ಮಂಗಳವಾರ, ಫೆಬ್ರವರಿ 9, 2021

 ಮ್ಯಾನ್ಯುವೆಲ್ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಪ್ರಯತ್ನಿಸಿ

: ನ್ಯಾ.ಪ್ರಕಾಶ ಅರ್ಜುನ ಬನಸೋಡೆ



ಯಾದಗಿರಿ ಫೆ. 09 (ಕ.ವಾ):- ಮ್ಯಾನ್ಯುವೆಲ್ ಪದ್ಧತಿ ಒಂದು ಅನಿಷ್ಟ ಪದ್ಧತಿಯಾಗಿದ್ದು ಇದನ್ನು ಸಮಾಜದಿಂದ ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ಅವರು ತಿಳಿಸಿದರು. 

ಮಂಗಳವಾರ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜೀತದಾಳು ಹಾಗೂ ಮ್ಯಾನ್ಯುಯಲ್ ಸ್ಕಾö್ಯವೆಂಜರ್‌ಗಳಿಗೆ ಪುನರ್ ವಸತಿ ಶಿಬಿರ ಮತ್ತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು ಅಗತ್ಯವಿರುವ ಸುರಕ್ಷತಾ ವಸ್ತುಗಳನ್ನು ಬಳಸಿಕೊಂಡು ಕಾರ್ಯನಿರ್ವಹಣೆ ಮಾಡಬೇಕು. ಸರಕ್ಷತಾ ಪರಿಕರವಿಲ್ಲದೆ ಕೆಲಸ ಮಾಡುವುದು ಅಪಾಯಕ್ಕೆ ಆಹ್ವಾನ ನೀಡಿದಂತಾಗುತ್ತದೆ. ಈ ವರ್ಗದ ಕಾರ್ಮಿಕರಿಗೆ ಸರ್ಕಾರದ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಇದರ ಪ್ರಯೋಜನೆ ಪಡೆದುಕೊಳ್ಳಬೇಕು ಎಂದು ಪೌರ ಕಾರ್ಮಿಕರಿಗೆ ಕರೆ ನೀಡಿದರು.


ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಮಾತನಾಡಿ, ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರು ತಮ್ಮ ಕೆಲಸ ಏನೆಂದು ತಿಳಿದುಕೊಂಡು ಕಾರ್ಯನಿರ್ವಹಣೆ ಮಾಡಬೇಕು. ಇಂದಿನ ತರಬೇತಿಯಿಂದ ಸಫಾಯಿ ಕರ್ಮಚಾರಿಗಳಿಗೆ ತುಂಬಾ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಯಾವುದೇ ಮ್ಯಾನ್ಯುಯಲ್ ಪದ್ಧತಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದವರು ಸೂಚಿಸಿದರು.


ಮ್ಯಾನ್ಯುವೆಲ್ ಸ್ಕ್ಯಾವೆಂಜಿAಗ್ ಕಾಯ್ದೆ ವಿರುದ್ಧವಾಗಿ ಯಾರೇ ಕಾನೂನು ಬಾಹಿರವಾಗಿ ಕೆಲಸ ಮಾಡಿಸಿದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾನೂನಿನ ಬಗ್ಗೆ ಎಲ್ಲರೂ ತಿಳಿದುಕೊಳ್ಳುವುದು ಒಳಿತು, ಮ್ಯಾನ್ಯುವೆಲ್ ಸ್ಕ್ಯಾವೆಂಜಿAಗ್ ನಿಷೇಧ ಕಾಯ್ದೆ-2013 ಪ್ರಕಾರ ಯಾರನ್ನೂ ಬಲವಂತವಾಗಿ ಇಳಿಸಿ ಕೆಲಸ ಮಾಡಿಸಿಕೊಳ್ಳುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಕಾಯ್ದೆಯನ್ವಯ ಅಂತಹವರನ್ನು ಶಿಕ್ಷೆಗೆ ಗುರಿ ಪಡಿಸಬಹುದಾಗಿದೆ ಎಂದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಫಾಯಿ ಕಾರ್ಮಿಕರು ಸ್ವಚ್ಛತಾ ಸಮಯದಲ್ಲಿ ಮುಂಜಾಗ್ರಾತೆ ವಹಿಸಿ ಕಾರ್ಯನಿರ್ವಹಿಸಬೇಕು ಎಂದರು. 

ಸಫಾಯಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಕೊಡಲಾಗುವುದು ಎಂದು ಅವರು ಭರವಸೆ ನೀಡಿದರು.

ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. 

ವಕೀಲರ ಸಂಘದ ಅಧ್ಯಕ್ಷ ನಾಟೇಕಾರ, ವಿವಿಧ ಇಲಾಖೆಯ ಅಧಿಕಾರಿಗಳು ಅಧಿಕಾರಿ-ಸಿಬ್ಬಂದಿಗಳು, ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರು ಮತ್ತಿತರರು ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...