ಶನಿವಾರ, ಫೆಬ್ರವರಿ 6, 2021

 ಜಿಲ್ಲೆಯಲ್ಲಿ ಫೆ.8ರಿಂದ 2ನೇ ಹಂತದ ಕೋವಿಡ್ ಲಸಿಕೆ ವಿತರಣೆ:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ

ಯಾದಗಿರಿ,ಫೆ. 06 (ಕ.ವಾ):- ಜಿಲ್ಲೆಯಲ್ಲಿ ಎರಡನೇಯ ಹಂತದ ಕೋವಿಡ್-19 ಲಸಿಕೆ ವಿತರಣೆ ಕಾರ್ಯವನ್ನು ಫೆ.8ರಿಂದ ಆರಂಭವಾಗಲಿದು, ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಫೆ.6ರ ಶನಿವಾರ ದಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಎರಡನೇಯ ಹಂತದ ಕೋವಿಡ್ ಲಸಿಕೆ ವಿತರಣೆಯ ಜಿಲ್ಲಾ ಮಟ್ಟದ ಕಾರ್ಯಪಡೆ(ಟಾಸ್ಕ್ಫೋರ್ಸ್) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎರಡನೇಯ ಹಂತದ ಲಸಿಕೆಯನ್ನು ಕೊರೊನಾ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಅಗ್ನಿ ಶಾಮಕ ದಳ, ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಿತರಿಸಲಾಗುವುದು ಎಂದರು.
ಎರಡನೇಯ ಹಂತದ ಲಸಿಕಾಕರಣಕ್ಕೆ ಈಗಾಗಲೇ 4,113 ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಹೆಸರು ನೋಂದಯಿಸಿಕೊAಡಿದ್ದಾರೆ ಹಾಗೂ ಲಸಿಕೆ ವಿತರಣಾ ಕೇಂದ್ರಗಳನ್ನು ಪ್ರತಿ ತಾಲೂಕಿನಿಂದ 5 ಆರೋಗ್ಯ ಸಂಸ್ಥೆಗಳAತೆ ಜಿಲ್ಲೆಯಲ್ಲಿ ಒಟ್ಟು 15 ಕೇಂದ್ರಗಳನ್ನು ತೆರೆಯಲಾಗಿದೆ ಎಂದವರು ತಿಳಿಸಿದರು.
ಸಂಬAಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲೆಯ ಎಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿರಂತರ ಸಂಪರ್ಕದಲ್ಲಿದ್ದುಕೊAಡು ಕೋವಿಡ್ ಲಸಿಕೆಯನ್ನು ವಿತರಿಸುವಂತೆ ಅವರು ಸೂಚಿಸಿದರು.
ಮೊದಲ ಹಂತದಲ್ಲಿ ಈಗಾಗಲೇ ನೋಂದಾಣಿಯಾದ 6,213 ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಗಳಲ್ಲಿ ಪ್ರತಿಶತ 61%ರಷ್ಟು ನೀಡಲಾಗಿದೆ. ಸೋಮವಾರದೊಳಗೆ ಶೇ.70% ರಷ್ಟು ಆರೋಗ್ಯ ಸಿಬ್ಬಂದಿಗೆ ನೀಡುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ಲಸಿಕೆಯ ಬಗ್ಗೆ ಭಯ ಹೊಂದಿರುವರಲ್ಲಿ ತಿಳುವಳಿಕೆ ನೀಡಿ ಲಸಿಕೆ ಪಡೆಯಲು ಮನವೊಲಿಸಿ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಆರ್.ಸಿ.ಎಚ್ ಅಧಿಕಾರಿ ಡಾ.ಸೂರ್ಯ ಪ್ರಕಾಶ ಕಂದಕೂರು, ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ ಕವಿತಾಳ ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...