುಡಬೂಳ 01 ಸ್ಥಾನಕ್ಕೆ ಹಾಗೂ ಹುಣಸಗಿ ತಾಲ್ಲೂಕಿನ ಗೆದ್ದಲಮರಿ ಗ್ರಾಮ ಪಂಚಾಯಿತಿಯ ಕ್ಷೇತ್ರ-6 ಧರ್ಮಾಪೂರ (ಜುಮಾಲಾಪುರ ದೊಡ್ಡ ತಾಂಡಾ) 02 ಸ್ಥಾನಗಳ ಸದಸ್ಯ ಸ್ಥಾನಗಳು ಆಯ್ಕೆಯಾಗದೇ ಖಾಲಿ ಉಳಿದಿರುವುದರಿಂದ ಉಪ ಚುನಾವಣೆ ನಡೆಯಲಿದೆ.

ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇರುವ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಯನ್ನು ತಯಾರಿಸಬೇಕಾಗಿರುತ್ತದೆ. ಮತದಾರರ ಪಟ್ಟಿಯನ್ನು ತಯಾರಿಸಲು ಕಂದಾಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಹಾಗೂ ಬಿ.ಎಲ್.ಒ ಗಳ ಸಹಾಯದಿಂದ ಪ್ರತಿಯೊಂದು ಕ್ಷೇತ್ರದ ಮನೆ-ಮನೆಗೆ ಭೇಟಿ ನೀಡಿ ಕ್ಷೇತ್ರವಾರು ಮತದಾರರನ್ನು ಗುರುತಿಸಿ  ಗಣಕೀಕರಣ ಮಾಡಿ ಮುದ್ರಕರಿಗೆ ನೀಡುವುದು ಹಾಗೂ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮತದಾನ ಕೇಂದ್ರಗಳನ್ನು ನಿಗದಿಪಡಿಸಿ, ಮತದಾರರ ಪಟ್ಟಿ ಭಾಗಗಳನ್ನು ಸಿದ್ದಪಡಿಸಬೇಕು ಎಂದು ಅವರು ತಿಳಿಸಿದ್ದಾರೆ. 

ಕರಡು ಮತದಾರರ ಪಟ್ಟಿಯನ್ನು ಫೆಬ್ರವರಿ 18 ರಂದು ಆಯಾ ಗ್ರಾಮ ಪಂಚಾಯಿತಿಗಳಲ್ಲಿ ,ತಾಲ್ಲೂಕು ಕಚೇರಿಗಳಲ್ಲಿ ಹಾಗೂ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಪ್ರಕಟಿಸುವುದು. ಸದರಿ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಮತದಾರರ ಹೆಸರು ಮತದಾರರು ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೆ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಆ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು. 2021 ರ ಫೆಬ್ರವರಿ 22ರೊಳಗೆ  ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ಎಂದು ತಿಳಿಸಿದ್ದಾರೆ. 

ನಗರ ಪ್ರದೇಶದ ಮತದಾರರ ಹೆಸರುಗಳನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ಗ್ರಾಮ ಪಂಚಾಯಿತಿಗೆ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

ನಿಗದಿತ ಸಮಯದೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಫೆಬ್ರವರಿ 23 ರಿಂದ 25 ರೊಳಗೆ ಇತ್ಯರ್ಥಪಡಿಸಿ ಅಗತ್ಯವಿದ್ದಲ್ಲಿ ಸೂಕ್ತ ಬದಲಾವಣೆ ಮಾಡಿ ಮುದ್ರಣಕ್ಕೆ ನೀಡುವುದು. ಒಂದು ಪ್ರತಿ ಪೈನಲ್ ಚೆಕ್ ಲಿಸ್ಟ್ ಪಡೆದು ಪರಿಶೀಲಿಸಿ ಸರಿಯಾಗಿ ಇರುವುದರ ಬಗ್ಗೆ ಖಚಿತ ಪಡಿಸಿಕೊಂಡು ಅಂತಿಮ ಮುದ್ರಣಕ್ಕೆ ಆದೇಶ ನೀಡುವುದು ಎಂದು ಅವರು ಸೂಚಿಸಿದ್ದಾರೆ. 

ಅಂತಿಮ ಮತದಾರರ ಪಟ್ಟಿಯು ಮಾರ್ಚ್ 1 ರಂದು ಆಯಾ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಯ ಕಚೇರಿ  ಮತ್ತು ತಾಲ್ಲೂಕ ತಹಸೀಲ್ದಾರರ ಕಚೇರಿಯಲ್ಲಿ ಪ್ರಕಟಿಸುವುದು. ಮತದಾರರ ಪಟ್ಟಿ ಪ್ರಕಟಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ. 

ಮತದಾರರ ಪಟ್ಟಿಯ ಪರಿಶೀಲನೆ:- ಸಂಬAಧ ಪಟ್ಟ ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಶೇಕಡ 100 ರಷ್ಟು ಪರಿಶೀಲಿಸುವುದು. ತಹಸೀಲ್ದಾರರು, ಕನಿಷ್ಠ ಶೇಕಡ 25 ರಷ್ಟು ಹಾಗೂ ಸಹಾಯಕ ಆಯುಕ್ತರು ಕನಿಷ್ಠ ಶೇಕಡ 15 ರಷ್ಟು ಮತದಾರರ ಪಟ್ಟಿಗಳನ್ನು ಯಾದೃಚ್ಛಿಕವಾಗಿ ರ‍್ಯಾಂಡಮ್) ಚೆಕ್ ಮಾಡುವುದು. ಮತದಾರರ ಪಟ್ಟಿಗಳಲ್ಲಿ ಯಾವುದೇ ತಪ್ಪುಗಳಾಗದಂತೆ, ಎಚ್ಚರ ವಹಿಸಿ ಮತದಾರರ ಪಟ್ಟಿಗಳನ್ನು ತಯಾರಿಸಲು ಕ್ರಮವಹಿಸಿಸುವುದು, ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳಿಂದಾಗಿ ಚುನಾವಣೆಗೆ ಅಡಚಣೆ ಉಂಟಾದಲ್ಲಿ ಸಂಬAಧ ಪಟ್ಟ ಎಲ್ಲಾ ಅಧಿಕಾರಿ/ ಸಿಬ್ಬಂದಿಯ ವಿರುದ್ದ ಶಿಸ್ತು ಕ್ರಮವಹಿಸಲಾಗುವುದು.

    ಪ್ರಯುಕ್ತ ಗ್ರಾಮ ಪಂಚಾಯಿತಿ ಉಪ ಚುನಾವಣೆ ಸಂಬAಧ ಮೇಲ್ಕಂಡ ಕಾರ್ಯಕ್ರಮ ವೇಳಾಪಟ್ಟಿಯಂತೆ, ನಿಗದಿತ ಅವಧಿಯಲ್ಲಿ ಯಾವುದೇ ತಪ್ಪುಗಳಾಗದಂತೆ ಎಚ್ಚರ ವಹಿಸಿ ಮತದಾರರ ಪಟ್ಟಿಗಳನ್ನು ತಯಾರಿಸುವಂತೆ ಹಾಗೂ ಮತದಾರರ ಪಟ್ಟಿಯ ತಯಾರಿಕೆಯ ಪ್ರಗತಿ ವರದಿಯನ್ನು ಕಾಲಕಾಲಕ್ಕೆ ತಪ್ಪದೇ ನೀಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 




 ಕ್ರೀಡೆ ಮತ್ತು ಯೋಗದಿಂದ ಆರೋಗ್ಯ ವೃದ್ಧಿ

: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.






ಯಾದಗಿರಿ.ಫೆ.11 (ಕ.ವಾ):- ಕ್ರೀಡೆ ಮತ್ತು ಯೋಗದಿಂದ ಅರೋಗ್ಯ ವೃದ್ಧಿಯಾಗುವುದಲ್ಲದೆ, ಜೀವನದಲ್ಲಿ ಸದೃಢ ವ್ಯಕ್ತಿಗಳಾಗಿ ಬೆಳೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಅಭಿಪ್ರಾಯಪಟ್ಟರು. 


ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಕಂದಾಯ ಇಲಾಖೆ ನೌಕರರ ಕ್ರೀಡಾಕೂಟ -2021 ರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಜೀವನದ ಉದ್ದೇಶ ಈಡೇರಿಸಿಕೊಳ್ಳಲು ಆರೋಗ್ಯವಂತ ಶರೀರದ ಅವಶ್ಯಕತೆ ಇದೆ. ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಯೋಗ ಮತ್ತು ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.


ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು. ಅಲ್ಲದೇ ಕ್ರೀಡೆ ಕೇವಲ ಮನೋರಂಜನೆಗೆ ಮಾತ್ರವಲ್ಲ. ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ. ಜೊತೆಗೆ ನಿತ್ಯ ಯೋಗ ಮಾಡುವುದರಿಂದ ಮನಸ್ಸು ಪ್ರಫುಲ್ಲವಾಗಿರಲು ಸಾಧ್ಯವಾಗುತ್ತದೆ ಎಂದರು.


ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಗುರುಮಠಕಲ್ ತಹಶೀಲ್ದಾರ್ ಸಂಗಮೇಶ, ವಡಗೇರಾ ತಹಶೀಲ್ದಾರ್ ಸುರೇಶ, ಹುಣಸಿಗಿ ತಹಶೀಲ್ದಾರ್ ವಿನೋದ್ ಪಾಟೀಲ್, ಶಹಾಪುರ ತಹಶೀಲ್ದಾರ್ ಜಗನ್ನಾಥ ಹಾಗೂ ಕಂದಾಯ ನೌಕರರು, ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಇತರರು ಕಾರ್ಯಕ್ರಮ ಭಾಗಿಯಾಗಿದ್ದರು.    


ಬುಧವಾರ, ಫೆಬ್ರವರಿ 10, 2021

 ಎಸ್‌ಸಿಪಿ ಮತ್ತು ಟಿಎಸ್‌ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅನುದಾನವನ್ನು ಪೂರ್ಣವಾಗಿ ಬಳಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ.ಫೆ.10 (ಕ.ವಾ):- ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯ ಅಭಿವೃದ್ಧಿಗಾಗಿ ವಿಶೇಷ ಘಟಕದಡಿ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಪೂರ್ಣ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಫೆ.10 ರ ಬುಧವಾರದಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪರಿಶಿಷ್ಠ ಜಾತಿ ಉಪಯೋಜನೆ / ಬುಡಕಟ್ಟು ಉಪಯೋಜನೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಯಮಿತ ಸಮಯಕ್ಕೆ ಕ್ರಿಯಾ ಯೋಜನೆ ಕೈಗೊಳ್ಳದೆ ಅಥವಾ ಕಾಲಮಿತಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳದೆ ಅನುದಾನ ಬಾಕಿ ಉಳಿಸಿದರೆ ಆಯಾ ಇಲಾಖೆ ಅಧಿಕಾರಿಗಳೇ ಹೊಣೆಗಾರರಾಗಿರುತ್ತಾರೆ. ಈ ಯೋಜನೆಗಳಲ್ಲಿ ಶೇ.100% ರಷ್ಟು ಪ್ರಗತಿಯನ್ನು ಫೆಬ್ರವರಿ ತಿಂಗಳ ಅಂತ್ಯಕ್ಕೆ ಎಲ್ಲಾ ಇಲಾಖೆಗಳು ಸಾಧಿಸಲೇಬೇಕು. ಇಲ್ಲದಿದ್ದಲ್ಲಿ ಅಂತಹ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿ ಇಲಾಖೆಗೆ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಕ್ರಿಯಾ ಯೋಜನೆ ರೂಪಿಸಿ, ಸಂಬAಧಪಟ್ಟ ಇಲಾಖೆ ಅಥವಾ ಅಧಿಕಾರಿಗಳಿಂದ ಅನುಮೋದನೆ ಪಡೆದುಕೊಳ್ಳಬೇಕು ಎಂದರು.
ಎಸ್‌ಸಿಪಿ/ ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನ ಹಾಗೂ ಸದರಿ ಅನುದಾನವನ್ನು ಯಾವ ಉದ್ದೇಶಗಳಿಗೆ ವೆಚ್ಚ ಮಾಡಲಾಗಿದೆ ಎಂಬುವುದರ ಬಗ್ಗೆ ಪ್ರತಿ ತಿಂಗಳು ವರದಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಗಂಗಾ ಕಲ್ಯಾಣ ಯೋಜನೆಯಡಿ ಕೃಷಿಕರಿಗೆ ಬೋರ್‌ವೆಲ್ ಸೌಲಭ್ಯಗಳನ್ನು ತ್ವರಿತವಾಗಿ ನೀಡಿ, ಬೋರ್‌ವೆಲ್‌ಗಳಿಗೆ ಅಗತ್ಯ ವಿದ್ಯುತ್ ಸೌಲಭ್ಯ ನೀಡಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ಅಧಿಕಾರಿ ಬಕ್ಕಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭಾಕರ್, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






ರೈತರ ಅನುಕೂಲಕ್ಕಾಗಿ ಒಂದೇ ಸೂರಿನಡಿ ಸಮಗ್ರ ಮಾಹಿತಿಯುಳ್ಳ ಗುರುತಿನ ಸಂಖ್ಯೆ
:ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್.
ಯಾದಗಿರಿ.ಫೆ.10 (ಕ.ವಾ):- ರೈತರ ಅನುಕೂಲಕ್ಕಾಗಿ ಒಂದೇ ಸೂರಿನಡಿ ಸಮಗ್ರ ಮಾಹಿತಿಯನ್ನು ದಾಖಲಿಸಲು ಸರ್ಕಾರವು ಫ್ರೂಟ್ಸ್ (ಈಖUIಖಿS) ತಂತ್ರಾAಶ ಅಭಿವೃದ್ಧಿ ಪಡಿಸಿದ್ದು, ರೈತರು ತಮ್ಮ ಜಮೀನಿಗೆ ಸಂಬAಧಿಸಿದ ವಿವರಗಳನ್ನು ದಾಖಲಿಸುವ ಮೂಲಕ ನೋಂದಾಯಿಸಿಕೊAಡು ಫ್ರೂಟ್ಸ್ (ಈಖUIಖಿS)
ಗುರುತಿನ ಸಂಖ್ಯೆಯನ್ನು ( ಎಫ್.ಐ.ಡಿ ನಂಬರ್ ) ಪಡೆದುಕೊಳ್ಳುಬೇಕೆಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಮನವಿ ಮಾಡಿದರು.
ಬುಧವಾರ ದಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂನಲ್ಲಿ ಆಧಾರ್ - ಪಹಣಿ ಜೋಡಣೆ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ, ಇತರೆ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ರೈತರ ಜಮೀನಿನ ವಿವರಗಳನ್ನು ಪಡೆಯಲು ‘ಫ್ರೂಟ್ಸ್’ ತಂತ್ರಾAಶ ಅಗತ್ಯವಿದ್ದು ಇದರಲ್ಲಿ ರೈತರ ಜಮೀನಿನ ನಿಖರ ಹಾಗೂ ಸಂಪೂರ್ಣ ಮಾಹಿತಿ ಇರುತ್ತದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳಡಿ ಸೌಲಭ್ಯ ಪಡೆಯಲು ರೈತರ ಜಮೀನಿನ ವಿವರಗಳನ್ನು ‘ಫ್ರೂಟ್ಸ್’ ತಂತ್ರಾAಶದಲ್ಲಿ ದಾಖಲಿಸಿ ರೈತರ ಗುರುತಿನ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳುಬೇಕೆಂದು ಹೇಳಿದರು.

ರೈತರು ಅಗತ್ಯ ದಾಖಲೆಗಳಾದ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ರೈತರಾಗಿದ್ದಲ್ಲಿ ಜಾತಿ ಪ್ರಮಾಣಪತ್ರ, ಭಾವಚಿತ್ರಗಳನ್ನು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಡ ಕಚೇರಿ, ಗ್ರಾಮ ಪಂಚಾಯಿತಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ತಮ್ಮ ಮಾಹಿತಿಗಳನ್ನು ಸಲ್ಲಿಸಿ ಎಫ್.ಐ.ಡಿ ನಂಬರ್ ಪಡೆದುಕೊಳ್ಳಬೇಕು ಎಂದರು.
ಗುರುತಿನ ಚೀಟಿಯಿಂದ ರೈತರು ಬೆಳೆ ಸಾಲ, ಪಿಎಂ ಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಚೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು ಹಾಗೂ ರೈತರಿಗೆ ಇದು ಒಂದು ವ್ಯವಹಾರಿಕ ಗುರುತಿನ ಚೀಟಿಯಾಗುತ್ತದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ದೇವಿಕಾ ಆರ್. ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...