ಗುರುವಾರ, ಫೆಬ್ರವರಿ 11, 2021

 ಕ್ರೀಡೆ ಮತ್ತು ಯೋಗದಿಂದ ಆರೋಗ್ಯ ವೃದ್ಧಿ

: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.






ಯಾದಗಿರಿ.ಫೆ.11 (ಕ.ವಾ):- ಕ್ರೀಡೆ ಮತ್ತು ಯೋಗದಿಂದ ಅರೋಗ್ಯ ವೃದ್ಧಿಯಾಗುವುದಲ್ಲದೆ, ಜೀವನದಲ್ಲಿ ಸದೃಢ ವ್ಯಕ್ತಿಗಳಾಗಿ ಬೆಳೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಅಭಿಪ್ರಾಯಪಟ್ಟರು. 


ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಕಂದಾಯ ಇಲಾಖೆ ನೌಕರರ ಕ್ರೀಡಾಕೂಟ -2021 ರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಜೀವನದ ಉದ್ದೇಶ ಈಡೇರಿಸಿಕೊಳ್ಳಲು ಆರೋಗ್ಯವಂತ ಶರೀರದ ಅವಶ್ಯಕತೆ ಇದೆ. ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಯೋಗ ಮತ್ತು ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.


ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು. ಅಲ್ಲದೇ ಕ್ರೀಡೆ ಕೇವಲ ಮನೋರಂಜನೆಗೆ ಮಾತ್ರವಲ್ಲ. ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ. ಜೊತೆಗೆ ನಿತ್ಯ ಯೋಗ ಮಾಡುವುದರಿಂದ ಮನಸ್ಸು ಪ್ರಫುಲ್ಲವಾಗಿರಲು ಸಾಧ್ಯವಾಗುತ್ತದೆ ಎಂದರು.


ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಗುರುಮಠಕಲ್ ತಹಶೀಲ್ದಾರ್ ಸಂಗಮೇಶ, ವಡಗೇರಾ ತಹಶೀಲ್ದಾರ್ ಸುರೇಶ, ಹುಣಸಿಗಿ ತಹಶೀಲ್ದಾರ್ ವಿನೋದ್ ಪಾಟೀಲ್, ಶಹಾಪುರ ತಹಶೀಲ್ದಾರ್ ಜಗನ್ನಾಥ ಹಾಗೂ ಕಂದಾಯ ನೌಕರರು, ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಇತರರು ಕಾರ್ಯಕ್ರಮ ಭಾಗಿಯಾಗಿದ್ದರು.    


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...