ಸೋಮವಾರ, ಮಾರ್ಚ್ 15, 2021

 ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿರಿ 

                                                  : ಮಕ್ಕಳ ರಕ್ಷಣಾಧಿಕಾರಿ  ಮಲ್ಲಣ್ಣ ದೇಸಾಯಿ


ಯಾದಗಿರಿ, ಮಾ15 (ಕ.ವಾ):- ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ  ಮಲ್ಲಣ್ಣ ದೇಸಾಯಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ. ತಾಲೂಕಾ ಪಂಚಾಯತ, ಸುರಪುರ ರವರ ಸಹಯೋಗದೊಂದಿಗೆ,ಬಾಲ ನ್ಯಾಯ ಕಾಯ್ದೆ-2015 (ಮಕ್ಕಳ ಪಾಲನೆ ಮತ್ತು ರಕ್ಷಣೆ) ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸೊ ಕಾಯ್ದೆ -2012” ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಅನಾಥ, ನಿರ್ಗತಿಕ ಮಕ್ಕಳಿಗಾಗಿಯೇ ಸರಕಾರದ ಬಾಲಕಿಯರ ಬಾಲಮಂದಿರಗಳು ಇದ್ದು, ಇದರ ಸಂಪೂರ್ಣ ಸದ್ಭಳಕೆ ಮಾಡಿಕೊಳ್ಳುವ ಅಗತ್ಯ ಎಂದರು. ಈ ವರ್ಷ ಬಾಲಕರ ಬಾಲಮಂದಿರ ಕೂಡ ನಮ್ಮ ಜಿಲ್ಲೆಗೆ ಮಂಜೂರಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.

 ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಡಾ:ಹಣಮಂತ್ರಾಯ ಕರಡ್ಡಿ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳ ಕಲ್ಯಾಣ ಸಮಿತಿಯ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಬಾಲ್ಯ ವಿವಾಹ ಮತ್ತು ಇದರ ದುಷ್ಟರಿಣಾಮಗಳು, ಮಕ್ಕಳ ಜವಾಬ್ದಾರಿ ಕುರಿತಾಗಿ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಅಮರೇಶ ಇವರು ಅಧ್ಯಕ್ಷ/ಉಪಾಧ್ಯಕ್ಷರುಗಳಿಗೆ ಪಂಚಾಯತ್ ಮಟ್ಟದಲ್ಲಿ ಅವರ ಜವಾಬ್ದಾರಿಗಳ ಕುರಿತಾಗಿ ಮಾಹಿತಿ ನೀಡಿದರು.  

ಪಂಚಾಯತ್ ಅಭಿವೃದ್ದಿ ಅಧಿಕಾರಿಗಳೊಂದಿಗೆ ಸಹಕಾರದಿಂದ ಕಾರ್ಯ ನಿರ್ವಹಿಸಬೇಕು ಮತ್ತು ದುಡಿಯೋಣ ಬಾ ಅಭಿಯಾನದ ಕುರಿತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳ ಕೆಲಸವನ್ನು ಮಾಡಿಸಬೇಕು  ಮತ್ತು ಜೆಸಿಬಿ/ ಇತರ ಯಂತ್ರಗಳಿAದ ಕೆಲಸ ಮಾಡಿಸಬಾರದು ಎಂದು ಅವರು ಸಲಹೆ ನೀಡಿದರು.

 ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಾಗಿ ಆಗಮಿಸಿದ್ದ ರಾಯಚೂರಿನ ಮಕ್ಕಳ ಸಹಾಯವಾಣಿ ಸಂಯೋಜಕರಾದ ಸುದರ್ಶನ ಇವರು ಗ್ರಾಮ ಪಂಚಾಯತಿಯ ಅಧ್ಯಕ್ಷ/ಉಪಾಧ್ಯಕ್ಷರುಗಳಿಗೆ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ,  ಬಾಲ ನ್ಯಾಯ ಕಾಯ್ದೆ-2015, ಮಕ್ಕಳ ಹಕ್ಕುಗಳು, ಪೋಕ್ಸೊ ಕಾಯ್ದೆ-2012 ಕುರಿತಾಗಿ ಸಂಪೂರ್ಣವಾಗಿ ತಿಳಿಸಿದರು. 

ಈ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಚಂದ್ರಶೇಖರ ಪೋಲಿಸ್ ಇನ್ಸಪೆಕ್ಟರ್ ಸುರಪುರ ಠಾಣೆ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಶ್ರೀ ಮಾಳಪ್ಪ ವಂಟೂರು, ಸುರಪುರ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಲಾಲಸಾಬ ಪೀರಾಪೂರ, ಪೋಲಿಸ್ ಇಲಾಖೆಯ ದಯಾನಂದ ಜಮಾದಾರ ಮುಂತಾದವರು ಇದ್ದರು.  ಈ ಕಾರ್ಯಕ್ರಮವನ್ನು ರಾಜೇಂದ್ರಕುಮಾರ ಯಾದವ ಅವರು ನಿರೂಪಿಸಿದರೆ,  ದಶರಥ ನಾಯಕ ಅವರು ವಂದಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...