ನೇಮಕಾತಿಗೆ ಅರ್ಜಿ ಆಹ್ವಾನ
ಯಾದಗಿರಿ,ಫೆ. 09 (ಕ.ವಾ):- ರಾಷ್ಟಿçÃಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಪ್ಯಾರಾ ಮೆಡಿಕಲ್ ವರ್ಕರ (ಪಿ.ಎಂ.ಡಬ್ಲೂö್ಯ) ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳಿಗೆ ಫೆಬ್ರವರಿ 18 ರ ಬೆಳಿಗ್ಗೆ 11 ಗಂಟೆಗೆ ಸಂದರ್ಶನವಿದ್ದು,ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬೇಕು, ಹೆಚ್ಚಿನ ಮಾಹಿತಿಗೆ ದೂ.08473-253765 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 16 ರಂದು ಉದ್ಯೋಗ ಮೇಳ
ಯಾದಗಿರಿ,ಫೆ. 09 (ಕ.ವಾ):- ರಾಷ್ಟಿçÃಯ ವೃತ್ತಿ ಸೇವಾ ಅಡಿಯಲ್ಲಿ (ಓಅS) ಒಂದು ದಿನದ ಉದ್ಯೋಗ ಮೇಳವನ್ನು ಫೆಬ್ರವರಿ 16 ರಂದು ಬೆಳಗ್ಗೆ 10 ಗಂಟೆಯಿAದ ಸಾಯಂಕಾಲ 4 ಗಂಟೆಯ ವರೆಗೆ ಶಹಾಪೂರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ, ಪಾಸಾದ ವಯೋಮಿತಿ 18 ರಿಂದ 35 ವರ್ಷದೊಳಗಿನವರು ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯ ನೀಡಲಾಗುವದಿಲ್ಲ, ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂ.9448250868, 084737-253718 ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಯಾದಗಿರಿ,ಫೆ. 09 (ಕ.ವಾ):- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 2020-21ನೆ ಸಾಲಿನ ದಮನಿತ ಮಹಿಳೆಯರ ಪುನರ್ವಸತಿ ಯೋಜನೆಯ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಫೆಬ್ರವರಿ 26 ರೊಳಗೆ ಅರ್ಜಿಗಳನ್ನು ದಮನಿತ ಮಹಿಳೆಯರ ಸಮುದಾಯ ಸಂಸ್ಥೆಯಾದ ಯಾದಗಿರಿಯ “ಲಾಲ್ ಬಹಾದ್ದೂರ್ ಎಜುಕೇಷನ್ ಸೊಸೈಟಿ ಗಾಂಧಿ ನಗರ ದಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ 3 ಪ್ರತಿಯಲ್ಲಿ ಸಂಸ್ಥೆಗೆ ಸಲ್ಲಿಸಬೇಕು.
ನೇರವಾಗಿ ನಿಗಮದ ವತಿಯಿಂದ ರೂ.50,000/-ಗಳನ್ನು ಬಿಡುಗಡೆ ಮಾಡಲಾಗುವುದು ಅದರಲ್ಲಿ ರೂ.25,000/- ಗಳನ್ನು ಪ್ರೋತ್ಸಾಹಧನವಾಗಿ ಹಾಗೂ ರೂ.25,000/-ಗಳನ್ನು ಬಡ್ಡಿ ಸಾಲದರೂಪದಲ್ಲಿ ನೀಡಲಾಗುವುದು, ರೂ.25,000/-ಗಳ ಸಾಲವನ್ನು ತಿಂಗಳಿಗೆ ರೂ.1000/-ಗಳಂತೆ ಸುಲಭ 25 ಸಮಾ ಕಂತುಗಳಲ್ಲಿ ನಿಗಮಕ್ಕೆ ಹಿಂದಿರುಗಿಸಬೇಕು, ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸುವAತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಯಾದಗಿರಿ,ಫೆ. 09 (ಕ.ವಾ):- 2020-21ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್‌ಲೈನ್ ವೆಬ್‌ಸೈಟ್ www.ssp.postmatric.karnataka.gov.in ನ ಮೂಲಕ ಸಲ್ಲಿಸಬೇಕು. ಅರ್ಜಿಯನ್ನು 2021 ರ ಮಾರ್ಚ್ 5 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಮತ್ತು ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಮಕಾತಿಗೆ ಅರ್ಜಿ ಆಹ್ವಾನ
ಯಾದಗಿರಿ,ಫೆ 09 (ಕ.ವಾ):- ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಯಡಿಯಲ್ಲಿ ವಿವಿಧ ಗ್ರಾಮ ಪಂಚಾಯತಿ ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿಂದ ಒಟ್ಟು 13- ಅಂಗನವಾಡಿ ಕಾರ್ಯಕರ್ತೆಯರ ಹಾಗು 34- ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್‌ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ನ ಮೂಲಕ ಅರ್ಜಿ ಸಲ್ಲಿಸಬೇಕು. 2021 ರ ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಹಾಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಗಂಜ್ ಏರಿಯಾ, ದೂ. 08479-243254, ಸುರಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಳೆ ಕೋರ್ಟ ಕಟ್ಟಡ ಜೈಲ್ ಹತ್ತಿರ, ಸುರಪುರ ದೂ. 08443-256808, ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಸ್ತಿçà ಶಕ್ತಿ ಭವನ, ಜಿಲ್ಲಾ ಆಸ್ಪತ್ರೆ ರಸ್ತೆ, ದೂ. 08473-252265, ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಗುಮಡಲ್ ಕಾಂಪ್ಲೆಕ್ಸ, ಮುತ್ತೂಟ್ ಫೈನಾನ್ಸ್ ಹಿಂದುಗಡೆ ದೂ. 08473-225035 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುಸ್ತಕ ಖರೀದಿಗೆ ಅರ್ಜಿ ಆಹ್ವಾನ
ಯಾದಗಿರಿ,ಫೆ. 09 (ಕ.ವಾ):- ಕನ್ನಡ ಪುಸ್ತಕ ಪ್ರಾಧಿಕಾರವು 2017ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯ ನಮೂನೆಯನ್ನು ವೆಬ್‌ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನ ಮೂಲಕ ಅಥವಾ ಆಯಾ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಎರಡು ಪುಸ್ತಕಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನ ಫೆಬ್ರವರಿ 27 ರೊಳಗೆ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ, ರಸ್ತೆ ಬೆಂಗಳೂರು ಅವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.080-22484516 / 22017704 ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಹಿರಂಗ ಹರಾಜು ಮುಂದೂಡಿಕೆ
ಯಾದಗಿರಿ,ಫೆ 09 (ಕ.ವಾ):- ಯಾದಗಿರಿ ವಿಭಾಗದ ವ್ಯಾಪ್ತಿಯ ಹುಣಸಗಿ, ಕೊಡೇಕಲ್, ವಡಗೇರಾ, ಗುರುಮಠಕಲ್ ಬಸ್ ನಿಲ್ದಾಣಗಳಲ್ಲಿ ಖಾಲಿ ಇರುವ ವಾಣಿಜ್ಯ ಮಳಿಗೆಗಳ ಇದೇ ಫೆ.9 ರಂದು ನಡೆಯಬೇಕಾಗಿದ್ದ ಬಹಿರಂಗ ಹರಾಜು ಕಾರಣಾಂತರಗಳಿAದ ಮುಂದೂಡಲಾಗಿದೆ ಎಂದು ಯಾದಗಿರಿ ಈಕರಸಾ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ