ಮಂಗಳವಾರ, ಫೆಬ್ರವರಿ 2, 2021

 18ರಿಂದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ 

ಯಾದಗಿರಿ,ಫೆ. 02 (ಕ.ವಾ):- ರಾಜ್ಯ ಸರ್ಕಾರಿ ನೌಕರರ ಯಾದಗಿರಿ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಇದೇ ಫೆಬ್ರವರಿ 18 ಮತ್ತು 19 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು, ಅದಕ್ಕಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ




ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಿಳಿಸಿದರು. 

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಆಯೋಜನೆ ಸಂಬAಧ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಫೆ.02 ರ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

  ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವುದಕ್ಕೆ ಸಂಬAಧಿಸಿದAತೆ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಆಯಾ ಅಧಿಕಾರಿಗಳು ತಮಗೆ ವಹಿಸಿದ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕುಸ್ತಿ, ಕಬಡ್ಡಿ, ಕ್ರಿಕೆಟ್, ಪುಟ್‌ಬಾಲ್, ವಾಲಿಬಾಲ್, ಹಾಕಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಥ್ರೋಬಾಲ್ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್, ಬ್ಯಾಡ್ಮಿಂಟನ್, ಭಾರ ಎತ್ತುವ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ ಎಂದರು.

ಸಾAಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಿಂದೂಸ್ತಾನಿ ಸಂಗಿತ, ಲಘು ಶಾಸ್ತಿçÃಯ ಸಂಗೀತ, ಕರ್ನಾಟಕ ಶಾಸ್ತಿçÃಯ ಸಂಗೀತ, ಜಾನಪದ ಗೀತೆ, ಭರತನಾಟ್ಯ, ಜನಪದ ನೃತ್ಯ ಸೇರಿದಂತೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದವರು ಹೇಳಿದರು.

ಕ್ರೀಡಾಕೂಟದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನ ಸರ್ಕಾರಿ ನೌಕರರು ಭಾಗವಹಿಸಬೇಕು, ಅವರಿಗೆ  ಊಟೋಪಹಾರ, ಕ್ರೀಡಾ ಸಾಮಗ್ರಿಗಳ ಪೂರೈಕೆ, ನಿರ್ಣಾಯಕರ ನಿಯೋಜನೆ, ಪ್ರಥಮ ಚಿಕಿತ್ಸೆ, ಔಷಧೋಪಚಾರ ವ್ಯವಸ್ಥೆ, ಅಂಬುಲೆನ್ಸ್ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು, ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ಈ ಕ್ರೀಡಾಕೂಟದ ಯಶಸ್ವಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು, ಕ್ರೀಡಾಕೂಟದಲ್ಲಿ ಭಾಗವಹಿಸುವ ಸಿಬ್ಬಂದಿಗಳು ತಮ್ಮ ತಮ್ಮ ಇಲಾಖೆಯ ಮುಖ್ಯಸ್ಥರಿಂದ ಗುರುತಿನ ಚೀಟಿಯನ್ನು ಪಡೆದು ಫೆ.15 ರೊಳಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳಲ್ಲಿ ನೋಂದಣೆ ಮಾಡಿಕೊಳ್ಳಬೇಕು, ಕ್ರೀಡಾಪಟುಗಳಿಗೆ ಕೋವಿಡ್-19 ಪರೀಕ್ಷೆ ಮಾಡಲಾಗುವುದು, ಕ್ರೀಡಾಂಗಣದಲ್ಲಿ ಥರ್ಮಲ್ ಸ್ಕಿçÃನಿಂಗ್ ಹಾಗೂ ಸ್ಯಾನಿಟೈಜರ್ ವ್ಯವಸ್ಥೆ ಕಲ್ಪಿಸುವಂತೆ ಅವರು ಸಂಬAಧಿಸಿದವರಿಗೆ ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ ರಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮೈಹಿಪಾಲ್ ರಡ್ಡಿ  ಸೇರಿದಂತೆ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...