ಸಂತ ಸೇವಾಲಾಲ್ ಜಯಂತಿ ಆಚರಣೆ
ಯಾದಗಿರಿ.ಫೆ.15 (ಕ.ವಾ):- ಕೋವಿಡ್-19 ಹಿನ್ನೆಲೆಯಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ಅಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ಅವರು ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ, ಕೃಷಿ ಅಧಿಕಾರಿಯಾದ ರಾಜಕುಮಾರ್, ಹಾಗೂ ಸಮಾಜದ ಮುಖಂಡರಾದ ಅನಿತಾ ಸುರೇಶ ರಾಠೋಡ, ಗುರು ಪ್ರಸಾದ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಅಧಿಕಾರಿಗಳಿಂದ ಬಾಲ್ಯ ವಿವಾಹ ತಡೆ
ಯಾದಗಿರಿ.ಫೆ.15 (ಕ.ವಾ):- ಫೆ.15ರ ಸೋಮವಾರರಂದು ಯಾದಗಿರಿ ತಾಲ್ಲೂಕಿನ ಹಳಿಗೇರಾ ಗ್ರಾಮದಲ್ಲಿ ನಡೆಯುತ್ತಿದ 16 ವರ್ಷದ ಬಾಲಕಿಯ ಬಾಲ್ಯವಿವಾಹವನ್ನು ತಡೆದು ಬಾಲಕಿಯ ರಕ್ಷಣೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದ ಮೇರೆಗೆ, ಮಕ್ಕಳ ಸಹಾಯವಾಣಿಯ ದೂರಿನ ಅನ್ವಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ ಮಣ್ಣೂರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಣ್ಣ ದೇಸಾಯಿ ಸಿಬ್ಬಂದಿ ಸಾಬಯ್ಯ ಎನ್, ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ನಾಗಪ್ಪ ಹಾಗೂ ಪೋಲಿಸ್ ಇಲಾಖೆ ಸಿಬ್ಬಂದಿಯವರಾದ ಹಣಮಂತ್ರಾಯ ಅವರ ತಂಡ ದಾಳಿ ನಡೆಸಿ ಬಾಲ್ಯ ವಿವಾಹವನ್ನು ತಡೆದಿದ್ದಾರೆ.
ಬಾಲ್ಯ ವಿವಾಹ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-2006ರ ಪ್ರಕಾರ 18 ವರ್ಷದ ಒಳಗಿನ ಮಕ್ಕಳಿಗೆ ಬಾಲ್ಯ ವಿವಾಹ ಮಾಡಿದ್ದಲ್ಲಿ ಕಾನೂನು ಪ್ರಕಾರ ಅಪರಾಧವಾಗುತ್ತದೆ ಎಂದು ಬಾಲಕಿಯ ಪೋಷಕರಿಗೆ ಮತ್ತು ಸಾರ್ವಜನಿಕರಿಗೆ ತಿಳುವಳಿಕೆ ಹೇಳಿ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತಾಗಿ ಮಾಹಿತಿ ನೀಡಲಾಗಿದೆ.
ಬಾಲಕಿಯನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದ್ದು, ಬಾಲಕಿಯ ಪಾಲನೆ ಪೋಷಣೆ ಹಾಗೂ ರಕ್ಷಣೆಗಾಗಿ ಸರಕಾರಿ ಬಾಲ ಮಂದಿರದಲ್ಲಿ ಪುನರ್ ವಸತಿಗಾಗಿ ಒಪ್ಪಿಸಲಾಗಿದೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಯಾದಗಿರಿ.ಫೆ.15 (ಕ.ವಾ):- 2020-21 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ಸಮುದಾಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ, ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾ-ಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳು ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2021ರ ಮಾರ್ಚ್ 5 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗೆ ಇಲಾಖೆ ವೆಬ್‌ಸೈಟ್ ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಾರ್ಯಾಲಯಕ್ಕೆ ಸಂಪರ್ಕಿಸಿಲು ಯಾದಗಿರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ