ಮಂಗಳವಾರ, ಫೆಬ್ರವರಿ 2, 2021

 ರಾಜಕೀಯ ಪಕ್ಷಗಳ ಮುಖಂಡರಿಗೆ ಜಿಲ್ಲೆಯ ಮತದಾರರ ಪಟ್ಟಿ ವಿತರಣೆ


ಯಾದಗಿರಿ,ಫೆ. 02 (ಕ.ವಾ):- ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ಇದೇ ಫೆ.2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ವಿತರಣೆ ಮಾಡಿದರು.
ಕಳೆದ ವರ್ಷದ ಅಂತಿಮ ಮತದಾರರ ಪಟ್ಟಿಯಲ್ಲಿ 9,93,745 ಮತದಾರರು ನೋಂದಾಯಿಸಿಕೊAಡಿದ್ದರೇ, ಈ ವರ್ಷದ ಮತದಾರರ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 10,12,777 ಮತದಾರರು ನೋಂದಾಯಿಸಿಕೊAಡಿದ್ದಾರೆ. ಈ ಬಾರಿ 19,032 ಮಂದಿ ಮತದಾರರು ತಮ್ಮ ಹೆಸರನ್ನು ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊAಡಿದ್ದಾರೆ ಎಂದು ವಿವರಿಸಿದರು.
ಕರಡು ಮತದಾರರ ಪಟ್ಟಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಮೃತಪಟ್ಟವರ ಹೆಸರುಗಳನ್ನು ತೆಗೆದುಹಾಕಲಾಗಿದೆ, ಪಟ್ಟಿಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ಕೊಡದಂತೆ ತಯಾರಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳ ಸಹಕಾರದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ತಿಳಿಸಿದರು.
ಅಲ್ಲದೇ ಅಂತಿಮ ಮತದಾರರ ಪಟ್ಟಿಯನ್ನು (hಣಣಠಿ://ಛಿeoಞಚಿಡಿಟಿಚಿಣಚಿಞಚಿ,ಞಚಿಡಿ,ಟಿiಛಿ,iಟಿ) ಹಾಗೂ ಜಿಲ್ಲೆಯ (ಥಿಚಿಜgiಡಿ.ಟಿiಛಿ.iಟಿ) ಅಂತರ್ಜಾಲದಲ್ಲಿಯು ಅಪ್ ಲೋಡ್ ಮಾಡಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರುಗಳನ್ನು ಪರಿಶೀಲಿಸಬಹುದಾಗಿದೆ ಎಂದರು.
ಅಂತಿಮ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು, ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬAಧಿಸಿದAತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು ಎಂದವರು ಹೇಳಿದರು.
ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಸ್ಥಳಾಂತರ ಹೊಂದಿದ್ದಲ್ಲಿ ಅಥವಾ ಮೃತಪಟಿದ್ದಲ್ಲೀ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಅವರುಗಳ ಹೆಸರನ್ನು ತೆಗೆದು ಹಾಕಲು ನಮೂನೆ-7ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಇದು ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ್, ಬಿಎಸ್‌ಪಿ ಪಕ್ಷದ ಜಿಲ್ಲಾಧ್ಯಕ್ಷ ಮಹಮದ್ ತಜಮೂಲ್, ಬಿಜೆಪಿ ಮುಖಂಡರಾದ ಬಂಡೆಪ್ಪ, ಜೆಡಿಎಸ್ ಮುಖಂಡ ಶಾಂತಪ್ಪ ಜಾದವ್, ಮಹಿಳಾ ಅಧ್ಯಕ್ಷರಾದ ನಾಗರತ್ನ ಅನಪೂರ ಹಾಗೂ ಕಾಂಗ್ರೆಸ್ ಯುವ ಅಧ್ಯಕ್ಷರಾದ ರಾಘವೇಂದ್ರ ಮಾನಸಗಲ್, ಗ್ರಾಮೀಣ ಅಧ್ಯಕ್ಷರಾದ ಮರೆಪ್ಪ ಬಿಳವಾರ, ÀÄನಾವಣಾ ಶಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Image may contain: 3 people


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...