ಸೋಮವಾರ, ಫೆಬ್ರವರಿ 15, 2021

 



ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಫೆ.15 (ಕ.ವಾ):- ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸೋಮವಾರ ಯಾದಗಿರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು. 


ಲಸಿಕೆ ಪಡೆದ ನಂತರ ನಿಯಮದಂತೆ ಕೆಲ ನಿಮಿಷಗಳ ಕಾಲ ನಿಗಾ  ಕೊಠಡಿಯಲ್ಲಿ ಇದ್ದು, ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಅಡ್ಡ ಪರಿಣಾಮಗಳಿಲ್ಲ. ಹೀಗಾಗಿ ಅಧಿಕಾರಿ, ಸಿಬ್ಬಂದಿ ಭಯಪಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 


ಈಗ ನಾನು ಲಸಿಕೆ ಹಾಕಿಸಿಕೊಂಡಿದ್ದು, ಯಾವುದೇ ತೊಂದರೆ ಇಲ್ಲ. ಹಾಗಾಗಿ ಲಸಿಕೆ ಪಡೆಕೊಳ್ಳುವರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ. ಅನೇಕ ದೇಶಗಳು ಭಾರತ ಸಿದ್ಧಪಡಿಸಿದ ಲಸಿಕೆ ಪಡೆಯಲು ಮನವಿ ಮಾಡಿದ್ದಾರೆ. ಹೀಗಿರುವಾಗ ನಮ್ಮ ದೇಶದಲ್ಲಿ ಸಂಶೋಧನೆ ಮಾಡಿದ ಲಸಿಕೆ ಬಗ್ಗೆ ಸಂಶಯ ಪಡಬಾರದು ಎಂದರು.


ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಪೌರ ಕಾರ್ಮಿಕರು ಸೇರಿದಂತೆ  ಒಟ್ಟು 25,000 ಸಾವಿರ ಮುಂಚೂಣಿಯಲ್ಲಿರುವ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.


ಸರ್ಕಾರವು ಜನರ ಆರೋಗ್ಯವನ್ನು ಗಮನದಲ್ಲಿರಿಸಿ ಲಸಿಕೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಹಂತಹAತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುತ್ತದೆ. ಲಸಿಕೆ ಪಡೆಯುವ ಸಂದರ್ಭ ಬಂದಾಗ ಯಾರೂ ಕೂಡ ಹಿಂಜರಿಯಬಾರದು. ಲಸಿಕೆ ಸುಲಭವಾಗಿ ಸಿಗುತ್ತಿದೆ ಎಂದು ನಿರ್ಲಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದರು.


ಲಸಿಕೆಯನ್ನು ಪ್ರತಿಯೊಬ್ಬರಿಗೂ ನೀಡುವುದಕ್ಕೆ ತುಂಬಾ ದಿನಗಳಾಗಬಹುದು. ಅಲ್ಲಿಯವರೆಗೂ ಪ್ರತಿಯೊಬ್ಬರೂ ಮಾಸ್ಕ ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದನ್ನು ಮರೆಯಬಾರದು ಎಂದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಸಂಜೀವ್ ಕುಮಾರ್ ರಾಯಚೂರಕರ್, ಆರ್.ಸಿ.ಹೆಚ್. ಡಾ. ಸೂರ್ಯಪ್ರಕಾಶ್ ಕಂದಕೂರು, ಆರ್.ಎಮ್.ಒ ಡಾ. ನೀಲಮ್ಮ, ಕೋವಿಡ್ ನೋಡಲ್ ಅಧಿಕಾರಿ ಡಾ.ಸುನೀಲ್ ಕುಮಾರ್ ಪಾಟೀಲ್, ಡಾ.ಪ್ರೇಮ, ಸಿಸ್ಟರ್ ಸಾವಿತ್ರಿ ಸೇರಿದಂತೆ ಇತರರು ಇದ್ದರು.  


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...