ಸೋಮವಾರ, ಫೆಬ್ರವರಿ 22, 2021

 ಅನರ್ಹ ಪಡಿತರ ಚೀಟಿದಾರರು ಮತ್ತು ಸರ್ಕಾರಿ ನೌಕರರು ಪಡಿತರ ಚೀಟಿ ಹಿಂದಿರುಗಿಸಲು ಸೂಚನೆ

ಯಾದಗಿರಿ,ಫೆ22.(ಕ.ವಾ):-ಜಿಲ್ಲೆಯಲ್ಲಿನ ಅನರ್ಹ ಪಡಿತರ ಚೀಟಿದಾರರು  ಮತ್ತು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು ಸ್ವಯಂಪ್ರೇರಿತವಾಗಿ ಪಡಿತರ ಚೀಟಿಯನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಅಂತ್ಯೋದಯ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರ ಬಗ್ಗೆ ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಹಾಗೂ ಸರಕಾರಿ ನೌಕರರು ಬಗ್ಗೆ ತನಿಖೆ ನಡೆಸುತ್ತಿದ್ದು, ಅನರ್ಹ ಪಡಿತರ ಚೀಟಿದಾರರು ಮತ್ತು ಬಿ.ಪಿ.ಎಲ್ ಕಾರ್ಡ ಹೊಂದಿರುವ ಸರ್ಕಾರಿ ನೌಕರರು ಸ್ವಯಂ ಪ್ರೇರಿತವಾಗಿ ಪಡಿತರ ಚೀಟಿಯನ್ನು ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಗಳಲ್ಲಿ ಹಿಂದಿರುಗಿಸಲು ಸೂಚಿಸಲಾಗಿದೆ.

ಒಂದು ವೇಳೆ ಸರಕಾರದ ಮಾನದಂಡಗಳನ್ನು ಉಲ್ಲಂಘಿಸಿ ಪಡಿತರ ಚೀಟಿ ಹೊಂದಿದ್ದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹೆಚ್ಚುವರಿ ಸ್ಥಾನಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಯಾದಗಿರಿ,ಫೆ22.(ಕ.ವಾ):-2020-21ನೇ ಸಾಲಿನ ಯಾದಗಿರಿ ತಾಲೂಕಿನ ಬಾಲಛೇಡ ಗ್ರಾಮದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿನ ಆಂಗ್ಲ ಮಾಧ್ಯಮದ ನವೋದಯ ಮಾದರಿ ವಸತಿ (ಬಾಲಕರ) ಶಾಲೆಯಲ್ಲಿ ಭರ್ತಿಯಾಗದೇ ಖಾಲಿ ಉಳಿದಿರುವ ಹೆಚ್ಚುವರಿ ಸ್ಥಾನಗಳಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು, ಪ್ರಾಶುಂಪಾಲರು, ಅಲ್ಪಸಂಖ್ಯಾತರ ನವೋದಯ ಮಾದರಿ ವಸತಿ ಶಾಲೆ ಬಾಲಛೇಡ ಇವರಿಂದ ಅರ್ಜಿ ನಮೂನೆಗಳನ್ನು ಪಡೆದುಕೊಂಡು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ 2021ರ ಮಾರ್ಚ 6ರೊಳಗೆ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುರಪುರದಲ್ಲಿ ಉದ್ಯೋಗ ಮೇಳ

ಯಾದಗಿರಿ,ಫೆ.22(ಕ.ವಾ):- ರಾಷ್ಟಿçÃಯ ವೃತ್ತಿ ಸೇವಾ ಅಡಿಯಲ್ಲಿ (ಎನ್.ಸಿ.ಎಸ್) ಸುರಪುರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಫೆಬ್ರವರಿ 23 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆ ವರೆಗೆ  ಒಂದು ದಿನದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ, ಡಿಪ್ಲೋಮೊ, ಬಿಇ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. 

ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕಚೇರಿಗೆ ಹಾಗೂ ದೂರವಾಣಿ ಸಂಖ್ಯೆ 94482 50868, 08473-253718 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ವಯೋಶ್ರೇಷ್ಠ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಯಾದಗಿರಿ,ಫೆ.22(ಕ.ವಾ):-2020-21ನೇ ಸಾಲಿನ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದಿAದ ವಯೋಶ್ರೇಷ್ಠ ಸಮ್ಮಾನ-2021 ಹಿರಿಯ ನಾಗರಿಕರ ರಾಷ್ಟç ಪ್ರಶಸ್ತಿಗೆ ಹಿರಿಯರ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಹಿರಿಯ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಅರ್ಜಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರರಣ ಅಧಿಕಾರಿಗಳ ಕಾರ್ಯಾಲಯದ ಇಲಾಖೆಯಿಂದ ಪಡೆದು ಇಂಗ್ಲೀಷ್ ಅಥವಾ ಹಿಂದಿ ಭಾಷೆಯಲ್ಲಿ ಭರ್ತಿ ಮಾಡಿ 2021ರ ಮಾರ್ಚ 10ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಸಹಾಯವಾಣಿ  ದೂ.ಸಂ: 08473-253531 ಸಂಪರ್ಕಿಸಲು ಕೋರಿದ್ದಾರೆ. 


ಫೆ. 23ರಂದು ರಸ್ತೆ ಕಾಮಗಾರಿಯ ಉದ್ಘಾಟನಾ ಸಮಾರಂಭ

 ಯಾದಗಿರಿ,ಫೆ.22(ಕ.ವಾ):- 2019-20ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮೈಕ್ರೋ ಯೋಜನೆಯಡಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 419.79 ಲಕ್ಷ ರೂ.ಗಳಲ್ಲಿ ಕೈಗೆತ್ತಿಕೊಂಡಿರುವ  ಯಾದಗಿರಿಯಿಂAದ ಮೈಲಾಪೂರಕ್ಕೆ ವಾಯ ವರ್ಕನಳ್ಳಿ ರಸ್ತೆ ನಿರ್ಮಾಣ ಕಾಮಗಾರಿ ಉದ್ಘಾಟನೆ ಸಮಾರಂಭ ಇದೇ 23ರ ಬೆಳಿಗ್ಗೆ 10 ಗಂಟೆಗೆ ವರ್ಕನಳ್ಳಿ ಗ್ರಾಮದಲ್ಲಿ ನಡೆಯಲಿದೆ.

ಕ್ರಾರ್ಯಕ್ರಮವನ್ನು ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಉದ್ಘಾಟಿಸುವರು.

ಸ್ಥಳೀಯ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ, ಸುರಪುರ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ), ಸಂಸದರಾದ ರಾಜಾ ಅಮರೇಶ್ವರ ನಾಯಕ್, ರಾಜ್ಯಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ.ಕರ್ನಾಟಕ ಮಂಡಳಿ ಪ್ರದೇಶಾಭಿವೃದ್ಧಿ ಅಧ್ಯಕ್ಷ ದತ್ತಾತ್ರೇಯ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಸೇರಿದಂತೆ ಇತರ ಗಣ್ಯರು ಭಾಗವಹಿಸುವರು.

ವಿಚಾರ ಸಂಕಿರಣ:ಭಾಗವಹಿಸುವವರು ಅರ್ಜಿ ಸಲ್ಲಿಸಲು ಕೋರಿಕೆ

ಯಾದಗಿರಿ,ಫೆ.22(ಕ.ವಾ):- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮಾರ್ಚ್ ತಿಂಗಳಲ್ಲಿ ಎಂ.ಗೋಪಾಲಕೃಷ್ಣ ಅಡಿಗರ ಜನ್ಮಶತಮಾನೋತ್ಸವ ನೆನಪಿಗಾಗಿ ‘ಗೋಪಾಲಕೃಷ್ಣ ಅಡಿಗ ಮತ್ತು ಕನ್ನಡ ಸಾಹಿತ್ಯ’ ಎಂಬ  ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿವೆ. ವಿಚಾರ ಸಂಕಿರಣದಲ್ಲಿ ಭಾಗವಹಿಸುವವರು ಮತ್ತು  ಪರ್ಯಾಯ ಗೋಷ್ಠಿಯಲ್ಲಿ ಅಡಿಗರ ಸಾಹಿತ್ಯ ಕುರಿತಾಗಿ ಪ್ರಬಂಧ ಮಂಡಿಸುವವರು ಫೆಬ್ರವರಿ 25ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಅಕಾಡೆಮಿಗೆ ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ನಿಬಂಧನೆಗೊಳಪಟ್ಟು ಅರ್ಜಿ ಮತ್ತು ಪ್ರಬಂಧಗಳನ್ನು ಸಲ್ಲಿಸಲು ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‌ಸೈಟ್ ಅನ್ನು ತಿತಿತಿ.ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg   ಸಂಪರ್ಕಿಸಲು ಅವರು ಕೋರಿದ್ದಾರೆ

  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...