ಮಂಗಳವಾರ, ಫೆಬ್ರವರಿ 9, 2021

 


ಕೋವಿಡ್-19 ಹಿನ್ನೆಲೆ: ತಿಂಥಣಿ ಶ್ರೀಮೌನೇಶ್ವರ ಜಾತ್ರೆ ರದ್ದು

ಯಾದಗಿರಿ ಫೆ. 09 (ಕ.ವಾ):- ಕೋವಿಡ್-19 ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿರುವ ನಿಟ್ಟಿನಲ್ಲಿ 2021ನೇ ಸಾಲಿನ ಫೆಬ್ರವರಿಯಲ್ಲಿ ನಡೆಯಬೇಕಿದ್ದ ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನದ ಜಾತ್ರೆಯನ್ನು ರದ್ದುಪಡಿಸಲಾಗಿದ್ದು, ಭಕ್ತಾಧಿಗಳು ಸಹಕರಿಸಬೇಕೆಂದು ಜಿಲ್ಲಾಡಳಿತ ಕೋರಿದೆ.

ಜಾತ್ರಾ ಮಹೋತ್ಸವದಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳು ಹಾಗೂ ಅಂತರರಾಜ್ಯಗಳಿAದಲೂ ಭಕ್ತಾಧಿಗಳು ಆಗಮಿಸುವರು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟಲು 2021ರ ಫೆಬ್ರವರಿಯಲ್ಲಿ ನಡೆಯಬೇಕಿದ್ದ ತಿಂಥಣಿಯ ಶ್ರೀ ಮೌನೇಶ್ವರ ದೇವಸ್ಥಾನದ ಜಾತ್ರಾ ಉತ್ಸವವನ್ನು ರದ್ದುಪಡಿಸಲಾಗಿದೆ, ಆದ ಕಾರಣ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...