ಎಸ್‌ಸಿಪಿ ಮತ್ತು ಟಿಎಸ್‌ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅನುದಾನವನ್ನು ಪೂರ್ಣವಾಗಿ ಬಳಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ
:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ.ಫೆ.10 (ಕ.ವಾ):- ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯ ಅಭಿವೃದ್ಧಿಗಾಗಿ ವಿಶೇಷ ಘಟಕದಡಿ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಪೂರ್ಣ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಫೆ.10 ರ ಬುಧವಾರದಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪರಿಶಿಷ್ಠ ಜಾತಿ ಉಪಯೋಜನೆ / ಬುಡಕಟ್ಟು ಉಪಯೋಜನೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಯಮಿತ ಸಮಯಕ್ಕೆ ಕ್ರಿಯಾ ಯೋಜನೆ ಕೈಗೊಳ್ಳದೆ ಅಥವಾ ಕಾಲಮಿತಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳದೆ ಅನುದಾನ ಬಾಕಿ ಉಳಿಸಿದರೆ ಆಯಾ ಇಲಾಖೆ ಅಧಿಕಾರಿಗಳೇ ಹೊಣೆಗಾರರಾಗಿರುತ್ತಾರೆ. ಈ ಯೋಜನೆಗಳಲ್ಲಿ ಶೇ.100% ರಷ್ಟು ಪ್ರಗತಿಯನ್ನು ಫೆಬ್ರವರಿ ತಿಂಗಳ ಅಂತ್ಯಕ್ಕೆ ಎಲ್ಲಾ ಇಲಾಖೆಗಳು ಸಾಧಿಸಲೇಬೇಕು. ಇಲ್ಲದಿದ್ದಲ್ಲಿ ಅಂತಹ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿ ಇಲಾಖೆಗೆ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಕ್ರಿಯಾ ಯೋಜನೆ ರೂಪಿಸಿ, ಸಂಬAಧಪಟ್ಟ ಇಲಾಖೆ ಅಥವಾ ಅಧಿಕಾರಿಗಳಿಂದ ಅನುಮೋದನೆ ಪಡೆದುಕೊಳ್ಳಬೇಕು ಎಂದರು.
ಎಸ್‌ಸಿಪಿ/ ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನ ಹಾಗೂ ಸದರಿ ಅನುದಾನವನ್ನು ಯಾವ ಉದ್ದೇಶಗಳಿಗೆ ವೆಚ್ಚ ಮಾಡಲಾಗಿದೆ ಎಂಬುವುದರ ಬಗ್ಗೆ ಪ್ರತಿ ತಿಂಗಳು ವರದಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಗಂಗಾ ಕಲ್ಯಾಣ ಯೋಜನೆಯಡಿ ಕೃಷಿಕರಿಗೆ ಬೋರ್‌ವೆಲ್ ಸೌಲಭ್ಯಗಳನ್ನು ತ್ವರಿತವಾಗಿ ನೀಡಿ, ಬೋರ್‌ವೆಲ್‌ಗಳಿಗೆ ಅಗತ್ಯ ವಿದ್ಯುತ್ ಸೌಲಭ್ಯ ನೀಡಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ಅಧಿಕಾರಿ ಬಕ್ಕಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭಾಕರ್, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರೈತರ ಅನುಕೂಲಕ್ಕಾಗಿ ಒಂದೇ ಸೂರಿನಡಿ ಸಮಗ್ರ ಮಾಹಿತಿಯುಳ್ಳ ಗುರುತಿನ ಸಂಖ್ಯೆ
:ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್.
ಯಾದಗಿರಿ.ಫೆ.10 (ಕ.ವಾ):- ರೈತರ ಅನುಕೂಲಕ್ಕಾಗಿ ಒಂದೇ ಸೂರಿನಡಿ ಸಮಗ್ರ ಮಾಹಿತಿಯನ್ನು ದಾಖಲಿಸಲು ಸರ್ಕಾರವು ಫ್ರೂಟ್ಸ್ (ಈಖUIಖಿS) ತಂತ್ರಾAಶ ಅಭಿವೃದ್ಧಿ ಪಡಿಸಿದ್ದು, ರೈತರು ತಮ್ಮ ಜಮೀನಿಗೆ ಸಂಬAಧಿಸಿದ ವಿವರಗಳನ್ನು ದಾಖಲಿಸುವ ಮೂಲಕ ನೋಂದಾಯಿಸಿಕೊAಡು ಫ್ರೂಟ್ಸ್ (ಈಖUIಖಿS)
ಗುರುತಿನ ಸಂಖ್ಯೆಯನ್ನು ( ಎಫ್.ಐ.ಡಿ ನಂಬರ್ ) ಪಡೆದುಕೊಳ್ಳುಬೇಕೆಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಮನವಿ ಮಾಡಿದರು.
ಬುಧವಾರ ದಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂನಲ್ಲಿ ಆಧಾರ್ - ಪಹಣಿ ಜೋಡಣೆ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ, ಇತರೆ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ರೈತರ ಜಮೀನಿನ ವಿವರಗಳನ್ನು ಪಡೆಯಲು ‘ಫ್ರೂಟ್ಸ್’ ತಂತ್ರಾAಶ ಅಗತ್ಯವಿದ್ದು ಇದರಲ್ಲಿ ರೈತರ ಜಮೀನಿನ ನಿಖರ ಹಾಗೂ ಸಂಪೂರ್ಣ ಮಾಹಿತಿ ಇರುತ್ತದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳಡಿ ಸೌಲಭ್ಯ ಪಡೆಯಲು ರೈತರ ಜಮೀನಿನ ವಿವರಗಳನ್ನು ‘ಫ್ರೂಟ್ಸ್’ ತಂತ್ರಾAಶದಲ್ಲಿ ದಾಖಲಿಸಿ ರೈತರ ಗುರುತಿನ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳುಬೇಕೆಂದು ಹೇಳಿದರು.
ರೈತರು ಅಗತ್ಯ ದಾಖಲೆಗಳಾದ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ರೈತರಾಗಿದ್ದಲ್ಲಿ ಜಾತಿ ಪ್ರಮಾಣಪತ್ರ, ಭಾವಚಿತ್ರಗಳನ್ನು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಡ ಕಚೇರಿ, ಗ್ರಾಮ ಪಂಚಾಯಿತಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ತಮ್ಮ ಮಾಹಿತಿಗಳನ್ನು ಸಲ್ಲಿಸಿ ಎಫ್.ಐ.ಡಿ ನಂಬರ್ ಪಡೆದುಕೊಳ್ಳಬೇಕು ಎಂದರು.
ಗುರುತಿನ ಚೀಟಿಯಿಂದ ರೈತರು ಬೆಳೆ ಸಾಲ, ಪಿಎಂ ಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಚೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು ಹಾಗೂ ರೈತರಿಗೆ ಇದು ಒಂದು ವ್ಯವಹಾರಿಕ ಗುರುತಿನ ಚೀಟಿಯಾಗುತ್ತದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ದೇವಿಕಾ ಆರ್. ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ