ಚೆಕ್ ಪೋಸ್ಟ್ಗಳನ್ನು ಬಲಗೊಳಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ.
ಯಾದಗಿರಿ.ಫೆ.17 (ಕ.ವಾ):- ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಚೆಕ್ ಪೋಸ್ಟ್ಗಳನ್ನು ಬಲಗೊಳಿಸುವುದರ ಜತೆಗೆ ವಿಶೇಷ ನಿಗಾವಹಿಸಲು ಹೆಚ್ಚಿನ ಮಟ್ಟದಲ್ಲಿ ಅಧಿಕಾರಿಗಳನ್ನು ನಿಯೋಜನೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಫೆ.17 ರ ಬುಧವಾರ ದಂದು ನಡೆದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಖನಿಜ ಸಂಪನ್ಮೂಲಗಳ ಅಕ್ರಮ ಸಾಗಾಟ ಮತ್ತು ಬಳಕೆ ಸಂಪೂರ್ಣ ನಿಯಂತ್ರಣಗೊಳ್ಳಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಸಂಬAಧ ಪಟ್ಟ ಇಲಾಖೆಯ ಅಧಿಕಾರಗಳು ಕ್ರಮಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಈವರೆಗೆ ಪರವಾನಿಗಿ ಪಡೆದಿರುವ ಮರಳು ನಿಕ್ಷೇಪಗಳಲ್ಲಿ ಆಗಿರುವ ನಿಯಮ ಉಲ್ಲಂಘನೆಗಳ ವಿರುದ್ದ ಕ್ರಮ ಕೈಗೊಳ್ಳಬೇಕು, ಒಂದೇ ಪರವಾನಗಿ ಬಳಸಿ ಹಲವು ಟ್ರಿಪ್‌ಗಳ ಸಾಗಾಟ, ಜಿ.ಪಿ.ಎಸ್. ದುರ್ಬಳಕೆ ಪ್ರಕರಣಗಳನ್ನು ಪಟ್ಟಿ ಮಾಡಿ ಉದ್ದೇಶ ಪೂರ್ವಕ ತಪ್ಪು ಎಸಗಿರುವವರ ವಾಹನಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಸಾರಿಗೆ ಇಲಾಖೆಗೆ ವರದಿ ನೀಡಿ ಅಲ್ಲಿಯೂ ನಿಯಮಾನುಸಾರ ಪ್ರಕರಣ ದಾಖಲಿಸಿ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಲ್ಲಾ ಮರಳು ನಿಕ್ಷೇಪ ಮಾಲಿಕರು ನಿಯಮ ಪಾಲನೆ ಮಾಡಬೇಕು. ಅಕ್ರಮಕ್ಕೆ ಪ್ರೋತ್ಸಾಹ ನೀಡಿದರೆ ಅವರ ಪರವಾನಗಿ ರದ್ದು ಪಡಿಸಬೇಕಾಗುತ್ತದೆ. ಅದೇ ರೀತಿ ಮರಳು ಸಾಗಾಟ ಪರ್ಮಿಟ್ ವಿರತಣೆ ವೇಳೆ ತಪ್ಪುಗಳಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಋಷಿಕೇಶ ಭಾಗವಾನ ಸೋನಾವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ದಾಮೋಧಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಯಾದ ಕಿರಣ ಕುಮಾರ್, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ವಡಿಗೇರಾ ತಹಶೀಲ್ದಾರ್ ಸುರೇಶ, ಗುರುಮಠಕಲ್ ತಹಶೀಲ್ದಾರ್ ಸಂಗಮೇಶ, ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.
“
ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ” ಎಂಬ ಗ್ರಾಮವಾಸ್ತವ್ಯ ಕಾರ್ಯಕ್ರಮ
ಫೆ.20 ರಂದು ಖಾನಾಪುರ ಎಸ್.ಎಚ್. ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ವಾಸ್ತವ್ಯ
ಯಾದಗಿರಿ.ಫೆ.17 (ಕ.ವಾ):- ಜಿಲ್ಲಾಧಿಕಾರಿಗಳ ನಡೆ, ಹಳ್ಳಿಕಡೆ ಎಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲೆಯಲ್ಲಿ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡುವಂತೆ ಸರ್ಕಾರದ ಸೂಚಿಸಿದ್ದು, ಫೆ.20 ರಂದು ಸುರಪುರ ತಾಲ್ಲೂಕಿನ ಖಾನಾಪುರ ಎಸ್. ಎಚ್. ನಲ್ಲಿ ಗ್ರಾಮವಾಸ್ತವ್ಯ ಮಾಡುವುದಾಗಿ ಜಿಲ್ಲಾಧಿಕಾರಿಗಳಾದ ಡಾ. ರಾಗಾಪ್ರಿಯಾ ಆರ್. ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಅಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆವರೆಗೆ ಗ್ರಾಮವಾಸ್ತವ್ಯ ನಡೆಸಲಿದ್ದು, ಪ್ರಮುಖವಾಗಿ ಕಂದಾಯ ಇಲಾಖೆಯ ಸಮಸ್ಯೆಗಳ ಪರಿಹರಿಸಲಾಗುವುದು ಎಂದರು.
ಖಾನಾಪುರ ಎಸ್. ಎಚ್. ಗ್ರಾಮವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಅದೇ ದಿನ ಇನ್ನುಳಿದ ತಾಲ್ಲೂಕುಗಳಲ್ಲಿ ತಹಸೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿಸಿದರು.
ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮ, ಯಾದಗಿರಿ ತಾಲ್ಲೂಕಿನ ಲಿಂಗೇರಿ ಗ್ರಾಮ, ಗುರುಮಠಕಲ್ ತಾಲ್ಲೂಕಿನ ಮಿನಾಸಪೂರ, ಶಹಾಪೂರ ತಾಲ್ಲೂಕಿನ ಶಿರವಾಳ ಹಾಗೂ ವಡಗೇರಾ ತಾಲ್ಲೂಕಿನ ಬೆಂಡೆಬೆAಬಳಿ ಹಳ್ಳಿಗಳಲ್ಲಿ ಗ್ರಾಮವಾಸ್ತವ್ಯ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಪಹಣಿಯಲ್ಲಿನ ಲೋಪದೋಷಗಳ ಸರಿಪಡಿಸುವಿಕೆ, ಆಕಾರ ಬಂದ್ ತಾಳೆಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಪೌತಿ ಖಾತೆಯಲ್ಲಿ ನೈಜ ವಾರಸುದಾರರ ಹೆಸರು ಸೇರ್ಪಡೆ, ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ, ಸ್ಮಶಾನ ಜಾಗ ಲಭ್ಯತೆ ಬಗ್ಗೆ ಪರಿಶೀಲಿಸುವುದು. ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನಿನ ಕಾಯ್ದಿರಿಸಲು ಕ್ರಮವಹಿಸುವುದು. ಸರಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು, ಆಧಾರ ಕಾರ್ಡಿನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಅರ್ಹ ಅಂಗವಿಕಲ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಹದ್ದುಬಸ್ತು, ಪೋಡಿ, ಪೋಡಿಮುಕ್ತ ಗ್ರಾಮ, ದರಕಾಸ್ತು ಪೋಡಿ ಕಂದಾಯ ಗ್ರಾಮಗಳ ರಚನೆ ಮುಂತಾದ ಕಂದಾಯ ಇಲಾಖೆಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಕ್ರಮವಹಿಸಲಾಗುವುದು ಎಂದರು.
ಸ್ಥಳದಲ್ಲಿಯೇ ಕೌಂಟರ್ ತೆರೆದು ಆನ್‌ಲೈನ್ ತಂತ್ರಾAಶದ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಕಂದಾಯ ಇಲಾಖೆಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಯತ್ನಿಸಲಾಗುವುದು. ಇತರೆ ಇಲಾಖೆಗಳ ಅರ್ಜಿಗಳನ್ನು ಆಯಾ ಇಲಾಖೆ ರವಾನಿಸಲಾಗುವುದು ಎಂದು ಅವರು ತಿಳಿಸಿದರು.
ಕಂದಾಯ ಇಲಾಖೆ, ಕೃಷಿ ಇಲಾಖೆ,ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಪಂಚಾಯತ್ ಇಲಾಖೆ, ಪಶು ಸಂಗೋಪನೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆಗಳಿಂದ ಗ್ರಾಮವಾಸ್ತವ್ಯ ದಿನದಂದು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಮಳಿಗೆ (ಸ್ಟಾಲ್)ಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು.
ರೈತರ ಗುರುತಿನ ಸಂಖ್ಯೆ : ರೈತರು ಕೃಷಿ ಮತ್ತು ಸಂಬAಧಿಸಿದ ಇತರೆ ಇಲಾಖೆಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಹಣಿ ಪತ್ರಿಕೆ,ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಒಂದು ಫೋಟೋ ಹಾಗೂ ಬ್ಯಾಂಕ್ ಪಾಸ್ ಬುಕ್ ಈ ಎಲ್ಲಾ ದಾಖಲೆಗಳನ್ನು ಪದೇ ಪದೆ ನೀಡುವುದನ್ನು ತಪ್ಪಿಸಲು ಕೇಂದ್ರೀಕೃತ ಈಖUIಖಿS ತಂತ್ರಾAಶದಲ್ಲಿ ದಾಖಲಿಸಿ, ರೈತನ ರೈತರ ಗುರುತಿನ ಸಂಖ್ಯೆಯನ್ನು ನೀಡಲು ಇ- ಆಡಳಿತ ವತಿಯಿಂದ ರೈತರ ಗುರುತಿನ ಸಂಖ್ಯೆ (ಈಖUIಖಿS Iಆ) ತಂತ್ರಾAಶವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಇದರ ಪ್ರಯೋಜನ ಪಡೆಯಬೇಕೆಂದು ಅವರು ಕೋರಿದರು.
ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಶಿಬಿರ ಏರ್ಪಡಿಸಿ, ಗ್ರಾಮದ ಜನರ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರು.
ಗ್ರಾಮವಾಸ್ತವ್ಯ ನಡೆಯುವ ಗ್ರಾಮಗಳ ಜೊತೆಗೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ 2-3 ಹಳ್ಳಿಗಳ ಸಮಸ್ಯೆಗಳನ್ನೂ ಪರಿಹರಿಸಲು ಶ್ರಮಿಸಲಾಗುವುದು ಎಂದ ಅವರು , ಅಂದು ಸಂಬAಧಪಟ್ಟ ಹಳ್ಳಿಗಳ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಕೋರಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ ಅವರು ಇದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ