ಬುಧವಾರ, ಫೆಬ್ರವರಿ 10, 2021

 ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ

ಯಾದಗಿರಿ ಫೆ. 10 (ಕ.ವಾ):- ರಾಷ್ಟಿçÃಯ ಆರೋಗ್ಯ ಅಭಿಯಾನದಡಿಯಲ್ಲಿ ಸಿ.ಪಿ.ಹೆಚ್-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಯಾದಗಿರಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಡಿಯಲ್ಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಯೋಗ ತರಬೇತಿಯನ್ನು ನೀಡಲು ತರಬೇತಿದಾರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಸಕ್ತರು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 22 ರ ಸಾಯಂಕಾಲ 4 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿಯು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಇರುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಮೀಕ್ಷಣಾ ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

           

ಹನಿ ನೀರಾವರಿ ಅಳವಡಿಕೆಗೆ ಅರ್ಜಿ ಆಹ್ವಾನ

ಯಾದಗಿರಿ,ಫೆ. 10 (ಕ.ವಾ):- 2020-21ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷö್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹನಿ ನೀರಾವರಿ ಅಳವಡಿಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಅರ್ಜಿ ಸಲ್ಲಿಬಹುದು.  ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


            ನೇಮಕಾತಿಗೆ ಅರ್ಜಿ ಆಹ್ವಾನ

ಯಾದಗಿರಿ,ಫೆ. 10 (ಕ.ವಾ):- ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ  ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‌ಸೈಟ್ www.anganwadirecruit.kar.nic.in ನ ಮೂಲಕ ಸಲ್ಲಿಸಬೇಕು. 2021 ರ ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆಂದು ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

                

ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ

ಯಾದಗಿರಿ,ಫೆ. 10 (ಕ.ವಾ):- ನಗರದ ಆದರ್ಶ ನಗರದಲ್ಲಿ ಫೆಬ್ರವರಿ 6 ರಂದು ಮನೆಯಿಂದ ಹೊರಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಯಾದಗಿರಿ ನಗರ ಪೊಲೀಸ್ ಠಾಣೆಯ ಸಹಾಯಕ ಆರಕ್ಷಕ ಉಪನಿರೀಕ್ಷಕರು ತಿಳಿಸಿದ್ದಾರೆ.

ಪರಶುರಾಮ ತಂದೆ ಲಕ್ಷö್ಮಪ್ಪ ಹಳ್ಳಿಕೇರೆ 35 ವರ್ಷದ ಇವರು 2021 ರ ಫೆಬ್ರವರಿ 6 ರಂದು  ಮಧ್ಯಾಹ್ನ ಊಟಕ್ಕೆ  ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರ ಹೋದ ವ್ಯಕ್ತಿ ಮನೆಗೆ ಮರಳಿ ಬಾರದೇ ಕಾಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ: ದುಂಡನೆಯ ಮುಖ, ಗೋಧಿ ಬಣ್ಣ, 5 ಅಡಿ  5 ಇಂಚು ಎತ್ತರ, ಸಾಧಾರಣ ಮೈಕಟ್ಟು ಇದ್ದು, ನೀಲಿ ಬಣ್ಣದ ಟೀಶರ್ಟ್, ಬೂದಿ ಬಣ್ಣದ ಚೆಕ್ಸ್ ಮಿಶ್ರಿತ ಚಡ್ಡಿ ಧರಿಸಿದ್ದಾರೆ. ಕನ್ನಡ, ಇಂಗ್ಲೀಷ್ ಮತ್ತು ತೆಲಗು ಭಾಷೆ ಮಾತನಾಡುತ್ತಾರೆ. ಈ ವ್ಯಕ್ತಿ ಕಾಣೆಯಾದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. 

ಈತನ ಸುಳಿವು ಸಿಕ್ಕಲ್ಲಿ ಯಾದಗಿರಿ ನಗರ ಪೊಲೀಸ್ ಠಾಣೆಗೆ  ತಿಳಿಸಬೇಕೆಂದು ನಗರ ಪೊಲೀಸ್ ಠಾಣೆಯ ಸಹಾಯಕ ಆರಕ್ಷಕ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬಹಿರ್ದೆಸೆಗೆ ಹೋದ ಯುವಕ ಕಾಣೆ

ಯಾದಗಿರಿ,ಫೆ. 10 (ಕ.ವಾ):- ಯಾದಗಿರಿ ನಗರದ ಕೋಲಿವಾಡದಲ್ಲಿ ಜನೆವರಿ 1 ರಂದು ಬಹಿರ್ದೆಸೆಗೆ ಹೋಗಿದ್ದ ಯುವಕ ಕಾಣೆಯಾಗಿದ್ದಾರೆ ಎಂದು ಯಾದಗಿರಿ ನಗರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರು ತಿಳಿಸಿದ್ದಾರೆ. 

 19 ವರ್ಷದ ಪ್ರಭಾಕರ್ ತಂದೆ ಶರಣಪ್ಪ ಕೋರಿ ಇವರು 2021 ರ ಜನೆವರಿ 1 ರಂದು ಬಹಿರ್ದೆಸೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಗೆ ಮರಳಿ ಬಾರದೇ ಕಾಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. 

ಕಾಣೆಯಾದ ವ್ಯಕ್ತಿಯು ದುಂಡನೆಯ ಮುಖ, ಸಾದಾ ಕಪ್ಪು ಬಣ್ಣ, 5 ಅಡಿ 5 ಇಂಚು ಎತ್ತರ, ತೆಳುವಾದ ಮೈಕಟ್ಟು ಇದ್ದು, ನೀಲಿ ಬಣ್ಣದ ಶರ್ಟ್, ನಾಶಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಕನ್ನಡ ಮಾತನಾಡುತ್ತಾರೆ. ಈ ಕಾಣೆಯಾದ ವ್ಯಕ್ತಿಯ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. 

ಈತನ ಸುಳಿವು ಸಿಕ್ಕಲ್ಲಿ ಯಾದಗಿರಿ ನಗರ ಪೊಲೀಸ್ ಠಾಣೆಗೆ  ತಿಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 



ವಸತಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ

ಯಾದಗಿರಿ,ಫೆ. 10 (ಕ.ವಾ):-  ಯಾದಗಿರಿ ತಾಲ್ಲೂಕಿನ 2020-21 ನೇ ಸಾಲಿನ ವಸತಿರಹಿತ ಅಲೆಮಾರಿ/ಅರೆಅಲೆಮಾರಿ ಸಮುದಾಯದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುವಂತೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ ಫೆ. 08 (ಕ.ವಾ):-ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿವಿಧ ಯೋಜನೆಯಡಿಯಲ್ಲಿ ಹತ್ತನೇ ತರಗತಿ ಮೇಲ್ಪಟು ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ  ಟಾಕಿಂಗ್ ಲ್ಯಾಪ್‌ಟಾಪ್, ಶ್ರವಣದೋಷವುಳ್ಳ ಪಲಾನುಭವಿಗಳಿಗೆ ಹೊಲಿಗೆಯಂತ್ರ ಹಾಗೂ ಯಂತ್ರಚಾಲಿತ ತ್ರಿಚಕ್ರವಾಹನ ಸೌಲಭ್ಯ ವಿತರಿಸಲು ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅರ್ಹ ವಿಕಲಚೇತನರು ಇದೇ ಫೆ.17 ರೊಳಗೆ ಇಲಾಖೆಗೆ ಅರ್ಜಿ ಸಲ್ಲಿಸುಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.08473-253531 ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಪಡಿತರ ಪದಾರ್ಥ ಮಾರಾಟ ಮಾಡಿದರೆ ದಂಡ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ

ಯಾದಗಿರಿ ಫೆ. 08 (ಕ.ವಾ):- ಪಡಿತರ ಚೀಟಿದಾರರು ತಮಗೆ ಹಂಚಿಕೆಯಾಗಿರುವ ಪಡಿತರ   ಪದಾರ್ಥಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಪಡಿತರ ಪದಾರ್ಥಗಳನ್ನು ಹಣಕ್ಕಾಗಿ ಅಥವಾ ಬೇರೆ ಯಾವುದೇ ಉದ್ದೇಶಕ್ಕಾಗಿ ಮಾರಾಟ ಮಾಡುವ ಮತ್ತು ಮಾರಾಟ ಮಾಡಲು ಪ್ರಯತ್ನಿಸುವ ಪಡಿತರ ಚೀಟಿದಾರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಡಾ.ರಾಗಪ್ರಿಯಾ ಆರ್ ಅವರು ಎಚ್ಚರಿಕೆ ನೀಡಿದ್ದಾರೆ.

 

ಸದಸ್ಯರ ವಿರುದ್ಧ ಪಡಿತರ ಪದಾರ್ಥಗಳನ್ನು ಮಾರಾಟ ಮಾಡಲು ಯತ್ನಿಸಿದರೆ ಮುಕ್ತ ಮಾರುಕಟ್ಟೆಯ ದರದಲ್ಲಿ ಅಂತಹ ಪಡಿತರ ಪದಾರ್ಥಗಳಿಗೆ ಸಮನಾದ ಮೊತ್ತವನ್ನು ದಂಡದ ರೂಪದಲ್ಲಿ ಹಣ ವಸೂಲಿ ಮಾಡಲಾಗುವುದು ಹಾಗೂ ಅಂತಹ ಪಡಿತರ ಚೀಟಿಗಳನ್ನು 6 ತಿಂಗಳುಗಳ ಕಾಲ ಅಮಾನತ್ತಿನಲ್ಲಿರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...