ಬುಧವಾರ, ಫೆಬ್ರವರಿ 3, 2021

 ಕೆರೆಗಳ ಸಂರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ

ಯಾದಗಿರಿ,ಫೆ. 03 (ಕ.ವಾ):- ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

 ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಫೆ.2ರ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಜಿಲ್ಲೆಯಲ್ಲಿ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 352 ಕೆರೆಗಳಿವೆ. ಕೆರೆಗಳ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಸಬೇಕು, ಅಲ್ಲಿ ಅನಧಿಕೃತ ಒತ್ತುವರಿಗಳಾಗಿದ್ದರೆ ಈ ಕೂಡಲೇ ಅವುಗಳನ್ನು ತೆರವುಗೊಳಿಸುವ ಕ್ರಮವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

 ಕೆರೆಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಮತ್ತು ನೀರಿನ ಶುದ್ದೀಕರಣ ಪರೀಕ್ಷಿಸಿ ಉಪಯೋಗಿಸಲು ಯೋಗ್ಯವಾಗಿರುವ ಕೆರೆಗಳ ಬಗ್ಗ ಸಂಪೂರ್ಣ ವಿವರ ನೀಡುವಂತೆ ತಿಳಿಸಿದ ಅವರು, ಕೆರೆಗಳ ಸುತ್ತ ಗಿಡಗಳನ್ನು ಬೆಳೆಸಬೇಕು, ಈ ಮೂಲಕ ವಾಯು ವಿಹಾರಕ್ಕೆ ತೆರಳುವ ಸಾರ್ವಜನಿಕರಿಗೆ ಅನೂಕೂಲ ಮಾಡಿಕೊಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.   ಕೆರೆಗಳ ಕುರಿತಂತೆ ಸಾರ್ವಜನಿಕರಿಂದ  ಯಾವುದೇ ದೂರಗಳು ಬಂದರೆ ತಕ್ಷಣವೇ ಅದರ ಬಗ್ಗೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಅವರು ತಿಳಿಸಿದರು.

 ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಭೂಮಾಪನಾ ಇಲಾಖೆಯ ಉಪನಿರ್ದೇಶಕರು ಹಾಗೂ ಸಣ್ಣ ನೀರಾವರಿ  ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜಪ್ಪ ಮಾಲಿಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ತಹಸೀಲ್ದಾರ್, ಪರಿಸರ ಇಲಾಖೆ ಅಧಿಕಾರಿಗಳು, ನಗರಸಭೆ ಪೌರಾಯುಕ್ತರು, ಅರಣ್ಯಾಧಿಕಾರಿಗಳು ಸೇರಿದಂತೆ ಸಂಬAಧಿಸಿದವರು ಸಭೆಯಲ್ಲಿದ್ದರು. 

ಅರ್ಜಿ ಆಹ್ವಾನ

ಯಾದಗಿರಿ,ಫೆ. 03 (ಕ.ವಾ):- ರೈತ ಉತ್ಪಾದಕರ ಸಂಸ್ಥೆಗಳು, ಸ್ವಸಹಾಯ ಗುಂಪುಗಳ ರಚನೆ ಮೂಲಕ ಜಿಲ್ಲೆಯಲ್ಲಿ ಅಪೌಷ್ಟಿಕತೆ ಮತ್ತು ಜೀವನೋಪಾಯ ಅಭಿವೃದ್ಧಿ ಯೋಜನೆ ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯಲ್ಲಿ ನೋಂದಾಯಿಸಿದ  ಅರ್ಹ ಸಂಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತ ಸಂಸ್ಥೆಗಳು, ಮಂಡಳಿಯ ವೆಬ್‌ಸೈಟ್ ತಿತಿತಿ.ಞsಛಿsಣ.oಡಿg.iಟಿ ಅಥವಾತಿತಿತಿ.ಞsಛಿsಣ.iisಛಿ.eಡಿಟಿeಣ.iಟಿ ನ ಲಭ್ಯವಿರುವ ಮಾರ್ಗಸೂಚಿಗಳ ಅನುಸಾರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 2021ರ ಫೆಬ್ರವರಿ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.080-23341652 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಹೇಮಂತ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾ.ಪಂ ಸಾಮಾನ್ಯ ಸಭೆ ಮುಂದೂಡಿಕೆ

ಯಾದಗಿರಿ,ಫೆ. 03 (ಕ.ವಾ):- ಇದೇ ಫೆ.4 ರಂದು ನಡೆಯಬೇಕಿದ್ದ ಗುರುಮಠಕಲ್ ತಾಲೂಕ ಪಂಚಾಯತಿಯ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿAದ ಫೆ.11ಕ್ಕೆ ಮುಂದೂಡಲಾಗಿದೆ ಎಂದು ಗುರುಮಿಠಕಲ್ ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಫೆ 03(ಕ.ವಾ):- 2020-21ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿಯನ್ನು ವೆಬ್ ಸೈಟ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.


ಹೊರ ರಾಜ್ಯಗಳಲ್ಲಿ 10 ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಪ್ರಸಕ್ತ ಸಾಲಿನಲ್ಲಿ ಪಿಯುಸಿ, ಪದವಿ, ವಿಶ್ವವಿದ್ಯಾಲಯ ಹಾಗೂ ಇತರೆ ಕೋರ್ಸಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು Sಣಚಿಟಿಜ ಚಿಟoಟಿe iಟಿsಣiಣuಣes ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಇ-ದೃಢೀಕರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಇ-ದೃಢೀಕರಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ನಲ್ಲಿ ಪಡೆಯಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್ 1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  




ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...