ಕೋವಿಡ್ 2ನೇ ಅಲೆ ಹಿನ್ನೆಲೆ: ಜಿಲ್ಲೆಯಲ್ಲಿ ಜಾತ್ರೆ ಮತ್ತು ಹಬ್ಬಗಳ ಆಚರಣೆಗೆ ನಿಷೇಧ
:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ,ಮಾ.26 (ಕ.ವಾ);- ಕೋವಿಡ್ 2ನೇ ಅಲೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾದಗಿರಿ ಜಿಲ್ಲೆಯಲ್ಲಿ ಹೋಳಿ ಹಬ್ಬ ಸೇರಿದಂತೆ ಇತರೆ ಹಬ್ಬಗಳು, ಜಾತ್ರೆಗಳು ಹಾಗೂ ಉರುಸ್‌ಗಳ ಆಚರಣೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಹಲವೆಡೆ ಹೆಚ್ಚಿನ ಪ್ರಕರಣ ಕಂಡು ಬಂದಿದೆ.ಯಾದಗಿರಿ ಜಿಲ್ಲೆಯು ಮಹಾರಾಷ್ಟ್ರ ರಾಜ್ಯಕ್ಕೆ ಹತ್ತಿರವಿದ್ದು, ಜಿಲ್ಲೆಯಲ್ಲೂ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೋವಿಡ್ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ಸಾರ್ವಜನಿಕ ಸಭೆ/ಸಮಾರಂಭ ಹಾಗೂ ಆಚರಣೆಗಳಲ್ಲಿ ಸಾರ್ವಜನಿಕರು ಗುಂಪು, ಗುಂಪಾಗಿ ಸೇರುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೆöÊ ಡೇ, ಜಾತ್ರೆಗಳು ಇತ್ಯಾದಿ ಹಬ್ಬಗಳ ಆಚರಣೆ ಅಸಾಧ್ಯ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದರು.
ಸಾAಕ್ರಾಮಿಕ ರೋಗ ಕಾಯ್ದೆ 1897 ಹಾಗೂ ವಿಪತ್ತು ನಿರ್ವಹಣ ಕಾಯ್ದೆ 2005 ರ ಅನ್ವಯ ಹೋಳಿ ಹಬ್ಬವನ್ನು ನಿಷೇಧಿಸಿ ಈ ಆದೇಶ ಹೊರಡಿಸಲಾಗಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಒಂದು ವೇಳೆ ಯಾವುದೇ ವ್ಯಕ್ತಿಗಳು ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಲ್ಲಿ, ಅಂತಹ ವ್ಯಕ್ತಿ/ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ/2005 ರ ವಿಭಾಗ 51 ರಿಂದ 60ರ ಅನ್ವಯ ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ/2020ರ ವಿಭಾಗ 4,5 ಹಾಗೂ 10 ರಂತೆ ಕ್ರಮಗಳನ್ನು ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
“ಗ್ರಾಮ ಕಾಯಕ ಮಿತ್ರ” ರನ್ನು ನಿಯೋಜನೆಗೆ ಅರ್ಜಿ ಆಹ್ವಾನ
ಯಾದಗಿರಿ,ಮಾ26.(ಕ.ವಾ):- ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಡಿ 2020-21 ನೇ ಸಾಲಿನಲ್ಲಿ ್ಲ “ಗ್ರಾಮ ಕಾಯಕಮಿತ್ರ”ರನ್ನು ಗೌರವಧನದ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಒಟ್ಟು 79 ಗ್ರಾಮ ಪಂಚಾಯತಿಗಳಲ್ಲಿ “ಗ್ರಾಮ ಕಾಯಕ ಮಿತ್ರ” ರನ್ನು ಆಯ್ಕೆ ಮಾಡಿಕೊಳ್ಳಲು ಅರ್ಹ ಮಹಿಳೆಯಿರಿಂದ ನಿರ್ಧರಿಸಿದ್ದು, ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಕಳೆದ ಜನವೆರಿ 1 ರಿಂದ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮನರೆಗಾ ಯೋಜನೆಯಡಿ ಕ್ರಿಯಾಶೀಲ ಉದ್ಯೋಗ (ಜಾಬ್) ಕಾರ್ಡ್ ಹೊಂದಿರುವಬೇಕು.
ಕಳೆದ ಮೂರು ವರ್ಷಗಳಲ್ಲಿ ಕನಿಷ್ಠ 2 ವರ್ಷಯೋಜನೆಯಡಿ ಅಕುಶಲ ಕೆಲಸಗಾರರಾಗಿ ಕೆಲಸ ನಿರ್ವಹಿಸಿರಬೇಕು ಹಾಗೂ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ 45 ವರ್ಷದೊಳಗಿನ ಅರ್ಹ ಅರ್ಜಿಯನ್ನು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ 2021ರ ಏಪ್ರೀಲ್ 10 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ .
ಆಯ್ಕೆಯಾದ ಕಾಯಕ ಮಿತ್ರರಿಗೆ ಮಾಸಿಕ 6,000 ರೂ ಮತ್ತು ಕಾರ್ಯನಿರ್ವಹಣಾಧಾರದ ಮೇಲೆ 5,000 ಪ್ರೋತ್ಸಾಹಧನ ನೀಡಲಾಗುವದು. ಹೆಚ್ಚಿನ ಮಾಹಿತಿಗೆ ಆಯಾ ಗ್ರಾಮ ಪಂಚಾಯತ ಕಚೇರಿ ಸಂಪರ್ಕಿವAತೆ ಅವರು ತಿಳಿಸಿದ್ದಾರೆ.