ಸೋಮವಾರ, ಮಾರ್ಚ್ 1, 2021

 ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ

ಯಾದಗಿರಿ, ಮಾರ್ಚ್ 1 (ಕ.ವಾ):-ಸ್ಥಗಿತಗೊಂಡಿರುವ ಹೊಸ ಆನ್‌ಲೈನ್ ಪಡಿತರ ಚೀಟಿಗಳ ಸ್ವೀಕಾರ ಕಾರ್ಯವನ್ನು ಪುನರಾಂಭಿಸಿದ್ದು, ಆಹಾರ ಇಲಾಖೆ ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಹೊಸ ಆದ್ಯತಾ ( ಬಿ.ಪಿ.ಎಲ್ ) ಮತ್ತು ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿಗಳಿಗೆ ಆಹಾರ ಇಲಾಖೆಯ ತಂತ್ರಾAಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಪ್ರಕಟಣೆಯಲ್ಲಿ ತಿಳಿಸಿದರು.

      

ಭತ್ತ ಮತ್ತು ಬಿಳಿ ಜೋಳ ಖರೀದಿ ಕೇಂದ್ರ ಆರಂಭ

ಯಾದಗಿರಿ.ಮಾರ್ಚ್ 1 (ಕ.ವಾ):- 2020-21ನೇ ಸಾಲಿನ ಮುಂಗಾರು  ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಹಾಗೂ ಬಿಳಿ ಜೋಳ ಖರೀದಿ ಮಾಡಲು ಯಾದಗಿರಿ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ತಿಳಿಸಿದ್ದಾರೆ.


ಈಗಾಗಲೇ ನೋಂದಣಿ ಮಾಡಿದ ರೈತರಿಂದ ಭತ್ತವನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್‌ನAತೆ ಗರಿಷ್ಠ 75 ಕ್ವಿಂಟಾಲ್ ಪ್ರಮಾಣದಲ್ಲಿ ಖರೀದಿಸಲಾಗುತ್ತಿತ್ತು ಹಾಗೂ ಬಿಳಿ ಜೋಳವನ್ನು ಪ್ರತಿ ಎಕರೆಗೆ 15 ಕ್ವಿಂಟಾಲ್‌ನAತೆ ಗರಿಷ್ಠ 75 ಕ್ವಿಂಟಾಲ್ ಪ್ರಮಾಣದಲ್ಲಿ ಖರೀದಿಸಲಾಗುತ್ತಿದೆ. ಆದರೆ ಪ್ರಸಕ್ತ ಸಾಲಿನಲ್ಲಿ ರೈತರಿಂದ ಹೆಚ್ಚು ಆಹಾರ ಧಾನ್ಯಗಳನ್ನು ಖರೀದಿಸುವ ಉದ್ದೇಶದಿಂದ ಸಂಗ್ರಹಣಾ ಗರಿಷ್ಠ ಮಿತಿಯನ್ನು ಮುಂದುವರೆಸಿ ಗರಿಷ್ಠ ಮಿತಿಯನ್ನು ತೆರವುಗೊಳಿಸಲಾಗಿದೆ. ಹಾಗೂ ಈಗಾಗಲೇ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಿರುವ ರೈತರಿಂದ ಕೂಡ ಗರಿಷ್ಠ ಮಿತಿಯನ್ನು ಸಡಿಲಿಸಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.


ಯಾದಗಿರಿ ಮತ್ತು ಸುರಪೂರ ತಾಲ್ಲೂಕುಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ, ಶಹಾಪೂರ ಹಾಗೂ ಹುಣಸಗಿ ತಾಲ್ಲೂಕುಗಳಲ್ಲಿ ತಾಲ್ಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ  (ಟಿ,ಎ,ಪಿ,ಸಿ,ಎಂ,ಎಸ್) ಆವರಣದಲ್ಲಿ ಮತ್ತು ವಡಗೇರಾ ತಾಲ್ಲೂಕಿನ ನಾಯ್ಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಾಕರ ಸಂಘ ನಿಯಮಿತದ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.


ರೈತರು  ಹೆಚ್ಚಿನ ಪ್ರಮಾಣದಲ್ಲಿ ಭತ್ತ ಹಾಗೂ ಬಿಳಿ ಜೋಳ ( ಹೈಬ್ರೀಡ್ ಹಾಗೂ ಮಾಲ್ದಂಡಿ ) ವನ್ನು ಮಾರಾಟ ಮಾಡಿ  ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...